Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

AUS vs IND: ಟಾಸ್‌ ಗೆದ್ದ ಆಸ್ಟ್ರೇಲಿಯಾ ಬೌಲಿಂಗ್ ಆಯ್ಕೆ

ಭಾರತ ಹಾಗೂ ಆಸ್ಟ್ರೇಲಿಯಾ ನಡುವಣ ಮೊದಲ ಟಿ20 ಪಂದ್ಯ ಕ್ಯಾನ್‌ಬೆರಾದಲ್ಲಿ ನಡೆಯುತ್ತಿದೆ. ಈ ಪಂದ್ಯದಲ್ಲಿ ಟಾಸ್‌ ಗೆದ್ದ ಆಸ್ಟ್ರೇಲಿಯಾ ಫೀಲ್ಡಿಂಗ್‌ ಆಯ್ಕೆ ಮಾಡಿಕೊಂಡಿದೆ. ಟೀಮ್ ಇಂಡಿಯಾ ಮತ್ತೊಂದು ಟಾಸ್‌ ಸೋಲು ಕಂಡಿದೆ. ಭಾರತ ಪ್ರಸ್ತುತ ಬ್ಯಾಟಿಂಗ್ ಮಾಡಲಿದ್ದು ತಂಡವು ಸಾಧ್ಯವಾದಷ್ಟು ರನ್ ಗಳಿಸುವ ಗುರಿಯನ್ನು ಹೊಂದಿದೆ. ಈ ಮೂಲಕ ಆಸೀಸ್‌ ತಂಡಕ್ಕೆ ದೊಡ್ಡ ಸವಾಲಿನ ಮೊತ್ತವನ್ನು ಗುರಿಯನ್ನು ನೀಡುವ ಇರಾದೆಯನ್ನು ಹೊಂದಿದೆ.

ಭಾರತ ತಂಡ ಇಬ್ಬರು ಆಲ್‌ರೌಂಡರ್‌ಗಳೊಂದಿಗೆ ಕಣಕ್ಕೆ ಇಳಿಯಲಿದೆ. ಇನ್ನು ತಂಡದಲ್ಲಿ ಇಬ್ಬರು ನುರಿತ ಸ್ಪಿನ್ ಬೌಲರ್ ಇದ್ದಾರೆ. ವರುಣ್‌ ಚಕ್ರವರ್ತಿ ಹಾಗೂ ಕುಲ್‌ದೀಪ್ ಯಾದವ್ ತಂಡದಲ್ಲಿ ಸ್ಥಾನ ಪಡೆದಿದ್ದಾರೆ. ಇನ್ನು ಟಿ20 ಕ್ರಿಕೆಟ್‌ನಲ್ಲಿ ಭಾರತದ ಪರ ಅತಿ ಹೆಚ್ಚು ವಿಕೆಟ್‌ ಪಡೆದ ಅರ್ಷದೀಪ್ ಸಿಂಗ್‌ ಅವರನ್ನು ವಿಶ್ರಾಂತಿ ನೀಡಲಾಗಿದೆ. ಇವರ ಬದಲಿಗೆ ವೇಗದ ಬೌಲರ್‌ಗಳಾದ ಜಸ್ಪ್ರೀತ್ ಬುಮ್ರಾ, ಹರ್ಷಿತ್‌ ರಾಣಾ ಅವರು ಬೌಲಿಂಗ್ ಮಾಡುವದನ್ನು ಕಾಣಬಹುದಾಗಿದೆ. ವಿಕೆಟ್‌ ಕೀಪರ್‌ ಆಗಿ ಸಂಜು ಸ್ಯಾಮ್ಸನ್‌ ಮೈದಾನಕ್ಕೆ ಇಳಿಯಲಿದ್ದಾರೆ.

AUS vs IND 1st T20I Australia Wins Toss in Canberra Opts to Bowl Against India

ಆಸ್ಟ್ರೇಲಿಯಾ ತಂಡ: ಟ್ರಾವಿಸ್ ಹೆಡ್, ಮಿಚೆಲ್ ಮಾರ್ಷ್ (ನಾಯಕ), ಜೋಶ್ ಇಂಗ್ಲಿಸ್ (ವಿಕೆಟ್‌ ಕೀಪರ್), ಟಿಮ್ ಡೇವಿಡ್, ಮಿಚೆಲ್ ಓವನ್, ಮಾರ್ಕಸ್ ಸ್ಟೊಯಿನಿಸ್, ಜೋಶ್ ಫಿಲಿಪ್, ಕ್ಸೇವಿಯರ್ ಬಾರ್ಟ್ಲೆಟ್, ನಾಥನ್ ಎಲ್ಲಿಸ್, ಮ್ಯಾಥ್ಯೂ ಕುಹ್ನೆಮನ್, ಜೋಶ್ ಹ್ಯಾಜಲ್‌ವುಡ್

ಭಾರತ ತಂಡ: ಅಭಿಷೇಕ್ ಶರ್ಮಾ, ಶುಭಮನ್ ಗಿಲ್, ತಿಲಕ್ ವರ್ಮಾ, ಸೂರ್ಯಕುಮಾರ್ ಯಾದವ್ (ನಾಯಕ), ಸಂಜು ಸ್ಯಾಮ್ಸನ್ (ವಿಕೆಟ್‌ ಕೀಪರ್), ಹರ್ಷಿತ್ ರಾಣಾ, ಶಿವಂ ದುಬೆ, ಅಕ್ಷರ್ ಪಟೇಲ್, ಕುಲದೀಪ್ ಯಾದವ್, ವರುಣ್ ಚಕ್ರವರ್ತಿ, ಜಸ್ಪ್ರೀತ್ ಬುಮ್ರಾ

Story first published: Wednesday, October 29, 2025, 13:25 [IST]
Other articles published on Oct 29, 2025
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+