AUS vs NZ: ನ್ಯೂಜಿಲೆಂಡ್ ವಿರುದ್ಧದ ಟಿ20 ಸರಣಿಗೆ ಆಸ್ಟ್ರೇಲಿಯಾ ತಂಡ ಪ್ರಕಟ; ಟಿ20 ವಿಶ್ವಕಪ್‌ಗೆ ತಯಾರಿ
ಮುಂಬರುವ ನ್ಯೂಜಿಲೆಂಡ್ ವಿರುದ್ಧದ ಮೂರು ಪಂದ್ಯಗಳ ಟಿ20 ಸರಣಿಗೆ ಮಿಚೆಲ್ ಮಾರ್ಷ್ ನಾಯಕತ್ವದ ಆಸ್ಟ್ರೇಲಿಯಾ ತಂಡವನ್ನು ಮಂಗಳವಾರ, ಜನವರಿ 6ರಂದು ಪ್ರಕಟಿಸಲಾಗಿದೆ.
ಆಸ್ಟ್ರೇಲಿಯಾದ ಪವರ್-ಪ್ಯಾಕ್ಡ್ 15 ಸದಸ್ಯರ ತಂಡವನ್ನು ಹೆಸರಿಸಿದ್ದು, ಪ್ಯಾಟ್ ಕಮ್ಮಿನ್ಸ್, ಮಿಚೆಲ್ ಸ್ಟಾರ್ಕ್ ಮತ್ತು ಜೋಶ್ ಹೇಝಲ್‌ವುಡ್ ಅವರಂತಹ ಅನುಭವಿ ಆಟಗಾರರು ಮರಳಿದ್ದಾರೆ.
ಇದಕ್ಕೂ ಮೊದಲು ವೆಸ್ಟ್ ಇಂಡೀಸ್ ವಿರುದ್ಧದ ಎರಡನೇ ಏಕದಿನ ಪಂದ್ಯದ ನಂತರ, ಜೋಶ್ ಹ್ಯಾಜಲ್‌ವುಡ್ ಅವರು ಕಿವೀಸ್ ತಂಡದ ಬಲವನ್ನು ಗಮನದಲ್ಲಿಟ್ಟುಕೊಂಡು ಆಸ್ಟ್ರೇಲಿಯಾ ಪೂರ್ಣ-ಸಾಮರ್ಥ್ಯದ ತಂಡವನ್ನು ಆಯ್ಕೆ ಮಾಡಲಿದೆ ಎಂದು ಹೇಳಿದರು.

ಪ್ಯಾಟ್ ಕಮ್ಮಿನ್ಸ್, ಜೋಶ್ ಹ್ಯಾಜಲ್‌ವುಡ್ ಮತ್ತು ಮಿಚೆಲ್ ಸ್ಟಾರ್ಕ್ ಅವರು 2022ರ ಟಿ20 ವಿಶ್ವಕಪ್‌ನಲ್ಲಿ ತವರು ನೆಲದಲ್ಲಿ ಕೊನೆಯದಾಗಿ ಆಡಿದ ನಂತರ ಟಿ20 ತಂಡಕ್ಕೆ ಪುನರಾಗಮಿಸಿದ್ದಾರೆ.
ಪ್ಯಾಟ್ ಕಮಿನ್ಸ್ ತಂಡದಲ್ಲಿದ್ದರೂ ಆಲ್‌ರೌಂಡರ್ ಮಿಚೆಲ್ ಮಾರ್ಷ್ ಅವರನ್ನು ಸರಣಿಗೆ ನಾಯಕರನ್ನಾಗಿ ನೇಮಿಸಲಾಗಿದೆ. ಟೆಸ್ಟ್ ಮತ್ತು ಏಕದಿನ ಪಂದ್ಯಗಳಿಂದ ನಿವೃತ್ತರಾದ ಡೇವಿಡ್ ವಾರ್ನರ್ ಅವರು ರಾಷ್ಟ್ರೀಯ ಕರ್ತವ್ಯವನ್ನು ಪುನರಾರಂಭಿಸಲು ತಮ್ಮ 2024ರ ILT20 ಲೀಗ್‌ನಿಂದ ಹಿಂತಿರುಗಲಿದ್ದಾರೆ.
ನ್ಯೂಜಿಲೆಂಡ್ ವಿರುದ್ಧದ ಸರಣಿಯು ವೆಸ್ಟ್ ಇಂಡೀಸ್ ಮತ್ತು ಯುನೈಟೆಡ್ ಸ್ಟೇಟ್ಸ್ ಆಫ್ ಅಮೆರಿಕಾ (ಯುಎಸ್‌ಎ) ದಲ್ಲಿ ನಡೆಯಲಿರುವ 2024ರ ಟಿ20 ವಿಶ್ವಕಪ್‌ಗೆ ಮೊದಲು ಚುಟುಕು ಸ್ವರೂಪದಲ್ಲಿ ಆಸ್ಟ್ರೇಲಿಯಾದ ಕೊನೆಯ ಸರಣಿಯಾಗಿದೆ.
ಐಸಿಸಿ ಟಿ20 ಪಂದ್ಯಾವಳಿಯತ್ತ ಆಸ್ಟ್ರೇಲಿಯಾ ತಂಡ ದೃಷ್ಟಿ ನೆಟ್ಟಿದೆ ಎಂದು ಕ್ರಿಕೆಟ್ ಆಸ್ಟ್ರೇಲಿಯಾ ಮುಖ್ಯ ಆಯ್ಕೆ ಸಮಿತಿ ಅಧ್ಯಕ್ಷ ಜಾರ್ಜ್ ಬೈಲಿ ಹೇಳಿದ್ದಾರೆ.
"ವೆಸ್ಟ್ ಇಂಡೀಸ್ ವಿರುದ್ಧದ ಸರಣಿಯ ನಂತರ ಟ್ರಾವಿಸ್ ಹೆಡ್, ಪ್ಯಾಟ್ ಕಮ್ಮಿನ್ಸ್, ಮಿಚೆಲ್ ಮಾರ್ಷ್ ಮತ್ತು ಸ್ಟೀವನ್ ಸ್ಮಿತ್ ಅವರು ಜೇಸನ್ ಬೆಹ್ರೆನ್‌ಡಾರ್ಫ್ ಮತ್ತು ಸೀನ್ ಅಬಾಟ್ ಅವರೊಂದಿಗೆ ಮುಂಬರುವ ಟಿ20 ಪಂದ್ಯಗಳನ್ನು ಆಡುವ ಸ್ಟ್ಯಾಂಡ್‌ಬೈ ಆಟಗಾರರಲ್ಲಿ ಮರುಸೇರ್ಪಡೆಯಾಗಿದ್ದಾರೆ," ಎಂದು ಜಾರ್ಜ್ ಬೈಲಿ ಹೇಳಿದರು.

"ಮುಂದಿನ ಆರು ಟಿ20 ಪಂದ್ಯಗಳು ನಮ್ಮ ಟಿ20 ವಿಶ್ವಕಪ್ ತಂಡವು ಹೇಗೆ ಕಾಣುತ್ತದೆ ಮತ್ತು ಅದರಲ್ಲಿ ಸಂಭಾವ್ಯ ಆಟಗಾರರನ್ನು ರೂಪಿಸಲು ನಮಗೆ ಅವಕಾಶವನ್ನು ಒದಗಿಸುತ್ತದೆ," ಎಂದರು.
"ಟಿ20 ವಿಶ್ವಕಪ್‌ಗೆ ಮುನ್ನ ಐಪಿಎಲ್‌ನಲ್ಲಿ ಆಸ್ಟ್ರೇಲಿಯಾದ ಆಟಗಾರರ ಪ್ರದರ್ಶನಗಳನ್ನು ಮೇಲ್ವಿಚಾರಣೆ ಮಾಡಲು ಮತ್ತು ವೀಕ್ಷಿಸಲು ನಾವು ಅವಕಾಶವನ್ನು ಸಂಪೂರ್ಣವಾಗಿ ಬಳಸಿಕೊಳ್ಳುತ್ತೇವೆ," ಎಂದು ಕ್ರಿಕೆಟ್ ಆಸ್ಟ್ರೇಲಿಯಾ ಮುಖ್ಯ ಆಯ್ಕೆಗಾರ ಜಾರ್ಜ್ ಬೈಲಿ ತಿಳಿಸಿದರು.
ಆಸ್ಟ್ರೇಲಿಯಾ ಮತ್ತು ನ್ಯೂಜಿಲೆಂಡ್ ನಡುವಿನ ಟಿ20 ಸರಣಿಯು ಫೆಬ್ರವರಿ 21ರಿಂದ ಫೆಬ್ರವರಿ 25ರವರೆಗೆ ನಡೆಯಲಿದೆ. ವೆಲ್ಲಿಂಗ್ಟನ್ ಮತ್ತು ಆಕ್ಲೆಂಡ್‌ನಲ್ಲಿ ಪಂದ್ಯಗಳನ್ನು ಆಯೋಜಿಸಲಾಗುತ್ತದೆ.
ನ್ಯೂಜಿಲೆಂಡ್ ವಿರುದ್ಧದ ಟಿ20 ಸರಣಿಗೆ ಆಸ್ಟ್ರೇಲಿಯಾ ತಂಡ
ಮಿಚೆಲ್ ಮಾರ್ಷ್ (ನಾಯಕ), ಪ್ಯಾಟ್ ಕಮ್ಮಿನ್ಸ್, ಟಿಮ್ ಡೇವಿಡ್, ನಾಥನ್ ಎಲ್ಲಿಸ್, ಜೋಶ್ ಹ್ಯಾಝಲ್‌ವುಡ್, ಟ್ರಾವಿಸ್ ಹೆಡ್, ಜೋಶ್ ಇಂಗ್ಲಿಸ್, ಗ್ಲೆನ್ ಮ್ಯಾಕ್ಸ್‌ವೆಲ್, ಮ್ಯಾಟ್ ಶಾರ್ಟ್, ಸ್ಟೀವನ್ ಸ್ಮಿತ್, ಮಿಚೆಲ್ ಸ್ಟಾರ್ಕ್, ಮಾರ್ಕಸ್ ಸ್ಟೋನಿಸ್, ಮ್ಯಾಥ್ಯೂ ವೇಡ್ (ವಿಕೆಟ್ ಕೀಪರ್), ಡೇವಿಡ್ ವಾರ್ನರ್, ಆಡಮ್ ಝಂಪಾ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications