Aus vs NZ: ಟಾಸ್ ಗೆದ್ದು ಬೌಲಿಂಗ್ ಆಯ್ಕೆ ಮಾಡಿಕೊಂಡ ನ್ಯೂಜಿಲೆಂಡ್: ಆಡುವ ಬಳಗ
ಧರ್ಮಶಾಲಾದ ಹಿಮಾಚಲ ಪ್ರದೇಶ ಕ್ರಿಕೆಟ್ ಅಸೋಸಿಯೇಷನ್ (ಎಚ್‌ಪಿಸಿಎ) ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಐಸಿಸಿ ಕ್ರಿಕೆಟ್ ವಿಶ್ವಕಪ್ 2023ರ ಪಂದ್ಯದಲ್ಲಿ ಆಸ್ಟ್ರೇಲಿಯಾ ಮತ್ತು ನ್ಯೂಜಿಲೆಂಡ್ ತಂಡಗಳು ಮುಖಾಮುಖಿಯಾಗಿದ್ದು, ಟಾಸ್ ಗೆದ್ದಿರುವ ನ್ಯೂಜಿಲೆಂಡ್ ಬೌಲಿಂಗ್ ಆಯ್ಕೆ ಮಾಡಿಕೊಂಡಿದೆ.
ಆಡಿರುವ ಐದು ಪಂದ್ಯಗಳಲ್ಲಿ 4 ಪಂದ್ಯಗಳಲ್ಲಿ ಗೆದ್ದಿರುವ ನ್ಯೂಜಿಲೆಂಡ್ ಅಂಕಪಟ್ಟಿಯಲ್ಲಿ ಮೂರನೇ ಸ್ಥಾನದಲ್ಲಿದ್ದರೆ, ಆಸ್ಟ್ರೇಲಿಯಾ5 ಪಂದ್ಯಗಳಲ್ಲಿ 3 ಪಂದ್ಯಗಳನ್ನು ಗೆಲ್ಲುವ 6 ಅಂಕಗಳೊಂದಿಗೆ ನಾಲ್ಕನೇ ಸ್ಥಾನದಲ್ಲಿದೆ.

ಆಡಿದ ಮೊದಲ ನಾಲ್ಕು ಪಂದ್ಯಗಳಲ್ಲಿ ಗೆದ್ದು ಬೀಗುತ್ತಿದ್ದ ನ್ಯೂಜಿಲೆಂಡ್ ಐದನೇ ಪಂದ್ಯದಲ್ಲಿ ಭಾರತದ ವಿರುದ್ಧ ಸೋಲನುಭವಿಸಿತ್ತು. ಕಳೆದ ಭಾನುವಾರ ಧರ್ಮಶಾಲಾದಲ್ಲಿ ಈ ಪಂದ್ಯ ನಡೆದಿತ್ತು. ಇಂದಿನ ಪಂದ್ಯದಲ್ಲಿ ಗೆದ್ದರೆ ನ್ಯೂಜಿಲೆಂಡ್ ಸೆಮಿಫೈನಲ್ ಪ್ರವೇಶ ಬಹುತೇಕ ಖಚಿತವಾಗಲಿದೆ.
ಆಡಿದ ಮೊದಲ ಎರಡು ಪಂದ್ಯಗಳಲ್ಲಿ ಸೋತಿದ್ದ ಆಸ್ಟ್ರೇಲಿಯಾ ನಂತರ ಸತತವಾಗಿ ಮೂರು ಪಂದ್ಯಗಳ್ನು ಗೆದ್ದು ಗೆಲುವಿನ ಲಯಕ್ಕೆ ಮರಳಿದೆ. ಇಂದಿನ ಪಂದ್ಯವನ್ನು ಗೆದ್ದು ಸೆಮಿಫೈನಲ್ ಹಾದಿಯನ್ನು ಮತ್ತಷ್ಟು ಸುಲಭವಾಗಿಸಿಕೊಳ್ಳುವ ಯೋಜನೆಯಲ್ಲಿದೆ. ಬೆಂಗಳೂರಿನಲ್ಲಿ ನೆದರ್ಲ್ಯಾಂಡ್ಸ್ ವಿರುದ್ಧ 300 ರನ್‌ಗಳ ಬೃಹತ್ ಜಯ ಸಾಧಿಸಿದ್ದು ತಂಡದ ಆತ್ಮವಿಶ್ವಾಸವನ್ನು ಹೆಚ್ಚಿಸಿದೆ. ಮ್ಯಾಕ್ಸ್‌ವೆಲ್ ಫಾರ್ಮ್‌ಗೆ ಮರಳಿರುವುದು ತಂಡಕ್ಕೆ ಖುಷಿ ಕೊಟ್ಟಿದೆ, ಅದೇ ಆಟವನ್ನು ಇಂದು ಮರುಕಳಿಸುವ ಯೋಜನೆಯಲ್ಲಿದೆ.
ಏಕದಿನ ಮಾದರಿಯಲ್ಲಿ ಹೆಡ್-ಟು-ಹೆಡ್ ದಾಖಲೆ
ಏಕದಿನ ಕ್ರಿಕೆಟ್‌ನಲ್ಲಿ ಆಸ್ಟ್ರೇಲಿಯಾ ಮತ್ತು ನ್ಯೂಜಿಲೆಂಡ್ 141 ಬಾರಿ ಮುಖಾಮುಖಿಯಾಗಿವೆ. ಆಸ್ಟ್ರೇಲಿಯಾ 95 ಬಾರಿ ಮತ್ತು ಕಿವೀಸ್ 34 ಬಾರಿ ಗೆದ್ದಿದ್ದರೆ 7 ಪಂದ್ಯಗಳು ಯಾವುದೇ ಫಲಿತಾಂಶ ನೀಡಲಿಲ್ಲ.
ಈ ಎರಡು ತಂಡಗಳು ಇದುವರೆಗೆ 11 ವಿಶ್ವಕಪ್ ಪಂದ್ಯಗಳನ್ನು ಆಡಿವೆ. ಆಸ್ಟ್ರೇಲಿಯ 8 ಮತ್ತು ನ್ಯೂಜಿಲೆಂಟ್ 3 ಪಂದ್ಯಗಳಲ್ಲಿ ಗೆಲುವು ಸಾಧಿಸಿದೆ. 2019 ರ ವಿಶ್ವಕಪ್ ಮುಖಾಮುಖಿಯಲ್ಲಿ, ಆಸ್ಟ್ರೇಲಿಯಾ 86 ರನ್‌ಗಳಿಂದ ಗೆಲುವು ಸಾಧಿಸಿತ್ತು.
ಇಂದಿನ ಪಂದ್ಯದಲ್ಲಿ ಎರಡೂ ತಂಡಗಳಲ್ಲಿ ಒಂದು ಬದಲಾವಣೆ ಮಾಡಲಾಗಿದೆ. ಆಸ್ಟ್ರೇಲಿಯಾ ತಂಡದಿಂದ ಕ್ಯಾಮೆರಾನ್ ಗ್ರೀನ್ ಹೊರಗುಳಿದಿದ್ದು ಟ್ರಾವಿಸ್ ಹೆಡ್ ತಂಡಕ್ಕೆ ಆಯ್ಕೆಯಾಗಿದ್ದಾರೆ, ನ್ಯೂಜಿಲೆಂಡ್ ತಂಡದಲ್ಲಿ ಮಾರ್ಕ್ ಚಾಪ್‌ಮಾನ್ ಬದಲಾಗಿ ಜಿಮ್ಮಿ ನೀಶಮ್ ಆಯ್ಕೆಯಾಗಿದ್ದಾರೆ.
ಉಭಯ ತಂಡಗಳ ಆಡುವ ಬಳಗ
ಆಸ್ಟ್ರೇಲಿಯಾ : ಡೇವಿಡ್ ವಾರ್ನರ್, ಟ್ರಾವಿಸ್ ಹೆಡ್, ಮಿಚೆಲ್ ಮಾರ್ಷ್, ಸ್ಟೀವನ್ ಸ್ಮಿತ್, ಮಾರ್ನಸ್ ಲ್ಯಾಬುಸ್ಚಾಗ್ನೆ, ಜೋಶ್ ಇಂಗ್ಲಿಸ್ (ವಿಕೆಟ್ ಕೀಪರ್), ಗ್ಲೆನ್ ಮ್ಯಾಕ್ಸ್‌ವೆಲ್, ಪ್ಯಾಟ್ ಕಮಿನ್ಸ್ (ನಾಯಕ), ಮಿಚೆಲ್ ಸ್ಟಾರ್ಕ್, ಆಡಮ್ ಝಂಪಾ, ಜೋಶ್ ಹ್ಯಾಜಲ್‌ವುಡ್.
ನ್ಯೂಜಿಲೆಂಡ್ : ಡೆವೊನ್ ಕಾನ್ವೆ, ವಿಲ್ ಯಂಗ್, ರಚಿನ್ ರವೀಂದ್ರ, ಡ್ಯಾರಿಲ್ ಮಿಚೆಲ್, ಟಾಮ್ ಲ್ಯಾಥಮ್ (ವಿಕೆಟ್ ಕೀಪರ್/ ನಾಯಕ), ಗ್ಲೆನ್ ಫಿಲಿಪ್ಸ್, ಜೇಮ್ಸ್ ನೀಶಮ್, ಮಿಚೆಲ್ ಸ್ಯಾಂಟ್ನರ್, ಮ್ಯಾಟ್ ಹೆನ್ರಿ, ಲಾಕಿ ಫರ್ಗುಸನ್, ಟ್ರೆಂಟ್ ಬೌಲ್ಟ್.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications