ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

ಕಿವೀಸ್‌ಗೆ ಕಂಟಕವಾದ ಕ್ಯಾಮರೂನ್, ಕ್ಯಾರಿ: ರೋಚಕ ಸೆಣೆಸಾಟದಲ್ಲಿ ಆಸಿಸ್‌ಗೆ ಗೆಲುವು

Aus vs NZ ODI Series: Australia won match by 2 wickets against New Zealand Highlights

ಆಸ್ಟ್ರೇಲಿಯಾ ಹಾಗೂ ನ್ಯೂಜಿಲೆಂಡ್ ವಿರುದ್ಧದ ಏಕದಿನ ಸರಣಿಯ ಮೊದಲ ಪಂದ್ಯ ರೋಚಕವಾಗಿ ಅಂತ್ಯವಾಗಿದೆ. ಕೇರ್ನ್ಸ್‌ನಲ್ಲಿ ನಡೆದ ಈ ಸೆಣೆಸಾಟದಲ್ಲಿ ಆಸ್ಟ್ರೇಲಿಯಾ ಹೀನಾಯ ಸೋಲಿನತ್ತ ಮುಖಮಾಡಿತ್ತು. ಆದರೆ 6ನೇ ವಿಕೆಟ್‌ಗೆ ಜೊತೆಯಾದ ಅಲೆಕ್ಸ್ ಕ್ಯಾರಿ ಹಾಗೂ ಕ್ಯಾಮರೂನ್ ಗ್ರೀನ್ ಜೋಡಿ ಆಸಿಸ್ ಪಡೆಯನ್ನು ಸೋಲಿನಿಂದ ಪಾರು ಮಾಡಿ ರೋಚಕ ಗೆಲುವಿಗೆ ಕಾರಣವಾದರು.

ನ್ಯೂಜಿಲೆಂಡ್ ನೀಡಿದ್ದ 233 ರನ್‌ಗಳ ಗುರಿಯನ್ನು ಬೆನ್ನಟ್ಟಿದ ಆಸ್ಟ್ರೇಲಿಯಾ ತಂಡ ದೊಡ್ಡ ಆಘಾತವನ್ನು ಅನುಭವಿಸಿತು. ತಂಡ ಕೇವಲ 45 ರನ್‌ಗಳನ್ನು ಗಳಿಸುವಷ್ಟರಲ್ಲಿ 5 ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿತ್ತು. ಈ ಹಂತದಲ್ಲಿ ಈ ಹಂತದಲ್ಲಿ ಜೊತೆಯಾದ ಅಲೆಕ್ಸ್ ಕ್ಯಾರಿ ಹಾಗೂ ಕ್ಯಾಮರೂನ್ ಗ್ರೀನ್ ಭರ್ಜರಿ ಆಟವನ್ನು ಪ್ರದರ್ಶಿಸಿ ತಂಡದ ಗೆಲುವಿಗೆ ಕಾರಣವಾಗಿದ್ದಾರೆ.

ಏಷ್ಯಾ ಕಪ್: ಶ್ರೀಲಂಕಾ ವಿರುದ್ಧದ ಮಹತ್ವದ ಕದನಕ್ಕೆ ರೋಹಿತ್ ಪಡೆ ಸಜ್ಜು: ತಪ್ಪು ತಿದ್ದಿಕೊಳ್ಳುತ್ತಾ ಭಾರತ!ಏಷ್ಯಾ ಕಪ್: ಶ್ರೀಲಂಕಾ ವಿರುದ್ಧದ ಮಹತ್ವದ ಕದನಕ್ಕೆ ರೋಹಿತ್ ಪಡೆ ಸಜ್ಜು: ತಪ್ಪು ತಿದ್ದಿಕೊಳ್ಳುತ್ತಾ ಭಾರತ!

ಸಾಧಾರಣ ಗುರಿ ನೀಡಿದ ನ್ಯೂಜಿಲೆಂಡ್: ಈ ಪಂದ್ಯದಲ್ಲಿ ಟಾಸ್ ಸೋತು ಮೊದಲಿಗೆ ಬ್ಯಾಟಿಂಗ್ ನಡೆಸಿದ ನ್ಯೂಜಿಲೆಂಡ್ ಪಡೆ ಸಾಧಾರಣ ಗುರಿಯನ್ನು ನೀಡಿತು. ಸಂಪೂರ್ಣ 50 ಓವರ್‌ಗಳ ಆಟವನ್ನು ಆಡಿದರೂ ನ್ಯೂಜಿಲೆಂಡ್ 9 ವಿಕೆಟ್ ಕಳೆದುಕೊಂಡು 232 ರನ್‌ಗಳನ್ನು ಗಳಿಸಲಷ್ಟೇ ಶಕ್ತವಾಯಿತು. ಆಸ್ಟ್ರೇಲಿಯಾ ಪರವಾಗಿ ಗ್ಲೆನ್ ಮ್ಯಾಕ್ಸ್‌ವೆಲ್ 4 ವಿಕೆಟ್ ಪಡೆದು ಮಿಂಚಿದರು.

ಕುಸಿದ ಆಸಿಸ್ ಅಗ್ರ ಕ್ರಮಾಂಕ: ಈ ಸಾಧಾರಣ ಮೊತ್ತವನ್ನು ಬೆನ್ನಟ್ಟಿದ ಆಸ್ಟ್ರೇಲಿಯಾ ತಂಡ ಆರಂಭದಿಂದಲೇ ಆಘಾತಕ್ಕೆ ಒಳಗಾಯಿತು. ಮೂರನೇ ಓವರ್‌ನಿಂದಲೇ ವಿಕೆಟ್ ಕಳೆದುಕೊಳ್ಳಲು ಆರಂಭಿಸಿದ ಆಸ್ಟ್ರೇಲಿಯಾ 45 ರನ್‌ಗಳಿಸುವಷ್ಟರಲ್ಲಿ 5 ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿತ್ತು. ಆಸಿಸ್ ಪಡೆ ಬಹುತೇಕ ಹೀನಾಯ ಸೋಲಿನತ್ತ ಮುಖಮಾಡಿತು. ಆದರೆ ಈ ಸಂದರ್ಭದಲ್ಲಿ ಜೊತೆಯಾದ ಅಲೆಕ್ಸ್ ಕ್ಯಾರಿ ಹಾಗೂ ಕ್ಯಾಮರೂನ್ ಗ್ರೀನ್ ಊಹಿಸಲಾರದ ರೀತಿಯಲ್ಲಿ ಕಿವೀಸ್ ಪಡೆಗೆ ಆಘಾತ ನೀಡಿದರು.

ಭರ್ಜರಿ ಜೊತೆಯಾಟ: ಅಲೆಕ್ಸ್ ಕ್ಯಾರಿ ಹಾಗೂ ಕ್ಯಾಮರೂನ್ ಗ್ರೀನ್ ಜೋಡಿ ಭರ್ಜರಿ ಪ್ರದರ್ಶನ ನೀಡಿದರು. ಒತ್ತಡದಲ್ಲಿ ನೆಲಕಚ್ಚಿ ನಿಂತು ಆಡಿದ ಈ ಜೋಡಿ ತಂಡವನ್ನು ಕುಸಿತದಿಂದ ಪಾರು ಮಾಡಿದರು. ಇನ್ನಿಂಗ್ಸ್ ಬೆಳೆಸುತ್ತಾ ಸಾಗಿದ ಈ ಜೋಡಿ ಭರ್ಜರಿ 158 ರನ್‌ಗಳ ಜೊತೆಯಾಟ ನೀಡಿದರು. 85 ರನ್‌ಗಳಿಸಿದ ಅಲೆಕ್ಸ್ ಕ್ಯಾರಿ ತಂಡದ ಮೊತ್ತ 205 ರನ್‌ಗಳಾಗಿದ್ದಾಗ ವಿಕೆಟ್ ಕಳೆದುಕೊಂಡರಾದರೂ ಮತ್ತೊಂದು ತುದಿಯಲ್ಲಿದ್ದ ಕ್ಯಾಮರೂನ್ ಗ್ರೀನ್ ಅಜೇಯವಾಗುಳಿದು ತಂಡವನ್ನು ಗೆಲುವಿನ ದಡ ಸೇರಿಸಿದರು. ಅಂತಿಮ ಹಂತದಲ್ಲಿ ಆಡಮ್ ಜಂಪಾ 13 ರನ್‌ಗಳನ್ನು ಗಳಿಸಿ ಗೆಲುವಿನಲ್ಲಿ ಮಹತ್ವದ ಪಾತ್ರವಹಿಸಿದರು. ಅಂತಿಮವಾಗಿ 2 ವಿಕೆಟ್‌ಗಳ ಅಂತರದಿಂದ ರೋಚಕವಾಗಿ ಗೆಲುವು ಸಾಧಿಸಿದೆ.

ಏಷ್ಯಾಕಪ್‌ನಲ್ಲಿ ಭಾರತ ತಂಡದ ಸೆಲೆಕ್ಷನ್‌ನಲ್ಲೇ ದೊಡ್ಡ ಎಡವಟ್ಟು: ಮೊಹಮ್ಮದ್ ಕೈಫ್ಏಷ್ಯಾಕಪ್‌ನಲ್ಲಿ ಭಾರತ ತಂಡದ ಸೆಲೆಕ್ಷನ್‌ನಲ್ಲೇ ದೊಡ್ಡ ಎಡವಟ್ಟು: ಮೊಹಮ್ಮದ್ ಕೈಫ್

ಆಸ್ಟ್ರೇಲಿಯಾ ಆಡುವ ಬಳಗ
ಆರನ್ ಫಿಂಚ್ (ನಾಯಕ), ಡೇವಿಡ್ ವಾರ್ನರ್, ಸ್ಟೀವನ್ ಸ್ಮಿತ್, ಅಲೆಕ್ಸ್ ಕ್ಯಾರಿ (ವಿಕೆಟ್ ಕೀಪರ್), ಮಾರ್ನಸ್ ಲ್ಯಾಬುಶೈನ್, ಮಾರ್ಕಸ್ ಸ್ಟೊಯಿನಿಸ್, ಗ್ಲೆನ್ ಮ್ಯಾಕ್ಸ್‌ವೆಲ್, ಕ್ಯಾಮೆರಾನ್ ಗ್ರೀನ್, ಮಿಚೆಲ್ ಸ್ಟಾರ್ಕ್, ಆಡಮ್ ಝಂಪಾ, ಜೋಶ್ ಹ್ಯಾಜಲ್‌ವುಡ್
ಬೆಂಚ್: ಆಶ್ಟನ್ ಅಗರ್, ಜೋಶ್ ಇಂಗ್ಲಿಸ್, ಶಾನ್ ಅಬಾಟ್

ನ್ಯೂಜಿಲೆಂಡ್ ಆಡುವ ಬಳಗ: ಮಾರ್ಟಿನ್ ಗಪ್ಟಿಲ್, ಡೆವೊನ್ ಕಾನ್ವೇ, ಕೇನ್ ವಿಲಿಯಮ್ಸನ್ (ನಾಯಕ), ಟಾಮ್ ಲ್ಯಾಥಮ್ (ವಿಕೆಟ್ ಕೀಪರ್), ಡೇರಿಲ್ ಮಿಚೆಲ್, ಮೈಕೆಲ್ ಬ್ರೇಸ್‌ವೆಲ್, ಜೇಮ್ಸ್ ನೀಶಮ್, ಮಿಚೆಲ್ ಸ್ಯಾಂಟ್ನರ್, ಮ್ಯಾಟ್ ಹೆನ್ರಿ, ಲಾಕಿ ಫರ್ಗುಸನ್, ಟ್ರೆಂಟ್ ಬೌಲ್ಟ್
ಬೆಂಚ್: ಫಿನ್ ಅಲೆನ್, ಗ್ಲೆನ್ ಫಿಲಿಪ್ಸ್, ಟಿಮ್ ಸೌಥಿ, ಬೆನ್ ಸಿಯರ್ಸ್

Story first published: Tuesday, September 6, 2022, 18:24 [IST]
Other articles published on Sep 6, 2022
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X