For Quick Alerts
ALLOW NOTIFICATIONS  
For Daily Alerts
 

ಪಾಕ್ ವಿರುದ್ಧದ ಮೊದಲ ಟೆಸ್ಟ್‌ಗೆ ಆಸೀಸ್ ಆಡುವ 11ರ ಬಳಗ ಪ್ರಕಟ; ಉಪನಾಯಕನಾಗಿ ಬಡ್ತಿ ಪಡೆದ ಟ್ರಾವಿಸ್ ಹೆಡ್

ಗುರುವಾರ, ಡಿಸೆಂಬರ್ 14ರಿಂದ ಪರ್ತ್‌ನ ಆಪ್ಟಸ್ ಸ್ಟೇಡಿಯಂನಲ್ಲಿ ನಡೆಯಲಿರುವ ಪ್ರವಾಸಿ ಪಾಕಿಸ್ತಾನ ವಿರುದ್ಧದ ಮೊದಲ ಟೆಸ್ಟ್ ಪಂದ್ಯಕ್ಕಾಗಿ ಆತಿಥೇಯ ಆಸ್ಟ್ರೇಲಿಯಾ ತಮ್ಮ ಆಡುವ 11ರ ಬಳಗವನ್ನು ಪ್ರಕಟಿಸಿದೆ.

ಇದೇ ವೇಳೆ, ಆರಂಭಿಕ ಬ್ಯಾಟರ್ ಟ್ರಾವಿಸ್ ಹೆಡ್ ಅವರನ್ನು ಮುಂಬರುವ ಪಾಕಿಸ್ತಾನ ವಿರುದ್ಧದ ಟೆಸ್ಟ್ ಸರಣಿಗೆ ಆಸ್ಟ್ರೇಲಿಯಾ ತಂಡದ ಉಪನಾಯಕನಾಗಿ ಮರುನೇಮಕ ಮಾಡಲಾಗಿದೆ.

AUS vs PAK 1st Test: Australia Announced Playing 11 Squad For 1st Test Against Pakistan

2023ರ ವಿಶ್ವ ಟೆಸ್ಟ್ ಚಾಂಪಿಯನ್ಸ್ ಫೈನಲ್ ಮತ್ತು ಏಕದಿನ ವಿಶ್ವಕಪ್ ಫೈನಲ್‌ನಲ್ಲಿ ಆಸ್ಟ್ರೇಲಿಯಾ ತಂಡಕ್ಕೆ ಹೀರೋ ಆಗಿದ್ದ ಟ್ರಾವಿಸ್ ಹೆಡ್ ಅವರು ಸ್ಟೀವ್ ಸ್ಮಿತ್ ಜೊತೆಗೆ ತಂಡದ ಸಹ-ಉಪನಾಯಕನಾಗಿ ನೇಮಕಗೊಂಡಿದ್ದಾರೆ.

ಆದರೆ, ಪ್ಯಾಟ್ ಕಮಿನ್ಸ್ ಅನುಪಸ್ಥಿತಿಯಲ್ಲಿ ಸ್ಟೀವನ್ ಸ್ಮಿತ್ ತಂಡದ ನಾಯಕತ್ವವನ್ನು ವಹಿಸಿಕೊಳ್ಳಲಿದ್ದಾರೆ. ಈ ಹಿಂದೆ ಟಿಮ್ ಪೈನ್ ನಾಯಕರಾಗಿದ್ದಾಗ ಟ್ರಿಆವಿಸ್ ಹೆಡ್ ಟೆಸ್ಟ್ ತಂಡದ ಉಪನಾಯಕನ ಪಾತ್ರವನ್ನು ನಿರ್ವಹಿಸಿದ್ದರು.

ಪಾಕಿಸ್ತಾನ ವಿರುದ್ಧದ ಮೊದಲ ಟೆಸ್ಟ್ ಪಂದ್ಯಕ್ಕಾಗಿ ಆಸೀಸ್ ತಮ್ಮ ತಂಡದಲ್ಲಿ ಹೆಚ್ಚಿನ ಬದಲಾವಣೆ ಮಾಡಲು ಹೋಗಿಲ್ಲ. ಅನುಭವಿ ನಾಥನ್ ಲಿಯಾನ್ ಅವರು ಯುವ ಸ್ಪಿನ್ನರ್ ಟಾಡ್ ಮರ್ಫಿ ಬದಲಿಗೆ ಆಡುವ 11ರ ಬಳಗಕ್ಕೆ ಮರಳಿದ್ದಾರೆ.

ಇದೇ ವೇಳೆ ತಮ್ಮ ಅಂತಿಮ ಟೆಸ್ಟ್ ಸರಣಿಯನ್ನು ಆಡುವುದಾಗಿ ಘೋಷಿಸಿರುವ ಅನುಭವಿ ಆರಂಭಿಕ ಬ್ಯಾಟರ್ ಡೇವಿಡ್ ವಾರ್ನರ್ ಅವರು ಉಸ್ಮಾನ್ ಖವಾಜಾ ಅವರೊಂದಿಗೆ ಇನ್ನಿಂಗ್ಸ್ ಆರಂಭಿಸಲಿದ್ದಾರೆ. ಮಾರ್ನಸ್ ಲ್ಯಾಬುಸ್ಚಾಗ್ನೆ ಮೂರನೇ ಕ್ರಮಾಂಕದಲ್ಲಿ ಬರಲಿದ್ದರೆ, ಸ್ಟೀವನ್ ಸ್ಮಿತ್ ನಾಲ್ಕನೇ ಸ್ಥಾನದಲ್ಲಿ ಬ್ಯಾಟಿಂಗ್‌ಗೆ ಆಗಮಿಸಲಿದ್ದಾರೆ.

ನಂತರದ ಕ್ರಮಾಂಕದಲ್ಲಿ ಟ್ರಾವಿಸ್ ಹೆಡ್, ಮಿಚೆಲ್ ಮಾರ್ಷ್ ಮತ್ತು ಅಲೆಕ್ಸ್ ಕ್ಯಾರಿ ಅವರು ಬ್ಯಾಟಿಂಗ್‌ಗೆ ಬರುವ ಮೂಲಕ ಆಸ್ಟ್ರೇಲಿಯಾದ ಬ್ಯಾಟಿಂಗ್ ವಿಭಾಗವನ್ನು ಪೂರ್ಣಗೊಳಿಸುತ್ತಾರೆ.

ಪ್ಯಾಟ್ ಕಮ್ಮಿನ್ಸ್, ಮಿಚೆಲ್ ಸ್ಟಾರ್ಕ್ ಮತ್ತು ಜೋಶ್ ಹ್ಯಾಜಲ್‌ವುಡ್ ಈ ಮೂವರು ಕಳೆದ ತಿಂಗಳು ಭಾರತದಲ್ಲಿ ತಮ್ಮ ದಾಖಲೆಯ ಆರನೇ ಏಕದಿನ ವಿಶ್ವಕಪ್ ಗೆಲುವಿಗೆ ಆಸ್ಟ್ರೇಲಿಯಾವನ್ನು ಮುನ್ನಡೆಸಿದ ಬಳಿಕ ಮತ್ತೆ ಒಂದಾಗಲಿದ್ದಾರೆ. ಆಸ್ಟ್ರೇಲಿಯಾದ ನಾಲ್ಕನೇ ಮುಂಚೂಣಿ ಬೌಲರ್‌ ಆಗಿ ನಾಥನ್ ಲಿಯಾನ್ ಸೇರಿಕೊಳ್ಳಲಿದ್ದಾರೆ.

ಆಸ್ಟ್ರೇಲಿಯಾ ಮೊದಲು ಪರ್ತ್‌ನಲ್ಲಿ ಪಾಕಿಸ್ತಾನ ತಂಡವನ್ನು ಎದುರಿಸಲಿದೆ, ಬಳಿಕ ಡಿಸೆಂಬರ್ 26ರಂದು ನಡೆಯುವ ಬಾಕ್ಸಿಂಗ್ ಡೇ ಟೆಸ್ಟ್‌ ಪಂದ್ಯವನ್ನು ಮೆಲ್ಬೋರ್ನ್ ಕ್ರಿಕೆಟ್ ಮೈದಾನದಲ್ಲಿ ಆಡಲಿದೆ.

ಟೆಸ್ಟ್ ಸರಣಿಯ ಅಂತಿಮ ಪಂದ್ಯವು ಜನವರಿ 3, 2024ರಿಂದ ಐತಿಹಾಸಿಕ ಸಿಡ್ನಿ ಕ್ರಿಕೆಟ್ ಮೈದಾನದಲ್ಲಿ ಆಡುವುದರೊಂದಿಗೆ ಡೇವಿಡ್ ವಾರ್ನರ್ ಅವರು ತಮ್ಮ ತವರು ನಗರದಲ್ಲಿ ವಿದಾಯ ಹೇಳಲಿದ್ದಾರೆ.

ಪಾಕಿಸ್ತಾನ ವಿರುದ್ಧ ಮೊದಲ ಟೆಸ್ಟ್‌ ಪಂದ್ಯಕ್ಕಾಗಿ ಆಸ್ಟ್ರೇಲಿಯಾ ಆಡುವ 11ರ ಬಳಗ

ಡೇವಿಡ್ ವಾರ್ನರ್, ಉಸ್ಮಾನ್ ಖವಾಜಾ, ಮಾರ್ನಸ್ ಲ್ಯಾಬುಸ್ಚಾಗ್ನೆ, ಸ್ಟೀವ್ ಸ್ಮಿತ್, ಟ್ರಾವಿಸ್ ಹೆಡ್, ಮಿಚ್ ಮಾರ್ಷ್, ಅಲೆಕ್ಸ್ ಕ್ಯಾರಿ, ಮಿಚೆಲ್ ಸ್ಟಾರ್ಕ್, ಪ್ಯಾಟ್ ಕಮ್ಮಿನ್ಸ್ (ನಾಯಕ), ನಾಥನ್ ಲಿಯಾನ್, ಜೋಶ್ ಹ್ಯಾಜಲ್‌ವುಡ್.

Story first published: Wednesday, December 13, 2023, 15:24 [IST]
Other articles published on Dec 13, 2023
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+