ಆಸ್ಟ್ರೇಲಿಯಾ vs ಪಾಕಿಸ್ತಾನ: 2ನೇ ಟೆಸ್ಟ್ ಪಂದ್ಯಕ್ಕೆ ಆಸಿಸ್ ಪ್ಲೇಯಿಂಗ್ XI ಪ್ರಕಟ, ಮಿಚೆಲ್ ಸ್ವೆಪ್ಸನ್ ಪದಾರ್ಪಣೆ

ಆಸ್ಟ್ರೇಲಿಯಾ ಹಾಗೂ ಪಾಕಿಸ್ತಾನ ನಡುವಿನ ಟೆಸ್ಟ್ ಸರಣಿಯ ಮೊದಲ ಪಂದ್ಯ ನೀರಸ ಡ್ರಾ ಫಲಿತಾಂಶ ಪಡೆದುಕೊಂಡ ನಂತರ ಇದೀಗ ಎರಡೂ ತಂಡಗಳು ಎರಡನೇ ಪಂದ್ಯಕ್ಕೆ ಸಜ್ಜಾಗುತ್ತಿದೆ. ಮಾರ್ಚ್ 12 ಶನಿವಾರದಂದು ಈ ಎರಡನೇ ಪಂದ್ಯ ಆರಂಭವಾಗಲಿದ್ದು ಕರಾಚಿಯ ನ್ಯಾಶನಲ್ ಸ್ಟೇಡಿಯಂ ಈ ಪಂದ್ಯಕ್ಕೆ ಆತಿಥ್ಯ ವಹಿಸಿಕೊಳ್ಳಲಿದೆ. ಪಾಕಿಸ್ತಾನ ವಿರುದ್ಧದ ಎರಡನೇ ಟೆಸ್ಟ್ ಪಂದ್ಯದಕ್ಕಿ ಕಣಕ್ಕಿಳಿಯಲಿರುವ ಆಸ್ಟ್ರೇಲಿಯಾದ ಆಡುವ ಬಳಗವನ್ನು ಈಗಾಗಲೇ ಘೋಷಣೆ ಮಾಡಲಾಗಿದೆ.
ಶುಕ್ರವಾರ ಆಸ್ಟ್ರೇಲಿಯಾ ತಂಡದ ಆಡುವ ಬಳಗ ಘೋಷಣೆಯಾಗಿದ್ದು ಕರಾಚಿಯಲ್ಲಿ ನಡೆಯಲಿರುವ ಎರಡನೇ ಟೆಸ್ಟ್ ಪಂದ್ಯದಲ್ಲಿ ಆಸ್ಟ್ರೇಲಿಯಾದ ಲೆಗ್ ಸ್ಪಿನ್ನರ್ ಮಿಚೆಲ್ ಸ್ವೆಪ್ಸನ್ ಪದಾರ್ಪಣೆ ಮಾಡುವುದು ಖಚಿತವಾಗಿದೆ. ಸ್ಪಿನ್ನರ್‌ಗಳಿಗೆ ಸಹಕಾರಿಯಾಗುವ ಪಿಚ್‌ನಲ್ಲಿ ಅನುಭವಿ ನಥನ್ ಲಿಯೋನ್‌ಗೆ ಜೊತೆಗಾರನಾಗಿ ಸ್ವೆಪ್ಸನ್ ಕಣಕ್ಕಿಳಿಯಲಿದ್ದಾರೆ. ವೇಗದ ಬೌಲರ್ ಜೋಶ್ ಹೇಜಲ್‌ವುಡ್ ಈ ಪಂದ್ಯದಲ್ಲಿ ಆಡುವ ಬಳಗದಿಂದ ಹೊರಗುಳಿದಿದ್ದು ಸ್ವೆಪ್ಸನ್ ಅವರ ಪದಾರ್ಪಣೆಗಾಗಿ ನಾಯಕ ಪ್ಯಾಟ್ ಕಮ್ಮಿನ್ಸ್ ಉತ್ಸುಕತೆಯನ್ನು ವ್ಯಕ್ತಪಡಿಸಿದ್ದಾರೆ.
"ಕಳೆದ ಒಂದೆರಡು ವರ್ಷಗಳಿಂದ ಸ್ವೆಪ್ಸನ್ ತಂಡದೊಂದಿಗೆ ಪ್ರಯಾಣಿಸುತ್ತಿದ್ದರೂ ಡ್ರಿಂಕ್ಸ್ ಪೂರೈಸಲು ಸೀಮಿತವಾಗಿದ್ದರು. ಈಗ ಅವರು ಪಂದ್ಯವನ್ನಾಡಲು ಸಂಪೂರ್ಣವಾಗಿ ಸಜ್ಜಾಗಿದ್ದಾರೆ. ನಮ್ಮ ಸ್ಕ್ವಾಡ್‌ನ ಪ್ರಮುಖ ಭಾಗವಾಗಿದ್ದಾರೆ ಅವರು. ಈಗ ಅವರಿಗೆ ಅವಕಾಶ ದೊರೆಯುತ್ತಿರುವುದಕ್ಕೆ ನಾವೆಲ್ಲರೂ ಬಹಳ ಕುತೂಹಲಗೊಂಡಿದ್ದೇವೆ" ಎಂದಿದ್ದಾರೆ ನಾಯಕ ಪ್ಯಾಟ್ ಕಮ್ಮಿನ್ಸ್.
24 ವರ್ಷಗಳ ಸುದೀರ್ಘ ಕಾಲದ ನಂತರ ಸರಣಿಯನ್ನಾಡಲು ಪಾಕಿಸ್ತಾನಕ್ಕೆ ಆಗಮಿಸಿರುವ ಆಸ್ಟ್ರೇಲಿಯಾ ತಂಡ ಮೊದಲ ಪಂದ್ಯವನ್ನು ರಾವಲ್ಪಿಂಡಿಯಲ್ಲಿ ಆಡಿತ್ತು. ಆದರೆ ಈ ಪಂದ್ಯ ಅತ್ಯಂತ ನೀರಸವಾಗಿ ಡ್ರಾಗೊಳ್ಳುವ ಮೂಲಕ ನಿರಾಸೆ ಮೂಡಿಸಿದೆ. ಈ ಪಮದ್ಯದಲ್ಲಿ ಮೊದಲಿಗೆ ಬ್ಯಾಟಿಂಗ್ ಮಾಡಿದ ಪಾಕಿಸ್ತಾನ 476/4 ರನ್‌ಗಳಿಸಿ ಡಿಕ್ಲೇರ್ ಮಾಡಿಕೊಂಡಿತ್ತು. ನಂತರ ಬ್ಯಾಟಿಂಗ್ ನಡೆಸಿದ ಆಸ್ಟ್ರೇಲಿಯಾ 459 ರನ್‌ಗಳಿಗೆ ಪಂದ್ಯದ ಅಂತಿಮ ದಿನದಂದು ಆಲೌಟ್ ಆಗಿತ್ತು. ನಂತರ ಮತ್ತೆ ಬ್ಯಾಟಿಂಗ್ ಮುಂದುವರಿಸಿದ ಪಾಕಿಸ್ತಾನ ವಿಕೆಟ್ ಕಳೆದುಕೊಳ್ಳದೆ 252 ರನ್‌ಗಳಿಸಿತು. ಪಾಕಿಸ್ತಾನದ ಆರಂಭಿಕರಿಬ್ಬರೂ ಈ ಇನ್ನಿಂಗ್ಸ್‌ನ್ಲಲಿ ಶತಕ ಸಿಡಿಸಿದ್ದರು.
ಕರಾಚಿ ಪಂದ್ಯದಲ್ಲಿ ಕಣಕ್ಕಿಳಿಯುವ ಆಸ್ಟ್ರೇಲಿಯಾದ ಪ್ಲೇಯಿಂಗ್ XI: ಡೇವಿಡ್ ವಾರ್ನರ್, ಉಸ್ಮಾನ್ ಖವಾಜಾ, ಮಾರ್ನಸ್ ಲ್ಯಾಬುಸ್ಚಾಗ್ನೆ, ಸ್ಟೀವ್ ಸ್ಮಿತ್, ಟ್ರಾವಿಸ್ ಹೆಡ್, ಕ್ಯಾಮೆರಾನ್ ಗ್ರೀನ್, ಅಲೆಕ್ಸ್ ಕ್ಯಾರಿ, ಮಿಚೆಲ್ ಸ್ಟಾರ್ಕ್, ಪ್ಯಾಟ್ ಕಮಿನ್ಸ್ (ನಾಯಕ), ನಾಥನ್ ಲಿಯಾನ್, ಮಿಚೆಲ್ ಸ್ವೆಪ್ಸನ್
ಪಾಕಿಸ್ತಾನ ಸಂಪೂರ್ಣ ಸ್ಕ್ವಾಡ್: ಅಬ್ದುಲ್ಲಾ ಶಫೀಕ್, ಇಮಾಮ್-ಉಲ್-ಹಕ್, ಅಜರ್ ಅಲಿ, ಬಾಬರ್ ಅಜಮ್ (ನಾಯಕ), ಫವಾದ್ ಆಲಂ, ಮೊಹಮ್ಮದ್ ರಿಜ್ವಾನ್ (ವಿಕೆಟ್ ಕೀಪರ್), ಇಫ್ತಿಕರ್ ಅಹ್ಮದ್, ನೌಮನ್ ಅಲಿ, ಸಾಜಿದ್ ಖಾನ್, ನಸೀಮ್ ಶಾ, ಶಾಹೀನ್ ಅಫ್ರಿದಿ, ಮೊಹಮ್ಮದ್ ವಾಸಿಮ್ ಜೂನಿಯರ್, ಶಾನ್ ಮಸೂದ್, ಸೌದ್ ಶಕೀಲ್, ಜಾಹಿದ್ ಮಹಮೂದ್
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications