ಆಸ್ಟ್ರೇಲಿಯಾ vs ಪಾಕಿಸ್ತಾನ 2ನೇ ಟೆಸ್ಟ್: ಟಾಸ್ ಗೆದ್ದ ಆಸ್ಟ್ರೇಲಿಯಾ ಬ್ಯಾಟಿಂಗ್ ಆಯ್ಕೆ LIVE

ಕರಾಚಿಯ ನ್ಯಾಷನಲ್ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಆಸ್ಟ್ರೇಲಿಯಾ ಮತ್ತು ಪಾಕಿಸ್ತಾನ ನಡುವಿನ ಎರಡನೇ ಟೆಸ್ಟ್ ಪಂದ್ಯದಲ್ಲಿ ಟಾಸ್ ಗೆದ್ದ ಪ್ರವಾಸಿ ಆಸೀಸ್ ತಂಡ ಮೊದಲ ಬ್ಯಾಟಿಂಗ್ ಆಯ್ದುಕೊಂಡಿದೆ.
ಮೊದಲ ಟೆಸ್ಟ್ ಪಂದ್ಯ ನೀರಸ ಡ್ರಾನಲ್ಲಿ ಅಂತ್ಯಗೊಂಡ ಬಳಿಕ, ಕಳಪೆ ಪಿಚ್ ಕುರಿತಾಗಿ ಸಾಕಷ್ಟು ಟೀಕೆಗಳು ಕೇಳಿಬಂದಿವೆ. ಹೀಗಾಗಿ ಈ ಟೆಸ್ಟ್ ಪಂದ್ಯದಲ್ಲಿ ಉತ್ತಮ ಪಿಚ್ ಅನ್ನು ನಿರೀಕ್ಷೆ ಮಾಡಲಾಗಿದೆ.
ಆಸ್ಟ್ರೇಲಿಯಾ ಆಡುವ ಹನ್ನೊಂದರ ಬಳಗದಲ್ಲಿ ಕೆಲ ಬದಲಾವಣೆ ಮಾಡಿದ್ದು, ಮಿಚೆಲ್ ಸ್ವೆಪ್ಸನ್ ಇಂದು ಟೆಸ್ಟ್‌ಗೆ ಪಾದಾರ್ಪಣೆ ಮಾಡಿದ್ದಾರೆ. ಪಾಕಿಸ್ತಾನ ಪರ ಫಹೀಮ್ ಅಶ್ರಫ್ ಅವರ ಕೋವಿಡ್ ಟೆಸ್ಟ್ ವರದಿಯು ನಕಾರಾತ್ಮಕವಾಗಿ ಬಂದಿರುವುದರಿಂದ ಪಾಕಿಸ್ತಾನದ ಪ್ಲೇಯಿಂಗ್ 11ನಲ್ಲಿ ಕೆಲವು ಬದಲಾವಣೆಗಳಿವೆ.
ಹಸನ್ ಅಲಿ , ಯುವ ನಸೀಮ್ ಷಾ ಬದಲಿಗೆ ತಂಡಕ್ಕೆ ಮರಳಿದ್ದಾನೆ. ರಾವಲ್ಪಿಂಡಿಗೆ ಹೋಲಿಸಿದರೆ ಹವಾಮಾನವು ಉತ್ತಮವಾಗಿದೆ ಮತ್ತು ಎಲ್ಲಾ ಐದು ದಿನಗಳಲ್ಲಿ ಬಿಸಿಲು ಇರುತ್ತದೆ. ಪಂದ್ಯದ ಲೈವ್ ಸ್ಕೋರ್ ಈ ಕೆಳಗಿದೆ.
ಆಸ್ಟ್ರೇಲಿಯಾದ ಪ್ಲೇಯಿಂಗ್ 11
ಡೇವಿಡ್ ವಾರ್ನರ್, ಉಸ್ಮಾನ್ ಖವಾಜಾ, ಮಾರ್ನಸ್ ಲ್ಯಾಬುಸ್ಚಾಗ್ನೆ, ಸ್ಟೀವನ್ ಸ್ಮಿತ್, ಟ್ರಾವಿಸ್ ಹೆಡ್, ಕ್ಯಾಮೆರಾನ್ ಗ್ರೀನ್, ಅಲೆಕ್ಸ್ ಕ್ಯಾರಿ (ವಿಕೆಟ್ ಕೀಪರ್), ಪ್ಯಾಟ್ ಕಮಿನ್ಸ್ (ನಾಯಕ), ಮಿಚೆಲ್ ಸ್ಟಾರ್ಕ್, ನಥಾನ್ ಲಿಯಾನ್, ಮಿಚೆಲ್ ಸ್ವೆಪ್ಸನ್
ಪಾಕಿಸ್ತಾನ ಪ್ಲೇಯಿಂಗ್ 11
ಅಬ್ದುಲ್ಲಾ ಶಫೀಕ್, ಇಮಾಮ್-ಉಲ್-ಹಕ್, ಅಜರ್ ಅಲಿ, ಬಾಬರ್ ಅಜಮ್(ನಾಯಕ), ಫವಾದ್ ಆಲಂ, ಮೊಹಮ್ಮದ್ ರಿಜ್ವಾನ್(ವಿಕೆಟ್ ಕೀಪರ್), ಫಹೀಮ್ ಅಶ್ರಫ್, ಹಸನ್ ಅಲಿ, ನೌಮಾನ್ ಅಲಿ, ಶಾಹೀನ್ ಅಫ್ರಿದಿ, ಸಾಜಿದ್ ಖಾನ್
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications