Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

AUS vs PAK: 3ನೇ ಟೆಸ್ಟ್: ಪಾಕ್‌ಗೆ ಗೆಲ್ಲಲು 278 ರನ್‌ಗಳ ಗುರಿ; ಅಂತಿಮ ದಿನ ಫಲಿತಾಂಶದ ನಿರೀಕ್ಷೆ

AUS vs PAK: Australia vs Pakistan 3rd test Day 4 highlights; Pakistan need 278 runs to win

ಹಲವಾರು ವರ್ಷಗಳ ನಂತರ ಆಸ್ಟ್ರೇಲಿಯಾ ಪಾಕಿಸ್ತಾನ ಪ್ರವಾಸ ಕೈಗೊಂಡಾಗ ಈ ಬಾರಿ ಪಾಕ್‌ನಲ್ಲಿ ನಡೆಯಲಿರುವ ಹಣಾಹಣಿ ಸಾಕಷ್ಟು ರೋಚಕತೆಯಿಂದ ಕೂಡಿರಲಿದೆ ಎಂಬ ನಿರೀಕ್ಷೆ ಹುಟ್ಟುಕೊಂಡಿತ್ತು. ಆದರೆ, ಈ ನಿರೀಕ್ಷೆಗಳೆಲ್ಲಾ ಸದ್ಯಕ್ಕೆ ಹುಸಿಯಾಗಿದ್ದು, ಇತ್ತಂಡಗಳ ನಡುವಿನ ಟೆಸ್ಟ್ ಸರಣಿ ನೀರಸವೆನಿಸಿದೆ. ಹೌದು, ಪಾಕಿಸ್ತಾನ ಪ್ರವಾಸ ಕೈಗೊಂಡಿರುವ ಆಸ್ಟ್ರೇಲಿಯಾ 3 ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಸೆಣಸಾಟವನ್ನು ನಡೆಸಿದ್ದು, ಈಗಾಗಲೇ ಇತ್ತಂಡಗಳ ನಡುವೆ ಮೊದಲಿಗೆ ರಾವಲ್ಪಿಂಡಿ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆದ ಪ್ರಥಮ ಟೆಸ್ಟ್ ಪಂದ್ಯ ನೀರಸ ಡ್ರಾನಲ್ಲಿ ಅಂತ್ಯಗೊಂಡಿದ್ದು, ನಂತರ ಕರಾಚಿಯಲ್ಲಿ ನಡೆದ ಎರಡನೇ ಟೆಸ್ಟ್ ಪಂದ್ಯ ಕೂಡ ಡ್ರಾನಲ್ಲಿ ಅಂತ್ಯಗೊಂಡಿತು. ಹೌದು, ಪಾಕಿಸ್ತಾನ ಮತ್ತು ಆಸ್ಟ್ರೇಲಿಯಾ ತಂಡಗಳ ನಡುವಿನ ಮೊದಲೆರಡು ಟೆಸ್ಟ್ ಪಂದ್ಯಗಳು ಡ್ರಾನಲ್ಲಿ ಅಂತ್ಯಗೊಂಡಿದ್ದು, ಇದೀಗ ಮೂರನೇ ಟೆಸ್ಟ್ ಪಂದ್ಯದತ್ತ ಎಲ್ಲರ ಚಿತ್ತ ನೆಟ್ಟಿದೆ. ಇನ್ನು ಇತ್ತಂಡಗಳ ನಡುವಿನ ಮೂರನೇ ಟೆಸ್ಟ್ ಮಾರ್ಚ್ 21ರಂದು ಆರಂಭಗೊಂಡಿದ್ದು, ಇಂದು ( ಮಾರ್ಚ್ 24 ) ನಾಲ್ಕನೇ ದಿನದಾಟ ಮುಕ್ತಾಯಗೊಂಡು ಪಾಕಿಸ್ತಾನ ಎರಡನೇ ಇನ್ನಿಂಗ್ಸ್ ಬ್ಯಾಟಿಂಗ್ ಆರಂಭಿಸಿ 278 ರನ್‌ಗಳ ಹಿನ್ನಡೆಯನ್ನು ಅನುಭವಿಸಿದೆ.

ಇನ್ನು ಲಾಹೋರ್‌ನ ಗಡ್ಡಾಫಿ ಕ್ರೀಡಾಂಗಣದಲ್ಲಿ ಆರಂಭಗೊಂಡ ಈ ಪಂದ್ಯದಲ್ಲಿ ಟಾಸ್ ಗೆದ್ದ ಆಸ್ಟ್ರೇಲಿಯಾ ಬ್ಯಾಟಿಂಗ್ ಆಯ್ದುಕೊಂಡು ಮೊದಲು ಬ್ಯಾಟಿಂಗ್ ಮಾಡಿ ಮೊದಲನೇ ಇನ್ನಿಂಗ್ಸ್‌ನಲ್ಲಿ ಉಸ್ಮಾನ್ ಖವಾಜಾ, ಸ್ಟೀವನ್ ಸ್ಮಿತ್, ಕ್ಯಾಮರೂನ್ ಗ್ರೀನ್ ಮತ್ತು ಅಲೆಕ್ಸ್ ಕ್ಯಾರಿ ಅವರ ಜವಾಬ್ದಾರಿಯುತ ಅರ್ಧಶತಕಗಳ ನೆರವಿನಿಂದ 391 ರನ್ ಗಳಿಸಿ ಆಲ್ಔಟ್ ಆಗಿತ್ತು. ಇನ್ನು ತನ್ನ ಮೊದಲ ಇನ್ನಿಂಗ್ಸ್‌ನಲ್ಲಿ ಎಲ್ಲಾ ವಿಕೆಟ್‌ಗಳನ್ನು ಕಳೆದುಕೊಂಡ ಪಾಕಿಸ್ತಾನ 268 ರನ್‌ಗಳಿಗೆ ಆಲ್ಔಟ್ ಆಗಿ 123 ರನ್‌ಗಳ ಹಿನ್ನಡೆಯನ್ನು ಅನುಭವಿಸಿತು. ಹೀಗೆ ಮೊದಲ ಇನ್ನಿಂಗ್ಸ್‌ನಲ್ಲಿ ಮುನ್ನಡೆ ಸಾಧಿಸಿದ್ದ ಆಸ್ಟ್ರೇಲಿಯಾ ಮೂರನೇ ದಿನದಾಟದಂದು ತನ್ನ ಎರಡನೇ ಇನ್ನಿಂಗ್ಸ್ ಬ್ಯಾಟಿಂಗ್ ಆರಂಬಿಸಿ ಯಾವುದೇ ವಿಕೆಟ್ ಕಳೆದುಕೊಳ್ಳದೇ 11 ರನ್ ಕಲೆಹಾಕಿ 134 ರನ್‌ಗಳ ಮುನ್ನಡೆಯನ್ನು ಕಾಯ್ದುಕೊಂಡಿತ್ತು.

ಆಸ್ಟ್ರೇಲಿಯಾ ಪರ ಆರಂಭಿಕ ಆಟಗಾರರಾಗಿ ಕಣಕ್ಕಿಳಿದು ವಿಕೆಟ್ ಕಾಯ್ದುಕೊಂಡಿದ್ದ ಉಸ್ಮಾನ್ ಖವಾಜಾ ಮತ್ತು ಡೇವಿಡ್ ನಾಲ್ಕನೇ ದಿನವೂ ಸಹ ತಮ್ಮ ಉತ್ತಮ ಆಟವನ್ನು ಮುಂದುವರೆಸಿದ್ದು, ಡೇವಿಡ್ ವಾರ್ನರ್ 51 ರನ್ ಗಳಿಸಿ ಔಟ್ ಆದರೆ, ಉಸ್ಮಾನ ಖವಾಜಾ ಅಜೇಯ 104 ರನ್ ಗಳಿಸಿದರು. ಇನ್ನುಳಿದಂತೆ ಮಾರ್ನಸ್ ಲಾಬುಸ್ಚಾಗ್ನೆ 36 ರನ್, ಸ್ಟೀವನ್ ಸ್ಮಿತ್ 17 ರನ್ ಗಳಿಸಿದರೆ, ಟ್ರಾವಿಸ್ ಹೆಡ್ ಅಜೇಯ 11 ರನ್ ಗಳಿಸಿದ್ದಾರೆ. ಈ ಮೂಲಕ ಆಸ್ಟ್ರೇಲಿಯಾ ಎರಡನೇ ಇನ್ನಿಂಗ್ಸ್‌ನಲ್ಲಿ 3 ವಿಕೆಟ್ ನಷ್ಟಕ್ಕೆ 227 ರನ್ ಗಳಿಸಿ ಡಿಕ್ಲೇರ್ ಮಾಡಿಕೊಂಡು ಪಾಕಿಸ್ತಾನಕ್ಕೆ ಗೆಲ್ಲಲು 351 ರನ್‌ಗಳ ಗುರಿಯನ್ನು ನೀಡಿದೆ. ಇನ್ನು ನಾಲ್ಕನೇ ದಿನದಾಟದಂದು ತನ್ನ ಎರಡನೇ ಇನ್ನಿಂಗ್ಸ್ ಬ್ಯಾಟಿಂಗ್ ಆರಂಭಿಸಿರುವ ಪಾಕಿಸ್ತಾನ ದಿನದಾಟದಂತ್ಯಕ್ಕೆ ಯಾವುದೇ ವಿಕೆಟ್ ಕಳೆದುಕೊಳ್ಳದೇ 73 ರನ್ ಗಳಿಸಿ 278 ರನ್‌ಗಳನ್ನು ಬಾರಿಸಬೇಕಾದ ಅನಿವಾರ್ಯತೆಯಲ್ಲಿದೆ.

ಇನ್ನು ಪಾಕ್ ತಂಡವನ್ನು ಮೊದಲ ಇನ್ನಿಂಗ್ಸ್ ರೀತಿ ಕಡಿಮೆ ಮೊತ್ತಕ್ಕೆ ಆಲ್ಔಟ್ ಮಾಡುವ ಲೆಕ್ಜಾಚಾರದೊಂದಿಗೆ ಬೇಗನೇ ಡಿಕ್ಲೇರ್ ಘೋಷಿಸಿದ ಆಸ್ಟ್ರೇಲಿಯಾ ನಾಲ್ಕನೇ ದಿನದಲ್ಲಿ ಯಾವುದೇ ವಿಕೆಟ್ ಪಡೆಯದೇ ಮಂಕಾಗಿದೆ. ಸದ್ಯ ನಾಲ್ಕನೇ ದಿನದಾಟ ಮುಕ್ತಾಯಗೊಂಡ ನಂತರ ಆಸ್ಟ್ರೇಲಿಯಾ ಹಾಗೂ ಪಾಕಿಸ್ತಾನ ಎರಡೂ ತಂಡಗಳು ಪಂದ್ಯ ಗೆಲ್ಲುವ ಅವಕಾಶಗಳನ್ನು ಹೊಂದಿದ್ದು, ಪಾಕಿಸ್ತಾನ ಇದೇ ರೀತಿ ವಿಕೆಟ್ ಕಳೆದುಕೊಳ್ಳದೇ ಅಂತಿಮ ದಿನದಾಟದಲ್ಲಿ ರನ್ ಕಲೆಹಾಕಿ ಜಯ ಸಾಧಿಸುತ್ತಾ ಅಥವಾ ಆಸ್ಟ್ರೇಲಿಯಾ ಪಾಕ್ ವಿಕೆಟ್‌ಗಳನ್ನು ಉರುಳಿಸಿ ಜಯದ ನಗೆ ಬೀರುತ್ತಾ ಎಂಬುದನ್ನು ಕಾದುನೋಡಬೇಕಿದೆ. ಇನ್ನು ಈ ಪಂದ್ಯದಲ್ಲಿ ಗೆಲ್ಲುವ ತಂಡ ಸರಣಿ ವಿಜೇತರಾಗಿ ಹೊರಹೊಮ್ಮಲಿದ್ದು, ಸದ್ಯ ಅಂತಿಮ ಟೆಸ್ಟ್ ಪಂದ್ಯದ ಅಂತಿಮ ದಿನದಾಟ ಕುತೂಹಲವನ್ನು ಕೆರಳಿಸಿದೆ.

ಪಾಕಿಸ್ತಾನ ತಂಡ: ಅಬ್ದುಲ್ಲಾ ಶಫೀಕ್, ಬೇಸರ, ಅಜರ್ ಅಲಿ, ಬಾಬರ್ ಅಜಮ್ (ನಾಯಕ), ಫವಾದ್ ಅಲ್-ಆಮ್, ಮುಹಮ್ಮದ್ ರಿಜುವಾ (ವಿಕೆಟ್ ಕೀಪರ್), ನಸೀಮ್ ಶಾ, ಸಾಜಿದ್ ಖಾನ್, ಹಸನ್ ಅಲಿ, ನಮಿನ್ ಅಲಿ, ಶಾಹೀನ್ ಅಫ್ರಿದಿ

ಆಸ್ಟ್ರೇಲಿಯಾ ತಂಡ: ಡೇವಿಡ್ ವಾರ್ನರ್, ಉಸ್ಮಾನ್ ಖವಾಜಾ, ಮಾರ್ನಸ್ ಲ್ಯಾಬುಸ್ಚಾಗ್ನೆ, ಸ್ಟೀವನ್ ಸ್ಮಿತ್, ಟ್ರಾವಿಸ್ ಹೆಡ್, ಅಲೆಕ್ಸ್ ಕ್ಯಾರಿ (ವಿಕೆಟ್ ಕೀಪರ್), ಕ್ಯಾಮೆರಾನ್ ಗ್ರೀನ್, ಮಿಚೆಲ್ ಸ್ಟಾರ್ಕ್, ಪ್ಯಾಟ್ ಕಮಿನ್ಸ್ ( ನಾಯಕ ) ನಾಥನ್ ಲಿಯಾನ್, ಮಿಚೆಲ್ ಸ್ವೆಪ್ಸನ್

Story first published: Friday, March 25, 2022, 10:02 [IST]
Other articles published on Mar 25, 2022
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+