Aus vs Pak: 24 ವರ್ಷದ ಬಳಿಕ ಸರಣಿಗಾಗಿ ಪಾಕಿಸ್ತಾನಕ್ಕೆ ಬಂದಿಳಿದ ಆಸ್ಟ್ರೇಲಿಯಾ ಕ್ರಿಕೆಟ್ ತಂಡ

ಸುದೀರ್ಘ 24 ವರ್ಷಗಳ ಬಳಿಕ ಆಸ್ಟ್ರೇಲಿಯಾ ಕ್ರಿಕೆಟ್ ತಂಡ ಪಾಕಿಸ್ತಾನ ಪ್ರವಾಸ ಕೈಗೊಂಡಿದೆ. ಮೂರು ಮಾದರಿಯ ಸರಣಿಯಲ್ಲಿ ಆಸ್ಟ್ರೇಲಿಯಾ ಪಾಕಿಸ್ತಾನವನ್ನು ಎದುರಿಸಲಿದ್ದು ಇದಕ್ಕಾಗಿ ಭಾನುವಾರ ಆಸಿಸ್ ಬಳಗ ಭಾರೀ ಭದ್ರತೆಯಲ್ಲಿ ಇಸ್ಲಮಾಬಾದ್‌ನಲ್ಲಿ ಬಂದು ಇಳಿದಿದೆ. ಆರು ವಾರಗಳ ಕಾಲ ಆಸ್ಟ್ರೇಲಿಯಾ ತಂಡ ಪಾಕಿಸ್ತಾನದಲ್ಲಿ ಇರಲಿದ್ದು ಟೆಸ್ಟ್ ಏಕದಿನ ಹಾಗೂ ಟಿ20 ಸರಣಿಯಲ್ಲಿ ಆಡಲಿದೆ.
2009ರಲ್ಲಿ ಶ್ರೀಲಂಕಾ ಕ್ರಿಕೆಟ್ ತಂಡದ ಮೇಲೆ ಭಯೋತ್ಪಾದಕರು ದಾಳಿ ನಡೆಸಿದ ನಂತರ ಪಾಕಿಸ್ತಾನಕ್ಕೆ ಪ್ರವಾಸ ಕೈಗೊಳ್ಳಲು ಎಲ್ಲಾ ದೇಶಗಳು ಹಿಂದೇಟು ಹಾಲು ಆರಂಭಿಸಿದವು. ಆದರೆ ಇತ್ತೀಚಿನ ವರ್ಷಗಳಲ್ಲಿ ಕೆಲ ರಾಷ್ಟ್ರಗಳು ಪಾಕಿಸ್ತಾನ ಪ್ರವಾಸ ಕೈಗೊಂಡು ಸರಣಿಯಲ್ಲಿ ಭಾಗಿಯಾಗಿದೆ. ಈ ಮಧ್ಯೆ ಕಳೆದ ವಿಶ್ವಕಪ್‌ಗೆ ಕೆಲವೇ ದಿನಗಳಿರುವಾಗ ನ್ಯೂಜಿಲೆಂಡ್ ಪಾಕಿಸ್ತಾನ ಪ್ರವಾಸ ಕೈಗೊಂಡು ಸರಣಿ ಆರಂಭಕ್ಕೆ ಕೆಲವೇ ಕ್ಷಣಗಳಿರುವಾಗ ಭದ್ರತಾ ನೆಪವೊಡ್ಡಿ ಸರಣಿಯಿಂದ ಹಿಂದಕ್ಕೆ ಸರಿದಿತ್ತು. ಇದು ಜಾಗತಿಕ ಮಟ್ಟದಲ್ಲಿ ಪಾಕಿಸ್ತಾನಕ್ಕೆ ಮತ್ತೊಮ್ಮೆ ಭಾರೀ ಮುಖಭಂಗವನ್ನುಂಟ ಮಾಡಿತ್ತು. ನಂತರ ಇಂಗ್ಲೆಂಡ್ ತಂಡ ಇಂಗ್ಲೆಂಡ್ ಪ್ರವಾಸವನ್ನು ಮುಂದೂಡಿತ್ತು.
ಇನ್ನು ಆಸ್ಟ್ರೇಲಿಯಾ ಇದಕ್ಕೂ ಮುನ್ನ ಕೊನೇಯ ಬಾರಿ ಪಾಕಿಸ್ತಾನ ಪ್ರವಾಸ ಕೈಗೊಂಡಿದ್ದು 1998ರಲ್ಲಿ. ಈ ಪ್ರವಾಸದಲ್ಲಿ ಮೂರು ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಆಸ್ಟ್ರೇಲಿಯಾ 1-0 ಅಂತರದ ಗೆಲುವು ಸಾಧಿಸಿದ್ದರೆ ಏಕದಿನ ಸರಣಿಯಲ್ಲಿ ಮೂರು ಪಂದ್ಯಗಳಲ್ಲಿ ಮೂರನ್ನು ಕೂಡ ಗೆದ್ದು ಸರಣಿಯನ್ನು ವಶಕ್ಕೆ ಪಡೆದುಕೊಂಡಿತ್ತು.
ಇದೀಗ ಆಸ್ಟ್ರೇಲಿಯಾ ಕ್ರಿಕೆಟ್ ತಂಡ ಮತ್ತೊಮ್ಮೆ ಪಾಕಿಸ್ತಾನಕ್ಕೆ ಪ್ರವಾಸ ಕೈಗೊಂಡಿರುವುದು ಮಹತ್ವದ ಬೆಳವಣಿಗೆಯಾಗಿದೆ. ಆದರೆ ಈ ಸರಣಿ ಆಯೋಜನೆಗಾಗಿ ಪಾಕಿಸ್ತಾನ ಕ್ರಿಕೆಟ್ ಮಂಡಳಿ ಭಾರೀ ಪ್ರಮಾಣದ ಭದ್ರತೆಯನ್ನು ಕೈಗೊಂಡಿದೆ. ಸುರಕ್ಷತೆಯ ದೃಷ್ಟಿಯಿಂದ ಏನು ಸಾಧ್ಯವೋ ಅದೆಲ್ಲವನ್ನೂ ಮಾಡಲಾಗಿದೆ ಎಂದು ಪಾಕಿಸ್ತಾನ ಕ್ರಿಕೆಟ್‌ನ ಅಧಿಕಾರಿಗಳು ವ್ಯಕ್ತಪಡಿಸುತ್ತಿದ್ದಾರೆ. ಅಧಿಕಾರಿಗಳು ನೀಡುತ್ತಿರುವ ಮಾಹಿತಿಯ ಪ್ರಕಾರ ಆಸ್ಟ್ರೇಲಿಯಾ ಆಟಗಾರರು ಉಳಿದುಕೊಂಡಿರುವ ಇಸ್ಲಮಬಾದ್‌ನ ಹೋಟೆಲ್ ಸುತ್ತ ಹಾಗೂ ರಾವಲ್ಪಿಂಡಿ ಕ್ರೀಡಾಂಗಣದ ಸುತ್ತ ಒಟ್ಟು 4 ಸಾವಿರದಷ್ಟು ಪೊಲೀಸ್ ಹಾಗೂ ಸೇನಾ ಸಿಬ್ಬಂದಿಗಳನ್ನು ನಿಯೋಜನೆ ಮಾಡಲಾಗಿದೆ ಎನ್ನಲಾಗಿದೆ.
ಆಸ್ಟ್ರೇಲಿಯಾ ಕ್ರಿಕೆಟ್ ತಂಡಕ್ಕೆ ಹೆಡ್ ಆಫ್ ಸ್ಟೇಟ್ ಮಟ್ಟದ ಭದ್ರತೆ: ಎಫ್‌ಪಿ ಸುದ್ದಿ ಸಂಸ್ಥೆಗೆ ಆಂತರಿಕ ಸಚಿವಾಲಯದ ವಕ್ತಾರ ಮಾಹಿತಿ ನೀಡಿದ್ದು "ಆಸ್ಟ್ರೇಲಿಯಾ ಕ್ರಿಕೆಟ್ ತಂಡಕ್ಕೆ ಹೆಡ್ ಆಫ್ ಸ್ಟೇಟ್ ಮಟ್ಟದ ಭದ್ರತೆಯನ್ನು ನೀಡಲಾಗಿದೆ. ಈ ರೀತಿಯ ಭದ್ರತೆಯನ್ನು ಉನ್ನತ ಮಟ್ಟದ ವಿದೇಶೀ ಅತಿಥಿಗಳಿಗೆ ಮತ್ತು ಪಾಕಿಸ್ತಾನದ ಅಧ್ಯಕ್ಷರು ಹಾಗೂ ಪ್ರಧಾನಿಗಳಿಗೆ ಮಾತ್ರ ನೀಡಲಾಗುತ್ತದೆ" ಎಂದು ತಿಳಿಸಿದ್ದಾರೆ.
ಇನ್ನು ಆಸ್ಟ್ರೇಲಿಯಾ ತಂಡ ಹೋಟೆಲ್‌ನಿಂದ ಕ್ರಿಕೆಟ್ ಮೈದಾನಕ್ಕೆ ಪ್ರಯಾಣದ ಸಂದರ್ಭದಲ್ಲಿ ಈ 15 ಕಿಲೋ ಮೀಟರ್ ರಸ್ತೆಯನ್ನು ಸಂಪೂರ್ಣವಾಗಿ ಬ್ಲಾಕ್ ಮಾಡಲಾಗುತ್ತದೆ ಅಲ್ಲದೆ ಸೇನಾ ಹೆಲಿಕಾಪ್ಟರ್‌ಗಳು ತಂಡದ ಬಸ್‌ಗೆ ಭದ್ರತೆ ನೀಡಲಿದೆ. ಇನ್ನು ಸ್ಟೇಡಿಯಂನ ಸುತ್ತಲಿನ ಕಟ್ಟಡಗಳಲ್ಲಿ ಸ್ನೈಪರ್‌ಗಳನ್ನು ನೇಮಿಸಲಾಗಿದ್ದು ಕಣ್ಗಾವಲನ್ನು ಇಡಲಿದ್ದಾರೆ ಪಂದ್ಯದ ದಿನ ಸ್ಟೇಡಿಯಂನ ಸುತ್ತಲಿನ ಎಲ್ಲಾ ಅಂಗಡಿ ಹಾಗೂ ಕಚೇರಿಗಳನ್ನು ಮುಚ್ಚಲು ಆಂತರಿಕ ಸಚಿವಾಲಯ ಆದೇಶಿಸಿದೆ ಎಂದು ಡಾನ್ ಪತ್ರಿಕೆ ವರದಿ ಮಾಡಿದೆ. ಕರಾಚಿ ಹಾಗೂ ಲಾಹೋರ್‌ನಲ್ಲಿ ಕೂಡ ಇದೇ ರೀತಿ ಭದ್ರತಾ ವ್ಯವಸ್ಥೆಗಳನ್ನು ಮಾಡಿಕೊಳ್ಳಲಾಗಿದೆ.
ಇನ್ನು ಆಸ್ಟ್ರೇಲಿಯಾ ಕ್ರಿಕೆಟ್ ತಂಡ ಪಾಕಿಸ್ತಾನ ತಲುಒಇದ ನಂತರ 24 ಗಂಟೆಗಳ ಕಾಲ ಕ್ವಾರಂಟೈನ್‌ಲ್ಲಿದ್ದು ಬಳಿಕ ಕೋವಿಡ್ ಪರೀಕ್ಷೆ ನಡೆಸಿ ಅಭ್ಯಾಸವನ್ನು ಆರಂಭಿಸಲಿದ್ದಾರೆ. ಆಸ್ಟ್ರೇಲಿಯಾ ಹಾಗೂ ಪಾಕಿಸ್ತಾನ ನಡುವಿನ ಟೆಸ್ಟ್ ಸರಣಿಯ ಮೊದಲ ಪಂದ್ಯ ಮಾರ್ಚ್ 4ರಿಂದ ಆರಂಭವಾಗಲಿದೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications