Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

ಪಾಕ್ vs ಆಸ್ಟ್ರೇಲಿಯಾ ಮೊದಲ ಟೆಸ್ಟ್: ಇಮಾಮ್ ಉಲ್ ಹಕ್ ಶತಕ, ಮೊದಲ ದಿನ ಪಾಕ್ ಮೇಲುಗೈ

AUS vs PAK: Imam-Ul-Haqs unbeaten 132 helps Pak to lead on Day 1 against Australia in first test

ಒಂದೆಡೆ ಭಾರತ ಮತ್ತು ಶ್ರೀಲಂಕಾ ತಂಡಗಳ ನಡುವಿನ 2 ಪಂದ್ಯಗಳ ಟೆಸ್ಟ್ ಸರಣಿ ಇಂದು ( ಮಾರ್ಚ್ 4 ) ಆರಂಭವಾಗಿದ್ದರೆ, ಮತ್ತೊಂದೆಡೆ ಪಾಕಿಸ್ತಾನ ಮತ್ತು ಆಸ್ಟ್ರೇಲಿಯಾ ತಂಡಗಳ ನಡುವಿನ ಟೆಸ್ಟ್ ಸರಣಿ ಕೂಡ ಇದೇ ದಿನದಂದು ಆರಂಭಗೊಂಡಿದೆ.

ಹೌದು, ಸುಮಾರು 24 ವರ್ಷಗಳ ನಂತರ ಆಸ್ಟ್ರೇಲಿಯಾ ಪಾಕಿಸ್ತಾನ ಪ್ರವಾಸವನ್ನು ಕೈಗೊಂಡಿದ್ದು, 3 ಪಂದ್ಯಗಳ ಟೆಸ್ಟ್ ಸರಣಿ, 3 ಪಂದ್ಯಗಳ ಏಕದಿನ ಸರಣಿ ಹಾಗೂ ಒಂದು ಟಿ ಟ್ವೆಂಟಿ ಪಂದ್ಯದಲ್ಲಿ ಪಾಕಿಸ್ತಾನದ ವಿರುದ್ಧ ಸೆಣಸಾಟ ನಡೆಸಲಿದೆ. ಇನ್ನು ಪಾಕಿಸ್ತಾನ ಮತ್ತು ಆಸ್ಟ್ರೇಲಿಯಾ ತಂಡಗಳ ನಡುವೆ ಮೊದಲಿಗೆ 3 ಪಂದ್ಯಗಳ ಟೆಸ್ಟ್ ಸರಣಿ ನಡೆಯುತ್ತಿದ್ದು, ಸರಣಿಯ ಮೊದಲನೇ ಪಂದ್ಯ ಇಂದು ( ಮಾರ್ಚ್ 4 ) ರಾವಲ್ಪಿಂಡಿ ಕ್ರಿಕೆಟ್ ಕ್ರೀಡಾಂಗಣದಲ್ಲಿ ಆರಂಭಗೊಂಡಿದೆ.

ಇನ್ನು ಈ ಪಂದ್ಯದಲ್ಲಿ ಟಾಸ್ ಗೆದ್ದ ಪಾಕಿಸ್ತಾನ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದ್ದು, ಮೊದಲನೇ ದಿನದಾಟದಂತ್ಯಕ್ಕೆ 1 ವಿಕೆಟ್ ನಷ್ಟಕ್ಕೆ 245 ರನ್ ಕಲೆಹಾಕಿ ಪ್ರವಾಸಿ ಆಸ್ಟ್ರೇಲಿಯಾ ವಿರುದ್ಧ ಮೇಲುಗೈ ಸಾಧಿಸಿದೆ. ಹೌದು, ಮೊದಲನೇ ಟೆಸ್ಟ್ ಪಂದ್ಯದಲ್ಲಿ ಟಾಸ್ ಗೆದ್ದು ಬ್ಯಾಟಿಂಗ್ ಆರಂಭಿಸಿದ ಪಾಕಿಸ್ತಾನ ತಂಡದ ಪರ ಆರಂಭಿಕ ಆಟಗಾರರಾಗಿ ಅಬ್ದುಲ್ಲಾ ಶಫೀಕ್ ಮತ್ತು ಇಮಾಮ್ ಉಲ್ ಹಕ್ ಕಣಕ್ಕಿಳಿದಿದ್ದಾರೆ. ಈ ಪೈಕಿ ಶಫೀಕ್ ಅಬ್ದುಲ್ಲಾ 44 ರನ್ ಗಳಿಸಿ ಔಟ್ ಆದರೆ, ಮತ್ತೋರ್ವ ಆರಂಭಿಕ ಆಟಗಾರನಾದ ಇಮಾಮ್ ಉಲ್ ಹಕ್ 132 ರನ್ ಗಳಿಸಿ ಅಜೇಯನಾಗಿ ಉಳಿದುಕೊಂಡಿದ್ದಾರೆ. ಆರಂಭಿಕ ಆಟಗಾರ ಅಬ್ದುಲ್ಲಾ ಶಫೀಕ್ ವಿಕೆಟ್ ಬೀಳುತ್ತಿದ್ದಂತೆ ಮೂರನೇ ಕ್ರಮಾಂಕದಲ್ಲಿ ಕಣಕ್ಕಿಳಿದ ಅಜರ್ ಅಲಿ ಅಜೇಯ 64 ರನ್ ಸಿಡಿಸಿದ್ದಾರೆ. ಈ ಮೂಲಕ ಇಮಾಮ್ ಉಲ್ ಹಕ್ ಮತ್ತು ಅಜರ್ ಅಲಿ ಜೋಡಿ 140 ರನ್‌ಗಳ ಅಜೇಯ ಜತೆಯಾಟವನ್ನು ಆಡಿದ್ದು, ಪಾಕಿಸ್ತಾನ ಉತ್ತಮ ಹಂತ ತಲುಪುವುದರಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ.

ಇನ್ನು ಪಾಕಿಸ್ತಾನ ಮತ್ತು ಆಸ್ಟ್ರೇಲಿಯಾ ತಂಡಗಳ ನಡುವಿನ ಪ್ರಥಮ ಟೆಸ್ಟ್ ಪಂದ್ಯದ ಮೊದಲನೇ ದಿನದಂದು ಆಸ್ಟ್ರೇಲಿಯಾದ ಸ್ಟೀವ್ ಸ್ಮಿತ್ ಸೇರಿದಂತೆ ಒಟ್ಟು 8 ಆಟಗಾರರು ಬೌಲಿಂಗ್ ಮಾಡಿದ್ದು, ನಾಥನ್ ಲಿಯಾನ್ ಮಾತ್ರ ವಿಕೆಟ್ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ. ಹೌದು, ಈ ಪಂದ್ಯದ ಮೊದಲನೇ ದಿನದಂದು ಪಾಕಿಸ್ತಾನ ಕೇವಲ 1 ವಿಕೆಟ್ ಕಳೆದುಕೊಂಡಿದ್ದು, ಆರಂಭಿಕ ಆಟಗಾರ ಅಬ್ದುಲ್ಲಾ ಶಫಿಕ್ ನಾಥನ್ ಎಸೆತದಲ್ಲಿ ಪ್ಯಾಟ್ ಕಮಿನ್ಸ್ ಅವರಿಗೆ ಕ್ಯಾಚ್ ನೀಡಿದರು. ಸದ್ಯ 140 ರನ್‌ಗಳ ಅಜೇಯ ಜತೆಯಾಟ ಆಡಿರುವ ಇಮಾಮ್ ಉಲ್ ಹಕ್ ಹಾಗೂ ಅಜರ್ ಅಲಿ ಪಂದ್ಯದ ಎರಡನೇ ದಿನವೂ ಕೂಡ ತಮ್ಮ ಉತ್ತಮ ಆಟವನ್ನು ಮುಂದುವರಿಸುತ್ತಾರಾ ಎಂಬುದನ್ನು ಕಾದು ನೋಡಬೇಕಿದೆ.

Story first published: Friday, March 4, 2022, 23:01 [IST]
Other articles published on Mar 4, 2022
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+