AUS vs PAK Test: ಬಾಕ್ಸಿಂಗ್ ಡೇ ಟೆಸ್ಟ್‌ಗೂ ಮುನ್ನ ಪಾಕಿಸ್ತಾನ ತಂಡಕ್ಕೆ ಶಾಕ್
ಆಸ್ಟ್ರೇಲಿಯ ಪ್ರವಾಸದಲ್ಲಿ ಪಾಕಿಸ್ತಾನ ತಂಡಕ್ಕೆ ಗಾಯದ ಸಮಸ್ಯೆ ಬಹುವಾಗಿ ಕಾಡುತ್ತಿದೆ. ಪರ್ತ್‌ನಲ್ಲಿ ನಡೆದ ಮೊದಲ ಟೆಸ್ಟ್‌ನಲ್ಲಿ ಸೋತ ನಂತರ, ಪಾಕಿಸ್ತಾನ ಸರಣಿಯಲ್ಲಿ 0-1 ಅಂತರದಲ್ಲಿ ಹಿನ್ನಡೆ ಅನುಭವಿಸುತ್ತಿದೆ. ಶಾನ್ ಮಸೂದ್ ತಂಡಕ್ಕೆ ಬಾಕ್ಸಿಂಗ್ ಡೇ ಟೆಸ್ಟ್‌ಗೂ ಮುನ್ನ ದೊಡ್ಡ ಪೆಟ್ಟು ಬಿದ್ದಿದೆ. ತಂಡದ ಪ್ರಮುಖ ಸ್ಪಿನ್ ಬೌಲರ್ ಅಬ್ರಾರ್ ಅಹ್ಮದ್ ಗಾಯದ ಸಮಸ್ಯೆಯಿಂದ ತಂಡದಿಂದ ಹೊರಗುಳಿದಿದ್ದಾರೆ.
ಅಬ್ರಾರ್ ಮೊದಲು ವೇಗದ ಬೌಲರ್ ಖುರಂ ಶೆಹಜಾದ್ ಕೂಡ ಸ್ನಾಯು ಸೆಳೆತದಿಂದಾಗಿ ಆಸ್ಟ್ರೇಲಿಯಾ ವಿರುದ್ಧದ ಸರಣಿಯಿಂದ ಹೊರಗುಳಿದಿದ್ದರು. ಪರ್ತ್ ಟೆಸ್ಟ್‌ನಲ್ಲಿ ಪದಾರ್ಪಣೆ ಮಾಡಿದ್ದ ಪಾಕ್ ವೇಗಿ ಖುರಂ ತಮ್ಮ ಬೌಲಿಂಗ್‌ನಿಂದ ಎಲ್ಲರ ಗಮನ ಸೆಳೆದಿದ್ದರು. ಅಲ್ಲದೆ ಬಿಗುವಿನ ದಾಳಿ ನಡೆಸಿ ಆಸೀಸ್ ಬ್ಯಾಟರ್‌ಗಳನ್ನು ಕಾಡಿದ್ದರು. ಇವರು ಮೊದಲ ಇನ್ನಿಂಗ್ಸ್‌ನಲ್ಲಿ ಎರಡು ಮತ್ತು ಎರಡನೇ ಇನ್ನಿಂಗ್ಸ್‌ನಲ್ಲಿ ಮೂರು ವಿಕೆಟ್‌ಗಳನ್ನು ಪಡೆದಿದ್ದರು.

ಮೊಣಕಾಲಿನ ಗಾಯದಿಂದಾಗಿ, ಪರ್ತ್‌ನಲ್ಲಿ ನಡೆದ ಮೊದಲ ಟೆಸ್ಟ್‌ನಲ್ಲಿ ಅಬ್ರಾರ್‌ಗೆ ಆಡಲು ಸಾಧ್ಯವಾಗಿರಲಿಲ್ಲ. ಅವರು ತಂಡದಿಂದ ಹೊರಗುಳಿದಿದ್ದು ಪಾಕಿಸ್ತಾನ ತಂಡಕ್ಕೆ ದೊಡ್ಡ ಹೊಡೆತ ಬಿದ್ದಂತೆ ಆಗಿದೆ. ಯಾಸಿರ್ ಶಾ ಅವರಂತಹ ಅನುಭವಿ ಸ್ಪಿನ್ನರ್ ಅನುಪಸ್ಥಿತಿಯಲ್ಲಿ ಅಬ್ರಾರ್ ತಂಡದ ಪ್ರಮುಖ ಸ್ಪಿನ್ನರ್ ಆಗಿದ್ದಾರೆ.
25ರ ಹರೆಯದ ಈ ಲೆಗ್ ಬ್ರೇಕ್ ಬೌಲರ್ ಅಂತಾರಾಷ್ಟ್ರೀಯ ವೃತ್ತಿಜೀವನದಲ್ಲಿ ಹಲವು ಏರು ಬೀಳುಗಳನ್ನು ಕಂಡಿದ್ದಾರೆ. ಇದುವರೆಗೆ ಆಡಿದ ಆರು ಟೆಸ್ಟ್‌ಗಳಲ್ಲಿ, ಅವರು 38 ವಿಕೆಟ್‌ಗಳನ್ನು ಕಬಳಿಸುವ ಟೆಸ್ಟ್‌ನಲ್ಲಿ ತಮ್ಮದೇ ಆದ ಛಾಪು ಮೂಡಿಸಿದ್ದಾರೆ.

ಪಾಕಿಸ್ತಾನ ಕ್ರಿಕೆಟ್ ಮಂಡಳಿ ಹೊರಡಿಸಿದ ಹೇಳಿಕೆಯಲ್ಲಿ, ಅಬ್ರಾರ್ ಗಾಯದಿಂದ ಸಂಪೂರ್ಣವಾಗಿ ಚೇತರಿಸಿಕೊಂಡಿಲ್ಲ ಮತ್ತು ಮೆಲ್ಬೋರ್ನ್ ಟೆಸ್ಟ್‌ನಲ್ಲಿ ಆಯ್ಕೆಗೆ ಲಭ್ಯರಿಲ್ಲ ಎಂದು ತಿಳಿಸಿದೆ.
ಅಬ್ರಾರ್ ಇನ್ನು ಸಂಪೂರ್ಣವಾಗಿ ಫಿಟ್ ಆಗಿಲ್ಲ. ಅವರು ಸಂಪೂರ್ಣವಾಗಿ ಬೌಲಿಂಗ್ ಮಾಡುವಷ್ಟು ಸಾಮರ್ಥ್ಯ ಹೊಂದಿಲ್ಲ. ಅವರ ಗಾಯದ ಸ್ವರೂಪ ಮತ್ತು ಟೆಸ್ಟ್‌ನಲ್ಲಿ ಸ್ಪಿನ್ ಬೌಲರ್‌ನ ಮೇಲಿನ ಕೆಲಸದ ಹೊರೆಯನ್ನು ಗಮನದಲ್ಲಿಟ್ಟುಕೊಂಡು ಈ ನಿರ್ಧಾರ ಕೈಗೊಳ್ಳಲಾಗಿದೆ.
ಮೂರು ಟೆಸ್ಟ್‌ಗಳ ಮೊದಲ ಪಂದ್ಯದಲ್ಲಿ ಆತಿಥೇಯ ಆಸ್ಟ್ರೇಲಿಯಾ ತಂಡವು ಜಯ ಸಾಧಿಸಿ ಸರಣಿಯಲ್ಲಿ ಮುನ್ನಡೆ ಪಡೆದಿದೆ. ಮೊದಲ ಟೆಸ್ಟ್‌ನಲ್ಲಿ ಆಸೀಸ್ 360 ರನ್‌ಗಳ ಬೃಹತ್ ಅಂತರದಿಂದ ಗೆದ್ದಿತು. ಸರಣಿಯ ಎರಡನೇ ಟೆಸ್ಟ್ ಪಂದ್ಯ ಡಿಸೆಂಬರ್ 26 ರಿಂದ ಮೆಲ್ಬೋರ್ನ್‌ನಲ್ಲಿ ನಡೆಯಲಿದ್ದು, ಮೂರನೇ ಮತ್ತು ಅಂತಿಮ ಟೆಸ್ಟ್ ಸಿಡ್ನಿಯಲ್ಲಿ 3 ಜನವರಿ 2024 ರಿಂದ ನಡೆಯಲಿದೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications