Aus vs SA 2nd Test: ಬೃಹತ್ ಮುನ್ನಡೆ ಸಾಧಿಸಿದ ಆಸ್ಟ್ರೇಲಿಯಾ, ಸೋಲಿನ ಭೀತಿಯಲ್ಲಿ ದಕ್ಷಿಣ ಆಫ್ರಿಕಾ

ದಕ್ಷಿಣ ಆಫ್ರಿಕಾ ವಿರುದ್ಧದ ಬಾಕ್ಸಿಂಗ್ ಡೇ ಟೆಸ್ಟ್‌ನಲ್ಲಿ ಆಸ್ಟ್ರೇಲಿಯಾ ಸ್ಪಷ್ಟ ಮೇಲುಗೈ ಸಾಧಿಸಿದೆ. ಮೂರನೇ ದಿನದಾಟ ಮುಕ್ತಾಯವಾಗಿದ್ದು, ಆಸ್ಟ್ರೇಲಿಯಾ ಮೊದಲ ಇನ್ನಿಂಗ್ಸ್‌ನಲ್ಲಿ 386 ರನ್‌ಗಳ ಬೃಹತ್ ಮುನ್ನಡೆ ಸಾಧಿಸಿದೆ. ಎರಡನೇ ಇನ್ನಿಂಗ್ಸ್‌ನಲ್ಲಿ 15 ರನ್ ಗಳಿಸುವಷ್ಟರಲ್ಲಿ 1 ವಿಕೆಟ್ ಕಳೆದುಕೊಂಡಿದೆ.
ಮೆಲ್ಬೋರ್ನ್ ಕ್ರಿಕೆಟ್ ಮೈದಾನದಲ್ಲಿ ನಡೆಯುತ್ತಿರುವ ಪಂದ್ಯದಲ್ಲಿ ಆಸ್ಟ್ರೇಲಿಯಾ 8 ವಿಕೆಟ್ ಕಳೆದುಕೊಂಡು 575 ರನ್ ಗಳಿಸಿದ್ದಾಗ ಡಿಕ್ಲೇರ್ ಮಾಡಿಕೊಳ್ಳುವ ಮೂಲಕ 386 ರನ್‌ಗಳ ಮುನ್ನಡೆ ಸಾಧಿಸಿತು. ಡೇವಿಡ್ ವಾರ್ನರ್ ದ್ವಿಶತಕ ಗಳಿಸಿದ ನಂತರ, ವಿಕೆಟ್ ಕೀಪರ್ ಬ್ಯಾಟರ್ ಅಲೆಕ್ಸ್ ಕ್ಯಾರಿ 111 ರನ್ ಗಳಿಸಿದರು, ಕ್ಯಾಮೆರಾನ್ ಗ್ರೀನ್ ಅಜೇಯ 51 ರನ್ ಗಳಿಸುವ ಮೂಲಕ ಆಸ್ಟ್ರೇಲಿಯಾ ಬೃಹತ್ ಮೊತ್ತ ಕಲೆ ಹಾಕಲು ಕಾರಣವಾದರು. ದಕ್ಷಿಣ ಆಫ್ರಿಕಾ ಪರವಾಗಿ ಆನ್ರಿಚ್ ನೋಕಿಯಾ 3 ವಿಕೆಟ್ ಪಡೆದರು.
ನಂತರ ಎರಡನೇ ಇನ್ನಿಂಗ್ಸ್ ಆರಂಭಿಸಿದ ದಕ್ಷಿಣ ಆಫ್ರಿಕಾ ಆರಂಭದಲ್ಲೇ ಆಘಾತ ಅನುಭವಿಸಿದೆ. ದಕ್ಷಿಣ ಆಫ್ರಿಕಾ ತಂಡದ ನಾಯಕ ಡೀನ್ ಎಲ್ಗರ್ ರನ್ನು ಆಸ್ಟ್ರೇಲಿಯಾ ತಂಡದ ನಾಯಕ ಪ್ಯಾಟ್ ಕಮ್ಮಿನ್ಸ್ ಶೂನ್ಯಕ್ಕೆ ಔಟ್ ಮಾಡುವ ಮೂಲಕ ಆಘಾತ ನೀಡಿದರು.

ಸೋಲಿನ ಭೀತಿಯಲ್ಲಿದೆ ದಕ್ಷಿಣ ಆಫ್ರಿಕಾ
3ನೇ ದಿನದಾಟ ಮುಕ್ತಾಯವಾಗಿದ್ದು ದಕ್ಷಿಣ ಆಫ್ರಿಕಾ ಇನ್ನೂ 371 ರನ್‌ಗಳ ಹಿನ್ನಡೆಯಲ್ಲಿದೆ, ಇನ್ನೂ ಎರಡು ದಿನದಾಟ ಬಾಕಿಯಿದ್ದು, ಹರಿಣಗಳು ಸೋಲಿನ ಸುಳಿಗೆ ಸಿಲುಕಿವೆ. ನಾಲ್ಕನೇ ದಿನವೇ ಪಂದ್ಯ ಮುಕ್ತಾಯಗೊಳಿಸಲು ಆಸ್ಟ್ರೇಲಿಯಾ ಬೌಲರ್ ಗಳು ಕಾತರವಾಗಿದ್ದಾರೆ.
ಒಂದು ವೇಳೆ ದಕ್ಷಿಣ ಆಫ್ರಿಕಾ ಈ ಪಂದ್ಯದಲ್ಲಿ ಸೋಲನುಭವಿಸಿದರೆ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್ ಪ್ರವೇಶಿಸುವುದು ಇನ್ನೂ ಕಷ್ಟವಾಗಲಿದೆ. ಮೊದಲನೇ ಟೆಸ್ಟ್ ಪಂದ್ಯದಲ್ಲಿ ಸೋತಿದ್ದ ದಕ್ಷಿಣ ಆಫ್ರಿಕಾ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಅಂಕಪಟ್ಟಿಯಲ್ಲಿ ಎರಡನೇ ಸ್ಥಾನದಿಂದ ಮೂರನೇ ಸ್ಥಾನಕ್ಕೆ ಕುಸಿದಿದೆ.

ಅಲೆಕ್ಸ್ ಕ್ಯಾರಿ ಶತಕ
100ನೇ ಟೆಸ್ಟ್ ಪಂದ್ಯವನ್ನಾಡುತ್ತಿರುವ ವಾರ್ನರ್ ಡೇವಿಡ್ ವಾರ್ನರ್ ಅಮೋಘ ದ್ವಿಶತಕ ಸಿಡಿಸಿದರು. 100ನೇ ಟೆಸ್ಟ್ ಪಂದ್ಯದಲ್ಲಿ 200 ರನ್ ಗಳಿಸಿದ ಎರಡನೇ ಆಟಗಾರ ವಾರ್ನರ್, ಈ ಮೊದಲು ಇಂಗ್ಲೆಂಡ್‌ನ ಜೋ ರೂಟ್ ಈ ಸಾಧನೆ ಮಾಡಿದ್ದರು.
ವಾರ್ನರ್ ದ್ವಿಶತಕದ ಬಳಿಕ ವಿಕೆಟ್ ಕೀಪರ್ ಬ್ಯಾಟರ್ ಅಲೆಕ್ಸ್ ಕ್ಯಾರಿ ಶತಕ ಗಳಿಸುವ ಮೂಲಕ ಆಸ್ಟ್ರೇಲಿಯಾ ಬೃಹತ್ ಮುನ್ನಡೆ ಗಳಿಸಲು ಸಹಾಯ ಮಾಡಿದರು. 111 ರನ್ ಗಳಿಸಿದ ಕ್ಯಾರಿ ಮಾರ್ಕೊ ಜಾನ್ಸನ್ ಅವರ ವಿಕೆಟ್ ಪಡೆದರು. ಆಲ್‌ರೌಂಡರ್ ಕ್ಯಾಮರೂನ್ ಗ್ರೀನ್ ಅಜೇಯ 51 ರನ್ ಗಳಿಸಿ ಅಲೆಕ್ಸ್ ಕ್ಯಾರಿಗೆ ಸಾಥ್ ನೀಡಿದರು.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications