ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

Aus vs SA 2nd Test: ಹರಿಣಗಳಿಗೆ ಮುಖಭಂಗ, ಬಾಕ್ಸಿಂಗ್ ಡೇ ಟೆಸ್ಟ್‌ನಲ್ಲಿ ಬೃಹತ್ ಜಯ ಸಾಧಿಸಿದ ಆಸ್ಟ್ರೇಲಿಯಾ

Aus vs SA 2nd Test: Australia Thrash South Africa By Innings And 182 Runs In Boxing Day Test

ಮೆಲ್ಬೋರ್ನ್ ಅಂಗಳದಲ್ಲಿ ನಡೆದ ಬಾಕ್ಸಿಂಗ್ ಡೇ ಟೆಸ್ಟ್‌ನಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ ಆಸ್ಟ್ರೇಲಿಯಾ ಇನ್ನಿಂಗ್ಸ್ ಮತ್ತು 182 ರನ್‌ಗಳ ಭರ್ಜರಿ ಜಯ ಸಾಧಿಸಿದೆ. ಆಸ್ಟ್ರೇಲಿಯಾ ಮೊದಲ ಇನ್ನಿಂಗ್ಸ್‌ನಲ್ಲಿ 386 ರನ್‌ಗಳ ಮುನ್ನಡೆ ಪಡೆದುಕೊಂಡಿತ್ತು.

ಎರಡನೇ ಇನ್ನಿಂಗ್ಸ್‌ ಆರಂಭಿಸಿದ ದಕ್ಷಿಣ ಆಫ್ರಿಕಾ ಮೂರನೇ ದಿನದಾಟ ಮುಕ್ತಾಯದ ವೇಳೆಗೆ 15 ರನ್ ಗಳಿಸಿ 1 ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿತ್ತು. ನಾಲ್ಕನೇ ದಿನದಾಟ ಮುಂದುವರೆಸಿದ ದಕ್ಷಿಣ ಆಫ್ರಿಕಾ 204 ರನ್‌ ಗಳಿಗೆ ಆಲೌಟ್ ಆಗುವ ಮೂಲಕ ಇನ್ನಿಂಗ್ಸ್ ಮತ್ತು 182 ರನ್‌ಗಳ ಸೋಲನುಭವಿಸಿತು.

Rishabh Pant: ಇದೇ ಕೊನೆ ಅವಕಾಶ! ರಿಷಬ್‌ ಪಂತ್‌ಗೆ ಖಡಕ್‌ ಎಚ್ಚರಿಕೆ ನೀಡಿದ ಬಿಸಿಸಿಐRishabh Pant: ಇದೇ ಕೊನೆ ಅವಕಾಶ! ರಿಷಬ್‌ ಪಂತ್‌ಗೆ ಖಡಕ್‌ ಎಚ್ಚರಿಕೆ ನೀಡಿದ ಬಿಸಿಸಿಐ

ಈ ಗೆಲುವಿನೊಂದಿಗೆ ಆಸ್ಟ್ರೇಲಿಯಾ ಇನ್ನೂ ಒಂದು ಪಂದ್ಯ ಬಾಕಿ ಇರುವಂತೆಯೆ ಸರಣಿಯನ್ನು ವಶಪಡಿಸಿಕೊಂಡಿದೆ. ಮೂರು ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಆಸ್ಟ್ರೇಲಿಯಾ 2-0 ಮುನ್ನಡೆ ಸಾಧಿಸಿದೆ. ಸರಣಿಯ ಕೊನೆಯ ಟೆಸ್ಟ್ ಪಂದ್ಯ ಜನವರಿ 4 ರಿಂದ ಆರಂಭವಾಗಲಿದೆ. ಈ ಸೋಲಿನ ಮೂಲಕ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ನಲ್ಲಿ ಫೈನಲ್ ಪ್ರವೇಶಿಸುವ ದಕ್ಷಿಣ ಆಫ್ರಿಕಾ ಅವಕಾಶ ಇನ್ನೂ ಕಡಿಮೆಯಾಗಿದೆ.

ಮೊದಲು ಬ್ಯಾಟಿಂಗ್ ಮಾಡಿದ್ದ ದಕ್ಷಿಣ ಆಫ್ರಿಕಾ ಮೊದಲ ಇನ್ನಿಂಗ್ಸ್‌ನಲ್ಲಿ ಕೇವಲ 189 ರನ್‌ಗಳಿಗೆ ಆಲೌಟ್ ಆಗಿತ್ತು. ನಂತರ ಬ್ಯಾಟಿಂಗ್ ಮಾಡಿದ್ದ ಆಸ್ಟ್ರೇಲಿಯಾ ಮೊದಲ ಇನ್ನಿಂಗ್ಸ್‌ನಲ್ಲಿ 7 ವಿಕೆಟ್‌ ಕಳೆದುಕೊಂಡು 575 ರನ್‌ ಗಳಿಸಿದ್ದಾಗ ಡಿಕ್ಲೇರ್ ಮಾಡಿಕೊಂಡಿತ್ತು.

Aus vs SA 2nd Test: Australia Thrash South Africa By Innings And 182 Runs In Boxing Day Test

ಆಸ್ಟ್ರೇಲಿಯಾ ಬೌಲಿಂಗ್ ದಾಳಿಗೆ ಹರಿಣಗಳ ತತ್ತರ

ಆಸ್ಟ್ರೇಲಿಯಾ ಬೌಲಿಂಗ್ ದಾಳಿಗೆ ದಕ್ಷಿಣ ಆಫ್ರಿಕಾದ ಬ್ಯಾಟರ್ ಗಳು ತತ್ತರಿಸಿದರು. ಮೊದಲನೇ ಇನ್ನಿಂಗ್ಸ್‌ನಲ್ಲಿ ವೆರ್‍ರೆಯ್ನೆ ಮತ್ತು ಮಾರ್ಕೊ ಜಾನ್ಸನ್ ಅರ್ಧಶತಕ ಗಳಿಸಿದ್ದು ಬಿಟ್ಟರೆ ಉಳಿದ ಯಾವೊಬ್ಬ ಬ್ಯಾಟರ್ ಕೂಡ ಉತ್ತಮ ರನ್ ಗಳಿಸಲಿಲ್ಲ. ಆಲ್‌ರೌಂಡರ್ ಕ್ಯಾಮೆರಾನ್ ಗ್ರೀನ್ ಮೊದಲ ಇನ್ನಿಂಗ್ಸ್‌ನಲ್ಲಿ 5 ವಿಕೆಟ್ ಪಡೆಯುವ ಮೂಲಕ ದಕ್ಷಿಣ ಆಫ್ರಿಕಾ ಬ್ಯಾಟರ್ ಗಳಿಗೆ ಮಾರಕವಾದರು.

ಎರಡನೇ ಇನ್ನಿಂಗ್ಸ್‌ನಲ್ಲಿ ಟೆಂಬಾ ಬವುಮಾ ಮಾತ್ರ ಅರ್ಧಶತಕ ಗಳಿಸಿ ಆಸ್ಟ್ರೇಲಿಯಾ ಬೌಲಿಂಗ್ ದಾಳಿಯನ್ನು ಎದುರಿಸಿದರು. ಉಳಿದಂತೆ ಯಾರೊಬ್ಬರು ಕೂಡ ಹೆಚ್ಚು ಹೊತ್ತು ಕ್ರೀಸ್‌ನಲ್ಲಿ ನಿಲ್ಲಲಿಲ್ಲ. ಥೆನಿಯನ್ ಡಿ ಬ್ರುಯ್ನೆ 28 ರನ್, ವೆರ್‍ರೆಯ್ನೆ 33 ರನ್ ಗಳಿಸಿದರು. ಆಸ್ಟ್ರೇಲಿಯಾ ಸ್ಪಿನ್ನರ್ ನಾಥನ್ ಲಿಯಾನ್ 3 ವಿಕೆಟ್ ಪಡೆದು ಮಿಂಚಿದರು. ಸ್ಕಾಟ್ ಬೊಲ್ಯಾಂಡ್ 2 ವಿಕೆಟ್ ಪಡೆದರೆ, ಮಿಚೆಲ್ ಸ್ಟಾರ್ಕ್, ಪ್ಯಾಟ್ ಕಮ್ಮಿನ್ಸ್ ಮತ್ತು ಸ್ಟೀವ್ ಸ್ಮಿತ್ ತಲಾ 1 ವಿಕೆಟ್ ಪಡೆದರು.

ಮೊದಲ ಇನ್ನಿಂಗ್ಸ್‌ನಲ್ಲಿ ದ್ವಿಶತಕ ಸಿಡಿಸಿ ಮಿಂಚಿದ್ದ ಡೇವಿಡ್ ವಾರ್ನರ್ ಪಂದ್ಯದ ಆಟಗಾರ ಪ್ರಶಸ್ತಿ ಪಡೆದರು. ಅಮೋಘ ದ್ವಿಶತಕ ಸಿಡಿಸಿ ತಮ್ಮ 100ನೇ ಟೆಸ್ಟ್ ಪಂದ್ಯವನ್ನು ಸ್ಮರಣೀಯವಾಗಿಸಿಕೊಂಡರು.

Story first published: Thursday, December 29, 2022, 10:37 [IST]
Other articles published on Dec 29, 2022
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X