ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

ಆಸ್ಟ್ರೇಲಿಯಾ vs ದ. ಆಫ್ರಿಕಾ 3ನೇ ಟೆಸ್ಟ್: ಗಾಯಗೊಂಡ ಸ್ಟಾರ್ಕ್, ಗ್ರೀನ್‌ಗೆ ಬದಲಿ ಆಟಗಾರರನ್ನು ಹೆಸರಿಸಿದ ಸಿಎ

AUS vs SA 3rd Test: Matthew Renshaw and Ashton Agar replace Green and Starc in Australia squad

ಆಸ್ಟ್ರೇಲಿಯಾ ಹಾಗೂ ದಕ್ಷಿಣ ಆಫ್ರಿಕಾ ವಿರುದ್ಧದ ಟೆಸ್ಟ್ ಸರಣಿಯ ಮೂರನೇ ಪಂದ್ಯಕ್ಕಾಗಿ ಆಸ್ಟ್ರೇಲಿಯಾ ತಂಡ ಪರಿಷ್ಕೃತ ತಂಡವನ್ನು ಪ್ರಕಟಿಸಿದೆ. ಎರಡನೆ ಪಂದ್ಯದಲ್ಲಿ ಗಾಯಕ್ಕೆ ತುತ್ತಾಗಿರುವ ಆಸ್ಟ್ರೇಲಿಯಾದ ಆಲ್‌ರೌಂಡರ್ ಕ್ಯಾಮರೂನ್ ಗ್ರೀನ್ ಹಾಗೂ ಮಿಚೆಲ್ ಸ್ಟಾರ್ಕ್ ಅಂತಿಮ ಪಂದ್ಯಕ್ಕೆ ಅಲಭ್ಯವಾಗಿದ್ದಾರೆ. ಇವರ ಬದಲಿಗೆ ಮ್ಯಾಥ್ಯೂ ರೆನ್‌ಶಾ ಹಾಗೂ ಸ್ಪಿನ್ ಆಲ್‌ರೌಂಡರ್ ಆಶ್ಟನ್ ಅಗರ್ ಸ್ಥಾನ ಪಡೆದುಕೊಂಡಿದ್ದಾರೆ.

ಮೂರು ಪಂದ್ಯಗಳ ಟೆಸ್ಟ್ ಸರಣಿ ಇದಾಗಿದ್ದು ಮೊದಲ ಎರಡು ಪಂದ್ಯದಲ್ಲಿಯೂ ಆಸ್ಟ್ರೇಲಿಯಾ ಅಮೋಘ ಪ್ರದರ್ಶನ ನೀಡುವ ಮೂಲಕ ಗೆಲುವು ಸಾಧಿಸಿದೆ. ಹೀಗಾಗಿ ಸರಣಿಯನ್ನು ಆತಿಥೇಯ ತಂಡ ಈಗಾಗಲೇ 2-0 ಅಂತರದಿಂದ ವಶಕ್ಕೆ ಪಡೆದುಕೊಂಡಿದೆ. ದಕ್ಷಿಣ ಆಫ್ರಿಕಾ ಹೀನಾಯ ಪ್ರದರ್ಶನ ನೀಡಿ ಮುಖಭಂಗಕ್ಕೆ ಒಳಗಾಗಿದೆ.

26ರ ಹರೆಯದ ರೆನ್‌ಶಾ ಕೊನೆಯ ಬಾರಿಗೆ 2018ರಲ್ಲಿ ಆಸ್ಟ್ರೇಲಿಯಾ ಟೆಸ್ಟ್ ತಂಡದಲ್ಲಿ ಆಡುವ ಅವಕಾಶ ಪಡೆದುಕೊಂಡಿದ್ದರು. ದಕ್ಷಿಣ ಆಫ್ರಿಕಾ ಪ್ರವಾಸದಲ್ಲಿ ಸ್ಟೀವ್ ಸ್ಮಿತ್, ಡೇವಿಡ್ ವಾರ್ನರ್ ಹಾಗೂ ಕ್ಯಾಮರೂನ್ ಬೆನ್‌ಕ್ರಾಫ್ಟ್ ಚೆಂಡು ವಿರೂಪ ಪ್ರಕರಣದಲ್ಲಿ ಸಿಲುಕಿಕೊಂಡು ಅಮಾನತಾದ ಬಳಿಕ ಆಸಿಸ್ ತಂಡದಲ್ಲಿ ಅವಕಾಶ ಗಿಟ್ಟಿಸಿಕೊಂಡಿದ್ದರು ರೆನ್‌ಶಾ.

ಇನ್ನು ಮುಂದಿನ ಪಂದ್ಯ ಸಿಡ್ನಿಯಲ್ಲಿ ನಡೆಯಲಿದ್ದು ಸ್ಪಿನ್ನರ್‌ಗಳಿಗೆ ನೆರವು ದೊರೆಯುವ ಕಾರಣ ಈ ಪಂದ್ಯದಲ್ಲಿ ಆಶ್ಟನ್ ಅಗರ್ ಆಡುವ ಬಳಗದಲ್ಲಿ ಅವಕಾಶ ಪಡೆಯುವ ಸಾಧ್ಯತೆಯಿದೆ. 7ನೇ ಕ್ರಮಾಂಕದಲ್ಲಿ ಆಶ್ಟನ್ ಅಗರ್ ಬ್ಯಾಟಿಂಗ್‌ಗೆ ಇಳಿದರೆ ಎರಡನೇ ಟೆಸ್ಟ್ ಪಂದ್ಯದಲ್ಲಿ ಶತಕ ಸಿಡಿಸಿದ ಅಲೆಕ್ಸ್ ಕ್ಯಾರಿ ಮೇಲಿನ ಕ್ರಮಾಂಕದಲ್ಲಿ ಬ್ಯಾಟಿಂಗ್ ನಡೆಸುವ ನಿರೀಕ್ಷೆಯಿದೆ.

ಇನ್ನು ಆಸ್ಟ್ರೇಲಿಯಾ ಹಾಗೂ ದಕ್ಷಿಣ ಆಫ್ರಿಕಾ ವಿರುದ್ಧದ ಮೂರು ಪಂದ್ಯಗಳ ಟೆಸ್ಟ್ ಸರಣಿಯ ಅಂತಿಮ ಪಂದ್ಯ ಜನವರಿ 4ರಿಂದ ಸಿಡ್ನಿ ಕ್ರಿಕೆಟ್ ಮೈದಾನದಲ್ಲಿ ನಡೆಯಲಿದೆ. ಈ ಸರಣಿಯ ಮೊದಲ ಪಂದ್ಯವನ್ನು ಆಸ್ಟ್ರೇಲಿಯಾ 6 ವಿಕೆಟ್‌ಗಳ ಅಂತರದಿಂದ ಗೆದ್ದುಕೊಂಡಿದ್ದರೆ 2ನೇ ಪಂದ್ಯವನ್ನು ಇನ್ನಿಂಗ್ಸ್ ಹಾಗೂ 182 ರನ್‌ಗಳ ಬೃಹತ್ ಅಂತರದಿಂದ ಗೆದ್ದುಕೊಂಡಿತ್ತು.

ಆಸ್ಟ್ರೇಲಿಯಾ ತಂಡ: ಪ್ಯಾಟ್ ಕಮ್ಮಿನ್ಸ್ (ನಾಯಕ), ಆಷ್ಟನ್ ಅಗರ್, ಸ್ಕಾಟ್ ಬೋಲ್ಯಾಂಡ್, ಅಲೆಕ್ಸ್ ಕ್ಯಾರಿ, ಮಾರ್ಕಸ್ ಹ್ಯಾರಿಸ್, ಜೋಶ್ ಹ್ಯಾಜಲ್‌ವುಡ್, ಟ್ರಾವಿಸ್ ಹೆಡ್, ಉಸ್ಮಾನ್ ಖವಾಜಾ, ಮಾರ್ನಸ್ ಲ್ಯಾಬುಶೈನ್, ನಾಥನ್ ಲಿಯಾನ್, ಲ್ಯಾನ್ಸ್ ಮೋರಿಸ್, ಮ್ಯಾಥ್ಯೂ ರೆನ್‌ಶಾ, ಸ್ಟೀವ್ ಸ್ಮಿತ್, ಡೇವಿಡ್ ವಾರ್ನರ್.

Story first published: Friday, December 30, 2022, 17:00 [IST]
Other articles published on Dec 30, 2022
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X