ದಕ್ಷಿಣ ಆಫ್ರಿಕಾ ಪ್ರವಾಸ ಕೈಗೊಂಡಿರುವ ಆಸ್ಟ್ರೇಲಿಯಾ ತಂಡ ಪ್ರಸ್ತುತ ಐದು ಪಂದ್ಯಗಳ ಏಕದಿನ ಸರಣಿಯಲ್ಲಿ ಭಾಗಿಯಾಗಿದೆ. ಇಂದು ಈ ಸರಣಿಯ ನಾಲ್ಕನೇ ಪಂದ್ಯ ನಡೆಯುತ್ತಿದ್ದು ಈ ಪಂದ್ಯದಲ್ಲಿ ಆಸ್ಟ್ತೃಲಿಯಾ ಬೌಲಿಂಗ್ ವಿಭಾಗದ ವಿರುದ್ಧ ದಕ್ಷಿಣ ಆಫ್ರಿಕಾ ಬ್ಯಾಟರ್‌ಗಳು ಅಬ್ಬರದ ಬ್ಯಾಟಿಂಗ್ ಪ್ರದರ್ಶನ ನೀಡಿದ್ದಾರೆ. ಅದರಲ್ಲೂ ಹೆನ್ರಿಕ್ ಕ್ಲಾಸೆನ್ ಅಮೋಘ ಶತಕ ಸಿಡಿಸಿ ಅಬ್ಬರಿಸಿದ್ದಾರೆ. ಈ ಅರ್ಭಟದಿಂದಾಗಿ ಆಸ್ಟ್ರೇಲಿಯಾ ತಂಡಕ್ಕೆ ದಕ್ಷಿಣ ಆಫ್ರಿಕಾ ಬರೊಬ್ಬರಿ 417 ರನ್‌ಗಳ ಗುರಿ ನೀಡಿದೆ.
ಈ ಪಂದ್ಯದಲ್ಲಿ ಟಾಸ್ ಗೆದ್ದ ಆಸ್ಟ್ರೇಲಿಯಾ ದಕ್ಷಿಣ ಆಫ್ರಿಲಾ ತಂಡವನ್ನು ಮೊದಲಿಗೆ ಬ್ಯಾಟಿಂಗ್‌ಗೆ ಇಳಿಸಿ ದೊಡ್ಡ ತಪ್ಪೆಸಗಿತ್ತು. ಉತ್ತ ಆರಂಭ ಪಡೆದ ದಕ್ಷಿಣ ಆಫ್ರಿಕಾ ಮೊದಕ ವಿಕೆಟ್‌ಗೆ 12.5 ಓವರ್‌ಗಳಲ್ಲಿ 64 ರನ್‌ಗಳನ್ನು ಗಳಿಸಿತ್ತು. 28 ರನ್‌ಗಳಿಸಿ ಹೆಂಡ್ರಿಕ್ಸ್ ಔಟಾದ ಬಳಿಕ ರಾಸ್ಸಿ ವಾಂಡರ್ ಡಸೆನ್ 62 ರನ್‌ಗಳ ಕೊಡುಗೆ ನೀಡಿದರು. ಕ್ವಿಂಟನ್ ಡಿಕಾಕ್ 45 ರನ್‌ಗಳ ಕೊಡುಗೆ ನೀಡಿದರು.

ಅಗ್ರ ಕ್ರಮಾಂಕದ ಆಟಗಾರರಿಂದ ಉತ್ತಮ ಪ್ರದರ್ಶನ ಬಂದ ಬಳಿಕ ಐದನೇ ಕ್ರಮಾಂಕದಲ್ಲಿ ಕಣಕ್ಕಿಳಿದಿದ್ದು ಹೆನ್ರಿಕ್ ಕ್ಲಾಸೆನ್. ಡೇವಿಡ್ ಮಿಲ್ಲರ್ ಜೊತೆಗೂಡಿ ಕ್ಲಾಸೆನ್ ಆಸ್ಟ್ರೇಲಿಯಾ ಬೌಲರ್‌ಗಳನ್ನು ನಿರ್ದಯವಾಗಿ ದಂಡಿಸಿದರು. 83 ಎಸೆತಗಳನ್ನು ಎದುರಿಸಿದ ಕ್ಲಾಸೆನ್ ಭರ್ಜರಿ 174 ರನ್‌ಗಳನ್ನು ಗಳಿಸಿ ವಿಕೆಟ್ ಕಳೆದುಕೊಂಡರು. 13 ಬೌಂಡರಿ ಹಾಗೂ 13 ಸಿಕ್ಸರ್ ಸಿಡಿಸಿದ್ದಾರೆ. ಕೇವಲ 57 ಎಸೆತಗಳಲ್ಲಿ ಕ್ಲಾಸೆನ್ ತಮ್ಮ ಶತಕವನ್ನು ಪೂರ್ಣಗೊಳಿಸಿದರು.
ಇನ್ನು ಡೇವಿಡ್ ಮಿಲ್ಲರ್ 45 ಎಸೆತಗಳಲ್ಲಿ 82 ರನ್ ಬಾರಿಸಿ ಕ್ಲಾಸೆನ್‌ಗೆ ಭರ್ಜರಿಯಾಗಿ ಸಾಥ್ ನೀಡಿದರು. ಮಿಲ್ಲರ್ 6 ಬೌಂಡರಿ ಹಾಗೂ 5 ಸಿಕ್ಸರ್ ಬಾರಿಸಿ ಅಬ್ಬರಿಸಿದ್ದಾರೆ. ಕೊನೆಯ 9 ಓವರ್‌ಗಳಲ್ಲಿ ದಕ್ಷಿಣ ಆಫ್ರಿಕಾ ಗಳಿಸಿದ್ದು ಬರೊಬ್ಬರಿ 164 ರನ್‌ಗಳನ್ನು!. ಈ ಅವಧಿಯಲ್ಲಿ 11 ಸಿಕ್ಸರ್ ಹಾಗೂ 14 ಬೌಂಡರಿಗಳು ಸಿಡಿದಿದೆ.
ಇನ್ನು ಆಸ್ಟ್ರೇಲಿಯಾದ ಸ್ಪಿನ್ನರ್ ಆಡಂ ಜಂಪಾ ಈ ಪಂದ್ಯದಲ್ಲಿ 10 ಓವರ್‌ಗಳಲ್ಲಿ ಬರೊಬ್ಬರಿ 113 ರನ್‌ಗಳನ್ನು ಬಿಟ್ಟುಕೊಟ್ಟು ಬೇಡದ ದಾಖಲಯೊಂದನ್ನು ತಮ್ಮ ಹೆಸರಿನಲ್ಲಿ ಬರೆದುಕೊಂಡಿದ್ದಾರೆ. ಏಕದಿನ ಕ್ರಿಕೆಟ್‌ನಲ್ಲಿ ಅತಿ ಹೆಚ್ಚಿ ರನ್ ಬಿಟ್ಟುಕೊಟ್ಟ ದಾಖಲೆ ಪಟ್ಟಿಯಲ್ಲಿ ಮೊದಲ ಸ್ಥಾನದಲ್ಲಿ ಜಂಪಾ ಜಂಟಿಯಾಗಿ ಕಾಣಿಸಿಕೊಂಡಿದ್ದಾರೆ.