AUS vs SA: ಆಸೀಸ್ ವಿರುದ್ಧದ ಟಿ20, ಏಕದಿನ ಸರಣಿಗೆ ದಕ್ಷಿಣ ಆಫ್ರಿಕಾ ತಂಡ ಪ್ರಕಟ; ಮುಂಬೈ ಇಂಡಿಯನ್ಸ್ ಸ್ಟಾರ್ ಆಯ್ಕೆ
ಮುಂಬರುವ ಆಸ್ಟ್ರೇಲಿಯಾ ವಿರುದ್ಧದ ಟಿ20 ಮತ್ತು ಏಕದಿನ ಸರಣಿಗಳಿಗಾಗಿ ದಕ್ಷಿಣ ಆಫ್ರಿಕಾದ ಎರಡು ಪ್ರತ್ಯೇಕ ತಂಡಗಳನ್ನು ಕ್ರಿಕೆಟ್ ಸೌತ್ ಆಫ್ರಿಕಾ (ಸಿಎಸ್‌ಎ) ಪ್ರಕಟಿಸಿದೆ. ಉಭಯ ತಂಡಗಳ ಕ್ರಿಕೆಟ್ ಪ್ರೇಮಿಗಳು ರೋಮಾಂಚನಕಾರಿ ವೈಟ್-ಬಾಲ್ ಪೈಪೋಟಿಯನ್ನು ಕಣ್ತುಂಬಿಕೊಳ್ಳಲಿದ್ದಾರೆ.
ಜೂನಿಯರ್ ಎಬಿಡಿ ಎಂದೇ ಕರೆಯಲ್ಪಡುವ ದಕ್ಷಿಣ ಆಫ್ರಿಕಾ ಮಾಜಿ ಅಂಡರ್-19 ಸ್ಟಾರ್ ಡೆವಾಲ್ಡ್ ಬ್ರೆವಿಸ್ ಅವರು ಟಿ20 ಮತ್ತು ಏಕದಿನ ತಂಡಗಳಿಗೆ ತಮ್ಮ ಚೊಚ್ಚಲ ಕರೆ ಸ್ವೀಕರಿಸಿದ್ದಾರೆ.

ಡೆವಾಲ್ಡ್ ಬ್ರೆವಿಸ್ ಅವರು ಜನವರಿ 2022ರಲ್ಲಿ ನಡೆದ ಐಸಿಸಿ ಅಂಡರ್-19 ಪುರುಷರ ಕ್ರಿಕೆಟ್ ವಿಶ್ವಕಪ್‌ನಲ್ಲಿ 506 ರನ್‌ಗಳನ್ನು ಗಳಿಸಿ ಅತಿ ಹೆಚ್ಚು ರನ್ ಗಳಿಸಿದ ಬ್ಯಾಟರ್ ಪ್ರಶಸ್ತಿಯನ್ನು ಗೆದ್ದುಕೊಂಡರು.
ಅಲ್ಲದೆ ಬಲಗೈ ಯುವ ಬ್ಯಾಟರ್ ವಿಶ್ವಾದ್ಯಂತ ಟಿ20 ಲೀಗ್‌ಗಳಲ್ಲಿ ತನ್ನ ಪರಾಕ್ರಮವನ್ನು ತೋರಿಸಿದ್ದಾರೆ. ಹಿಂದಿನ SA ಟಿ20 ಚಾಲೆಂಜ್‌ನಲ್ಲಿ 57 ಎಸೆತಗಳಲ್ಲಿ 162 ರನ್‌ಗಳ ದಾಖಲೆಯ ಪ್ರದರ್ಶನದೊಂದಿಗೆ ತಮ್ಮ ಸ್ಥಾನಮಾನವನ್ನು ಭದ್ರಗೊಳಿಸಿದ್ದಾರೆ.
ದಕ್ಷಿಣ ಆಫ್ರಿಕಾದ ಟಿ20 ತಂಡದಲ್ಲಿ ಡೆವಾಲ್ಡ್ ಬ್ರೆವಿಸ್ ಜೊತೆಗೆ ಡೊನೊವನ್ ಫೆರೀರಾ, ಮ್ಯಾಥ್ಯೂ ಬ್ರೀಟ್ಜ್‌ಕೆ ಮತ್ತು ಗೆರಾಲ್ಡ್ ಕೊಯೆಟ್ಜಿ ಕೂಡ ಸ್ಥಾನ ಪಡೆದಿದ್ದಾರೆ.

ಇನ್ನು ಅನುಭವಿ ಸ್ಪಿನ್ನರ್ ಕೇಶವ್ ಮಹಾರಾಜ್ ಅವರು ಎರಡನೇ ಮತ್ತು ಮೂರನೇ ಟಿ20 ಪಂದ್ಯಗಳು ಮತ್ತು ಏಕದಿನ ತಂಡದಲ್ಲಿ ಸ್ಥಾನ ಪಡೆಯುವ ಮೂಲಕ ಸ್ಪರ್ಧಾತ್ಮಕ ಕ್ರಿಕೆಟ್‌ಗೆ ಮರಳಲಿದ್ದಾರೆ. ಮಾರ್ಚ್‌ನಲ್ಲಿ ವೆಸ್ಟ್ ಇಂಡೀಸ್ ವಿರುದ್ಧದ ಬೆಟ್‌ವೇ ಟೆಸ್ಟ್ ಸರಣಿಯಲ್ಲಿ ಆದ ಗಾಯದಿಂದ ಚೇತರಿಸಿಕೊಂಡ ನಂತರ ಕೇಶವ್ ಮಹಾರಾಜ್ ಅವರ ಉತ್ಸಾಹಭರಿತ ಪುನರಾಗಮನವಾಗಿದೆ.
ವಿಶ್ವಕಪ್ ಕಾರ್ಯತಂತ್ರದ ಭಾಗವಾಗಿ ಕ್ವಿಂಟನ್ ಡಿ ಕಾಕ್, ಹೆನ್ರಿಚ್ ಕ್ಲಾಸೆನ್, ಡೇವಿಡ್ ಮಿಲ್ಲರ್, ಆನ್ರಿಚ್ ನಾರ್ಟ್ಜೆ ಮತ್ತು ಕಗಿಸೊ ರಬಾಡಾ ಅವರು ಮೂರು ಪಂದ್ಯಗಳ ಟಿ20 ಸರಣಿಯಲ್ಲಿ ವಿಶ್ರಾಂತಿ ಪಡೆಯಲಿದ್ದಾರೆ. ಮುಂಬರುವ ಐದು-ಪಂದ್ಯಗಳ ಏಕದಿನ ಸರಣಿಯಲ್ಲಿ ತಂಡವನ್ನು ಕೂಡಿಕೊಳ್ಳಲಿದ್ದಾರೆ.
2023ರ ಏಕದಿನ ವಿಶ್ವಕಪ್‌ಗಾಗಿ ಸೆಪ್ಟೆಂಬರ್ 5ರೊಳಗೆ ಪ್ರಕಟವಾಗುವ 15 ಆಟಗಾರರ ತಂಡದಲ್ಲಿ ಯಾರು ಸ್ಥಾನ ಪಡೆಯಲಿದ್ದಾರೆ ಎಂಬುದು ಕುತೂಹಲ ಮೂಡಿಸಿದೆ.
ಆಸ್ಟ್ರೇಲಿಯಾ ವಿರುದ್ಧ ಟಿ20 ಸರಣಿಗೆ ದಕ್ಷಿಣ ಆಫ್ರಿಕಾ ತಂಡ
ಐಡೆನ್ ಮಾರ್ಕ್ರಾಮ್ (ನಾಯಕ), ತೆಂಬಾ ಬವುಮಾ, ಮ್ಯಾಥ್ಯೂ ಬ್ರೀಟ್ಜ್ಕೆ, ಡೆವಾಲ್ಡ್ ಬ್ರೆವಿಸ್, ಜೆರಾಲ್ಡ್ ಕೋಟ್ಜಿ, ಡೊನೊವನ್ ಫೆರೆರಾ, ಜಾರ್ನ್ ಫಾರ್ಚುಯಿನ್, ರೀಜಾ ಹೆಂಡ್ರಿಕ್ಸ್, ಮಾರ್ಕೊ ಜಾನ್ಸೆನ್, ಸಿಸಂಡಾ ಮಗಲಾ, ಕೇಶವ ಮಹಾರಾಜ್, ಲುಂಗಿ ಎನ್‌ಗಿಡಿ, ತಬ್ರೈಜ್ ಶಮ್ಸಿ, ಟ್ರಿಸ್ಟಾನ್ ಸ್ಟಬ್ಸ್, ಲಿಜಾದ್ ವಿಲಿಯಮ್ಸ್, ರಾಸ್ಸಿ ವ್ಯಾನ್ ಡೆರ್ ಡಸ್ಸೆನ್.
ಆಸ್ಟ್ರೇಲಿಯಾ ವಿರುದ್ಧ ಏಕದಿನ ಸರಣಿಗೆ ದಕ್ಷಿಣ ಆಫ್ರಿಕಾ ತಂಡ
ತೆಂಬಾ ಬವುಮಾ (ನಾಯಕ), ಡೆವಾಲ್ಡ್ ಬ್ರೆವಿಸ್, ಜೆರಾಲ್ಡ್ ಕೊಯೆಟ್ಜಿ, ಕ್ವಿಂಟನ್ ಡಿ ಕಾಕ್, ಜಾರ್ನ್ ಫಾರ್ಟುಯಿನ್, ರೀಜಾ ಹೆಂಡ್ರಿಕ್ಸ್, ಮಾರ್ಕೊ ಜಾನ್ಸೆನ್, ಹೆನ್ರಿಚ್ ಕ್ಲಾಸೆನ್, ಸಿಸಂಡಾ ಮಗಾಲಾ, ಕೇಶವ್ ಮಹಾರಾಜ್, ಐಡೆನ್ ಮಾರ್ಕ್ರಾಮ್, ಡೇವಿಡ್ ಮಿಲ್ಲರ್, ಲುಂಗಿ ಎನ್‌ಗಿಡಿ, ಅನ್ರಿಚ್ ನಾರ್ಟ್ಜೆ, ತಬ್ರೈಜ್ ಶಮ್ಸಿ, ವೇಯ್ನ್ ಪಾರ್ನೆಲ್, ಕಗಿಸೊ ರಬಾಡಾ, ಟ್ರಿಸ್ಟಾನ್ ಸ್ಟಬ್ಸ್, ರಾಸ್ಸಿ ವ್ಯಾನ್ ಡೆರ್ ಡುಸ್ಸೆನ್.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications