Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

ನಾನು ಆಡಿದ ಅತ್ಯಂತ ಕಠಿಣವಾದ ಪಿಚ್ ಅದು: ಗ್ಯಾಬಾ ಬಗ್ಗೆ ಸ್ಟೀವ್ ಸ್ಮಿತ್ ಪ್ರತಿಕ್ರಿಯೆ

Aus vs SA: Steve Smith said Gabba was probably most difficult wicket Ive played on

ಆಸ್ಟ್ರೇಲಿಯಾ ಹಾಗೂ ದಕ್ಷಿಣ ಆಫ್ರಿಕಾ ವಿರುದ್ಧದ ಟಸ್ಟ್ ಸರಣಿಯ ಮೊದಲ ಪಂದ್ಯ ಬ್ರಿಸ್ಬೇನ್‌ನ ಗ್ಯಾಬಾ ಕ್ರೀಡಾಂಗಣದಲ್ಲಿ ನಡೆದಿದ್ದು ಈ ಪಂದ್ಯ ಎರಡನೇ ದಿನದಾಟ ಮುಕ್ತಾಯಕ್ಕೂ ಮುನ್ನವೇ ಅಂತ್ಯವಾಗಿ ಸಾಕಷ್ಟು ಟೀಕೆಗೆ ಕಾರಣವಾಗಿದೆ. ಬ್ಯಾಟಿಂಗ್ ನಡೆಸಲು ಕಠಿಣವಾದ ಈ ಪಿಚ್ ಬಗ್ಗೆ ತೀವ್ರ ಟೀಕೆಗಳು ಕೇಳಿ ಬಂದಿದೆ. ಈ ಬಗ್ಗೆ ಆಸ್ಟ್ರೇಲಿಯಾ ತಂಡದ ಅನುಭವಿ ಆಟಗಾರ ಸ್ಟೀವ್ ಸ್ಮಿತ್ ಪ್ರತಿಕ್ರಿಯೆ ನೀಡಿದ್ದಾರೆ. ಈ ಸಂದರ್ಭದಲ್ಲಿ ಅವರು ಗ್ಯಾಬಾದ ಪಿಚ್ ನಾನು ಆಡಿರುವ ಪಿಚ್‌ಗಳ ಪೈಕಿ ಅತ್ಯಂತ ಕಠಿಣವಾದ ಪಿಚ್ ಆಗಿದೆ ಎಂದಿದ್ದಾರೆ.

ಈ ಪಂದ್ಯ ಕೇವಲ ಎರಡು ದಿನಗಳಲ್ಲಿ 34 ವಿಕೆಟ್‌ಗಳನ್ನು ಕಳೆದುಕೊಂಡಿತ್ತು. ಆಸ್ಟ್ರೇಲಿಯಾ ತಂಡ ಪ್ರವಾಸಿ ದಕ್ಷಿಣ ಆಫ್ರಿಕಾ ವಿರುದ್ಧ 6 ವಿಕೆಟ್‌ಗಳ ಅಂತರದಿಂದ ಗೆದ್ದುಕೊಂಡಿದ್ದು ಸರಣಿಯಲ್ಲಿ ಮುನ್ನಡೆ ಸಾಧಿಸಿದೆ. ಆದರೆ ಎರಡನೇ ದಿನದಾಟದ ಅಂತ್ಯಕ್ಕೂ ಮುನ್ನವೇ ಮುಕ್ತಾಯ ಕಂಡ ಈ ಪಂದ್ಯ 91 ವರ್ಷಗಳ ಸುದೀರ್ಘ ಅವಧಿಯಲ್ಲಿ ಆಸ್ಟ್ರೇಲಿಯಾ ನೆಲದಲ್ಲಿ ಅಂತ್ಯ ಕಂಡ ಅತ್ಯಂತ ಕಿರು ಅವಧಿಯ ಟೆಸ್ಟ್ ಪಂದ್ಯ ಎನಿಸಿಕೊಂಡಿದೆ.

ಟೆಸ್ಟ್ ಸರಣಿಯ ಎರಡೇ ಪಂದ್ಯ ಬಾಕ್ಸಿಂಡೇ ಪಂದ್ಯವಾಗಿರಲಿದ್ದು ಈ ಹಿನ್ನೆಲೆಯಲ್ಲಿ ಆಸ್ಟ್ರೇಲಿಯಾದ ಅನುಬವಿ ಆಟಗಾರ ಸ್ಟೀವ್ ಸ್ಮಿತ್ ಪ್ರತಿಕ್ರಿಯೆ ನೀಡಿದ್ದಾರೆ. ಈ ಸಂದರ್ಭದಲ್ಲಿ ಅವರು "ಮುಂದಿನ ಪಂದ್ಯದಲ್ಲಿ ಬ್ಯಾಟಿಂಗ್‌ಗೆ ಹೆಚ್ಚಿನ ನೆರವು ದೊರೆಯುವ ನಿರೀಕ್ಷೆಯಲ್ಲಿದ್ದೇನೆ. ಅಲ್ಲಿ ಬ್ಯಾಟ್ ಹಾಗೂ ಬೌಲಿಂಗ್ ಮಧ್ಯೆ ಉತ್ತಮವಾದ ಸ್ಪರ್ಧೆ ನಡೆಯುವ ನಿರೀಕ್ಷೆಯಿದೆ. ಆದರೆ ಗ್ಯಾಬಾ ಆಸ್ಟ್ರೇಲಿಯಾದಲ್ಲಿ ಆಡಿರುವ ಅತ್ಯಂತ ಕಠಿಣವಾದ ಪಿಚ್ ಆಗಿದೆ" ಎಂದಿದ್ದಾರೆ ಸ್ಟೀವ್ ಸ್ಮಿತ್.

ಬ್ರಿಸ್ಬೇನ್ ಪಿಚ್ ಬಗ್ಗೆ ಇಂಟರ್‌ನ್ಯಾಶನಲ್ ಕ್ರಿಕೆಟ್ ಕೌನ್ಸಿಲ್ (ಐಸಿಸಿ) ಕಳಪೆ ಗುಣಮಟ್ಟದ ಪಿಚ್ ಎಂದು ತಿಳಿಸಿದೆ. ಈ ಮೂಲಕ ಕ್ರಿಕೆಟ್ ಆಸ್ಟ್ರೇಲಿಯಾ ಮುಖಭಂಗಕ್ಕೆ ಒಳಗಾಗಿದೆ. ಇನ್ನು ಈ ಸರಣಿಯ ಎರಡನೇ ಪಂದ್ಯ ಮೆಲ್ಬರ್ನ್‌ನಲ್ಲಿ ಡಿಸೆಂಬರ್ 26ರಂದು(ಬಾಕ್ಸಿಂಗ್ ಡೇ) ಆರಂಭವಾಗಲಿದೆ.

ಆಸ್ಟ್ರೇಲಿಯಾ ಸ್ಕ್ವಾಡ್: ಡೇವಿಡ್ ವಾರ್ನರ್, ಉಸ್ಮಾನ್ ಖವಾಜಾ, ಮಾರ್ನಸ್ ಲ್ಯಾಬುಸ್ಚಾಗ್ನೆ, ಸ್ಟೀವನ್ ಸ್ಮಿತ್, ಟ್ರಾವಿಸ್ ಹೆಡ್, ಕ್ಯಾಮೆರಾನ್ ಗ್ರೀನ್, ಅಲೆಕ್ಸ್ ಕ್ಯಾರಿ (ವಿಕೆಟ್ ಕೀಪರ್), ಪ್ಯಾಟ್ ಕಮಿನ್ಸ್ (ನಾಯಕ), ಮಿಚೆಲ್ ಸ್ಟಾರ್ಕ್, ನಾಥನ್ ಲಿಯಾನ್, ಸ್ಕಾಟ್ ಬೋಲ್ಯಾಂಡ್, ಲ್ಯಾನ್ಸ್ ಮೋರಿಸ್, ಮೈಕೆಲ್ ನೆಸರ್, ಮಾರ್ಕಸ್ ಹ್ಯಾರಿಸ್

ದಕ್ಷಿಣ ಆಫ್ರಿಕಾ ಸ್ಕ್ವಾಡ್: ಡೀನ್ ಎಲ್ಗರ್ (ನಾಯಕ), ಸರೆಲ್ ಎರ್ವೀ, ರಾಸ್ಸಿ ವ್ಯಾನ್ ಡೆರ್ ಡಸ್ಸೆನ್, ಟೆಂಬಾ ಬವುಮಾ, ಖಯಾ ಜೊಂಡೋ, ಕೈಲ್ ವೆರ್ರೆನ್ನೆ (ವಿಕೆಟ್ ಕೀಪರ್), ಮಾರ್ಕೊ ಜಾನ್ಸೆನ್, ಕೇಶವ್ ಮಹಾರಾಜ್, ಕಗಿಸೊ ರಬಾಡಾ, ಅನ್ರಿಚ್ ನಾರ್ಟ್ಜೆ, ಲುಂಗಿ ಎನ್‌ಗಿಡಿ, ಥಿಯುನಿಸ್ ಡಿ ಬ್ರುಯಿನ್, ಸಿಮ್‌ಆಡ್ ವಿಲಿಯಮ್ಸ್ , ಹೆನ್ರಿಕ್ ಕ್ಲಾಸೆನ್, ಜೆರಾಲ್ಡ್ ಕೋಟ್ಜೀ

Story first published: Thursday, December 22, 2022, 5:40 [IST]
Other articles published on Dec 22, 2022
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+