Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

ಸೋಲಿನ ನೋವಿಗೆ ತುಪ್ಪ ಸುರಿದ ಭಾರತೀಯ ಅಭಿಮಾನಿಗಳು: ಕಣ್ಣೀರು ಹಾಕಿದ ಆಸ್ಟ್ರೇಲಿಯಾ ಫ್ಯಾನ್ಸ್

ಆಸ್ಟ್ರೇಲಿಯಾ ತಂಡ ಈ ಬಾರಿಯ ವಿಶ್ವಕಪ್ ಟೂರ್ನಿಯಲ್ಲಿ ಸತತ ಎರಡು ಸೋಲು ಕಂಡಿದೆ. ವಿಶ್ವಕಪ್ ಗೆಲ್ಲುವ ನೆಚ್ಚಿನ ತಂಡವಾಗಿ ಗುರುತಿಸಿಕೊಂಡಿದ್ದ ಆಸ್ಟ್ರೇಲಿಯಾ ತಂಡ ಆರಂಭಿಕ ಎರಡು ಪಂದ್ಯಗಳಲ್ಲಿಯೂ ಹೀನಾಯ ಸೋಲು ಕಂಡು ಆಘಾತ ಅನುಭವಿಸಿದೆ. ಭಾರತದ ವಿರುದ್ಧದ ಸೋಲಿನ ಬಳಿಕ ದಕ್ಷಿಣ ಆಫ್ರಿಕಾ ತಂಡದ ವಿರುದ್ಧ ಅದಕ್ಕಿಂತಲೂ ಹೀನಾಯ ಸೋಲು ಅನುಭವಿಸಿದೆ. ಈ ಸೋಲು ಆಸ್ಟ್ರೇಲಿಯಾ ತಂಡದ ಆಟಗಾರರು ಹಾಗೂ ಅಭಿಮಾನಿಗಳನ್ನು ಇನ್ನಿಲ್ಲದಂತೆ ಕುಗ್ಗಿಸಿರುವುದರಲ್ಲಿ ಅನುಮಾನವಿಲ್ಲ.

ಲಕ್ನೋದ ಏಕಾನ ಕ್ರೀಡಾಂಗಣದಲ್ಲಿ ಎಲ್ಲಾ ವಿಭಾಗದಲ್ಲಿಯೂ ಆಸ್ಟ್ರೇಲಿಯಾ ದಕ್ಷಿಣ ಆಫ್ರಿಕಾ ತಂಡಕ್ಕಿಂತ ದೊಡ್ಡ ಅಂತರದಲ್ಲಿ ಹಿಂದುಳಿಯಿತು. ಮೊದಲಿಗೆ ಬೌಲಿಂಗ್‌ ಹಾಗೂ ಫೀಲ್ಡಿಂಗ್‌ನಲ್ಲಿ ಹೀನಾಯ ಪ್ರದರ್ಶನ ನೀಡಿದ ಆಸ್ಟ್ರೇಲಿಯಾ ನಂತರ ಬ್ಯಾಟಿಂಗ್‌ನಲ್ಲಿಯೂ ಅತ್ಯಂತ ಕಳಪೆ ಪ್ರದರ್ಶನ ನೀಡಿತು. ಹೀಗಾಗಿ ಬೃಹತ್ ಅಂತರದ ಸೋಲು ಅನುಭವಿಸಿತು. ಈ ಸೋಲಿನ ನಂತರ ಕ್ರೀಡಾಂಗಣದಲ್ಲಿ ಆಸ್ಟ್ರೇಲಿಯಾದ ಅಭಿಮಾನಿಗಳು ಕಣ್ಣೀರು ಹಾಕಿದ್ದಾರೆ.

AUS vs SA World Cup Match: Devastated Australian Fans Shed Tears After Loss Against South Africa

ಲಕ್ನೋದ ಏಕಾನ ಕ್ರೀಡಾಂಗಣದಲ್ಲಿ ನಡೆದ ದಕ್ಷಿಣ ಆಫ್ರಿಕಾ ವಿರುದ್ಧದ ಈ ಲೀಗ್ ಹಂತದ ಪಂದ್ಯದಲ್ಲಿ ಆಸ್ಟ್ರೇಲಿಯಾ 134 ರನ್‌ಗಳಿಂದ ಸೋಲು ಅನುಭವಿಸಿತು. ಆಸ್ಟ್ರೇಲಿಯಾ ತಂಡದ ಈ ಸೋಲಿನ ಬೆನ್ನಲ್ಲೇ ಸ್ಟೇಡಿಯಂನಲ್ಲಿದ್ದ ಕೆಲ ಅಭಿಮಾನಿಗಳು ಆಸ್ಟ್ರೇಲಿಯಾದ ಬೆಂಬಲಿಗರನ್ನು ಕೆಣಕಿದ್ದಾರೆ. ಇದರಿಂದ ಬೇಸರಗೊಂಡ ಅಭಿಮಾನಿಯೊಬ್ಬರು ಮೈದಾನದಲ್ಲಿಯೇ ಕಣ್ಣೀರು ಹಾಕಿದ್ದಾರೆ.

ಆಸ್ಟ್ರೇಲಿಯಾ: ಡೇವಿಡ್ ವಾರ್ನರ್, ಮಿಚೆಲ್ ಮಾರ್ಷ್, ಸ್ಟೀವನ್ ಸ್ಮಿತ್, ಮಾರ್ನಸ್ ಲ್ಯಾಬುಸ್ಚಾಗ್ನೆ, ಜೋಶ್ ಇಂಗ್ಲಿಸ್ (ವಿಕೆಟ್ ಕೀಪರ್), ಗ್ಲೆನ್ ಮ್ಯಾಕ್ಸ್‌ವೆಲ್, ಮಾರ್ಕಸ್ ಸ್ಟೊಯಿನಿಸ್, ಪ್ಯಾಟ್ ಕಮ್ಮಿನ್ಸ್ (ನಾಯಕ), ಮಿಚೆಲ್ ಸ್ಟಾರ್ಕ್, ಆಡಮ್ ಝಂಪಾ, ಜೋಶ್ ಹ್ಯಾಜಲ್‌ವುಡ್
ಬೆಂಚ್: ಅಲೆಕ್ಸ್ ಕ್ಯಾರಿ, ಕ್ಯಾಮೆರಾನ್ ಗ್ರೀನ್, ಸೀನ್ ಅಬಾಟ್, ಟ್ರಾವಿಸ್ ಹೆಡ್

ದಕ್ಷಿಣ ಆಫ್ರಿಕಾ ಆಡುವ ಬಳಗ: ಕ್ವಿಂಟನ್ ಡಿ ಕಾಕ್ (ವಿಕೆಟ್ ಕೀಪ್), ಟೆಂಬಾ ಬವುಮಾ (ನಾಯಕ), ರಾಸ್ಸಿ ವ್ಯಾನ್ ಡೆರ್ ಡಸ್ಸೆನ್, ಐಡೆನ್ ಮಾರ್ಕ್ರಾಮ್, ಹೆನ್ರಿಚ್ ಕ್ಲಾಸೆನ್, ಡೇವಿಡ್ ಮಿಲ್ಲರ್, ಮಾರ್ಕೊ ಜಾನ್ಸೆನ್, ಕೇಶವ್ ಮಹಾರಾಜ್, ಲುಂಗಿ ಎನ್ಗಿಡಿ, ಕಗಿಸೊ ರಬಾಡ, ತಬ್ರೈಜ್ ಶಮ್ಸಿ
ಬೆಂಚ್: ಜೆರಾಲ್ಡ್ ಕೋಟ್ಜಿ, ಲಿಜಾಡ್ ವಿಲಿಯಮ್ಸ್, ರೀಜಾ ಹೆಂಡ್ರಿಕ್ಸ್, ಆಂಡಿಲ್ ಫೆಹ್ಲುಕ್ವಾಯೊ

Story first published: Friday, October 13, 2023, 11:00 [IST]
Other articles published on Oct 13, 2023
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+