ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

ಶ್ರೀಲಂಕಾ ವಿರುದ್ಧದ 2ನೇ ಟೆಸ್ಟ್‌ನಿಂದ ಹೊರಬಿದ್ದ ಆಸಿಸ್ ಸ್ಪಿನ್ನರ್ ಆಷ್ಟನ್ ಅಗರ್

Aus vs SL: Ashton Agar ruled out of second Test match against Sri Lanka Jon Holland replace in squad

ಮೊದಲ ಟೆಸ್ಟ್‌ನಲ್ಲಿ ಆಸ್ಟ್ರೇಲಿಯಾ ಶ್ರೀಲಂಕಾ ವಿಎಉದ್ಧ ಭರ್ಜರಿ ಪ್ರದರ್ಶನ ನಿಡಿ ಗೆಲುವು ಸಾಧಿಸಿದೆ. ಮೂರನೇ ದಿನದಲ್ಲಿಯೇ ಆಸ್ಟ್ರೇಲಿಯಾ ಗೆಲುವು ಸಾಧಿಸುವ ಮೂಲಕ ಮತ್ತೆ ಶ್ರೀಲಂಕಾ ವಿರುದ್ಧ ತಿರುಗಿ ಬೀಳುವಲ್ಲಿ ಯಶಸ್ವಿಯಾಗಿದೆ. ಟೆಸ್ಟ್ ಸರಣಿಯಲ್ಲಿ ವೈಟ್‌ವಾಶ್ ಮೂಲಕ ಸರಣಿ ಗೆಲ್ಲುವ ಲೆಕ್ಕಾಚಾರ ಹಾಕೊಕೊಂಡಿರುವ ಆಸ್ಟ್ರೇಲಿಯಾ ತಂಡಕ್ಕೆ ಸಣ್ಣ ಹಿನ್ನಡೆಯೊಂದು ಉಂಟಾಗಿದೆ.

ಆಸ್ಟ್ರೇಲಿಯಾ ತಂಡದ ಪ್ರಮುಖ ಸ್ಪಿನ್ನರ್ ಆಷ್ಟನ್ ಅಗರ್ ಗಾಯಕ್ಕೆ ಒಳಗಾಗಿದ್ದು ಚೇತರಿಸಿಕೊಳ್ಳುವಲ್ಲಿ ವಿಫಲವಾಗಿದ್ದಾರೆ. ಹೀಗಾಗಿ ಎರಡನೇ ಟೆಸ್ಟ್ ಪಂದ್ಯಕ್ಕೂ ಅಷ್ಟನ್ ಅಗರ್ ಅಲಭ್ಯವಾಗಲಿದ್ದಾರೆ. ಈ ಬಗ್ಗೆ ಶನಿವಾರ ಕ್ರಿಕೆಟ್ ಆಸ್ಟ್ರೇಲಿಯಾ ಅಧಿಕೃತವಾಗಿ ಮಾಹಿತಿ ನೀಡಿದೆ. ಹೀಗಾಗಿ ಆಷ್ಟನ್ ಅಗರ್ ಬದಲಿಗೆ ಜಾನ್ ಹೊಲಾಂಡ್ ಅವರನ್ನು ಸ್ಕ್ವಾಡ್‌ಗೆ ಸೇರಿಸಿಕೊಳ್ಳಲಾಗಿದೆ.

ಕಳೆದ ಒಂದು ವರ್ಷದಲ್ಲಿ ಟೀಮ್ ಇಂಡಿಯಾದ ನಾಯಕರಾಗಿ ನೇಮಕಗೊಂಡ 8 ಆಟಗಾರರ ಪಟ್ಟಿಕಳೆದ ಒಂದು ವರ್ಷದಲ್ಲಿ ಟೀಮ್ ಇಂಡಿಯಾದ ನಾಯಕರಾಗಿ ನೇಮಕಗೊಂಡ 8 ಆಟಗಾರರ ಪಟ್ಟಿ

ಪಾಕ್ ಪ್ರವಾಸದಲ್ಲಿಯೂ ಆಡಿರಲಿಲ್ಲ ಅಗರ್

ಪಾಕ್ ಪ್ರವಾಸದಲ್ಲಿಯೂ ಆಡಿರಲಿಲ್ಲ ಅಗರ್

ಇನ್ನು ಆಷ್ಟನ್ ಅಗರ್ ಆಸ್ಟ್ರೇಲಿಯಾ ತಂಡ ಈ ವರ್ಷಾರಂಭದಲ್ಲಿ ಪಾಕಿಸ್ತಾನ ಪ್ರವಾಸ ಕೈಗೊಂಡ ಸಂದರ್ಭದಲ್ಲಿಯೂ ಒಂದೂ ಪಂದ್ಯವನ್ನು ಆಡಿರಲಿಲ್ಲ. ವೈಟ್‌ಬಾಲ್ ಸರಣಿಯ ಸಂದರ್ಭದಲ್ಲಿ ಆಷ್ಟನ್ ಕೋವಿಡ್‌ಗೆ ತುತ್ತಾಗಿ ಸರಣಿಯಿಂದ ಹೊರಗುಳಿದಿದ್ದರು. ಇನ್ನು ಶ್ರೀಲಂಕಾ ವಿರುದ್ಧದ ಟೆಸ್ಟ್ ಸರಣಿಯ ಮೊದಲ ಪಂದ್ಯದಲ್ಲಿ ಆಷ್ಟನ್ ಅಗರ್ ಬದಲಿಗೆ ಮಿಚೆಲ್ ಸ್ವೆಪ್ಸನ್ ಅವರನ್ನು ಆಡಿಸಲಾಗಿತ್ತು

ಸ್ಥಾನ ಉಳಿಸಿಕೊಳ್ಳಲಿದ್ದಾರೆ ಸ್ವೆಪ್ಸನ್

ಸ್ಥಾನ ಉಳಿಸಿಕೊಳ್ಳಲಿದ್ದಾರೆ ಸ್ವೆಪ್ಸನ್

ಆಷ್ಟನ್ ಅಗರ್ ಎರಡನೇ ಪಂದ್ಯಕ್ಕೆ ಅಲಭ್ಯವಾಗುತ್ತಿರುವ ಕಾರಣ ಮತ್ತೋರ್ವ ಸ್ಪಿನ್ನರ್ ಮಿಚೆಲ್ ಸ್ವೆಪ್ಸನ್ ತಂಡದಲ್ಲಿ ಸ್ಥಾನವನ್ನು ಉಳಿಸಿಕೊಳ್ಳುವ ಸಾಧ್ಯತೆ ಹೆಚ್ಚಿದೆ. ಲೆಗ್ ಸ್ಪಿನ್ನರ್ ಸ್ವೆಪ್ಸಿನ್ ಮೊದಲ ಪಂದ್ಯದಲ್ಲಿ ಉತ್ತಮ ಬೌಲಿಂಗ್ ಪ್ರದರ್ಶನ ನಿಡಿದ್ದರು. ಮೊದಲ ಇನ್ನಿಂಗ್ಸ್‌ನಲ್ಲಿ ಮೂರು ವಿಕೆಟ್ ಸಂಪಾದಿಸಿದ್ದ ಅವರು ಎರಡನೇ ಇನ್ನಿಂಗ್ಸ್‌ನಲ್ಲಿ ಎರಡು ವಿಕೆಟ್ ಪಡೆದಿದ್ದರು.

ಮೊದಲ ಪಂದ್ಯದಲ್ಲಿ ಭರ್ಜರಿ ಗೆಲುವು

ಮೊದಲ ಪಂದ್ಯದಲ್ಲಿ ಭರ್ಜರಿ ಗೆಲುವು

ಆಸ್ಟ್ರೇಲಿಯಾ ಕ್ರಿಕೆಟ್ ತಂಡ ಸದ್ಯ ಶ್ರೀಲಂಕಾ ವಿರುದ್ಧ ಟೆಸ್ಟ್ ಸರಣಿಯನ್ನು ಆಡುತ್ತಿದೆ. ಮೊದಲ ಪಂದ್ಯ ಈಗಾಗಲೇ ಮುಕ್ತಾಯವಾಗಿದ್ದು ಮೂರು ದಿನದಲ್ಲಿಯೇ ಶ್ರಿಲಂಕಾ ತಂಡವನ್ನು ಆಸಿಸ್ ಪಡೆ ಸುಲಭವಾಗಿ ಮಣಿಸುವಲ್ಲಿ ಯಶಸ್ವಿಯಾಗಿದೆ. ಈ ಮೂಲಕ ಎರಡು ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಪ್ಯಾಟ್ ಕಮ್ಮಿನ್ಸ್ ಪಡೆ ಮುನ್ನಡೆ ಸಾಧಿಸುವಲ್ಲಿ ಯಶಸ್ವಿಯಾಗಿದೆ.

ಆಸ್ಟ್ರೇಲಿಯಾ ಸ್ಕ್ವಾಡ್ ಹೀಗಿದೆ

ಆಸ್ಟ್ರೇಲಿಯಾ ಸ್ಕ್ವಾಡ್ ಹೀಗಿದೆ

ಉಸ್ಮಾನ್ ಖವಾಜಾ, ಡೇವಿಡ್ ವಾರ್ನರ್, ಮಾರ್ನಸ್ ಲ್ಯಾಬುಶೈನ್, ಸ್ಟೀವ್ ಸ್ಮಿತ್, ಟ್ರಾವಿಸ್ ಹೆಡ್, ಕ್ಯಾಮೆರಾನ್ ಗ್ರೀನ್, ಅಲೆಕ್ಸ್ ಕ್ಯಾರಿ (ವಿಕೆಟ್ ಕೀಪರ್), ಪ್ಯಾಟ್ ಕಮಿನ್ಸ್ (ನಾಯಕ), ಮಿಚೆಲ್ ಸ್ಟಾರ್ಕ್, ನಾಥನ್ ಲಿಯಾನ್, ಮಿಚೆಲ್ ಸ್ವೆಪ್ಸನ್, ಮಿಚೆಲ್ ಮಾರ್ಷ್, ಜೋಶ್ ಹ್ಯಾಜಲ್ವುಡ್, ಗ್ಲೆನ್ ಮ್ಯಾಕ್ಸ್‌ವೆಲ್, ಜಾನ್ ಹಾಲೆಂಡ್ , ಸ್ಕಾಟ್ ಬೋಲ್ಯಾಂಡ್, ಜೋಶ್ ಇಂಗ್ಲಿಸ್

Story first published: Saturday, July 2, 2022, 18:51 [IST]
Other articles published on Jul 2, 2022
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X