
ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿ ಮುಕ್ತಾಯವಾದ ಬೆನ್ನಲ್ಲೇ ಆಸ್ಟ್ರೇಲಿಯಾ ಶ್ರೀಲಂಕಾ ಪ್ರವಾಸವನ್ನು ಕೈಗೊಂಡಿದ್ದು, ಇತ್ತಂಡಗಳ ನಡುವೆ 3 ಪಂದ್ಯಗಳ ಟಿ ಟ್ವೆಂಟಿ ಸರಣಿ, 5 ಪಂದ್ಯಗಳ ಏಕದಿನ ಸರಣಿ ಹಾಗೂ 2 ಪಂದ್ಯಗಳ ಟೆಸ್ಟ್ ಸರಣಿ ಆಯೋಜನೆಗೊಂಡಿದೆ.
ಇನ್ನು ಈ ಪೈಕಿ ಈಗಾಗಲೇ ಟಿ ಟ್ವೆಂಟಿ ಸರಣಿ ಮುಕ್ತಾಯಗೊಂಡಿದ್ದು, ಆಸ್ಟ್ರೇಲಿಯಾ 2 - 1 ಅಂತರದಿಂದ ಸರಣಿಯನ್ನು ಗೆದ್ದು ಬೀಗಿದೆ. ಹೀಗೆ ಟಿ ಟ್ವೆಂಟಿ ಸರಣಿ ಮುಕ್ತಾಯವಾದ ನಂತರ ಇದೀಗ ಇತ್ತಂಡಗಳ ನಡುವಿನ 5 ಪಂದ್ಯಗಳ ಏಕದಿನ ಸರಣಿ ಇಂದಿನಿಂದ ಆರಂಭಗೊಳ್ಳುತ್ತಿದ್ದು, ಪ್ರಥಮ ಪಂದ್ಯ ಪಲ್ಲೆಕೆಲೆ ಅಂತರರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆಯುತ್ತಿದೆ.
ಈ ಪಂದ್ಯದಲ್ಲಿ ಟಾಸ್ ಗೆದ್ದಿರುವ ಶ್ರೀಲಂಕಾ ತಂಡದ ನಾಯಕ ದಾಸನ್ ಶನಕ ಮೊದಲು ಬ್ಯಾಟಿಂಗ್ ಮಾಡುವ ಆಯ್ಕೆಯನ್ನು ಆಯ್ದುಕೊಂಡಿದ್ದಾರೆ.
ಆಸ್ಟ್ರೇಲಿಯಾ ಮತ್ತು ಶ್ರೀಲಂಕಾ ತಂಡಗಳ ನಡುವಿನ ಪ್ರಥಮ ಏಕದಿನ ಪಂದ್ಯದ ಲೈವ್ ಸ್ಕೋರ್ ಕೆಳಕಂಡಂತಿದೆ
ಆಡುವ ಬಳಗಗಳು:
ಆಸ್ಟ್ರೇಲಿಯಾ ಆಡುವ ಬಳಗ: ಡೇವಿಡ್ ವಾರ್ನರ್, ಆರನ್ ಫಿಂಚ್ (ನಾಯಕ), ಸ್ಟೀವನ್ ಸ್ಮಿತ್, ಮಾರ್ನಸ್ ಲ್ಯಾಬುಸ್ಚಾಗ್ನೆ, ಗ್ಲೆನ್ ಮ್ಯಾಕ್ಸ್‌ವೆಲ್, ಮಾರ್ಕಸ್ ಸ್ಟೊಯಿನಿಸ್, ಅಲೆಕ್ಸ್ ಕ್ಯಾರಿ (ವಿಕೆಟ್ ಕೀಪರ್), ಆಷ್ಟನ್ ಅಗರ್, ಪ್ಯಾಟ್ ಕಮ್ಮಿನ್ಸ್, ಜ್ಯೆ ರಿಚರ್ಡ್‌ಸನ್, ಜೋಶ್ ಹ್ಯಾಜಲ್‌ವುಡ್
ಶ್ರೀಲಂಕಾ ಆಡುವ ಬಳಗ: ಪಾತುಮ್ ನಿಸ್ಸಾಂಕ, ದನುಷ್ಕ ಗುಣತಿಲಕ, ಕುಸಲ್ ಮೆಂಡಿಸ್ (ವಿಕೆಟ್ ಕೀಪರ್), ಚರಿತ್ ಅಸಲಂಕ, ಧನಂಜಯ ಡಿ ಸಿಲ್ವ, ದಸುನ್ ಶನಕ (ನಾಯಕ), ವನಿಂದು ಹಸರಂಗ, ಚಾಮಿಕ ಕರುಣಾರತ್ನ, ದುಷ್ಮಂತ ಚಮೀರ, ದುನಿತ್ ವೆಲ್ಲಲಾಗೆ, ಮಹೇಶ್ ತೀಕ್ಷಣ