AUS vs SL: ಎರಡನೇ ಟೆಸ್ಟ್ ಪಂದ್ಯದ ಟಾಸ್ ವರದಿ ಮತ್ತು ಲೈವ್ ಸ್ಕೋರ್ ಇಲ್ಲಿದೆ

ಆಸ್ಟ್ರೇಲಿಯಾ ಶ್ರೀಲಂಕಾ ಪ್ರವಾಸವನ್ನು ಕೈಗೊಂಡಿದ್ದು, ಸಿಂಹಳೀಯರ ವಿರುದ್ಧ 3 ಪಂದ್ಯಗಳ ಟಿ ಟ್ವೆಂಟಿ ಸರಣಿ ಹಾಗೂ 5 ಪಂದ್ಯಗಳ ಏಕದಿನ ಸರಣಿಗಳಲ್ಲಿ ಈಗಾಗಲೇ ಕಣಕ್ಕಿಳಿದಿದ್ದು, ಇದೀಗ 2 ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಸೆಣಸಾಟವನ್ನು ನಡೆಸುತ್ತಿದೆ.
ಟೆಸ್ಟ್ ಸರಣಿಯ ಪ್ರಥಮ ಪಂದ್ಯ ಈಗಾಗಲೇ ಮುಕ್ತಾಯಗೊಂಡಿದ್ದು, ಶ್ರೀಲಂಕಾದ ಗಲ್ಲೆ ಅಂತರರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆದ ಈ ಪಂದ್ಯದಲ್ಲಿ ಆಸ್ಟ್ರೇಲಿಯಾ ಶ್ರೀಲಂಕಾ ವಿರುದ್ಧ 10 ವಿಕೆಟ್‍ಗಳ ಬೃಹತ್ ಗೆಲುವನ್ನು ಸಾಧಿಸಿತು. ಹೀಗೆ ಟೆಸ್ಟ್ ಸರಣಿಯಲ್ಲಿ ಆಸ್ಟ್ರೇಲಿಯಾ ತಂಡವು 1-0 ಅಂತರದ ಮುನ್ನಡೆಯನ್ನು ಕಾಯ್ದುಕೊಂಡಿದ್ದು, ಇತ್ತಂಡಗಳ ನಡುವಿನ ಎರಡನೇ ಟೆಸ್ಟ್ ಪಂದ್ಯ ಇಂದಿನಿಂದ ( ಜುಲೈ 8 ) ಆರಂಭಗೊಂಡಿದೆ.
ಈ ಪಂದ್ಯ ಕೂಡ ಗಾಲ್ಲೆ ಅಂತರರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿಯೇ ನಡೆಯುತ್ತಿದ್ದು, ಟಾಸ್ ಗೆದ್ದ ಆಸ್ಟ್ರೇಲಿಯಾ ಮೊದಲು ಬ್ಯಾಟಿಂಗ್ ಮಾಡುವ ಆಯ್ಕೆಯನ್ನು ಆರಿಸಿದೆ. ಆಸ್ಟ್ರೇಲಿಯಾ ಪರ ಮೊದಲನೇ ಇನ್ನಿಂಗ್ಸ್‌ನಲ್ಲಿ ಉಸ್ಮಾನ್ ಖವಾಜಾ ಮತ್ತು ಡೇವಿಡ್ ವಾರ್ನರ್ ಆರಂಭಿಕ ಆಟಗಾರರಾಗಿ ಕಣಕ್ಕಿಳಿದರು. ಡೇವಿಡ್ ವಾರ್ನರ್ 5 ರನ್‌ಗಳಿಗೆ ಔಟ್ ಆಗಿದ್ದು, 15 ರನ್‌ಗಳಿಗೆ ತನ್ನ ಮೊದಲ ಪ್ರಮುಖ ವಿಕೆಟ್ ಕಳೆದುಕೊಂಡ ಆಸ್ಟ್ರೇಲಿಯಾ ಹಿನ್ನಡೆಯನ್ನು ಅನುಭವಿಸಿದೆ. ಇತ್ತಂಡಗಳ ನಡುವಿನ ಈ ಪಂದ್ಯ ಲೈವ್ ಸ್ಕೋರ್ ಕೆಳಕಂಡಂತಿದೆ.

ಆಸ್ಟ್ರೇಲಿಯಾ ಪ್ಲೇಯಿಂಗ್ ಇಲೆವೆನ್
ಡೇವಿಡ್ ವಾರ್ನರ್, ಉಸ್ಮಾನ್ ಖವಾಜಾ, ಮಾರ್ನಸ್ ಲ್ಯಾಬುಸ್ಚಾಗ್ನೆ, ಸ್ಟೀವನ್ ಸ್ಮಿತ್, ಟ್ರಾವಿಸ್ ಹೆಡ್, ಕ್ಯಾಮೆರಾನ್ ಗ್ರೀನ್, ಅಲೆಕ್ಸ್ ಕ್ಯಾರಿ (ವಿಕೆಟ್ ಕೀಪರ್), ಪ್ಯಾಟ್ ಕಮಿನ್ಸ್ (ನಾಯಕ), ಮಿಚೆಲ್ ಸ್ಟಾರ್ಕ್, ನಾಥನ್ ಲಿಯಾನ್, ಮಿಚೆಲ್ ಸ್ವೆಪ್ಸನ್

ಶ್ರೀಲಂಕಾ ಆಡುವ ಬಳಗ
ಪಾತುಮ್ ನಿಸ್ಸಾಂಕ, ದಿಮುತ್ ಕರುಣಾರತ್ನೆ (ನಾಯಕ), ಕುಸಾಲ್ ಮೆಂಡಿಸ್, ಏಂಜೆಲೊ ಮ್ಯಾಥ್ಯೂಸ್, ದಿನೇಶ್ ಚಾಂಡಿಮಲ್, ಕಮಿಂದು ಮೆಂಡಿಸ್, ನಿರೋಶನ್ ಡಿಕ್ವೆಲ್ಲಾ (ವಿಕೆಟ್ ಕೀಪರ್), ರಮೇಶ್ ಮೆಂಡಿಸ್, ಮಹೀಶ್ ತೀಕ್ಷಣ, ಪ್ರಭಾತ್ ಜಯಸೂರ್ಯ, ಕಸುನ್ ರಜಿತಾ

ಸರಣಿಗಳ ಫಲಿತಾಂಶ
3 ಪಂದ್ಯಗಳ ಟಿ ಟ್ವೆಂಟಿ ಸರಣಿಯಲ್ಲಿ ಆಸ್ಟ್ರೇಲಿಯಾ ಶ್ರೀಲಂಕಾ ವಿರುದ್ಧ 2-1 ಅಂತರದ ಜಯ ಸಾಧಿಸಿ ಸರಣಿಯನ್ನು ವಶಪಡಿಸಿಕೊಂಡಿತ್ತು. ಹಾಗೂ ನಂತರ ನಡೆದ 5 ಪಂದ್ಯಗಳ ಏಕದಿನ ಸರಣಿಯಲ್ಲಿ ಶ್ರೀಲಂಕಾ ಪ್ರವಾಸಿ ಆಸ್ಟ್ರೇಲಿಯಾ ವಿರುದ್ಧ 3-2 ಅಂತರದಲ್ಲಿ ಗೆದ್ದು ಸರಣಿಯನ್ನು ವಶಪಡಿಸಿಕೊಂಡಿತ್ತು. ಸದ್ಯ ನಡೆಯುತ್ತಿರುವ 2 ಪಂದ್ಯಗಳ ಟೆಸ್ಟ್ ಸರಣಿಯ ಪ್ರಥಮ ಪಂದ್ಯ ಗೆದ್ದಿರುವ ಆಸ್ಟ್ರೇಲಿಯಾ ಮುನ್ನಡೆ ಕಾಯ್ದುಕೊಂಡಿದ್ದು ಎರಡನೇ ಟೆಸ್ಟ್ ಪಂದ್ಯದಲ್ಲಿ ಆಸ್ಟ್ರೇಲಿಯಾ ಗೆದ್ದರೆ ಅಥವಾ ಡ್ರಾ ಆದರೆ ಸರಣಿ ಆಸ್ಟ್ರೇಲಿಯಾ ಕೈವಶವಾಗಲಿದೆ ಹಾಗೂ ಈ ಪಂದ್ಯದಲ್ಲಿ ಶ್ರೀಲಂಕಾ ಗೆದ್ದರೆ ಸರಣಿ ಟೈ ಆಗಲಿದೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications