Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

AUS vs SL: ತೃತೀಯ ಏಕದಿನ ಪಂದ್ಯದ ಟಾಸ್ ವರದಿ ಮತ್ತು ಲೈವ್ ಸ್ಕೋರ್ ಮಾಹಿತಿ ಇಲ್ಲಿದೆ

AUS vs SL: Australia vs Sri Lanka 3rd ODI toss report and live score

ಐಪಿಎಲ್ ಹದಿನೈದನೇ ಆವೃತ್ತಿ ಮುಕ್ತಾಯವಾದ ಬೆನ್ನಲ್ಲೇ ಆಸ್ಟ್ರೇಲಿಯಾ ಶ್ರೀಲಂಕಾ ಪ್ರವಾಸವನ್ನು ಕೈಗೊಂಡಿದ್ದು, ಮೊದಲನೆಯದಾಗಿ ನಡೆದ 3 ಪಂದ್ಯಗಳ ಟಿ ಟ್ವೆಂಟಿ ಸರಣಿಯಲ್ಲಿ 2-1 ಅಂತರದಿಂದ ಆತಿಥೇಯ ಶ್ರೀಲಂಕಾಕ್ಕೆ ತವರಿನಲ್ಲಿಯೇ ಸೋಲುಣಿಸಿ ಇದೀಗ 5 ಪಂದ್ಯಗಳ ಏಕದಿನ ಸರಣಿಯಲ್ಲಿ ಸೆಣಸಾಟ ನಡೆಸುತ್ತಿದೆ.

ಇತ್ತಂಡಗಳ ನಡುವಿನ ಈ ಸರಣಿಯ ಮೊದಲೆರಡು ಪಂದ್ಯಗಳು ಈಗಾಗಲೇ ಮುಕ್ತಾಯಗೊಂಡಿದ್ದು, ಪ್ರಥಮ ಪಂದ್ಯದಲ್ಲಿ ಆಸ್ಟ್ರೇಲಿಯಾ ಜಯ ಸಾಧಿಸಿದ್ದರೆ, ದ್ವಿತೀಯ ಪಂದ್ಯದಲ್ಲಿ ಶ್ರೀಲಂಕಾ ಜಯ ಸಾಧಿಸಿ ಸರಣಿಯಲ್ಲಿ ಸಮಬಲ ಸಾಧಿಸಿದೆ. ಹೀಗಾಗಿ ಮೂರನೇ ಪಂದ್ಯ ಸಾಕಷ್ಟು ಕುತೂಹಲವನ್ನು ಕೆರಳಿಸಿದ್ದು ಯಾವ ತಂಡ ಗೆದ್ದು ಸರಣಿಯಲ್ಲಿ ಮುನ್ನಡೆ ಕಾಯ್ದುಕೊಳ್ಳಲಿದೆ ಎಂಬ ಪ್ರಶ್ನೆ ಎದ್ದಿದೆ.

ಇತ್ತಂಡಗಳ ನಡುವಿನ ತೃತೀಯ ಏಕದಿನ ಪಂದ್ಯ ಇಂದು ( ಜೂನ್ 19 ) ಕೊಲಂಬೋದ ಆರ್ ಪ್ರೇಮದಾಸ ಅಂತರರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ಜರುಗುತ್ತಿದ್ದು, ಟಾಸ್ ಗೆದ್ದಿರುವ ಆಸ್ಟ್ರೇಲಿಯಾ ತಂಡದ ನಾಯಕ ಆ್ಯರನ್ ಫಿಂಚ್ ಮೊದಲು ಬ್ಯಾಟಿಂಗ್ ಮಾಡುವ ಆಯ್ಕೆಯನ್ನು ಆರಿಸಿಕೊಂಡಿದ್ದಾರೆ.

ಆಸ್ಟ್ರೇಲಿಯಾ ಮತ್ತು ಶ್ರೀಲಂಕಾ ತಂಡಗಳ ನಡುವಿನ ತೃತೀಯ ಏಕದಿನ ಪಂದ್ಯದ ಲೈವ್ ಸ್ಕೋರ್ ಅಪ್ ಡೇಟ್ ಕೆಳಗಿದೆ.

1
53767

ಆಡುವ ಬಳಗಗಳು:

ಆಸ್ಟ್ರೇಲಿಯಾ: ಡೇವಿಡ್ ವಾರ್ನರ್, ಆರನ್ ಫಿಂಚ್ (ನಾಯಕ), ಮಿಚೆಲ್ ಮಾರ್ಷ್, ಮಾರ್ನಸ್ ಲ್ಯಾಬುಸ್ಚಾಗ್ನೆ, ಟ್ರಾವಿಸ್ ಹೆಡ್, ಅಲೆಕ್ಸ್ ಕ್ಯಾರಿ (ವಿಕೆಟ್ ಕೀಪರ್‌), ಗ್ಲೆನ್ ಮ್ಯಾಕ್ಸ್‌ವೆಲ್, ಕ್ಯಾಮರೂನ್ ಗ್ರೀನ್, ಜ್ಯೆ ರಿಚರ್ಡ್‌ಸನ್, ಮ್ಯಾಥ್ಯೂ ಕುಹ್ನೆಮನ್, ಜೋಶ್ ಹ್ಯಾಜಲ್‌ವುಡ್

ಶ್ರೀಲಂಕಾ: ಪಾತುಮ್ ನಿಸ್ಸಾಂಕ, ನಿರೋಶನ್ ಡಿಕ್ವೆಲ್ಲಾ (ವಿಕೆಟ್‍ ಕೀಪರ್‌ ), ಕುಸಲ್ ಮೆಂಡಿಸ್, ಧನಂಜಯ ಡಿ ಸಿಲ್ವ, ಚರಿತ್ ಅಸಲಂಕ, ದಸುನ್ ಶನಕ (ನಾಯಕ), ಚಾಮಿಕ ಕರುಣಾರತ್ನ, ದುನಿತ್ ವೆಲ್ಲಲಾಗೆ, ಜೆಫ್ರಿ ವಂಡರ್ಸೆ, ದುಷ್ಮಂತ ಚಮೀರ, ಮಹೀಶ್ ತೀಕ್ಷಣ

Dinesh Karthik ಹಾಗು Rohit ನಡುವೆ ನಡೆದ ಸಂಭಾಷಣೆ ಈಗ ವೈರಲ್ | *Cricket | OneIndia Kannada

Story first published: Sunday, June 19, 2022, 14:25 [IST]
Other articles published on Jun 19, 2022
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+