For Quick Alerts
ALLOW NOTIFICATIONS  
For Daily Alerts
 

AUS vs SL: ವೈಟ್‌ವಾಷ್ ಭೀತಿಯಲ್ಲಿ ಲಂಕಾ; ಅಂತಿಮ ಟಿ20ಯ ಟಾಸ್ ವರದಿ ಮತ್ತು ಲೈವ್ ಸ್ಕೋರ್ ಇಲ್ಲಿದೆ

AUS vs SL: Australia vs Sri Lanka 3rd T20I toss report, playing 11 and live score

ಈ ಬಾರಿಯ ಇಂಡಿಯನ್ ಪ್ರೀಮಿಯರ್ ಲೀಗ್ ಹದಿನೈದನೇ ಆವೃತ್ತಿ ಮುಕ್ತಾಯವಾದ ಬೆನ್ನಲ್ಲೇ ಆಸ್ಟ್ರೇಲಿಯಾ ಶ್ರೀಲಂಕಾ ಪ್ರವಾಸವನ್ನು ಕೈಗೊಂಡಿದ್ದು 3 ಪಂದ್ಯಗಳ ಟಿ ಟ್ವೆಂಟಿ ಸರಣಿ, 5 ಪಂದ್ಯಗಳ ಏಕದಿನ ಸರಣಿ ಹಾಗೂ 2 ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಕಣಕ್ಕಿಳಿಯುತ್ತಿದೆ.

ಇನ್ನು ಇತ್ತಂಡಗಳ ನಡುವೆ ಮೊದಲಿಗೆ 3 ಪಂದ್ಯಗಳ ಟಿ ಟ್ವೆಂಟಿ ಸರಣಿ ನಡೆದಿದ್ದು, ಈಗಾಗಲೇ ಮೊದಲೆರಡು ಪಂದ್ಯಗಳಲ್ಲಿ ಆತಿಥೇಯ ಶ್ರೀಲಂಕಾ ವಿರುದ್ಧ ಪ್ರವಾಸಿ ಆಸ್ಟ್ರೇಲಿಯ ತಂಡ ಜಯ ಸಾಧಿಸಿ 2-0 ಅಂತರದಲ್ಲಿ ಮುನ್ನಡೆ ಸಾಧಿಸುವುದರ ಜತೆಗೆ ಸರಣಿಯನ್ನು ವಶಪಡಿಸಿಕೊಂಡಿದೆ. ಹೀಗಾಗಿ ಇಂದು ಪಲ್ಲೆಕೆಲೆಯಲ್ಲಿ ನಡೆಯುತ್ತಿರುವ ಇತ್ತಂಡಗಳ ನಡುವಿನ ತೃತೀಯ ಟಿ ಟ್ವೆಂಟಿ ಪಂದ್ಯ ತುಸು ಕುತೂಹಲವನ್ನು ಮೂಡಿಸಿದ್ದು, ಈ ಪಂದ್ಯದಲ್ಲಿ ಶ್ರೀಲಂಕಾ ಜಯ ಸಾಧಿಸಿ ವೈಟ್ ವಾಷ್ ಮುಖಭಂಗದಿಂದ ಪಾರಾಗುತ್ತಾ ಅಥವಾ ಆಸ್ಟ್ರೇಲಿಯ ಈ ಪಂದ್ಯವನ್ನೂ ಗೆದ್ದು ತನ್ನ ಗೆಲುವಿನ ನಾಗಾಲೋಟವನ್ನು ಮುಂದುವರಿಸುತ್ತಾ ಎಂಬ ಪ್ರಶ್ನೆ ಎದ್ದಿದೆ.

ಸದ್ಯ ಈ ಪಂದ್ಯದಲ್ಲಿ ಟಾಸ್ ಗೆದ್ದಿರುವ ಆಸ್ಟ್ರೇಲಿಯಾ ತಂಡದ ನಾಯಕ ಆ್ಯರನ್ ಫಿಂಚ್ ಬ್ಯಾಟಿಂಗ್ ಆಯ್ದುಕೊಂಡಿದ್ದಾರೆ. ಪಂದ್ಯದ ಲೈವ್ ಸ್ಕೋರ್ ಅಪ್ ಡೇಟ್ ಈ ಕೆಳಕಂಡಂತಿದೆ.

1
53764

ಆಡುವ ಬಳಗಗಳು:

ಆಸ್ಟ್ರೇಲಿಯಾ ಆಡುವ ಬಳಗ: ಆರನ್ ಫಿಂಚ್ (ನಾಯಕ), ಡೇವಿಡ್ ವಾರ್ನರ್, ಜೋಶ್ ಇಂಗ್ಲಿಸ್, ಸ್ಟೀವನ್ ಸ್ಮಿತ್, ಗ್ಲೆನ್ ಮ್ಯಾಕ್ಸ್‌ವೆಲ್, ಮಾರ್ಕಸ್ ಸ್ಟೊಯಿನಿಸ್, ಮ್ಯಾಥ್ಯೂ ವೇಡ್ ( ವಿಕೆಟ್ ಕೀಪರ್‌ ), ಆಷ್ಟನ್ ಅಗರ್, ಝೈ ರಿಚರ್ಡ್ಸನ್, ಕೇನ್ ರಿಚರ್ಡ್ಸನ್, ಜೋಶ್ ಹ್ಯಾಜಲ್ವುಡ್

ಶ್ರೀಲಂಕಾ ಆಡುವ ಬಳಗ: ಪಾತುಮ್ ನಿಸ್ಸಾಂಕ, ದನುಷ್ಕ ಗುಣತಿಲಕ, ಚರಿತ್ ಅಸಲಂಕ, ಕುಸಲ್ ಮೆಂಡಿಸ್ (ವಿಕೆಟ್ ಕೀಪರ್‌), ಭಾನುಕ ರಾಜಪಕ್ಸೆ, ದಸುನ್ ಶನಕ (ನಾಯಕ), ವನಿಂದು ಹಸರಂಗ, ಚಾಮಿಕ ಕರುಣಾರತ್ನೆ, ದುಷ್ಮಂತ ಚಮೀರ, ಮಹೇಶ್ ತೀಕ್ಷಣ, ಪ್ರವೀಣ್ ಜಯವಿಕ್ರಮ

Story first published: Saturday, June 11, 2022, 19:20 [IST]
Other articles published on Jun 11, 2022
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+