For Quick Alerts
ALLOW NOTIFICATIONS  
For Daily Alerts
 

AUS vs SL 4ನೇ ಏಕದಿನ: ಮಾಡು ಇಲ್ಲವೇ ಮಡಿ ಪಂದ್ಯದಲ್ಲಿ ಗೆಲ್ಲುತ್ತಾ ಆಸ್ಟ್ರೇಲಿಯಾ? ಲೈವ್ ಸ್ಕೋರ್ ಇಲ್ಲಿದೆ

AUS vs SL: Australia vs Sri Lanka 4th ODI toss report and live score

ಐಪಿಎಲ್ ಟೂರ್ನಿ ಮುಕ್ತಾಯವಾದ ಬೆನ್ನಲ್ಲೇ ಶ್ರೀಲಂಕಾ ಪ್ರವಾಸವನ್ನು ಕೈಗೊಂಡಿರುವ ಆಸ್ಟ್ರೇಲಿಯಾ ಮೊದಲಿಗೆ ಸಿಂಹಳೀಯರ ವಿರುದ್ಧ 3 ಪಂದ್ಯಗಳ ಟಿ ಟ್ವೆಂಟಿ ಸರಣಿಯಲ್ಲಿ ಕಣಕ್ಕಿಳಿದು 2 -1 ಅಂತರದಲ್ಲಿ ಸರಣಿಯನ್ನು ಗೆದ್ದು ಬೀಗಿತ್ತು.

ಟಿ ಟ್ವೆಂಟಿ ಸರಣಿಯಲ್ಲಿ ಅಬ್ಬರಿಸಿದ್ದ ಆಸ್ಟ್ರೇಲಿಯಾ ನಂತರ ಆರಂಭವಾಗಿರುವ 5 ಪಂದ್ಯಗಳ ಏಕದಿನ ಸರಣಿಯ ಪ್ರಥಮ ಪಂದ್ಯದಲ್ಲಿಯೂ ಗೆದ್ದು ಶುಭಾರಂಭವನ್ನು ಮಾಡಿತ್ತು. ಆದರೆ ನಂತರ ನಡೆದ ಎರಡನೇ ಹಾಗೂ ಮೂರನೇ ಏಕದಿನ ಪಂದ್ಯಗಳಲ್ಲಿ ಆತಿಥೇಯ ಶ್ರೀಲಂಕಾ ಜಯ ಸಾಧಿಸುವುದರ ಮೂಲಕ ಪ್ರವಾಸಿ ಆಸ್ಟ್ರೇಲಿಯಾಗೆ ತಿರುಗೇಟು ನೀಡಿ ಸದ್ಯ 2 - 1 ಅಂತರದಿಂದ ಸರಣಿಯಲ್ಲಿ ಮುನ್ನಡೆಯನ್ನು ಕಾಯ್ದುಕೊಂಡಿದೆ.

ಸತತವಾಗಿ 2 ಜಯಗಳನ್ನು ಸಾಧಿಸಿರುವ ಶ್ರೀಲಂಕಾ ಬಲಿಷ್ಠ ಆಸ್ಟ್ರೇಲಿಯವನ್ನು ಎದುರಿಸುವ ಸಾಮರ್ಥ್ಯವನ್ನು ಹೆಚ್ಚಿಸಿಕೊಂಡಿದ್ದು ಇಂದು ( ಜೂನ್ 21 ) ನಡೆಯುತ್ತಿರುವ ನಾಲ್ಕನೇ ಏಕದಿನ ಪಂದ್ಯದಲ್ಲಿಯೂ ಗೆದ್ದು ತನ್ನ ಗೆಲುವಿನ ನಾಗಲೋಟವನ್ನು ಮುಂದುವರೆಸಿ ಸರಣಿಯನ್ನು ಕೈವಶ ಮಾಡಿಕೊಳ್ಳುತ್ತಾ ಅಥವಾ ಆಸ್ಟ್ರೇಲಿಯಾ ತಂಡ ಈ ಪಂದ್ಯದಲ್ಲಿ ಗೆದ್ದು ಕಮ್ ಬ್ಯಾಕ್ ಮಾಡಿ ಸರಣಿಯಲ್ಲಿ ಸಮಬಲ ಸಾಧಿಸುತ್ತಾ ಎಂಬ ಕುತೂಹಲ ಮೂಡಿದೆ.

ಹೀಗೆ ಸಾಕಷ್ಟು ರೋಚಕತೆಯನ್ನು ಹುಟ್ಟುಹಾಕಿರುವ ಆಸ್ಟ್ರೇಲಿಯಾ ಮತ್ತು ಶ್ರೀಲಂಕಾ ತಂಡಗಳ ನಡುವಿನ ಈ ನಾಲ್ಕನೇ ಏಕದಿನ ಪಂದ್ಯ ಕೊಲಂಬೊದ ಆರ್ ಪ್ರೇಮದಾಸ ಅಂತರರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ಆರಂಭಗೊಂಡಿದ್ದು, ಟಾಸ್ ಗೆದ್ದಿರುವ ಆಸ್ಟ್ರೇಲಿಯಾದ ನಾಯಕ ಆ್ಯರನ್ ಫಿಂಚ್ ಬೌಲಿಂಗ್ ಆಯ್ದುಕೊಂಡು ಆತಿಥೇಯ ಶ್ರೀಲಂಕಾ ತಂಡವನ್ನು ಮೊದಲು ಬ್ಯಾಟಿಂಗ್ ಮಾಡಲು ಆಹ್ವಾನಿಸಿದ್ದಾರೆ. ಈ ಪಂದ್ಯದಲ್ಲಿ ಆಸ್ಟ್ರೇಲಿಯಾ ಸೋತರೆ ಸರಣಿ ಶ್ರೀಲಂಕಾ ಕೈವಶವಾಗಲಿದ್ದು, ಆಸ್ಟ್ರೇಲಿಯಾ ಪಾಲಿಗೆ ಮಾಡು ಇಲ್ಲವೇ ಮಡಿ ಪಂದ್ಯವಾಗಿ ಪರಿಣಮಿಸಿದೆ.

ಆಸ್ಟ್ರೇಲಿಯಾ ಮತ್ತು ಶ್ರೀಲಂಕಾ ತಂಡಗಳ ನಡುವಿನ ನಾಲ್ಕನೇ ಏಕದಿನ ಪಂದ್ಯದ ಲೈವ್ ಸ್ಕೋರ್ ಇಲ್ಲಿದೆ:

1
53768

ಆಡುವ ಬಳಗಗಳು:

ಶ್ರೀಲಂಕಾ ಆಡುವ ಬಳಗ: ನಿರೋಶನ್ ಡಿಕ್ವೆಲ್ಲಾ ( ವಿಕೆಟ್ ಕೀಪರ್‌ ), ಪಾತುಮ್ ನಿಸ್ಸಾಂಕ, ಚರಿತ್ ಅಸಲಂಕ, ಕುಸಲ್ ಮೆಂಡಿಸ್, ಧನಂಜಯ ಡಿ ಸಿಲ್ವ, ದಸುನ್ ಶನಕ (ನಾಯಕ), ಚಾಮಿಕ ಕರುಣಾರತ್ನ, ವನಿಂದು ಹಸರಂಗ, ದುನಿತ್ ವೆಲ್ಲಲಾಗೆ, ಜೆಫ್ರಿ ವಂಡರ್ಸೆ, ಮಹೀಶ್ ತೀಕ್ಷಣ

ಆಸ್ಟ್ರೇಲಿಯಾ ಆಡುವ ಬಳಗ: ಆರನ್ ಫಿಂಚ್ (ನಾಯಕ), ಡೇವಿಡ್ ವಾರ್ನರ್, ಮಿಚೆಲ್ ಮಾರ್ಷ್, ಮಾರ್ನಸ್ ಲ್ಯಾಬುಸ್ಚಾಗ್ನೆ, ಟ್ರಾವಿಸ್ ಹೆಡ್, ಅಲೆಕ್ಸ್ ಕ್ಯಾರಿ (ವಿಕೆಟ್ ಕೀಪರ್‌), ಗ್ಲೆನ್ ಮ್ಯಾಕ್ಸ್‌ವೆಲ್, ಕ್ಯಾಮೆರಾನ್ ಗ್ರೀನ್, ಪ್ಯಾಟ್ ಕಮ್ಮಿನ್ಸ್, ಮ್ಯಾಥ್ಯೂ ಕುಹ್ನೆಮನ್, ಜೋಶ್ ಹ್ಯಾಜಲ್‌ವುಡ್

Story first published: Tuesday, June 21, 2022, 14:23 [IST]
Other articles published on Jun 21, 2022
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+