AUS vs SL ದ್ವಿತೀಯ ಏಕದಿನ ಪಂದ್ಯ: ಟಾಸ್ ವರದಿ ಮತ್ತು ಲೈವ್ ಸ್ಕೋರ್ ಮಾಹಿತಿ ಇಲ್ಲಿದೆ

ಇಂಡಿಯನ್ ಪ್ರೀಮಿಯರ್ ಲೀಗ್ ಹದಿನೈದನೇ ಆವೃತ್ತಿ ಮುಕ್ತಾಯವಾದ ಬೆನ್ನಲ್ಲೇ ಆಸ್ಟ್ರೇಲಿಯಾ ಶ್ರೀಲಂಕಾ ಪ್ರವಾಸವನ್ನು ಕೈಗೊಂಡಿದ್ದು, ಮೂರು ಪಂದ್ಯಗಳ ಟಿ ಟ್ವೆಂಟಿ ಸರಣಿ, ಐದು ಪಂದ್ಯಗಳ ಏಕದಿನ ಸರಣಿ ಹಾಗೂ ಎರಡು ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಸೆಣಸಾಟ ನಡೆಸುತ್ತಿದ್ದು, ಇತ್ತಂಡಗಳ ನಡುವಿನ ಟಿ ಟ್ವೆಂಟಿ ಸರಣಿ ಮುಕ್ತಾಯಗೊಂಡಿದೆ.
ಮೊದಲಿಗ ನಡೆದ ಟಿ ಟ್ವೆಂಟಿ ಸರಣಿಯಲ್ಲಿ 2-1ರ ಅಂತರದ ಜಯವನ್ನು ಸಾಧಿಸಿದ್ದ ಆಸ್ಟ್ರೇಲಿಯಾ ಇದೀಗ ಏಕದಿನ ಸರಣಿಯಲ್ಲಿ ಕಣಕ್ಕಿಳಿದಿದೆ. ಈ ಸರಣಿಯ ಪ್ರಥಮ ಪಂದ್ಯದಲ್ಲಿ ಗೆದ್ದು ಮುನ್ನಡೆ ಸಾಧಿಸಿರುವ ಕಾಂಗರೂಗಳು ಇಂದು ( ಜೂನ್ 16 ) ದ್ವಿತೀಯ ಪಂದ್ಯದಲ್ಲಿ ಕಣಕ್ಕಿಳಿದಿದೆ. ಪಲ್ಲೆಕೆಲೆ ಅಂತರರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಈ ಪಂದ್ಯದಲ್ಲಿ ಟಾಸ್ ಗೆದ್ದಿರುವ ಆಸ್ಟ್ರೇಲಿಯಾ ತಂಡದ ನಾಯಕ ಆರನ್ ಫಿಂಚ್ ಬೌಲಿಂಗ್ ಆಯ್ದುಕೊಂಡು ಅತಿಥೇಯ ಶ್ರೀಲಂಕಾ ತಂಡವನ್ನು ಮೊದಲು ಬ್ಯಾಟಿಂಗ್ ಮಾಡಲು ಆಹ್ವಾನಿಸಿದ್ದಾರೆ.
ಇತ್ತ ಮೊದಲ ಏಕದಿನ ಪಂದ್ಯದಲ್ಲಿ ರೋಚಕ ಹಣಾಹಣಿಯಲ್ಲಿ ಪೈಪೋಟಿ ನೀಡಿ ಸೋತಿದ್ದ ಶ್ರೀಲಂಕಾ ಇಂದಿನ ಪಂದ್ಯದಲ್ಲಿ ಗೆದ್ದು, ಸರಣಿಯಲ್ಲಿ ಸಮಬಲ ಕಾಯ್ದುಕೊಳ್ಳುವ ಗುರಿಯನ್ನು ಹೊಂದಿದ್ದು, ಪಂದ್ಯದ ಲೈವ್ ಸ್ಕೋರ್ ಈ ಕೆಳಕಂಡಂತಿದೆ.
ಆಡುವ ಬಳಗ:
ಶ್ರೀಲಂಕಾ: ದನುಷ್ಕ ಗುಣತಿಲಕ, ಪಾತುಂ ನಿಸ್ಸಾಂಕ, ಚರಿತ್ ಅಸಲಂಕ, ಕುಸಲ್ ಮೆಂಡಿಸ್ ( ವಿಕೆಟ್ ಕೀಪರ್ ), ಧನಂಜಯ ಡಿ ಸಿಲ್ವ, ದಸುನ್ ಶನಕ (ನಾಯಕ), ಚಾಮಿಕ ಕರುಣಾರತ್ನ, ಜೆಫ್ರಿ ವಂಡರ್ಸೆ, ದುಷ್ಮಂತ ಚಮೀರ, ಮಹೀಶ್ ತೀಕ್ಷಣ, ದುನಿತ್ ವೆಲ್ಲಲಗೆ
ಆಸ್ಟ್ರೇಲಿಯಾ: ಡೇವಿಡ್ ವಾರ್ನರ್, ಆರನ್ ಫಿಂಚ್ (ನಾಯಕ), ಸ್ಟೀವನ್ ಸ್ಮಿತ್, ಮಾರ್ನಸ್ ಲ್ಯಾಬುಸ್ಚಾಗ್ನೆ, ಟ್ರಾವಿಸ್ ಹೆಡ್, ಅಲೆಕ್ಸ್ ಕ್ಯಾರಿ (ವಿಕೆಟ್ ಕೀಪರ್), ಗ್ಲೆನ್ ಮ್ಯಾಕ್ಸ್‌ವೆಲ್, ಪ್ಯಾಟ್ ಕಮಿನ್ಸ್, ಮಿಚೆಲ್ ಸ್ವೆಪ್ಸನ್, ಮ್ಯಾಥ್ಯೂ ಕುಹ್ನೆಮನ್, ಜೋಶ್ ಹ್ಯಾಜಲ್‌ವುಡ್
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications