
ಆಸ್ಟ್ರೇಲಿಯಾ ಶ್ರೀಲಂಕಾ ಪ್ರವಾಸ ಕೈಗೊಂಡಿದ್ದು, 3 ಪಂದ್ಯಗಳ ಟಿ ಟ್ವೆಂಟಿ ಸರಣಿ, 5 ಪಂದ್ಯಗಳ ಏಕದಿನ ಸರಣಿ ಮತ್ತು 2 ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಆಡಲಿದೆ.
ಇತ್ತಂಡಗಳ ನಡುವೆ ಮೊದಲಿಗೆ 3 ಪಂದ್ಯಗಳ ಟಿ ಟ್ವೆಂಟಿ ಸರಣಿ ಆರಂಭಗೊಂಡಿದ್ದು, ಸರಣಿಯ ಪ್ರಥಮ ಪಂದ್ಯ ಇಂದು ( ಜೂನ್ 7 ) ಕೊಲಂಬೊದ ಆರ್ ಪ್ರೇಮದಾಸ ಅಂತರರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆಯುತ್ತಿದೆ. ಈ ಪಂದ್ಯದಲ್ಲಿ ಟಾಸ್ ಗೆದ್ದ ಆಸ್ಟ್ರೇಲಿಯ ತಂಡದ ನಾಯಕ ಆರನ್ ಫಿಂಚ್ ಫೀಲ್ಡಿಂಗ್ ಆಯ್ದುಕೊಂಡು ಆತಿಥೇಯ ಶ್ರೀಲಂಕಾ ತಂಡವನ್ನು ಮೊದಲು ಬ್ಯಾಟಿಂಗ್ ಮಾಡಲು ಆಹ್ವಾನಿಸಿದರು. ಅದರಂತೆ ಮೊದಲು ಬ್ಯಾಟಿಂಗ್ ಮಾಡಿದ ಶ್ರೀಲಂಕಾ 19.3 ಓವರ್‌ಗಳಲ್ಲಿ 128 ರನ್‌ಗಳಿಗೆ ಆಲ್ ಔಟ್ ಆಗಿ ಆಸ್ಟ್ರೇಲಿಯಾಗೆ 129 ರನ್‌ಗಳ ಸಾಮಾನ್ಯ ಗುರಿಯನ್ನು ನೀಡಿದೆ.
ಶ್ರೀಲಂಕಾ ಪರ ಆರಂಭಿಕರಾಗಿ ಕಣಕ್ಕಿಳಿದ ಪತುಮ್ ನಿಸ್ಸಾಂಕ ಮತ್ತು ಧನುಷ್ಕಾ ಗುಣತಿಲಕ ಸಾಮಾನ್ಯ ಆರಂಭವನ್ನು ಕಟ್ಟಿಕೊಟ್ಟರು. ಧನುಷ್ಕಾ ಗುಣತಿಲಕ 26 ರನ್ ಗಳಿಸಿ ಔಟ್ ಆದರೆ, ಪತುಮ್ ನಿಸ್ಸಾಂಕ 36 ರನ್ ಕಲೆಹಾಕಿ ಔಟ್ ಆದರು. ಮೂರನೇ ಕ್ರಮಾಂಕದಲ್ಲಿ ಕಣಕ್ಕಿಳಿದ ಚರಿತ್ ಅಸಲಂಕಾ 34 ರನ್ ಗಳಿಸಿ ರನ್ ಔಟ್ ಆದರು. ಹೀಗೆ ಈ ಮೂವರನ್ನು ಹೊರತುಪಡಿಸಿ ಲಂಕಾದ ಇನ್ನುಳಿದ ಯಾವುದೇ ಬ್ಯಾಟ್ಸ್‌ಮನ್ ಕೂಡ 20 ರನ್ ಗಡಿ ದಾಟಲಿಲ್ಲ.
ಇನ್ನುಳಿದಂತೆ ಕುಸಾಲ್ ಮೆಂಡಿಸ್ 1 ರನ್, ಭಾನುಕಾ ರಾಜಪಕ್ಸ 0 ರನ್, ನಾಯಕ ದಸುನ್ ಶನಕ 0 ರನ್, ವನಿಂದು ಹಸರಂಗ 17 ರನ್, ಚಾಮಿಕ ಕರುಣಾರತ್ನೆ 1 ರನ್, ದುಷ್ಮಂತ ಚಮೀರ 1 ರನ್, ಮಹೀಶ್ ತೀಕ್ಷಣ 1 ರನ್ ಮತ್ತು ನುವಾನ್ ತುಷಾರ ಯಾವುದೇ ರನ್ ಗಳಿಸದೇ ಅಜೇಯರಾಗಿ ಉಳಿದರು.
ಆಸ್ಟ್ರೇಲಿಯಾ ಪರ ಜೋಶ್ ಹೇಜಲ್ ವುಡ್ 4 ವಿಕೆಟ್, ಮಿಚೆಲ್ ಸ್ಟಾರ್ಕ್ 3 ವಿಕೆಟ್ ಮತ್ತು ಕೇನ್ ರಿಚರ್ಡ್ ಸನ್ 1 ವಿಕೆಟ್ ಪಡೆದರು.
ಶ್ರೀಲಂಕಾ ಆಡುವ ಬಳಗ: ದನುಷ್ಕ ಗುಣತಿಲಕ, ಪಾತುಮ್ ನಿಸ್ಸಾಂಕ, ಚರಿತ್ ಅಸಲಂಕ, ಕುಸಲ್ ಮೆಂಡಿಸ್ (ವಿಕೆಟ್ ಕೀಪರ್), ಭಾನುಕಾ ರಾಜಪಕ್ಸೆ, ದಸುನ್ ಶನಕ (ನಾಯಕ), ವನಿಂದು ಹಸರಂಗ, ಚಾಮಿಕ ಕರುಣಾರತ್ನೆ, ದುಷ್ಮಂತ ಚಮೀರ, ಮಹೀಶ್ ತೀಕ್ಷಣ, ನುವಾನ್ ತುಷಾರ
ಆಸ್ಟ್ರೇಲಿಯಾ ಆಡುವ ಬಳಗ: ಆರನ್ ಫಿಂಚ್ (ನಾಯಕ), ಡೇವಿಡ್ ವಾರ್ನರ್, ಮಿಚೆಲ್ ಮಾರ್ಷ್, ಗ್ಲೆನ್ ಮ್ಯಾಕ್ಸ್‌ವೆಲ್, ಸ್ಟೀವನ್ ಸ್ಮಿತ್, ಮಾರ್ಕಸ್ ಸ್ಟೊಯಿನಿಸ್, ಮ್ಯಾಥ್ಯೂ ವೇಡ್ (ವಿಕೆಟ್ ಕೀಪರ್), ಆಷ್ಟನ್ ಅಗರ್, ಮಿಚೆಲ್ ಸ್ಟಾರ್ಕ್, ಕೇನ್ ರಿಚರ್ಡ್ಸನ್, ಜೋಶ್ ಹ್ಯಾಜಲ್‌ವುಡ್