ಆಸಿಸ್ vs ಶ್ರೀಲಂಕಾ, ಟಿ20 ಸರಣಿ: ಮೂರನೇ ಪಂದ್ಯವನ್ನೂ ಗೆದ್ದು ಸರಣಿ ವಶಕ್ಕೆ ಪಡೆದ ಆಸ್ಟ್ರೇಲಿಯಾ

ಆಸ್ಟ್ರೇಲಿಯಾ ಹಾಗೂ ಶ್ರೀಲಂಕಾ ನಡುವಿನ ಟಿ20 ಸರಣಿಯ ಮೂರನೇ ಪಂದ್ಯ ಇಂದು ನಡೆದಿದ್ದು ಈ ಪಂದ್ಯದಲ್ಲಿ ಆತಿಥೇಯ ಆಸ್ಟ್ರೇಲಿಯಾ ಭರ್ಜರಿ ಗೆಲುವು ಸಾಧಿಸಿದೆ. ಈ ಮೂಲಕ ಐದು ಪಂದ್ಯಗಳ ಟಿ20 ಸರಣಿಯಲ್ಲಿ ಮೊದಲ ಮೂರು ಪಂದ್ಯಗಳನ್ನು ಗೆದ್ದುಕೊಂಡಿರುವ ಆಸ್ಟ್ರೇಲಿಯಾ ಎರಡು ಪಂದ್ಯಗಳು ಬಾಕಿಯಿರುವಂತೆಯೇ ಸರಣಿಯನ್ನು ವಶಕ್ಕೆ ಪಡೆದುಕೊಂಡಿದೆ.
ಇಂದು ಕ್ಯಾನ್‌ಬೆರಾದಲ್ಲಿ ನಡೆದ ಮೂರನೇ ಪಂದ್ಯದಲ್ಲಿ ಟಾಸ್ ಗೆದ್ದ ಆತಿಥೇಯ ಆಸ್ಟ್ರೇಲಿಯಾ ಮೊದಲಿಗೆ ಬೌಲಿಂಗ್ ಆಯ್ದುಕೊಂಡಿತ್ತು. ಆಸಿಸ್ ಪಡೆಯ ಬೌಲಿಂಗ್ ದಾಳಿಗೆ ನಲುಗಿದ ಲಂಕಾ ಪಡೆ ನಿಗದಿತ 20 ಓವರ್‌ಗಳಲ್ಲಿ ಗಳಿಸಿದ್ದು 6 ವಿಕೆಟ್ ಕಳೆದುಕೊಂಡು 121 ರನ್ ಮಾತ್ರ. ಶ್ರೀಲಂಕಾ ಪರವಾಗಿ ನಾಯಕ ದಾಸುನ್ ಶನಕ 39 ರನ್‌ಗಳಿಸಿದ್ದು ತಂಡದ ಪರ ಅತಿ ಹೆಚ್ಚಿನ ಮೊತ್ತವಾಗಿದೆ. ಇನ್ನು ಆಸ್ಟ್ರೇಲಿಯಾ ತಂಡದ ಪರವಾಗಿ ವೇಗಿ ಕೇನ್ ರಿಚರ್ಡ್ಸನ್ 3 ವಿಕೆಟ್ ಕಬಳಿಸಿದ್ದರೆ ಹೇಜಲ್‌ವುಡ್, ಆಷ್ಟನ್ ಅಗರ್ ಹಾಗೂ ಗ್ಲೆನ್ ಮ್ಯಾಕ್ಸ್‌ವೆಲ್ ತಲಾ ಒಂದು ವಿಕೆಟ್ ಪಡೆದರು.
ಇನ್ನು ಶ್ರೀಲಂಕಾ ನೀಡಿದ ಸುಲಭ ಸವಾಲನ್ನು ಬೆನ್ನಟ್ಟಿದ ಆಸ್ಟ್ರೇಲಿಯಾ ತಂಡ ಆರಂಭಿಕ ಎರಡು ವಿಕೆಟ್‌ಗಳನ್ನು ಶೀಘ್ರವಾಗಿ ಕಳೆದುಕೊಂಡಿತ್ತು. ಆದರೆ ನಂತರ ನಾಯಕ ಆರೋನ್ ಫಿಂಚ್ ಹಾಗೂ ಗ್ಲೆನ್ ಮ್ಯಾಕ್ಸ್‌ವೆಲ್ ಉತ್ತಮ ಜೊತೆಯಾಟ ನೀಡಿದರು. ಅದಾದ ಬಳಿಕ ಜೋಶ್ ಇಂಗ್ಲಿಸ್ ಹಾಗೂ ಮಾರ್ಕಸ್ ಸ್ಟೋಯ್ನಿಸ್ ಗೆಲುವಿನ ಪ್ರಕ್ರಿಯೆಯನ್ನು ಪೂರೈಸಿದರು.
ಈ ಮೂಲಕ ಐದು ಪಂದ್ಯಗಳ ಟಿ20 ಸರಣಿಯನ್ನು ಆಸ್ಟ್ರೇಲಿಯಾ ಇನ್ನೂ ಎರಡು ಪಂದ್ಯಗಳು ಬಾಕಿಯಿರುವಂತೆಯೇ ಗೆದ್ದುಕೊಂಡಿದೆ. ಸರಣಿಯ ಮೊದಲ ಪಂದ್ಯದಲ್ಲಿ ಆಸ್ಟ್ರೇಲಿಯಾ ಭರ್ಜರಿ ಗೆಲುವು ಸಾಧಿಸಿದ್ದರೆ ಎರಡನೇ ಟಿ20 ಪಂದ್ಯ ರೋಚಕ ಹಣಾಹಣಿಗೆ ಸಾಕ್ಷಿಯಾಗಿತ್ತು. ಅಮೋಘ ಪ್ರದರ್ಶನ ನೀಡಿದ್ದ ಶ್ರೀಲಂಕಾ ಪಂದ್ಯವನ್ನು ಟೈ ಮಾಡಿಕೊಂಡಿತ್ತು. ನಂತರ ಸೂಪರ್ ಓವರ್‌ನಲ್ಲಿ ಆಸಿಸ್ ಪಡೆ ಗೆಲುವು ಸಾಧಿಸಲು ಯಶಸ್ವಿಯಾಯಿತು.
ಆಸ್ಟ್ರೇಲಿಯಾ ಪ್ಲೇಯಿಂಗ್ XI: ಆರನ್ ಫಿಂಚ್ (ನಾಯಕ), ಬೆನ್ ಮೆಕ್‌ಡರ್ಮಾಟ್, ಜೋಶ್ ಇಂಗ್ಲಿಸ್, ಗ್ಲೆನ್ ಮ್ಯಾಕ್ಸ್‌ವೆಲ್, ಮಾರ್ಕಸ್ ಸ್ಟೊಯ್ನಿಸ್, ಮ್ಯಾಥ್ಯೂ ವೇಡ್ (ವಿಕೆಟ್ ಕೀಪರ್), ಡೇನಿಯಲ್ ಸ್ಯಾಮ್ಸ್, ಆಷ್ಟನ್ ಅಗರ್, ಮಿಚೆಲ್ ಸ್ಟಾರ್ಕ್, ಕೇನ್ ರಿಚರ್ಡ್‌ಸನ್, ಜೋಶ್ ಹ್ಯಾಜಲ್‌ವುಡ್
ಬೆಂಚ್: ಮೋಸೆಸ್ ಹೆನ್ರಿಕ್ಸ್, ಪ್ಯಾಟ್ ಕಮ್ಮಿನ್ಸ್, ಆಡಮ್ ಝಂಪಾ, ಝೈ ರಿಚರ್ಡ್ಸನ್
ಶ್ರೀಲಂಕಾ ಪ್ಲೇಯಿಂಗ್ XI: ದನುಷ್ಕ ಗುಣತಿಲಕ, ಪಾತುಮ್ ನಿಸ್ಸಾಂಕ, ಚರಿತ್ ಅಸಲಂಕಾ, ಕುಸಲ್ ಮೆಂಡಿಸ್, ದಿನೇಶ್ ಚಂಡಿಮಲ್ (ವಿಕೆಟ್ ಕೀಪರ್), ದಾಸುನ್ ಶನಕ (ನಾಯಕ), ಚಾಮಿಕ ಕರುಣಾರತ್ನ, ಜೆಫ್ರಿ ವಾಂಡರ್ಸೆ, ದುಷ್ಮಂತ ಚಮೀರ, ಮಹೀಶ್ ತೀಕ್ಷಣ, ನುವಾನ್ ತುಷಾರ ಆಡುತ್ತಿದ್ದಾರೆ
ಬೆಂಚ್: ಅವಿಷ್ಕಾ ಫೆರ್ನಾಂಡೊ, ರಮೇಶ್ ಮೆಂಡಿಸ್, ಲಹಿರು ಕುಮಾರ, ಪ್ರವೀಣ್ ಜಯವಿಕ್ರಮ, ಜನಿತ್ ಲಿಯಾನಗೆ, ಕಾಮಿಲ್ ಮಿಶ್ರಾ, ಶಿರಾನ್ ಫೆರ್ನಾಂಡೊ
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications