ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

ಆಸ್ಟ್ರೇಲಿಯಾ vs ಶ್ರೀಲಂಕಾ ಟೆಸ್ಟ್ ಸರಣಿ, 2ನೇ ದಿನದಾಟದ ಆರಂಭದಲ್ಲಿ ಮಳೆ ಅಡ್ಡಿ: Live ಸ್ಕೋರ್

Aus vs SL test series, 1st test day 2 Live score, and Playing XI details, Galle

ಆಸ್ಟ್ರೇಲಿಯಾ ಹಾಗೂ ಶ್ರೀಲಂಕಾ ತಂಡಗಳ ನಡುವಿನ ಟೆಸ್ಟ್ ಸರಣಿಯ ಮೊದಲ ಪಂದ್ಯದ ಮೊದಲ ದಿನದಾಟ ಅಂತ್ಯವಾಗಿದೆ. ಎರಡನೇ ದಿನದಾಟದ ಆರಂಭದಲ್ಲಿ ಮಳೆ ಅಡ್ಡಿಯಾಗಿರುವ ಕಾರಣ ತಡವಾಗಿ ಆರಂಭಗೊಳ್ಳುತ್ತಿದೆ. ಮೊದಲ ದಿನ ಶ್ರೀಲಂಕಾ ವಿರುದ್ಧ ಪ್ರವಾಸಿ ಆಸ್ಟ್ರೇಲಿಯಾ ಮೇಲುಗೈ ಸಾಧಿಸುವಲ್ಲಿ ಯಶಸ್ವಿಯಾಗಿತ್ತು.

ಗಾಲ್ಲೆ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಿರೀಕ್ಷೆಯಂತೆಯೇ ಸ್ಪಿನ್ನರ್‌ಗಳು ಮೊದಲ ದಿನವೇ ಸಂಪೂರ್ಣವಾಗಿ ಅಬ್ಬರಿಸಿದ್ದಾರೆ. ಆತಿಥೆಯ ಶ್ರೀಲಂಕಾ ಆಟಗಾರರು ಪ್ರವಾಸಿ ಆಸಿಸ್ ತಂಡದ ಅನುಭವಿ ಸ್ಪಿನ್ನರ್ ನಾಥನ್ ಲಿಯನ್ ಸ್ವೆಪ್ಸಿನ್ ಬೌಲಿಂಗ್ ದಾಳಿಗೆ ಸಂಪೂರ್ಣವಾಗಿ ನಿರುತ್ತರವಾಗಿದ್ದರು. ನಂತರ ಶ್ರೀಲಂಕಾ ಸ್ಪಿನ್ನರ್‌ಗಳು ಕೂಡ ಆಸಿಸ್ ಪಡೆಗೆ ಆಘಾತ ನೀಡುವ ಲಕ್ಷಣ ತೋರಿಸಿದ್ದಾರೆ.

Live ಸ್ಕೋರ್‌ಕಾರ್ಡ್ ಹೀಗಿದೆ

1
53770

IND vs ENG 5ನೇ ಟೆಸ್ಟ್: ಬುಮ್ರಾ ನಾಯಕನಲ್ಲ; ಅಚ್ಚರಿ ಮೂಡಿಸಿದ ರಾಹುಲ್ ದ್ರಾವಿಡ್ ಹೇಳಿಕೆ!IND vs ENG 5ನೇ ಟೆಸ್ಟ್: ಬುಮ್ರಾ ನಾಯಕನಲ್ಲ; ಅಚ್ಚರಿ ಮೂಡಿಸಿದ ರಾಹುಲ್ ದ್ರಾವಿಡ್ ಹೇಳಿಕೆ!

ಸಾಧಾರಣ ರನ್ ಗಳಿಸಿದ ಲಂಕಾ ಪಡೆ

ಸಾಧಾರಣ ರನ್ ಗಳಿಸಿದ ಲಂಕಾ ಪಡೆ

ಮೊದಲ ಟೆಸ್ಟ್ ಪಂದ್ಯದ ಮೊದಲ ಇನ್ನಿಂಗ್ಸ್‌ನಲ್ಲಿ ಬ್ಯಾಟಿಂಗ್ ಮಾಡಿದ ಆತಿಥೆಯ ಶ್ರೀಲಂಕಾ ತಂಡ ಮಧ್ಯಮ ಕ್ರಮಾಂಕದ ಆಟಗಾರ ನಿರೋಶನ್ ಡಿಕ್ವೆಲ್ಲಾ ಮಾತ್ರವೇ ಉತ್ತಮ ಪ್ರದರ್ಶನ ನೀಡಲು ಸಫಲವಾಗಿದ್ದಾರೆ. 58 ರನ್‌ಗಳಿಸಿ ತಂಡದ ಪರವಾಗಿ ಅರ್ಧ ಶತಕ ಗಳಿಸಿದ್ದಾರೆ. ಹೀಗಾಘಿ ಶ್ರೀಲಂಕಾ ತಂಡ 212 ರನ್‌ಗಳಿಗೆ ಆಲೌಟ್ ಆಗಿದೆ. ಆಸ್ಟ್ರೇಲಿಯಾ ಪರವಾಗಿ ಅನುಭವಿ ಸ್ಪಿನ್ನರ್ ನಾಥನ್ ಲಿಯಾನ್ 5 ವಿಕೆಟ್‌ಗಳ ಗೊಂಚಲು ಪಡೆದರೆ ಸ್ವೆಪ್ಸನ್ 3 ವಿಕೆಟ್ ಸಂಪಾದಿಸಿದರು.

ಉತ್ತಮ ಜೊತೆಯಾಟದ ನಿರೀಕ್ಷೆಯಲ್ಲಿ ಆಸಿಸ್ ಪಡೆ

ಉತ್ತಮ ಜೊತೆಯಾಟದ ನಿರೀಕ್ಷೆಯಲ್ಲಿ ಆಸಿಸ್ ಪಡೆ

ನಂತರ ಬ್ಯಾಟಿಂಗ್ ಆರಂಭಿಸಿದ ಆಸ್ಟ್ರೇಲಿಯಾ ಕೂಡ ದಿನದಾಟ ಮುಕ್ತಾಯದ ವೇಳೆ 98 ರನ್‌ಗಳಿಸಿದ್ದು 3 ವಿಕೆಟ್ ಕಳೆದುಕೊಂಡಿದೆ. ಡೇವಿಡ್ ವಾರ್ನರ್, ಮಾರ್ನಸ್ ಲ್ಯಾಬುಶೈನ್ ಹಾಗೂ ಸ್ಟೀವ್ ಸ್ಮಿತ್ ಈಗಾಗಲೇ ವಿಕೆಟ್ ಕಳೆದುಕೊಂಡಿದೆ. ಹೀಗಾಗಿ ಉತ್ತಮ ಜೊತೆಯಾಟವೊಂದನ್ನು ಆಸಿಸ್ ಪಡೆ ಎದುರುನೋಡುತ್ತಿದೆ. ಆಸಿಸ್ ತಂಡದ ಆರಂಭಿಕ ಆಟಗಾರ ಉಸ್ಮಾನ್ ಖವಾಜ ಉತ್ತಮ ಫಾರ್ಮ್ ಮುಂದುವರಿಸಿದ್ದು ಅರ್ಧ ಶತಕದ ಗಡಿಯಲ್ಲಿದ್ದು ಎರಡನೇ ದಿನಕ್ಕೆ ಕ್ರೀಸ್ ಕಾಯ್ದಿರಿಸಿದ್ದಾರೆ.

ಯುಜುವೇಂದ್ರ ಚಹಾಲ್ ಗೆ ಚಳಿ ಆಗಿದ್ದಕ್ಕೆ ಸೋಶಿಯಲ್ ಮೀಡಿಯಾದಲ್ಲಿ ಈಗ ಫುಲ್ ಟ್ರೋಲ್ | Oneindia Kannada
ಉಭಯ ತಂಡಗಳ ಪ್ಲೇಯಿಂಗ್ 11

ಉಭಯ ತಂಡಗಳ ಪ್ಲೇಯಿಂಗ್ 11

ಆಸ್ಟ್ರೇಲಿಯಾ: ಉಸ್ಮಾನ್ ಖವಾಜಾ, ಡೇವಿಡ್ ವಾರ್ನರ್, ಮಾರ್ನಸ್ ಲ್ಯಾಬುಸ್ಚಾಗ್ನೆ, ಸ್ಟೀವನ್ ಸ್ಮಿತ್, ಟ್ರಾವಿಸ್ ಹೆಡ್, ಕ್ಯಾಮೆರಾನ್ ಗ್ರೀನ್, ಅಲೆಕ್ಸ್ ಕ್ಯಾರಿ (ವಿಕೆಟ್ ಕೀಪರ್), ಪ್ಯಾಟ್ ಕಮಿನ್ಸ್ (ನಾಯಕ), ಮಿಚೆಲ್ ಸ್ಟಾರ್ಕ್, ನಾಥನ್ ಲಿಯಾನ್, ಮಿಚೆಲ್ ಸ್ವೆಪ್ಸನ್
ಬೆಂಚ್: ಮಿಚೆಲ್ ಮಾರ್ಷ್, ಜೋಶ್ ಹೇಜಲ್‌ವುಡ್, ಗ್ಲೆನ್ ಮ್ಯಾಕ್ಸ್‌ವೆಲ್, ಆಷ್ಟನ್ ಅಗರ್, ಸ್ಕಾಟ್ ಬೋಲ್ಯಾಂಡ್, ಜೋಶ್ ಇಂಗ್ಲಿಸ್

ಶ್ರೀಲಂಕಾ: ಪಾತುಮ್ ನಿಸ್ಸಾಂಕ, ದಿಮುತ್ ಕರುಣಾರತ್ನೆ (ನಾಯಕ), ಕುಸಾಲ್ ಮೆಂಡಿಸ್, ಏಂಜೆಲೊ ಮ್ಯಾಥ್ಯೂಸ್, ಧನಂಜಯ ಡಿ ಸಿಲ್ವಾ, ದಿನೇಶ್ ಚಾಂಡಿಮಲ್, ನಿರೋಶನ್ ಡಿಕ್ವೆಲ್ಲಾ (ವಿಕೆಟ್ ಕೀಪರ್), ರಮೇಶ್ ಮೆಂಡಿಸ್, ಜೆಫ್ರಿ ವಾಂಡರ್ಸೆ, ಲಸಿತ್ ಎಂಬುಲ್ಡೆನಿಯ, ಅಸಿತ ಫೆರ್ನಾಂಡೋ
ಬೆಂಚ್ : ವಿಶ್ವ ಫೆರ್ನಾಂಡೋ, ಚಾಮಿಕಾ ಕರುಣಾರತ್ನೆ, ಕಸುನ್ ರಜಿತ, ಕಾಮಿಂದು ಮೆಂಡಿಸ್, ಓಷಾದ ಫೆರ್ನಾಂಡೋ, ಪ್ರವೀಣ್ ಜಯವಿಕ್ರಮ, ದಿಲ್ಶನ್ ಮಧುಶಂಕ

Story first published: Thursday, June 30, 2022, 11:02 [IST]
Other articles published on Jun 30, 2022
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X