ಮತ್ತೊಮ್ಮೆ ಎಡವಿದ ವಿಂಡೀಸ್: 2ನೇ ಟಿ20 ಪಂದ್ಯದಲ್ಲಿಯೂ ಗೆದ್ದು ಬೀಗಿದ ಆಸ್ಟ್ರೇಲಿಯಾ

ಆಸ್ಟ್ರೇಲಿಯಾ ಹಾಗೂ ವೆಸ್ಟ್ ಇಂಡೀಸ್ ತಂಡಗಳ ನಡುವಿನ ಟಿ20 ಸರಣಿಯ ಎರಡನೇ ಹಾಗೂ ಅಂತಿಮ ಪಂದ್ಯ ಮುಕ್ತಾಯವಾಗಿದೆ. ಈ ಪಂದ್ಯದಲ್ಲಿಯೂ ಆತಿಥೇಯ ಆಸ್ಟ್ರೇಲಿಯಾ ತಂಡ ಭರ್ಜರಿ ಪ್ರದರ್ಶನ ನೀಡಿದ್ದು ಅಮೋಘ ಗೆಲುವು ಸಾಧಿಸಿದೆ. ಆರಂಭಿಕ ಆಟಗಾರ ಡೇವಿಡ್ ವಾರ್ನರ್ ಹಾಗೂ ಮಧ್ಯಮ ಕ್ರಮಾಂಕದ ಆಟಗಾರ ಟಿಮ್ ಡೇವಿಡ್ ಅವರ ಭರ್ಜರಿ ಪ್ರದರ್ಶನದ ಕಾರಂದಿಂದಾಗಿ ವೆಸ್ಟ್ ಇಂಡೀಸ್‌ಗೆ ಸವಾಲಿನ ಗುರಿ ನೀಡದ್ದ ಆಸಿಸ್ ಪಡೆ ನಂತರ ಮಿಚೆಲ್ ಸ್ಟಾರ್ಕ್ ಅವರ ಮಾರಕ ಬೌಲಿಂಗ್ ದಾಳಿಯಿಂದಾಗಿ 31 ರನ್‌ಗಳ ಅಂತರದಿಂದ ಗೆಲುವು ಸಾಧಿಸಿದೆ.
ಎರಡು ಪಂದ್ಯಗಳ ಈ ಸರಣಿಯಲ್ಲಿ ಮೊದಲ ಪಂದ್ಯದಲ್ಲಿಯೂ ಆಸ್ಟ್ರೇಲಿಯಾ ಗೆದ್ದು ಬೀಗಿತ್ತು. ಕ್ವೀನ್ಸ್‌ಲ್ಯಾಂಡ್‌ನ ಕೆರೆರಾ ಕ್ರೀಡಾಂಗಣದಲ್ಲಿ ನಡೆದ ಈ ಪಂದ್ಯದಲ್ಲಿ ಆಸ್ಟ್ರೇಲಿಯಾ ಪ್ರಯಾಸದ ಗೆಲುವು ಸಾಧಿಸಿತ್ತು. ಆದರೆ ಗಾಬಾದಲ್ಲಿ ನಡೆದ ಈ ಎರಡನೇ ಪಂದ್ಯದಲ್ಲಿ ಬ್ಯಾಟಿಂಗ್ ಹಾಗೂ ಬೌಲಿಂಗ್ ಎರಡೂ ವಿಭಾಗದಲ್ಲಿಯೂ ಅಮೋಘ ಪ್ರದರ್ಶನ ನೀಡುವ ಮೂಲಕ ಈ ಪಂದ್ಯದಲ್ಲಿಯೂ ಗೆದ್ದು ಸರಣಿಯನ್ನು ವಶಕ್ಕೆ ಪಡೆದುಕೊಂಡಿದೆ.
ವಾರ್ನರ್, ಡೇವಿಡ್ ಅಬ್ಬರ
ಟಾಸ್ ಸೋತು ಮೊದಲಿಗೆ ಬ್ಯಾಟಿಂಗ್ ನಡೆಸಿದ ಆಸ್ಟ್ರೇಲಿಯಾ ತಂಡದ ಪರವಾಗಿ ಆರಂಭಿಕ ಆಟಗಾರ ಡೇವಿಡ್ ವಾರ್ನರ್ ಸ್ಪೋಟಕ ಬ್ಯಾಟಿಂಗ್ ಪ್ರದರ್ಶಿಸಿದ್ದಾರೆ. ಉಳಿದ ಆಟಗಾರರಿಂದ ಹೇಳಿಕೊಳ್ಳುವಂತಾ ಪ್ರದರ್ಸನ ಬಾರಲಿಲ್ಲ. ಆದರೆ ಟಿಮ್ ಡೇವಿಡ್ ಮಧ್ಯಮ ಕ್ರಮಾಂಕದಲ್ಲಿ ಸ್ಪೋಟಕ ಪ್ರದರ್ಶನ ನೀಡಿದರು. ಹೀಗಾಗಿ ತಂಡ ಉತ್ತಮ ಮೊತ್ತ ಪೇರಿಸಲು ಸಾಧ್ಯವಾಯಿತು. ಡೇವಿಡ್ ವಾರ್ನರ್ 41 ಎಸೆತಗಳಲ್ಲಿ 75 ರನ್‌ಗಳನ್ನು ಸಿಡಿಸಿದ್ದರೆ ಟಿಮ್ ಡೇವಿಡ್ 20 ಎಸೆತಗಳಲ್ಲಿ 42 ರನ್ ಬಾರಿಸಿದರು. ಈ ಮೂಲಕ ಆಸ್ಟ್ರೇಲಿಯಾ ತಂಡ ನಿಗದಿತ 20 ಓವರ್‌ಗಳಲ್ಲಿ 178 ರನ್ ಬಾರಿಸಿತು. ವೆಸ್ಟ್ ಇಂಡೀಸ್ ಪರವಾಗಿ ಅಲ್ಜಾರಿ ಜೋಸೆಫ್ 3 ವಿಕೆಟ ಪಡೆದು ಮಿಂಚಿದರು.
ವಿಂಡೀಸ್ ನೀರಸ ಪ್ರದರ್ಶನ
ಆಸ್ಟ್ರೇಲಿಯಾ ತಂಡ ನೀಡಿದ 179 ರನ್‌ಗಳ ಗುರಿಯನ್ನು ಬೆನ್ನಟ್ಟಿದ ವೆಸ್ಟ್ ಇಂಡೀಸ್ ತಂಡ ನೀರಸ ಆರಂಭವನ್ನು ಪಡೆಯಿತು. ಎರಡನೇ ವಿಕೆಟ್‌ಗೆ ಅರ್ಧ ಶತಕದ ಜೊತೆಯಾಟ ಬಂದರು ಕೂಡ ಅದಾದ ಬಳೀಕ ಬ್ಯಾಟರ್‌ಗಳು ಕ್ರೀಸ್‌ನಲ್ಲಿ ನೆಲೆಯೂರಲು ಸಾಧ್ಯವಾಗಲಿಲ್ಲ. ನಾಯಕ ನಿಕೋಲಸ್ ಪೂರನ್ ವೈಫಲ್ಯ ಅನುಭವಿಸಿದರು ಉಳಿದ ಬ್ಯಾಟರ್‌ಗಳಿಮದ ಕೂಡ ಉತ್ತಮ ಜೊತೆಯಾಟ ಬಾರದ ಕಾರಣ ವೆಸ್ಟ್ ಇಂಡೀಸ್ ತಂಡ ನಿಗದಿತ 20 ಓವರ್‌ಗಳಲ್ಲಿ 8 ವಿಕೆಟ್ ಕಳೆದುಕೊಂಡು ಕೇವಲ 147 ರನ್‌ಗಳನ್ನು ಮಾತ್ರವೇ ಗಳಿಸಲು ಶಕ್ತವಾಯಿತು.
Tim David with the one-two punch! The second six travelled 110m! 💥💥 #AUSvWI #PlayOfTheDay | #Dettol pic.twitter.com/dAgpsoTJV3
— cricket.com.au (cricketcomau) October 7, 2022
ಸರಣಿ ಗೆದ್ದ ಆಸಿಸ್ ಪಡೆ
ಈ ಗೆಲುವಿನಿಂದಿಗೆ ಆಸ್ಟ್ರೇಲಿಯಾ ತಂಡ ವೆಸ್ಟ್ ಇಂಡೀಸ್ ವಿರುದ್ಧದ ಎರಡು ಪಂದ್ಯಗಳ ಸರಣಿಯಲ್ಲಿ ವೈಟ್‌ವಾಶ್ ಮೂಲಕ ಸರಣಿಯನ್ನು ತನ್ನ ವಶಕ್ಕೆ ಪಡೆದುಕೊಂಡಿದೆ. ಈ ಮೂಲಕ ತವರಿನಲ್ಲಿ ವಿಶ್ವಕಪ್‌ಗೆ ನಡೆಸಿದ ಪೂರ್ವ ತಯಾರಿಯಲ್ಲಿ ಯಶಸ್ಸು ಸಾಧಿಸಿದ್ದು ಆತ್ಮವಿಶ್ವಾಸವನ್ನು ಹೆಚ್ಚಿಸಿಕೊಂಡಿದೆ. ಇನ್ನು ಇದಾದ ಬಳಿಕ ಆಸ್ಟ್ರೇಲಿಯಾ ಇಂಗ್ಲೆಂಡ್ ತಂಡದ ವಿರುದ್ಧ ಮೂರು ಪಂದ್ಯಗಳ ಟಿ20 ಸರಣಿಯನ್ನು ತವರಿನಲ್ಲಿ ಆಡಲಿದ್ದು ಅಕ್ಟೋಬರ್ 9, 12 ಹಾಗೂ 14ರಂದು ಈ ಪಂದ್ಯಗಳು ಆಯೋಜನೆಯಾಗಲಿದೆ. ಈ ಮೂಲಕ ವಿಶ್ವಕಪ್‌ಗೆ ಅಂತಿಮ ಸಿದ್ಧತೆಯನ್ನು ಆಸಿಸ್ ಪಡೆ ಮಾಡಿಕೊಳ್ಳಲಿದೆ.

ಇತ್ತಂಡಗಳ ಆಡುವ ಬಳಗ
ಆಸ್ಟ್ರೇಲಿಯಾ ತಂಡ: ಡೇವಿಡ್ ವಾರ್ನರ್, ಆರೋನ್ ಫಿಂಚ್ (ನಾಯಕ), ಸ್ಟೀವನ್ ಸ್ಮಿತ್, ಗ್ಲೆನ್ ಮ್ಯಾಕ್ಸ್‌ವೆಲ್, ಟಿಮ್ ಡೇವಿಡ್, ಕ್ಯಾಮೆರಾನ್ ಗ್ರೀನ್, ಮ್ಯಾಥ್ಯೂ ವೇಡ್ (WK), ಮಿಚೆಲ್ ಸ್ಟಾರ್ಕ್, ಪ್ಯಾಟ್ ಕಮಿನ್ಸ್, ಆಡಮ್ ಝಂಪಾ, ಜೋಶ್ ಹ್ಯಾಜಲ್‌ವುಡ್
ಬೆಂಚ್: ಮಿಚೆಲ್ ಮಾರ್ಷ್, ಸೀನ್ ಅಬಾಟ್, ಜೋಶ್ ಇಂಗ್ಲಿಸ್, ಡೇನಿಯಲ್ ಸ್ಯಾಮ್ಸ್
ವೆಸ್ಟ್ ಇಂಡೀಸ್ : ಕೈಲ್ ಮೇಯರ್ಸ್, ಜಾನ್ಸನ್ ಚಾರ್ಲ್ಸ್, ಬ್ರಾಂಡನ್ ಕಿಂಗ್, ನಿಕೋಲಸ್ ಪೂರನ್ (ನಾಯಕ & ವಿಕೆಟ್ ಕೀಪರ್), ರೋವ್‌ಮನ್ ಪೊವೆಲ್, ಜೇಸನ್ ಹೋಲ್ಡರ್, ಓಡಿಯನ್ ಸ್ಮಿತ್, ಅಕೇಲ್ ಹೊಸೈನ್, ಯಾನಿಕ್ ಕ್ಯಾರಿಯಾ, ಅಲ್ಜಾರಿ ಜೋಸೆಫ್, ಓಬೆಡ್ ಮೆಕಾಯ್
ಬೆಂಚ್: ಶೆಲ್ಡನ್ ಕಾಟ್ರೆಲ್, ರೇಮನ್ ರೀಫರ್, ಶಮರ್ ಬ್ರೂಕ್ಸ್, ಎವಿನ್ ಲೆವಿಸ್
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications