ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

AUS vs WI: ಮಾರ್ನಸ್ ಮತ್ತೊಂದು ಅಮೋಘ ಶತಕ: ಟೆಸ್ಟ್ ಕ್ರಿಕೆಟ್‌ನಲ್ಲಿ ವಿಶೇಷ ಸಾಧನೆ ಮಾಡಿದ ಆಸಿಸ್ ಕ್ರಿಕೆಟಿಗ

Australia vs West Indies: Marnus Labuschagne becomes 2nd-fastest cricketer to reach 3000 Test runs milestone

ಆಸ್ಟ್ರೇಲಿಯಾದ ಅಗ್ರ ಕ್ರಮಾಂಕದ ಆಟಗಾರ ಮಾರ್ನಸ್ ಲ್ಯಾಬುಶೈನ್ ತಮ್ಮ ಅಮೋಘ ಫಾರ್ಮ್ ಮುಂದುವರಿಸಿದ್ದಾರೆ. ವೆಸ್ಟ್ ಇಂಡೀಸ್ ವಿರುದ್ಧದ ಮೊದಲ ಪಂದ್ಯದ ಎರಡು ಇನ್ನಿಂಗ್ಸ್‌ನಲ್ಲಿ ಕ್ರಮವಾಗಿ ದ್ವಿಶತಕ ಹಾಗೂ ಶತಕ ಸಿಡಿಸಿದ್ದ ಮಾರ್ನಸ್ ಎರಡನೇ ಟೆಸ್ಟ್ ಪಂದ್ಯದ ಮೊದಲ ಇನ್ನಿಂಗ್ಸ್‌ನಲ್ಲಿಯೂ ಅಮೋಘ ಶತಕ ಸಿಡಿಸಿದ್ದಾರೆ. ಈ ಶತಕದ ಸಾಧನೆಯೊಂದಿಗೆ ವಿಶೇಷ ಮೈಲಿಗಲ್ಲೊಂದನ್ನು ದಾಟಿದ್ದಾರೆ ಆಸಿಸ್ ಆಟಗಾರ.

ಮಾರ್ನಸ್ ಲ್ಯಾಬುಶೈನ್ ವೆಸ್ಟ್ ಇಂಡೀಸ್ ವಿರುದ್ಧದ ಎರಡನೇ ಟೆಸ್ಟ್ ಪಂದ್ಯದ ಮೊದಲ ಇನ್ನಿಂಗ್ಸ್‌ನಲ್ಲಿ ಭರ್ಜರಿ 163 ರನ್‌ಗಳಿಸಿ ವಿಕೆಟ್ ಕಳೆದುಕೊಂಡರು. ಟ್ರೆವಿಸ್ ಹೆಡ್ ಅವರೊಂದಿಗೆ 4ನೇ ವಿಕೆಟ್‌ಗೆ ಬರೊಬ್ಬರಿ 297 ರನ್‌ಗಳ ಜೊತೆಯಾಟದಲ್ಲಿಯೂ ಮಾರ್ನಸ್ ಭಾಗಿಯಾಗಿದ್ದಾರೆ. ಹೆಡ್ ಈ ಪಂದ್ಯದಲ್ಲಿ 175 ರನ್‌ಗಳನ್ನು ಗಳಿಸಿ ವಿಕೆಟ್ ಕಳೆದುಕೊಂಡಿದ್ದಾರೆ.

ಭಾರತ vs ಬಾಂಗ್ಲಾದೇಶ ಟೆಸ್ಟ್ ಸರಣಿ: ಕನ್ನಡಿಗ ಕೆಎಲ್ ರಾಹುಲ್‌ಗೆ ನಾಯಕತ್ವದ ಹೊಣೆಗಾರಿಕೆ ಸಾಧ್ಯತೆಭಾರತ vs ಬಾಂಗ್ಲಾದೇಶ ಟೆಸ್ಟ್ ಸರಣಿ: ಕನ್ನಡಿಗ ಕೆಎಲ್ ರಾಹುಲ್‌ಗೆ ನಾಯಕತ್ವದ ಹೊಣೆಗಾರಿಕೆ ಸಾಧ್ಯತೆ

ಇನ್ನು ಈ ಪಂದ್ಯದಲ್ಲಿನ ಅಮೋಘ ಶತಕದೊಂದಿಗೆ ಮಾರ್ನಸ್ ಲ್ಯಾಬುಶೈನ್ ಟೆಸ್ಟ್ ಮಾದರಿಯಲ್ಲಿ 3000 ರನ್‌ಗಳ ಗಡಿದಾಟಿದ್ದಾರೆ. ಈ ಸಾಧನೆಯೊಂದಿಗೆ ಐತಿಹಾಸಿಕ ದಾಖಲೆಯನ್ನು ಕೂಡ ಮಾರ್ನಸ್ ಬರೆದಿದ್ದು ಈ ಸಾಧನೆಯನ್ನು ಅತ್ಯಂತ ವೇಗವಾಗಿ ಮಾಡಿದ ಕ್ರಿಕೆಟಿಗರ ಪೈಕಿ ಎರಡನೇ ಸ್ಥಾನವನ್ನು ಜಂಟಿಯಾಗಿ ಪಡೆದುಕೊಂಡಿದ್ದಾರೆ. 51 ಇನ್ನಿಂಗ್ಸ್‌ಗಳಲ್ಲಿ ಮಾರ್ಸನ್ ಈ ಸಾಧನೆ ಮಾಡಿದ್ದು 1948ರಲ್ಲಿ ವೆಸ್ಟ್ ಇಂಡೀಸ್‌ನ ಎವರ್ಟನ್ ವೀಕ್ಸ್ ಕೂಡ ಇಷ್ಟೇ ಇನ್ನಿಂಗ್ಸ್‌ಗಳಲ್ಲಿ 3000 ರನ್‌ಗಳ ಮೈಲಿಗಲ್ಲು ದಾಟಿದ್ದರು.

ಇನ್ನು 3000 ರನ್‌ಗಳ ಮೈಲಿಗಲ್ಲನ್ನು ವೇಗವಾಗಿ ದಾಟಿದ ದಾಖಲೆ ಆಸ್ಟ್ರೇಲಿಯಾದ ಸರ್ ಡೊನಾಲ್ಡ್ ಬ್ರಾಡ್‌ಮನ್ ಅವರ ಹೆಸರಿನಲ್ಲಿದೆ. ಅವರು 1928ರ ನವೆಂಬರ್ ತಿಂಗಳಿನಲ್ಲಿ ಕೇವಲ 33 ಇನ್ನಿಂಗ್ಸ್‌ಗಳಲ್ಲಿ ಈ ಸಾಧನೆಯನ್ನು ಮಾಡಿದ್ದರು. ಈ ದಾಖಲೆ ಇಂದಿಗೂ ಅಬಾಧಿತವಾಗಿ ಉಳಿದುಕೊಂಡಿದೆ.

ಅಡಿಲೇಡ್‌ನಲ್ಲಿ ವೆಸ್ಟ್ ಇಂಡೀಸ್ ತಂಡದ ವಿರುದ್ಧ ನಡೆಯುತ್ತಿರುವ ಅಹರ್ನಿಶಿ ಟೆಸ್ಟ್ ಪಂದ್ಯದ ಆರಂಭಕ್ಕೂ ಮುನ್ನ 3000 ರನ್‌ಗಳ ಮೈಲಿಗಲ್ಲು ದಾಟಲು ಮಾರ್ನಸ್‌ಗೆ 153 ರನ್‌ಗಳ ಅಗತ್ಯವಿತ್ತು. ಮೊದಲ ಇನ್ನೀಂಗ್ಸ್‌ನಲ್ಲಿಯೇ ಈ ಸಾಧನೆ ಮಾಡುವಲ್ಲು ಅವರು ಯಶಸ್ವಿಯಾಗಿದ್ದಾರೆ. ಆಸ್ಟ್ರೇಲಿಯಾದ ಈ ಆಟಗಾರ ಸದ್ಯ ಟೆಸ್ಟ್ ಮಾದರಿಯ ನಂಬರ್ 1 ಆಟಗಾರ ಎನಿಸಿಕೊಂಡಿದ್ದಾರೆ.

ಇನ್ನು ಈ ಪಂದ್ಯದಲ್ಲಿ ಆಸ್ಟ್ರೇಲಿಯಾ ಮೊದಲ ಇನ್ನಿಂಗ್ಸ್‌ನಲ್ಲಿ ಅದ್ಭುತ ಬ್ಯಾಟಿಂಗ್ ಪ್ರದರ್ಶಿಸಿದ್ದು ವೆಸ್ಟ್ ಇಂಡೀಸ್ ತಂಡದ ವಿರುದ್ಧ ಬೃಹತ್ ಮೊತ್ತವನ್ನು ಕಲೆಹಾಕಿದೆ. ಮಾರ್ನಸ್ ಹಾಗೂ ಹೆಡ್ ಶತಕಗಳಿಸಿದರೆ ಖವಾಜ ಅರ್ಧ ಶತಕದ ಕೊಡುಗೆ ನೀಡಿದರು. ಹೀಗಾಗಿ 511 ರನ್‌ಗಳನ್ನು ಗಳಿಸಿ ಆಸ್ಟ್ರೇಲಿಯಾ ಇನ್ನಿಂಗ್ಸ್ ಡಿಕ್ಲೇರ್ ಮಾಡಿಕೊಂಡಿದೆ.

IND vs BAN: ಭಾರತದ ಬೌಲಿಂಗ್ ಥರ್ಡ್ ಕ್ಲಾಸ್ ಆಗಿತ್ತು; ಪಾಕ್ ಮಾಜಿ ಕ್ರಿಕೆಟಿಗ ಟೀಕೆIND vs BAN: ಭಾರತದ ಬೌಲಿಂಗ್ ಥರ್ಡ್ ಕ್ಲಾಸ್ ಆಗಿತ್ತು; ಪಾಕ್ ಮಾಜಿ ಕ್ರಿಕೆಟಿಗ ಟೀಕೆ

ಆಸ್ಟ್ರೇಲಿಯಾ ಆಡುವ ಬಳಗ: ಡೇವಿಡ್ ವಾರ್ನರ್, ಉಸ್ಮಾನ್ ಖವಾಜಾ, ಮಾರ್ನಸ್ ಲ್ಯಾಬುಶೈನ್, ಸ್ಟೀವನ್ ಸ್ಮಿತ್ (ನಾಯಕ), ಟ್ರಾವಿಸ್ ಹೆಡ್, ಅಲೆಕ್ಸ್ ಕ್ಯಾರಿ (ವಿಕೆಟ್ ಕೀಪರ್), ಕ್ಯಾಮೆರಾನ್ ಗ್ರೀನ್, ಮೈಕೆಲ್ ನೆಸರ್, ಮಿಚೆಲ್ ಸ್ಟಾರ್ಕ್, ನಾಥನ್ ಲಿಯಾನ್, ಸ್ಕಾಟ್ ಬೋಲ್ಯಾಂಡ್
ಬೆಂಚ್: ಮಾರ್ಕಸ್ ಹ್ಯಾರಿಸ್, ಲ್ಯಾನ್ಸ್ ಮೋರಿಸ್

ವೆಸ್ಟ್ ಇಂಡೀಸ್ ಆಡುವ ಬಳಗ: ಕ್ರೈಗ್ ಬ್ರಾಥ್‌ವೈಟ್ (ನಾಯಕ), ಟಗೆನರೈನ್ ಚಂದ್ರಪಾಲ್, ಶಮರ್ ಬ್ರೂಕ್ಸ್, ಜೆರ್ಮೈನ್ ಬ್ಲಾಕ್‌ವುಡ್, ಡೆವೊನ್ ಥಾಮಸ್, ಜೇಸನ್ ಹೋಲ್ಡರ್, ಜೋಶುವಾ ಡಾ ಸಿಲ್ವಾ (ವಿಕೆಟ್ ಕೀಪರ್), ರೋಸ್ಟನ್ ಚೇಸ್, ಅಲ್ಜಾರಿ ಜೋಸೆಫ್, ಆಂಡರ್ಸನ್ ಫಿಲಿಪ್, ಮಾರ್ಕ್ವಿನೋ ಮಿಂಡ್ಲಿ
ಬೆಂಚ್: ಕೈಲ್ ಮೇಯರ್ಸ್, ಕೆಮರ್ ರೋಚ್, ಜೇಡನ್ ಸೀಲ್ಸ್, ರೇಮನ್ ರೈಫರ್, ಎನ್ಕ್ರುಮಾ ಬೋನರ್

Story first published: Friday, December 9, 2022, 14:24 [IST]
Other articles published on Dec 9, 2022
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X