ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

ಆಸ್ಟ್ರೇಲಿಯಾ vs ವೆಸ್ಟ್ ಇಂಡೀಸ್: ರೋಚಕ ಕದನದಲ್ಲಿ ಗೆದ್ದು ಬೀಗಿದ ಆಸಿಸ್: ಮತ್ತೆ ಹೀರೋ ಆದ ವೇಡ್

Aus vs WI, t20 Series 1st match, Australia won the match by 3 wickets in Carrara Oval

ಆಸ್ಟ್ರೇಲಿಯಾ ಹಾಗೂ ವೆಸ್ಟ್ ಇಂಡೀಸ್ ನಡುವಿನ ಎರಡು ಪಂದ್ಯಗಳ ಟಿ20 ಸರಣಿಯ ಮೊದಲ ಪಂದ್ಯ ಇಂದು ನಡೆದಿದೆ. ಟಿ20 ವಿಶ್ವಕಪ್‌ಗೆ ತಯಾರಿಯ ಭಾಗವಾಗಿ ಆಸ್ಟ್ರೇಲಿಯಾ ನೆಲದಲ್ಲಿಯೇ ನಡೆಯುತ್ತಿರುವ ಸರಣಿ ಇದಾಗಿದ್ದು ಮೊದಲ ಪಂದ್ಯದಲ್ಲಿ ಆಸ್ಟ್ರೇಲಿಯಾ ತಂಡ ರೋಚಕ ಸೆಣೆಸಾಟ ನಡೆಸಿ ಅಂತಿಮವಾಗಿ 3 ವಿಕೆಟ್‌ಗಳ ಅಂತರದಿಂದ ಗೆಲುವು ಸಾಧಿಸುವಲ್ಲಿ ಯಶಸ್ವಿಯಾಗಿದೆ.

ಕ್ವೀನ್ಸ್‌ಲ್ಯಾಂಡ್‌ನ ಕೆರೆರಾದಲ್ಲಿ ನಡೆದ ಈ ಪಂದ್ಯದಲ್ಲಿ ಮೊದಲಿಗೆ ಬ್ಯಾಟಿಂಗ್ ನಡೆಸಿದ ವೆಸ್ಟ್ ಇಂಡೀಸ್ ತಂಡ ದೊಡ್ಡ ಮೊತ್ತದ ಗುರಿಯನ್ನು ನಿಗದಿಪಡಿಸಲು ವಿಫಲವಾದರೂ ಅಮೋಘ ಬೌಲಿಂಗ್ ದಾಳಿಯ ಮೂಲಕ ಆಸಿಸ್ ದಾಂಡಿಗರನ್ನು ಕೂಡ ಹಿಮ್ಮೆಟ್ಟಿಸುವಲ್ಲಿ ಯಶಸ್ವಿಯಾದರು. ಆದರೆ ಆಸ್ಟ್ರೇಲಿಯಾ ತಂಡದ ನಾಯಕ ಆರೋನ್ ಫಿಂಚ್ ಹಾಗೂ ಟಿಮ್ ಡೇವಿಡ್ ಅವರ ಸಮಯೋಚಿತ ಪ್ರದರ್ಶನದ ಕಾರಣದಿಂದಾಗಿ ಆಸ್ಟ್ರೇಲಿಯಾ ಈ ಪಂದ್ಯವನ್ನು ರೋಚಕವಾಗಿ ಗೆದ್ದುಕೊಳ್ಳುವಲ್ಲಿ ಯಶಸ್ವಿಯಾಯಿತು.

T20 World Cup: ಜಸ್ಪ್ರೀತ್ ಬುಮ್ರಾ ಅನುಪಸ್ಥಿತಿ ಭಾರತ ತಂಡಕ್ಕೆ ದೊಡ್ಡ ಸಮಸ್ಯೆಯಲ್ಲ ಎಂದ ಮಾಜಿ ಆಟಗಾರT20 World Cup: ಜಸ್ಪ್ರೀತ್ ಬುಮ್ರಾ ಅನುಪಸ್ಥಿತಿ ಭಾರತ ತಂಡಕ್ಕೆ ದೊಡ್ಡ ಸಮಸ್ಯೆಯಲ್ಲ ಎಂದ ಮಾಜಿ ಆಟಗಾರ

ಟಾಸ್ ಗೆದ್ದ ಆಸ್ಟ್ರೇಲಿಯಾ ಮೊದಲಿಗೆ ಪ್ರವಾಸಿ ತಂಡವನ್ನು ಬ್ಯಾಟಿಂಗ್‌ಗೆ ಆಹ್ವಾನಿಸಿತು. ಬ್ಯಾಟರ್‌ಗಳಿಗೆ ಸವಾಲಾಗಿದ್ದ ಈ ಪಿಚ್‌ನಲ್ಲಿ ವಿಂಡೀಸ್ ಪರವಾಗಿ ಉತ್ತಮ ಜೊತೆಯಾಟ ಬರಲಿಲ್ಲ. ಆರಂಬಿಕ ಆಟಗಾರ ಕೇಲ್ ಮೇಯರ್ಸ್ ಗಳಿಸಿದ 39 ರನ್ ವಿಂಡೀಸ್ ಪರವಾಗಿ ದಾಖಲಾದ ಹೆಚ್ಚಿನ ಸ್ಕೋರ್ ಆಗಿದೆ. ಈ ಮೂಲಕ ನಿಗದಿತ 20 ಓವರ್‌ಗಳಲ್ಲಿ 9 ವಿಕೆಟ್ ಕಳೆದುಕೊಂಡು ವೆಸ್ಟ್ ಇಂಡೀಸ್ ತಂಡ 145 ರನ್‌ಗಳನ್ನು ಗಳಿಸಲು ಶಕ್ತವಾಯಿತು.

ಈ ಮೊತ್ತವನ್ನು ಬೆನ್ನಟ್ಟಿದ ಆಸ್ಟ್ರೇಲಿಯಾ ತಂಡ ಕೂಡ ವಿಕೆಟ್ ಕಳೆದುಕೊಳ್ಳುತ್ತಾ ಸಾಗಿತು. ಆದರೆ ನಾಯಕ ಆರೋನ್ ಫಿಂಚ್ ಅದ್ಭುತ ಇನ್ನಿಂಗ್ಸ್ ನೀಡುವ ಮೂಲಕ ಆಸಿಸ್ ಪಡೆಯ ಗೆಲುವಿನ ಕನಸನ್ನು ಜೀವಂತವಾಗುಳಿಸಿದ್ದರು. 53 ಎಸೆತಗಳಲ್ಲಿ 58 ರನ್‌ಗಳಿಸಿದ ಫಿಂಚ್ ಬಳಿಕ ವಿಕೆಟ್ ಕಳೆದುಕೊಂಡರು. ನಂತರ ವಿಕೆಟ್ ಕೀಪರ್ ಮ್ಯಾಥ್ಯೂ ವೇಡ್ ಆಸಿಸ್ ಇನ್ನಿಂಗ್ಸ್‌ನ ಜವಾಬ್ಧಾರಿ ವಹಿಸಿಕೊಂಡರು. ಕೊನೆಯ ತನಕವೂ ವಿಕೆಟ್ ಕಳೆದುಕೊಳ್ಳದೆ ಆಸ್ಟ್ರೇಲಿಯಾ ತಂಡವನ್ನು ಗೆಲುವಿನ ತಡ ಸೇರಿಸುವಲ್ಲಿ ವೇಡ್ ಯಶಸ್ವಿಯಾದರು. ಈ ಮೂಲಕ ತಾನು ಆಸ್ಟ್ರೇಲಿಯಾ ತಂಡಕ್ಕೆ ನಂಬಿಕಸ್ತಿ ಫಿನಿಷರ್ ಎಂಬುದನ್ನು ಮತ್ತೊಮ್ಮೆ ಸಾಬೀತುಪಡಿಸಿದ್ದಾರೆ. ಅಂತಿಮ ಓವರ್‌ನಲ್ಲಿ ವೆಸ್ಟ್ ಇಂಡೀಸ್ ತಂಡ ಎರಡು ಕ್ಯಾಚ್‌ಗಳನ್ನು ಕೈಚೆಲ್ಲಿದ್ದು ವಿಂಡೀಸ್ ಪಾಲಿಗೆ ಅತ್ಯಂತ ದುಬಾರಿಯಾಗಿ ಪರಿಣಮಿಸಿದ್ದು ಸುಳ್ಳಲ್ಲ.

ಇನ್ನು ಈ ಪಂದ್ಯದಲ್ಲಿ ವೆಸ್ಟ್ ಇಂಡೀಸ್ ತಂಡಕ್ಕೆ ಗೆಲುವು ಸಾಧಿಸಲು ಸಾಧ್ಯವಾಗದಿದ್ರೂ ಬೌಲಿಂಗ್ ವಿಭಾಗದ ಪ್ರದರ್ಶನದಿಂದಾಗಿ ಆತ್ಮವಿಶ್ವಾಸ ಹೆಚ್ಚಾಗಿರುವುದರಲ್ಲಿ ಅನುಮಾನವಿಲ್ಲ. ಆತಿಥೆಯ ಆಸ್ಟ್ರೇಲಿಯಾ ತಂಡದ ಬ್ಯಾಟರ್ ವಿಂಡೀಸ್ ದಾಳಿಗೆ ಉತ್ತರ ನೀಡಲು ಪರದಾಡಿದ್ದರು. ಫೀಲ್ಡಿಂಗ್‌ನಲ್ಲಿ ಎಡವದಿದ್ದರೆ ಈ ಪಂದ್ಯದಲ್ಲಿ ವಿಂಡೀಸ್ ತಂಡ ಗೆಲ್ಲುವ ಸಾಧ್ಯತೆ ಹೆಚ್ಚಾಗಿತ್ತು. ಇನ್ನು ಈ ಸರಣಿಯ ಎರಡನೇ ಹಾಗೂ ಅಂತಿಮ ಪಂದ್ಯ ಬ್ರಿಸ್ಬೇನ್‌ನ ಗಾಬಾದಲ್ಲಿ ಅಕ್ಟೋಬರ್ 7 ಗುರುವಾರ ನಡೆಯಲಿದೆ.

ಲೆಜೆಂಡ್ಸ್ ಲೀಗ್ ಕ್ರಿಕೆಟ್ 2022; ಫೈನಲ್‌ನಲ್ಲಿ ಗೌತಮ್ ಗಂಭೀರ್ ಬಳಗಕ್ಕೆ ಪಠಾಣ್ ಬಳಗ ಸವಾಲುಲೆಜೆಂಡ್ಸ್ ಲೀಗ್ ಕ್ರಿಕೆಟ್ 2022; ಫೈನಲ್‌ನಲ್ಲಿ ಗೌತಮ್ ಗಂಭೀರ್ ಬಳಗಕ್ಕೆ ಪಠಾಣ್ ಬಳಗ ಸವಾಲು

ಆಸ್ಟ್ರೇಲಿಯಾ ಪ್ಲೇಯಿಂಗ್ XI: ಡೇವಿಡ್ ವಾರ್ನರ್, ಕ್ಯಾಮರೂನ್ ಗ್ರೀನ್, ಮಿಚೆಲ್ ಮಾರ್ಷ್, ಆರೊನ್ ಫಿಂಚ್ (ನಾಯಕ), ಗ್ಲೆನ್ ಮ್ಯಾಕ್ಸ್‌ವೆಲ್, ಟಿಮ್ ಡೇವಿಡ್, ಮ್ಯಾಥ್ಯೂ ವೇಡ್ (ವಿಕೆಟ್ ಕೀಪರ್), ಮಿಚೆಲ್ ಸ್ಟಾರ್ಕ್, ಪ್ಯಾಟ್ ಕಮ್ಮಿನ್ಸ್, ಆಡಮ್ ಝಂಪಾ, ಜೋಶ್ ಹ್ಯಾಜಲ್ವುಡ್
ಬೆಂಚ್: ಡೇನಿಯಲ್ ಸ್ಯಾಮ್ಸ್, ಸ್ಟೀವನ್ ಸ್ಮಿತ್, ಸೀನ್ ಅಬಾಟ್, ಜೋಶ್ ಇಂಗ್ಲಿಸ್

ವೆಸ್ಟ್ ಇಂಡೀಸ್ ಪ್ಲೇಯಿಂಗ್ XI: ಬ್ರಾಂಡನ್ ಕಿಂಗ್, ಜಾನ್ಸನ್ ಚಾರ್ಲ್ಸ್ (ವಿಕೆಟ್ ಕೀಪರ್), ಕೈಲ್ ಮೇಯರ್ಸ್, ನಿಕೋಲಸ್ ಪೂರನ್ (ನಾಯಕ), ರೋವ್‌ಮನ್ ಪೊವೆಲ್, ಜೇಸನ್ ಹೋಲ್ಡರ್, ಓಡಿಯನ್ ಸ್ಮಿತ್, ರೇಮನ್ ರೈಫರ್, ಯಾನಿಕ್ ಕ್ಯಾರಿಯಾ, ಅಲ್ಜಾರಿ ಜೋಸೆಫ್, ಶೆಲ್ಡನ್ ಕಾಟ್ರೆಲ್
ಬೆಂಚ್: ಎವಿನ್ ಲೆವಿಸ್, ಅಕೇಲ್ ಹೊಸೈನ್, ಒಬೆಡ್ ಮೆಕಾಯ್, ಶಮರ್ ಬ್ರೂಕ್ಸ್

Story first published: Wednesday, October 5, 2022, 19:14 [IST]
Other articles published on Oct 5, 2022
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X