ಆಸ್ಟ್ರೇಲಿಯಾ vs ವೆಸ್ಟ್ ಇಂಡೀಸ್: 2ನೇ ಟಿ20 ಪಂದ್ಯ, Live ಸ್ಕೋರ್ ಮತ್ತು ಆಡುವ ಬಳಗ

ಆಸ್ಟ್ರೇಲಿಯಾ ಹಾಗೂ ವೆಸ್ಟ್ ಇಂಡೀಸ್ ನಡುವಿನ ಟಿ20 ಸರಣಿಯ ಎರಡನೇ ಹಾಗೂ ಅಂತಿಮ ಪಂದ್ಯ ಇಂದು ಬ್ರಿಸ್ಬೇನ್‌ನ ಗಾಬಾ ಕ್ರೀಡಾಂಗಣದಲ್ಲಿ ಆರಂಭವಾಗಿದೆ. ಈ ಪಂದ್ಯದಲ್ಲಿ ಪ್ರವಾಸಿ ವೆಸ್ಟ್ ಇಂಡೀಸ್ ತಂಡ ಟಾಸ್ ಗೆದ್ದಿದ್ದು ಮೊದಲಿಗೆ ಬೌಲಿಂಗ್ ಆಯ್ಕೆ ಮಾಡಿಕೊಂಡಿದೆ. ಹೀಗಾಗಿ ಆತಿಥೇಯ ಆಸ್ಟ್ರೇಲಿಯಾ ಮೊದಲಿಗೆ ಬ್ಯಾಟಿಂಗ್ ನಡೆಸಿ ಪ್ರವಾಸಿ ತಂಡಕ್ಕೆ ಗುರಿಯನ್ನು ನಿಗದಿಪಡಿಸಲಿದೆ.
ಚುಟುಕು ವಿಶ್ವಕಪ್‌ಗೆ ತಯಾರಿಯ ಭಾಗವಾಗಿ ನಡೆಯುತ್ತಿರುವ ಈ ಸರಣಿಯ ಎರಡನೇ ಹಾಗೂ ಅಂತಿಮ ಪಂದ್ಯದಲ್ಲಿ ಆಸ್ಟ್ರೇಲಿಯಾ ತಂಡ ಒಂದು ಬದಲಾವಣೆ ಮಾಡಿಕೊಂಡಿದೆ. ಹಿರಿಯ ಆಟಗಾರ ಸ್ಟೀವ್ ಸ್ಮಿತ್ ಆಡುವ ಬಳಗದಲ್ಲಿ ಸ್ಥಾನವನ್ನು ಪಡೆದುಕೊಳ್ಳುವಲ್ಲಿ ಯಶಸ್ವಿಯಾಗಿದ್ದು ಮಿಚೆಲ್ ಮಾರ್ಶ್ ಅವರಿಗಾಗಿ ಸ್ಥಾನವನ್ನು ಬಿಟ್ಟುಕೊಟ್ಟಿದ್ದಾರೆ. ಇನ್ನು ಪ್ರವಾಸಿ ವೆಸ್ಟ್ ಇಂಡೀಸ್ ತಂಡ ಈ ಪಂದ್ಯಕ್ಕಾಗಿ ಎರಡು ಬದಲಾವಣೆ ಮಾಡಿಕೊಂಡಿದೆ. ಅಕೀಲ್ ಹುಸೇನ್ ಹಾಗೂ ಒಬೇಡ್ ಮೆಕ್ಕಾಯ್ ಆಡುವ ಬಳಗದಲ್ಲಿ ಸ್ಥಾನ ಪಡೆದುಕೊಂಡಿದ್ದರೆ ರೇಯ್ಮನ್ ರೈಫರ್ ಹಾಗೂ ಶೆಲ್ಡನ್ ಕಾಟ್ರೆಲ್ ಆಡುವ ಬಳಗದಿಂದ ಹೊರಬಿದ್ದಿದ್ದಾರೆ.
Live ಸ್ಕೋರ್‌ಕಾರ್ಡ್ ಹೀಗಿದೆ

ಮೊದಲ ಪಂದ್ಯದಲ್ಲಿ ಆಸಿಸ್‌ಗೆ ರೋಚಕ ಗೆಲುವು
ಎರಡು ಪಂದ್ಯಗಳ ಈ ಸರಣಿಯಲ್ಲಿ ಆತಿಥೇಯ ಆಸ್ಟ್ರೇಲಿಯಾ ತಂಡ ಕಡೆಯ ಕ್ಷಣದವರೆಗೂ ಹೋರಾಟ ನಡೆಸಿ ಪ್ರಯಾಸದ ಜಯ ದಾಖಲಿಸಿತ್ತು. ಕ್ವೀನ್ಸ್‌ಲ್ಯಾಂಡ್‌ನ ಕೆರೆರಾ ಕ್ರೀಡಾಂಗಣದಲ್ಲಿ ನಡೆದ ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ವೆಸ್ಟ್ ಇಂಡಿಸ್ 145 ರನ್‌ಗಳನ್ನು ಮಾತ್ರವೇ ಗಳಿಸಲು ಶಕ್ತವಾಗಿತ್ತು. ಹೀಗಾಗಿ ಈ ಮೊತ್ತವನ್ನು ಆತಿಥೇಯ ಆಸಿಸ್ ಪಡೆ ಭರ್ಜರಿಯಾಗಿ ಗೆಲ್ಲುವ ನಿರೀಕ್ಷೆಯನ್ನು ಕ್ರಿಕೆಟ್ ಅಭಿಮಾನಿಗಳು ಹೊಂದಿದ್ದರು. ಆದರೆ ವೆಸ್ಟ್ ಇಂಡೀಸ್ ಬೌಲರ್‌ಗಳು ಆಸಿಸ್ ಪಡೆಗೆ ಬಹಳ ಕಾಡಿದರು. ನಾಯಕ ಆರೋನ್ ಫಿಂಚ್ ಹಾಗೂ ಮ್ಯಾಥ್ಯೂ ವೇಡ್ ಅವರ ಸಮಯೋಚಿತ ಬ್ಯಾಟಿಂಗ್ ಪ್ರದರ್ಶನದ ಕಾರಣದಿಂದಾಗಿ ಆಸಿಸ್ ಪಡೆ ಗೆಲುವು ಸಾಧ್ಯವಾಗಿತ್ತು. ಅದರಲ್ಲೂ ವೇಡ್ ಅಂತಿಮ ಹಂತದವರೆಗೂ ಹೋರಾಡಿ ತಂಡಕ್ಕೆ ಗೆಲುವು ಒದಗಿಸಿದರು.

ಆಸ್ಟ್ರೇಲಿಯಾ ಪ್ಲೇಯಿಂಗ್ XI
ಆಸ್ಟ್ರೇಲಿಯಾ ತಂಡ: ಡೇವಿಡ್ ವಾರ್ನರ್, ಆರೋನ್ ಫಿಂಚ್ (ನಾಯಕ), ಸ್ಟೀವನ್ ಸ್ಮಿತ್, ಗ್ಲೆನ್ ಮ್ಯಾಕ್ಸ್‌ವೆಲ್, ಟಿಮ್ ಡೇವಿಡ್, ಕ್ಯಾಮೆರಾನ್ ಗ್ರೀನ್, ಮ್ಯಾಥ್ಯೂ ವೇಡ್ (WK), ಮಿಚೆಲ್ ಸ್ಟಾರ್ಕ್, ಪ್ಯಾಟ್ ಕಮಿನ್ಸ್, ಆಡಮ್ ಝಂಪಾ, ಜೋಶ್ ಹ್ಯಾಜಲ್‌ವುಡ್
ಬೆಂಚ್: ಮಿಚೆಲ್ ಮಾರ್ಷ್, ಸೀನ್ ಅಬಾಟ್, ಜೋಶ್ ಇಂಗ್ಲಿಸ್, ಡೇನಿಯಲ್ ಸ್ಯಾಮ್ಸ್

ವೆಸ್ಟ್ ಇಂಡೀಸ್ ಪ್ಲೇಯಿಂಗ್ XI
ವೆಸ್ಟ್ ಇಂಡೀಸ್ : ಕೈಲ್ ಮೇಯರ್ಸ್, ಜಾನ್ಸನ್ ಚಾರ್ಲ್ಸ್, ಬ್ರಾಂಡನ್ ಕಿಂಗ್, ನಿಕೋಲಸ್ ಪೂರನ್ (ನಾಯಕ & ವಿಕೆಟ್ ಕೀಪರ್), ರೋವ್‌ಮನ್ ಪೊವೆಲ್, ಜೇಸನ್ ಹೋಲ್ಡರ್, ಓಡಿಯನ್ ಸ್ಮಿತ್, ಅಕೇಲ್ ಹೊಸೈನ್, ಯಾನಿಕ್ ಕ್ಯಾರಿಯಾ, ಅಲ್ಜಾರಿ ಜೋಸೆಫ್, ಓಬೆಡ್ ಮೆಕಾಯ್
ಬೆಂಚ್: ಶೆಲ್ಡನ್ ಕಾಟ್ರೆಲ್, ರೇಮನ್ ರೀಫರ್, ಶಮರ್ ಬ್ರೂಕ್ಸ್, ಎವಿನ್ ಲೆವಿಸ್
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications