ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

ಟಿ20 ಮಾದರಿಯಲ್ಲಿ ತನ್ನ ಭವಿಷ್ಯದ ಬಗ್ಗೆ ಮಹತ್ವದ ಹೇಳಿದ ನೀಡಿದ ಡೇವಿಡ್ ವಾರ್ನರ್

Austalian batter David Warner said Ill look to try and get to the 2024 t20 World Cup

ಆಸ್ಟ್ರೇಲಿಯಾದಲ್ಲಿ ಟಿ20 ವಿಶ್ವಕಪ್ ನಡೆಯುತ್ತಿರುವ ಸಂದರ್ಭದಲ್ಲಿ ಆಸ್ಟ್ರೇಲಿಯಾ ತಂಡದ ಪ್ರಮುಖ ಆಟಗಾರ ಸ್ಪೋಟಕ ಬ್ಯಾಟರ್ ಡೇವಿಡ್ ವಾರ್ನರ್ ತಮ್ಮ ಕ್ರಿಕೆಟ್ ಭವಿಷ್ಯದ ಬಗ್ಗೆ ಕುತೂಹಲಕಾರಿ ಮಾಹಿತಿಯನ್ನು ಹಂಚಿಕೊಂಡಿದ್ದಾರೆ. ಈ ಬಾರಿಯ ವಿಶ್ವಕಪ್‌ಗೆ ಆಸ್ಟ್ರೇಲಿಯಾ ಆತಿಥ್ಯ ವಹಿಸಿಕೊಂಡಿದ್ದು ಹಾಲಿ ಚಾಂಪಿಯನ್ ಆಸ್ಟ್ರೇಲಿಯಾ ತಂಡ ಈ ಬಾರಿಯೂ ತನ್ನಲ್ಲಿಯೇ ಟ್ರೋಫಿ ಉಳಿಸಿಕೊಳ್ಳುವ ಪ್ರಯತ್ನ ನಡೆಸಲಿದೆ. ಈ ಸಂದರ್ಭದಲ್ಲಿ ವಾರ್ನರ್ ಮುಂದಿನ ಟಿ20 ವಿಶ್ವಕಪ್‌ನಲ್ಲಿಯೂ ಆಡುವ ಬಗ್ಗೆ ತಮ್ಮ ಇಂಗಿತ ವ್ಯಕ್ತಪಡಿಸಿದ್ದಾರೆ.

ಆಸ್ಟ್ರೇಲಿಯಾ ತಂಡದ ಅಗ್ರ ಕ್ರಮಾಂಕದ ಆಟಗಾರ ಡೇವಿಡ್ ವಾರ್ನರ್ ಟಿ20 ಮಾದರಿಯಲ್ಲಿ 2024ರ ವಿಶ್ವಕಪ್‌ವರೆಗೂ ಮುಂದುವರಿಸುವ ವಿಶ್ವಾಸವನ್ನು ವ್ಯಕ್ತಪಡಿಸಿದ್ದಾರೆ. ಇದೇ ಸಂದರ್ಭದಲ್ಲಿ ವಾರ್ನರ್ ಟೆಸ್ಟ್ ಕ್ರಿಕೆಟ್ ವಿಚಾರವಾಗಿಯೂ ಮುಂದಿನ ವರ್ಷ ನಿರ್ಧಾರ ತೆಗೆದುಕೊಳ್ಳುವುದಾಗಿ ಎಂದಿದ್ದಾರೆ ಡೇವಿಡ್ ವಾರ್ನರ್.

ಟಿ20 ವಿಶ್ವಕಪ್ 2022: ಭಾರತೀಯ ಕ್ರಿಕೆಟ್ ಬೆಳವಣಿಗೆ ಶ್ಲಾಘಿಸಿದ ಆಸೀಸ್ ಮಾಜಿ ನಾಯಕ ರಿಕಿ ಪಾಂಟಿಂಗ್ಟಿ20 ವಿಶ್ವಕಪ್ 2022: ಭಾರತೀಯ ಕ್ರಿಕೆಟ್ ಬೆಳವಣಿಗೆ ಶ್ಲಾಘಿಸಿದ ಆಸೀಸ್ ಮಾಜಿ ನಾಯಕ ರಿಕಿ ಪಾಂಟಿಂಗ್

ಆಸಿಸ್ ತಂಡದ ಪ್ರಮುಖ ಆಟಗಾರ ವಾರ್ನರ್

ಆಸಿಸ್ ತಂಡದ ಪ್ರಮುಖ ಆಟಗಾರ ವಾರ್ನರ್

ಡೇವಿಡ್ ವಾರ್ನರ್ ಸುದೀರ್ಘ ಕಾಲದಿಂದ ಆಸ್ಟ್ರೇಲಿಯಾ ತಂಡದ ಪ್ರಮುಖ ಭಾಗವಾಗಿದ್ದಾರೆ. ಹತ್ತುವರ್ಷಗಳಿಗೂ ಅಧಿಕ ಕಾಲ ಆಸಿಸ್ ತಂಡದ ಪ್ರಮುಖ ಆಟಗಾರನಾಗಿ ಗುರುತಿಸಿಕೊಂಡಿರುವ ವಾರ್ನರ್ ಎಲ್ಲಾ ಮಾದರಿಯಲ್ಲಿಯೂ ಅದ್ಭುತ ಪ್ರದರ್ಶನ ನೀಡಿಕೊಂಡು ಬಂದಿದ್ದಾರೆ. 96 ಟೆಸ್ಟ್ ಪಂದ್ಯಗಳನ್ನು ಆಡಿರುವ ವಾರ್ನರ್, 138 ಏಕದಿನ ಪಂದ್ಯಗಳಲ್ಲಿ ಆಸ್ಟ್ರೇಲಿಯಾ ತಂಡವನ್ನು ಪ್ರತಿನೀಧಿಸಿದ್ದಾರೆ. ಇನ್ನು ಟಿ20 ಮಾದರಿಯಲ್ಲಿ ವಾರ್ನರ್ 95 ಪಂದ್ಯಗಳನ್ನು ಆಡಿದ ಸಾಧನೆ ಮಾಡಿದ್ದಾರೆ.

ಭವಿಷ್ಯದ ಬಗ್ಗೆ ವಾರ್ನರ್ ಮಾತು

ಭವಿಷ್ಯದ ಬಗ್ಗೆ ವಾರ್ನರ್ ಮಾತು

"ನಾನು ಟಿ20 ಮಾದರಿಯಲ್ಲಿ ಆಡುವುದನ್ನು ಮುಂದುವರಿಸುತ್ತೇನೆ. ನಾನು 2024ರ ವಿಶ್ವಕಪ್‌ನಲ್ಲಿಯೂ ಆಡುವ ಮೇಲೆ ಚಿತ್ತ ನೆಟ್ಟಿದ್ದೇನೆ" ಎಂದಿದ್ದಾರೆ ಡೇವಿಡ್ ವಾರ್ನರ್. 2024ರಲ್ಲಿ ವೆಸ್ಟ್ ಇಂಡೀಸ್ ಹಾಗೂ ಯುನೈಟೆಡ್ ಸ್ಟೇಟ್ಸ್ ಜಂಟಿಯಾಗಿ ವಿಶ್ವಕಪ್ ಟೂರ್ನಿಯನ್ನು ಆಯೋಜಿಸಲಿದೆ. ಇನ್ನು ಇದೇ ಸಂದರ್ಭದಲ್ಲಿ ಮುಂದಿನ ವರ್ಷ ಭಾರತದಲ್ಲಿ ನಡೆಯಲಿರುವ ಏಕದಿನ ವಿಶ್ವಕಪ್‌ಗೆ ಸಂಬಂಧಿಸಿದಂತೆ ಈಗಾಗಲೇ ತನ್ನ ಗುರಿಯನ್ನು ಸಿದ್ಧಪಡಿಸಿಕೊಂಡಿರುವುದಾಗಿ ಹೇಳಿಕೊಂಡಿದ್ದಾರೆ.

ಈಗ ನನ್ನ ಗಮನ ಫಿಟ್‌ನೆಸ್ ಎಂದ ವಾರ್ನರ್

ಈಗ ನನ್ನ ಗಮನ ಫಿಟ್‌ನೆಸ್ ಎಂದ ವಾರ್ನರ್

ಇನ್ನು ಇದೇ ಸಂದರ್ಭದಲ್ಲಿ ಡೇವಿಡ್ ವಾರ್ನರ್ ಈಗ ತಾವು ಕೌಶಲ್ಯವನ್ನು ಹೆಚ್ಚಿಸಿಕೊಳ್ಳುವುದರ ಮೇಲೆ ಹೆಚ್ಚು ಗಮನಹರಿಸುತ್ತಿಲ್ಲ ಎಂದು ಹೇಳಿದ್ದಾರೆ. "ನಾನು ಇತ್ತೀಚಿನ ದಿನಗಳಲ್ಲಿ ಕೌಶಲ್ಯದ ಕಡೆಗೆ ಹೆಚ್ಚು ಗಮನಹರಿಸುತ್ತಿಲ್ಲ. ಈಗ ನನ್ನ ಗಮನ ಸಾಧ್ಯವಾದಷ್ಟು ಫಿಟ್ ಆಗಿ ಉಳಿದುಕೊಳ್ಳುವುದಾಗಿದೆ. ಸಾಧ್ಯವಾದಷ್ಟು ಚಾಣಾಕ್ಷತದಿಂದ ಮುಂದುವರಿಸಲು ಬಯಸುತ್ತೇನೆ" ಎಂದಿದ್ದಾರೆ ಆಸ್ಟ್ರೇಲಿಯಾ ತಂಡದ ಆರಂಭಿಕ ಆಟಗಾರ ಡೇವಿಡ್ ವಾರ್ನರ್.

Story first published: Friday, October 21, 2022, 12:56 [IST]
Other articles published on Oct 21, 2022
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X