
ಡೇ ಅಂಡ್ ನೈಟ್ ಟೆಸ್ಟ್
ಅಡಿಲೇಡ್ ಓವಲ್ ಮೈದಾನದಲ್ಲಿ ನಡೆಯಲಿರುವ ಎರಡನೇ ಟೆಸ್ಟ್ ಪಂದ್ಯ ಡೈ-ನೈಟ್ ಪಂದ್ಯವಾಗಿದ್ದು ಪಿಂಕ್ ಚೆಂಡಿನೊಂದಿಗೆ ಆಡಲಾಗುತ್ತದೆ. ಮಿಚೆಲ್ ಸ್ಟಾರ್ಕ್ ಮತ್ತು ನಾಯಕ ಪ್ಯಾಟ್ ಕಮ್ಮಿನ್ಸ್ ಜೊತೆಗೆ ಜೈ ರಿಚರ್ಡ್ಸನ್ ನಥಾನ್ ಲಿಯಾನ್ ಅವರ ಏಕೈಕ ಸ್ಪಿನ್-ಬೌಲಿಂಗ್ ಆಯ್ಕೆಯಾಗಿ ಉಳಿದಿದ್ದಾರೆ.
''ದಕ್ಷಿಣ ಆಫ್ರಿಕಾ ವಿರುದ್ಧ ಏಕದಿನ ಸರಣಿಯಲ್ಲಿ ಕೊಹ್ಲಿ ಭಾಗವಹಿಸೋದಿಲ್ವಾ?": ಇಂದು ವಿರಾಟ್ ಸುದ್ದಿಗೋಷ್ಠಿ

ಬ್ರಿಸ್ಬೇನ್ ಟೆಸ್ಟ್‌ನಲ್ಲಿ ಭರ್ಜರಿ ಪ್ರದರ್ಶನ ನೀಡಿದ ಆಸ್ಟ್ರೇಲಿಯಾ
ಮೊದಲ ಟೆಸ್ಟ್ ಪಂದ್ಯವು ಸಂಪೂರ್ಣವಾಗಿ ಒನ್ ಸೈಡ್ ಪಂದ್ಯವಾಗಿ ಕಂಡುಬಂದಿತು. ಕಾಂಗರೂಗಳು ತಮ್ಮ ಸಾಂಪ್ರದಾಯಿಕ ಎದುರಾಳಿಗಳನ್ನು 4 ದಿನಗಳಲ್ಲಿ ಸೋಲಿಸಿದ್ರು. ಆಸೀಸ್ ದಾಳಿಗೆ ನೆಲಕಚ್ಚಿದ ಇಂಗ್ಲೆಂಡ್ ಬ್ಯಾಟ್ಸ್‌ಮನ್‌ಗಳು ಸಂಪೂರ್ಣವಾಗಿ ನೆಲಕಚ್ಚಿದರು. ಜೋ ರೂಟ್ ಮತ್ತು ಡೇವಿಡ್ ಮಲಾನ್ ಹೊರತುಪಡಿಸಿ, ಇಡೀ ಟೆಸ್ಟ್ ಪಂದ್ಯದಲ್ಲಿ ಯಾವುದೇ ಇಂಗ್ಲೆಂಡ್ ಬ್ಯಾಟ್ಸ್‌ಮನ್ ಅರ್ಧಶತಕವನ್ನು ಗಳಿಸಲು ಸಾಧ್ಯವಾಗಲಿಲ್ಲ.
ಬ್ರಿಸ್ಬೇನ್‌ನ ಗಬ್ಬಾದಲ್ಲಿ 9 ವಿಕೆಟ್‌ಗಳ ಭರ್ಜರಿ ಜಯಗಳಿಸದ ಆಸ್ಟ್ರೇಲಿಯಾ ಪರ ಎಡಗೈ ಬ್ಯಾಟ್ಸ್‌ಮನ್ ಟ್ರಾವಿಸ್ ಹೆಡ್ ಮೊದಲ ಇನ್ನಿಂಗ್ಸ್‌ನಲ್ಲಿ 152 ರನ್ ಗಳಿಸಿ ಪಂದ್ಯ ಶ್ರೇಷ್ಠ ಪ್ರಶಸ್ತಿ ಪಡೆದ್ರೆ, ನಾಯಕ ಪ್ಯಾಟ್ ಕಮಿನ್ಸ್ 5 ವಿಕೆಟ್ ಪಡೆದು ದಾಖಲೆ ಬರೆದ್ರು. ಈ ಗೆಲುವಿನ ಮೂಲಕ ಆಸ್ಟ್ರೇಲಿಯಾ 5 ಪಂದ್ಯಗಳ ಸರಣಿಯಲ್ಲಿ 1-0 ಮುನ್ನಡೆ ಸಾಧಿಸಿದೆ.

ದ್ವಿತೀಯ ಟೆಸ್ಟ್‌ಗೆ ಆಸ್ಟ್ರೇಲಿಯಾ ಪ್ಲೇಯಿಂಗ್ 11
ಮಾರ್ಕಸ್ ಹ್ಯಾರಿಸ್, ಡೇವಿಡ್ ವಾರ್ನರ್, ಮಾರ್ನಸ್ ಲ್ಯಾಬುಸ್ಚಾಗ್ನೆ, ಸ್ಟೀವ್ ಸ್ಮಿತ್, ಟ್ರಾವಿಸ್ ಹೆಡ್, ಕ್ಯಾಮೆರಾನ್ ಗ್ರೀನ್, ಅಲೆಕ್ಸ್ ಕ್ಯಾರಿ (ವಿಕೆಟ್ ಕೀಪರ್), ಪ್ಯಾಟ್ ಕಮಿನ್ಸ್ (ನಾಯಕ), ಮಿಚೆಲ್ ಸ್ಟಾರ್ಕ್, ನಥಾನ್ ಲಿಯಾನ್, ಜೈ ರಿಚರ್ಡ್ಸನ್
ಆಶಸ್ ಟೆಸ್ಟ್: ಎರಡನೇ ಪಂದ್ಯದಲ್ಲಿ ವಿಶೇಷ ಮೈಲಿಗಲ್ಲಿನ ಮೇಲೆ ಕಣ್ಣಿಟ್ಟ ಮೂವರು ಆಸಿಸ್ ಆಟಗಾರರು

ಜೇಮ್ಸ್ ಆ್ಯಂಡರ್ಸನ್, ಸ್ಟುವರ್ಟ್ ಬ್ರಾಡ್ ಕಣಕ್ಕಿಳಿಯಲಿದ್ದಾರೆ
ಇಂಗ್ಲೆಂಡ್ ಪರ ವೇಗದ ಬೌಲಿಂಗ್‌ನ ಅನುಭವಿಗಳಾದ ಜೇಮ್ಸ್ ಆಂಡರ್ಸನ್ ಮತ್ತು ಸ್ಟುವರ್ಟ್ ಬ್ರಾಡ್ ಅವರು ಫಿಟ್ ಆಗಿದ್ದು, 2ನೇ ಟೆಸ್ಟ್‌ಗೆ ಆಯ್ಕೆಯಾಗಲಿದ್ದಾರೆ ಎಂದು ಇಂಗ್ಲೆಂಡ್ ಕೋಚ್ ಕ್ರಿಸ್ ಸಿಲ್ವರ್‌ವುಡ್ ದೃಢಪಡಿಸಿದ್ದಾರೆ. ಈ ಮೂಲಕ ಇಂಗ್ಲೆಂಡ್ ತಂಡದ ಬೌಲಿಂಗ್ ಬಲವು ಮತ್ತಷ್ಟು ಬಲಿಷ್ಠವಾಗಿದ್ದು ಅಡಿಲೇಡ್ ಟೆಸ್ಟ್ ಇಂಗ್ಲೆಂಡ್ ಕಂಬ್ಯಾಕ್ ಮಾಡುವ ಯೋಜನೆ ರೂಪಿಸಿಕೊಂಡಿದೆ.
ದೀರ್ಘ ಸಮಯದ ಬಳಿಕ ಇಂಗ್ಲೆಂಡ್ ತಂಡಕ್ಕೆ ಕಂಬ್ಯಾಕ್ ಮಾಡಿರುವ ಬೆನ್ ಸ್ಟೋಕ್ಸ್ ಫಾರ್ಮ್‌ಗೆ ಮರಳಿದ್ದೇ ಆದಲ್ಲಿ ಆಸ್ಟ್ರೇಲಿಯಾ ತಂಡವು ಆತಿಥೇಯರನ್ನ ಕಟ್ಟಿಹಾಕುವಲ್ಲಿ ಕಠಿಣ ಸವಾಲು ಎದುರಾಗಬಹುದು.

ಇಂಗ್ಲೆಂಡ್ ಸಂಪೂರ್ಣ ಸ್ಕ್ವಾಡ್
ರೋರಿ ಬರ್ನ್ಸ್, ಹಸೀಬ್ ಹಮೀದ್, ಡೇವಿಡ್ ಮಲನ್, ಜೋ ರೂಟ್ (ನಾಯಕ), ಬೆನ್ ಸ್ಟೋಕ್ಸ್, ಆಲಿ ಪೋಪ್, ಜೋಸ್ ಬಟ್ಲರ್ (ವಿಕೆಟ್ ಕೀಪರ್), ಕ್ರಿಸ್ ವೋಕ್ಸ್, ಆಲಿ ರಾಬಿನ್ಸನ್, ಮಾರ್ಕ್ ವುಡ್, ಜ್ಯಾಕ್ ಲೀಚ್, ಜಾನಿ ಬೈರ್‌ಸ್ಟೋವ್, ಕ್ರೇಗ್ ಓವರ್‌ಟನ್, ಡೇನಿಯಲ್ ಲಾರೆನ್ಸ್, ಡೊಮಿನಿಕ್ ಬೆಸ್ , ಝಾಕ್ ಕ್ರಾಲಿ, ಸ್ಟುವರ್ಟ್ ಬ್ರಾಡ್ , ಜೇಮ್ಸ್ ಆ್ಯಂಡರ್ಸನ್


Click it and Unblock the Notifications












