ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

ಟಿಟ್ವೆಂಟಿ ವಿಶ್ವಕಪ್‌: 15 ಆಟಗಾರರ ತಂಡ ಪ್ರಕಟಿಸಿದ ಆಸ್ಟ್ರೇಲಿಯಾ; ಸ್ಥಾನ ಪಡೆದ ಬಲಿಷ್ಠ ಆಟಗಾರ

Australia announced 15 man squad for upcoming T20 worldcup 2021

ಭಾರತದಲ್ಲಿ ನಡೆಯಬೇಕಾಗಿದ್ದ ಬಹುನಿರೀಕ್ಷಿತ ಟಿ ಟ್ವೆಂಟಿ ವಿಶ್ವಕಪ್ ಟೂರ್ನಿ ಕೊರೊನಾ ವೈರಸ್ ಕಾರಣದಿಂದಾಗಿ ಯುಎಇಗೆ ಸ್ಥಳಾಂತರವಾಗಿದೆ. ಹೀಗೆ ಸ್ಥಳಾಂತರವಾಗಿರುವ ಈ ಬಾರಿಯ ಟಿ ಟ್ವೆಂಟಿ ವಿಶ್ವಕಪ್ ಟೂರ್ನಿಯು ಯು. ಎ. ಇ. ಯಲ್ಲಿ ಅಕ್ಟೋಬರ್ 17 ರಂದು ಆರಂಭವಾಗಲಿದ್ದು ನವೆಂಬರ್ 14 ರಂದು ನಡೆಯಲಿರುವ ಫೈನಲ್ ಪಂದ್ಯದ ಮೂಲಕ ಅಂತ್ಯಗೊಳ್ಳಲಿದೆ.

ಟಿ ಟ್ವೆಂಟಿ ವಿಶ್ವಕಪ್‌ನಲ್ಲಿ ವೆಸ್ಟ್ ಇಂಡೀಸ್ ಜೊತೆ ಈ ತಂಡ ಫೈನಲ್ ಪ್ರವೇಶಿಸಲಿದೆ ಎಂದ ದಿನೇಶ್ ಕಾರ್ತಿಕ್ಟಿ ಟ್ವೆಂಟಿ ವಿಶ್ವಕಪ್‌ನಲ್ಲಿ ವೆಸ್ಟ್ ಇಂಡೀಸ್ ಜೊತೆ ಈ ತಂಡ ಫೈನಲ್ ಪ್ರವೇಶಿಸಲಿದೆ ಎಂದ ದಿನೇಶ್ ಕಾರ್ತಿಕ್

ಈ ಬಾರಿಯ ಟಿ ಟ್ವೆಂಟಿ ವಿಶ್ವಕಪ್ ಟೂರ್ನಿ ಆರಂಭಕ್ಕೆ ಇನ್ನೂ 2 ತಿಂಗಳು ಬಾಕಿ ಇರುವಾಗಲೇ ಐಸಿಸಿ ವೇಳಾಪಟ್ಟಿ ಬಿಡುಗಡೆ ಮಾಡಿದ್ದು ಯಾವ ತಂಡಗಳು ಯಾವ ತಂಡಗಳ ವಿರುದ್ಧ ಯಾವ ಗುಂಪಿನಲ್ಲಿ ಸೆಣಸಾಡಲಿವೆ ಎಂಬ ಮಾಹಿತಿಯನ್ನು ಬಿಟ್ಟುಕೊಟ್ಟಿದೆ. ಹೀಗಾಗಿ ಲೀಗ್ ಹಂತಗಳ ಪಂದ್ಯಗಳಲ್ಲಿ ಯಾವ ತಂಡ ಯಾವ ತಂಡವನ್ನು ಸೋಲಿಸಿ, ಎಷ್ಟು ಅಂಕಗಳನ್ನು ಪಡೆದುಕೊಳ್ಳುವುದರ ಮೂಲಕ ಸೆಮಿಫೈನಲ್ ಪ್ರವೇಶಿಸಲಿದೆ ಮತ್ತು ಯಾವ ತಂಡ ಫೈನಲ್ ತಲುಪಲಿದೆ ಎಂಬುದರ ಕುರಿತು ಕ್ರಿಕೆಟ್ ಪಂಡಿತರು ಮತ್ತು ಮಾಜಿ ಕ್ರಿಕೆಟಿಗರು ಲೆಕ್ಕಾಚಾರಗಳನ್ನು ಹಾಕುತ್ತಿದ್ದಾರೆ.

 ಟಿ ಟ್ವೆಂಟಿ ವಿಶ್ವಕಪ್‌ಗೆ ಹಾರ್ದಿಕ್ ಪಾಂಡ್ಯ ಬದಲು ಆಯ್ಕೆಯಾಗಬಲ್ಲ 3 ಆಟಗಾರರು ಟಿ ಟ್ವೆಂಟಿ ವಿಶ್ವಕಪ್‌ಗೆ ಹಾರ್ದಿಕ್ ಪಾಂಡ್ಯ ಬದಲು ಆಯ್ಕೆಯಾಗಬಲ್ಲ 3 ಆಟಗಾರರು

ಇನ್ನೊಂದೆಡೆ ಕೆಲ ತಂಡಗಳು ಮುಂಬರಲಿರುವ ಟಿ ಟ್ವೆಂಟಿ ವಿಶ್ವಕಪ್ ಟೂರ್ನಿಯಲ್ಲಿ ಭಾಗವಹಿಸಲಿರುವ ಆಟಗಾರರ ಪಟ್ಟಿಯನ್ನು ಬಿಡುಗಡೆಗೊಳಿಸಿವೆ. ಇತ್ತೀಚೆಗಷ್ಟೇ ನ್ಯೂಜಿಲೆಂಡ್ ಮತ್ತು ಇಂಗ್ಲೆಂಡ್ ತಂಡಗಳು ಮುಂಬರಲಿರುವ ಟಿ ಟ್ವೆಂಟಿ ವಿಶ್ವಕಪ್ ಟೂರ್ನಿಗೆ ತಮ್ಮ ತಂಡಗಳನ್ನು ಪ್ರಕಟಿಸಿದ್ದವು. ನ್ಯೂಜಿಲೆಂಡ್ ಮತ್ತು ಇಂಗ್ಲೆಂಡ್ ತಮ್ಮ ತಂಡಗಳನ್ನು ಪ್ರಕಟಿಸಿದ ಬೆನ್ನಲ್ಲೇ ಇದೀಗ ಆಸ್ಟ್ರೇಲಿಯಾ ಕೂಡ ಮುಂಬರುವ ಟಿ ಟ್ವೆಂಟಿ ವಿಶ್ವಕಪ್ ಟೂರ್ನಿಗೆ ತನ್ನ 15 ಆಟಗಾರರ ತಂಡವನ್ನು ಪ್ರಕಟಿಸಿದೆ.

ಟಿ ಟ್ವೆಂಟಿ ವಿಶ್ವಕಪ್‌ಗೆ ಪ್ರಕಟವಾಗಿರುವ 15 ಆಟಗಾರರ ಆಸ್ಟ್ರೇಲಿಯಾ ತಂಡ

ಟಿ ಟ್ವೆಂಟಿ ವಿಶ್ವಕಪ್‌ಗೆ ಪ್ರಕಟವಾಗಿರುವ 15 ಆಟಗಾರರ ಆಸ್ಟ್ರೇಲಿಯಾ ತಂಡ

ಮುಂಬರಲಿರುವ ಟಿ ಟ್ವೆಂಟಿ ವಿಶ್ವಕಪ್ ಟೂರ್ನಿಯಲ್ಲಿ ಭಾಗವಹಿಸಲು ಆಸ್ಟ್ರೇಲಿಯಾದ 15 ಆಟಗಾರರ ತಂಡವನ್ನು ಪ್ರಕಟಿಸಲಾಗಿದ್ದು ಆ್ಯರನ್ ಫಿಂಚ್ ನಾಯಕತ್ವವನ್ನು ವಹಿಸಿಕೊಳ್ಳಲಿದ್ದಾರೆ ಮತ್ತು ಪ್ಯಾಟ್ ಕಮಿನ್ಸ್ ಉಪನಾಯಕನಾಗಿ ಕಣಕ್ಕಿಳಿಯಲಿದ್ದಾರೆ.

ಟಿ ಟ್ವೆಂಟಿ ವಿಶ್ವಕಪ್‌ಗೆ ಆಸ್ಟ್ರೇಲಿಯಾ ಪ್ರಕಟಿಸಿರುವ 15 ಆಟಗಾರರ ತಂಡ: ಆರನ್ ಫಿಂಚ್ (ನಾಯಕ), ಆಷ್ಟನ್ ಅಗರ್, ಪ್ಯಾಟ್ ಕಮಿನ್ಸ್ (ಉಪ ನಾಯಕ), ಜೋಶ್ ಹೇಜಲ್‌ವುಡ್, ಜೋಶ್ ಇಂಗ್ಲಿಸ್, ಮಿಚೆಲ್ ಮಾರ್ಷ್, ಗ್ಲೆನ್ ಮ್ಯಾಕ್ಸ್‌ವೆಲ್, ಕೇನ್ ರಿಚರ್ಡ್ಸನ್, ಸ್ಟೀವ್ ಸ್ಮಿತ್, ಮಿಚೆಲ್ ಸ್ಟಾರ್ಕ್, ಮಾರ್ಕಸ್ ಸ್ಟೊಯಿನಿಸ್, ಮಿಚೆಲ್ ಸ್ವೇಪ್ಸನ್, ಮ್ಯಾಥ್ಯೂ ವೇಡ್, ಡೇವಿಡ್ ವಾರ್ನರ್ ಮತ್ತು ಆಡಮ್ ಜಂಪಾ.

ಪ್ರಯಾಣ ಮೀಸಲು: ಡೇನಿಯಲ್ ಕ್ರಿಶ್ಚಿಯನ್, ನಾಥನ್ ಎಲ್ಲಿಸ್ ಮತ್ತು ಡೇನಿಯಲ್ ಸ್ಯಾಮ್ಸ್

ಜೋಶ್ ಇಂಗ್ಲಿಸ್‌ಗೆ ತಂಡದಲ್ಲಿ ಅವಕಾಶ

ಜೋಶ್ ಇಂಗ್ಲಿಸ್‌ಗೆ ತಂಡದಲ್ಲಿ ಅವಕಾಶ

ಇನ್ನು ಆಸ್ಟ್ರೇಲಿಯಾ ಪ್ರಕಟಿಸಿರುವ ಈ ತಂಡದಲ್ಲಿ ಬಲಗೈ ಬ್ಯಾಟ್ಸ್‌ಮನ್‌ ಹಾಗೂ ವಿಕೆಟ್ ಕೀಪರ್‌ ಜೋಶ್ ಇಂಗ್ಲಿಸ್ ಸ್ಥಾನ ಪಡೆದುಕೊಳ್ಳುವುದರ ಮೂಲಕ ದೊಡ್ಡ ಮಟ್ಟದಲ್ಲಿ ಚರ್ಚೆಗೀಡಾಗಿದ್ದಾರೆ. ಇತ್ತೀಚೆಗೆ ನಡೆದ ಬಿಗ್ ಬ್ಯಾಶ್ ಲೀಗ್ ಕ್ರಿಕೆಟ್ ಟೂರ್ನಿಯಲ್ಲಿ ಪರ್ತ್ ಸ್ಕಾರ್ಚರ್ಸ್ ತಂಡದ ಪರ ಅತ್ಯದ್ಭುತ ಪ್ರದರ್ಶನವನ್ನು ನೀಡಿದ್ದ ಜೋಶ್ ಇಂಗ್ಲಿಸ್ ಪ್ರಸ್ತುತ ನಡೆಯುತ್ತಿರುವ ಟ್ವೆಂಟಿ ಬ್ಲಾಸ್ಟ್ 2021 ರ ಟೂರ್ನಿಯಲ್ಲಿ 531 ರನ್ ಬಾರಿಸುವುದರ ಮೂಲಕ ಟೂರ್ನಿಯಲ್ಲಿ ಅತಿ ಹೆಚ್ಚು ರನ್ ಬಾರಿಸಿದ ಆಟಗಾರನಾಗಿ ಮಿಂಚುತ್ತಿದ್ದಾರೆ. ಆಸ್ಟ್ರೇಲಿಯಾ ತಂಡದಲ್ಲಿ ಬಲಿಷ್ಠ ಆಟಗಾರ ಜೋಶ್ ಇಂಗ್ಲಿಸ್ ಸ್ಥಾನ ಪಡೆದುಕೊಂಡಿರುವುದು ಕಾಂಗರೂಗಳಿಗೆ ಪ್ಲಸ್ ಪಾಯಿಂಟ್ ಆಗುವುದಂತೂ ಖಚಿತ.

ಇಂಗ್ಲೆಂಡ್ ಪರವಾಗಿ ಬ್ಯಾಟ್ ಬೀಸಿದ ನಾಸಿರ್ ಹುಸೇನ್ | Oneindia Kannada
ಟಿ ಟ್ವೆಂಟಿ ವಿಶ್ವಕಪ್ 2021ರಲ್ಲಿ ಆಸ್ಟ್ರೇಲಿಯಾದ ಪಂದ್ಯಗಳು

ಟಿ ಟ್ವೆಂಟಿ ವಿಶ್ವಕಪ್ 2021ರಲ್ಲಿ ಆಸ್ಟ್ರೇಲಿಯಾದ ಪಂದ್ಯಗಳು


ಈ ಬಾರಿಯ ಟಿ ಟ್ವೆಂಟಿ ವಿಶ್ವಕಪ್ ಟೂರ್ನಿಯಲ್ಲಿ ಸೂಪರ್ 12 ಹಂತದಲ್ಲಿ ಗ್ರೂಪ್ 1 ರಲ್ಲಿ ಆಸ್ಟ್ರೇಲಿಯಾವಿದೆ. ಸೂಪರ್ 12 ಹಂತದಲ್ಲಿ ಆಸ್ಟ್ರೇಲಿಯಾ ಯಾವ ತಂಡಗಳ ವಿರುದ್ಧ ಸೆಣಸಾಡಲಿದೆ ಎಂಬ ಮಾಹಿತಿ ಈ ಕೆಳಕಂಡಂತಿದೆ..

1. ಆಸ್ಟ್ರೇಲಿಯಾ vs ದಕ್ಷಿಣ ಆಫ್ರಿಕಾ - ಅಕ್ಟೋಬರ್ 23, ಅಬುಧಾಬಿಯಲ್ಲಿ 3.30ಕ್ಕೆ

2. ಆಸ್ಟ್ರೇಲಿಯಾ vs ಎ1 - ಅಕ್ಟೋಬರ್ 28, ದುಬೈನಲ್ಲಿ ಸಂಜೆ 7.30ಕ್ಕೆ

3. ಆಸ್ಟ್ರೇಲಿಯಾ vs ಇಂಗ್ಲೆಂಡ್ - ಅಕ್ಟೋಬರ್ 30, ದುಬೈನಲ್ಲಿ ಸಂಜೆ 7.30ಕ್ಕೆ

4. ಆಸ್ಟ್ರೇಲಿಯಾ vs ಬಿ 2 - ನವೆಂಬರ್‌ 4, ಅಬುಧಾಬಿಯಲ್ಲಿ 3.30ಕ್ಕೆ

5. ಆಸ್ಟ್ರೇಲಿಯಾ vs ವೆಸ್ಟ್ ಇಂಡೀಸ್ - ನವೆಂಬರ್‌ 6, ಅಬುಧಾಬಿಯಲ್ಲಿ 3.30ಕ್ಕೆ.

Story first published: Thursday, August 19, 2021, 13:32 [IST]
Other articles published on Aug 19, 2021
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X