ಪಾಕಿಸ್ತಾನ ಪ್ರವಾಸಕ್ಕೆ 16 ಆಟಗಾರರ ತಂಡ ಪ್ರಕಟಿಸಿದ ಆಸ್ಟ್ರೇಲಿಯಾ: ತಂಡದ ಮೇಲಿದೆ ಐಪಿಎಲ್ ಎಫೆಕ್ಟ್!

ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿ ಆರಂಭವಾಗುತ್ತಿದೆ ಎಂದರೆ ವಿಶ್ವದ ಹಲವಾರು ಅಂತರರಾಷ್ಟ್ರೀಯ ಕ್ರಿಕೆಟ್ ಸರಣಿಗಳು ಮುಂದೂಡಲ್ಪಡುತ್ತವೆ ಹಾಗೂ ಕೆಲ ಸರಣಿಗಳನ್ನು ಐಪಿಎಲ್ ಆರಂಭವಾಗುವುದಕ್ಕೂ ಮುನ್ನವೇ ನಡೆಸಲಾಗುತ್ತದೆ. ಹೌದು, ಐಪಿಎಲ್ ಟೂರ್ನಿಗಳಲ್ಲಿ ವಿವಿಧ ದೇಶಗಳ ಹಲವಾರು ಕ್ರಿಕೆಟಿಗರು ಭಾಗವಹಿಸುವುದರಿಂದ ಅಂತರರಾಷ್ಟ್ರೀಯ ಪಂದ್ಯಗಳನ್ನು ಐಪಿಎಲ್ ಟೂರ್ನಿಗಳು ನಡೆಯುವ ಸಮಯದಲ್ಲಿ ಹೆಚ್ಚಾಗಿ ಆಯೋಜಿಸಲು ಮುಂದಾಗುವುದಿಲ್ಲ. ಒಂದುವೇಳೆ ಸರಣಿಗಳು ಆಯೋಜನೆಯಾದರೂ ಸಹ ಆ ಸರಣಿಗಳಲ್ಲಿ ಸ್ಟಾರ್ ಆಟಗಾರರು ಭಾಗವಹಿಸದೆ ಗೈರಾಗುವುದು ಸಾಮಾನ್ಯ. ಅದೇ ರೀತಿ ಈ ವರ್ಷ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿ ನಡೆಯುವ ವೇಳೆ ನಡೆಯಲಿರುವ ಆಸ್ಟ್ರೇಲಿಯಾ ಮತ್ತು ಪಾಕಿಸ್ತಾನ ತಂಡಗಳ ನಡುವಿನ ಸರಣಿಯ ಮೇಲೂ ಸಹ ಐಪಿಎಲ್ ಟೂರ್ನಿ ಪ್ರಭಾವವನ್ನು ಬೀರಿದೆ.
ಹೌದು, ಮಾರ್ಚ್ ಹಾಗೂ ಏಪ್ರಿಲ್ ತಿಂಗಳಿನ ವೇಳೆ ಆಸ್ಟ್ರೇಲಿಯಾ ತಂಡ ಪಾಕಿಸ್ತಾನ ಪ್ರವಾಸವನ್ನು ಕೈಗೊಳ್ಳಲಿದ್ದು ಟೆಸ್ಟ್ ಹಾಗೂ ಸೀಮಿತ ಓವರ್ ಸರಣಿಗಳಲ್ಲಿ ಸೆಣಸಾಟವನ್ನು ನಡೆಸಲಿದೆ. ಹೀಗೆ ಆಸ್ಟ್ರೇಲಿಯಾ ಮತ್ತು ಪಾಕಿಸ್ತಾನ ತಂಡಗಳ ನಡುವೆ ಸೀಮಿತ ಓವರ್ ಸರಣಿಗಳು ನಡೆಯುವ ಸಮಯಕ್ಕೆ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯೂ ಕೂಡ ಆಯೋಜನೆಯಾಗಿರುವುದರಿಂದ ಸರಣಿಯಲ್ಲಿ ಸ್ಟಾರ್ ಆಟಗಾರರ ಭಾಗವಹಿಸುವಿಕೆ ಕಡಿಮೆಯಾಗಿದೆ. ಇನ್ನು ಪಾಕಿಸ್ತಾನ ಪ್ರವಾಸ ಕೈಗೊಳ್ಳಲಿರುವ ಆಸ್ಟ್ರೇಲಿಯಾ ಮೊದಲಿಗೆ ಮಾರ್ಚ್ 4ರಿಂದ ಮಾರ್ಚ್ 25ರವರೆಗೆ ನಡೆಯಲಿರುವ 3 ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಸೆಣಸಾಟ ನಡೆಸಲಿದೆ ಹಾಗೂ ನಂತರ ಮಾರ್ಚ್ 29ರಿಂದ ಏಪ್ರಿಲ್ 5ರವರೆಗೆ ನಡೆಯಲಿರುವ 3 ಪಂದ್ಯಗಳ ಏಕದಿನ ಸರಣಿ ಹಾಗೂ 1 ಟಿ ಟ್ವೆಂಟಿ ಪಂದ್ಯದಲ್ಲಿ ಸೆಣಸಾಟ ನಡೆಸಲಿದೆ.

ಪಾಕಿಸ್ತಾನ ವಿರುದ್ಧದ ಏಕದಿನ ಹಾಗೂ ಟಿ ಟ್ವೆಂಟಿ ಪಂದ್ಯಗಳಿಗೆ ಪ್ರಕಟವಾಗಿರುವ ಆಸ್ಟ್ರೇಲಿಯ ತಂಡ
ಪಾಕಿಸ್ತಾನ ಪ್ರವಾಸವನ್ನು ಕೈಗೊಳ್ಳಲಿರುವ ಆಸ್ಟ್ರೇಲಿಯಾ 3 ಪಂದ್ಯಗಳ ಟೆಸ್ಟ್ ಸರಣಿ, 3 ಪಂದ್ಯಗಳ ಏಕದಿನ ಸರಣಿ ಹಾಗೂ ಒಂದು ಟಿ ಟ್ವೆಂಟಿ ಪಂದ್ಯದಲ್ಲಿ ಸೆಣಸಾಟವನ್ನು ನಡೆಸಲಿದೆ. ಹೀಗಾಗಿ ಏಕದಿನ ಹಾಗೂ ಟಿ ಟ್ವೆಂಟಿ ಸರಣಿಗಳಿಗೆ 16 ಆಟಗಾರರ ತಂಡವನ್ನು ಕ್ರಿಕೆಟ್ ಆಸ್ಟ್ರೇಲಿಯಾ ಪ್ರಕಟಿಸಿದ್ದು, ಈ ತಂಡದಲ್ಲಿ ಸ್ಥಾನ ಪಡೆದುಕೊಂಡಿರುವ ಆಟಗಾರರ ಪಟ್ಟಿ ಹೀಗಿದೆ: ಆರನ್ ಫಿಂಚ್ (ನಾಯಕ), ಸೀನ್ ಅಬಾಟ್, ಆಷ್ಟನ್ ಅಗರ್, ಜೇಸನ್ ಬೆಹ್ರೆನ್‌ಡಾರ್ಫ್, ಅಲೆಕ್ಸ್ ಕ್ಯಾರಿ, ನಾಥನ್ ಎಲ್ಲಿಸ್, ಕ್ಯಾಮೆರಾನ್ ಗ್ರೀನ್, ಟ್ರಾವಿಸ್ ಹೆಡ್, ಜೋಶ್ ಇಂಗ್ಲಿಸ್, ಮಾರ್ನಸ್ ಲ್ಯಾಬುಸ್‌ಚಾಗ್ನೆ, ಮಿಚೆಲ್ ಮಾರ್ಷ್, ಬೆನ್ ಮೆಕ್‌ಡರ್ಮಾಟ್, ಕೇನ್ ರಿಚರ್ಡ್ಸನ್, ಸ್ಟೀವ್ ಸ್ಮಿತ್, ಮಾರ್ಕಸ್ ಸ್ಟೊಯಿನಿಸ್ ಮತ್ತು ಆಡಂ ಜಂಪಾ

ಪ್ರಮುಖ ಆಟಗಾರರು ತಂಡದಲ್ಲಿಲ್ಲ
ಹೀಗೆ ಪ್ರಕಟವಾಗಿರುವ 16 ಆಟಗಾರರ ಆಸ್ಟ್ರೇಲಿಯ ತಂಡದಲ್ಲಿ ಪ್ರಮುಖ ಆಟಗಾರರಾದ ಡೇವಿಡ್ ವಾರ್ನರ್, ಗ್ಲೆನ್ ಮ್ಯಾಕ್ಸ್‌ವೆಲ್, ಪ್ಯಾಟ್ ಕಮಿನ್ಸ್ ಮತ್ತು ಜೋಶ್ ಹೆಜಲ್ ವುಡ್ ಅವರಿಗೆ ವಿಶ್ರಾಂತಿ ನೀಡಲಾಗಿದೆ. ಹೀಗೆ ತಂಡದಿಂದ ಹೊರಗುಳಿದಿರುವ ಈ ಎಲ್ಲ ಆಟಗಾರರು ಕೂಡ ಇಂಡಿಯನ್ ಪ್ರಿಮಿಯರ್ ಲೀಗ್ ಟೂರ್ನಿಯಲ್ಲಿ ಭಾಗವಹಿಸುತ್ತಿದ್ದು, ಪಾಕಿಸ್ತಾನ ಪ್ರವಾಸವನ್ನು ಕೈಗೊಳ್ಳುತ್ತಿಲ್ಲ. ಗ್ಲೆನ್ ಮ್ಯಾಕ್ಸ್‌ವೆಲ್ ವಿವಾಹ ಕೂಡ ಮಾರ್ಚ್ ತಿಂಗಳಲ್ಲೇ ಇರುವುದರಿಂದ ಈ ಮೊದಲೇ ಗ್ಲೆನ್ ಮ್ಯಾಕ್ಸ್‌ವೆಲ್ ಪಾಕಿಸ್ತಾನ ಪ್ರವಾಸಕ್ಕೆ ಅಲಭ್ಯರಾಗಲಿದ್ದಾರೆ ಎಂಬ ವಿಷಯವನ್ನು ತಿಳಿಸಲಾಗಿತ್ತು. ಇದೀಗ ಐಪಿಎಲ್ ಟೂರ್ನಿಯಲ್ಲಿ ಭಾಗವಹಿಸಲಿರುವ ಕೆಲ ಪ್ರಮುಖ ಆಟಗಾರರ ಹೆಸರನ್ನು ಕೂಡ ಆಸ್ಟ್ರೇಲಿಯಾ ಕೈಬಿಟ್ಟಿದೆ. ಈ ಮೂಲಕ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ ಆರಂಭದ ಪಂದ್ಯಗಳಲ್ಲಿ ಆಸ್ಪ್ರೇಲಿಯಾದ ಪ್ರಮುಖ ಆಟಗಾರರು ಭಾಗವಹಿಸುವುದಿಲ್ಲವಾ ಎಂಬ ಪ್ರಶ್ನೆಗೆ ಉತ್ತರ ಸಿಕ್ಕಿದೆ.

ಐಪಿಎಲ್ ಆಡುವ ಕೆಲ ಆಟಗಾರರು ಕೂಡ ಪಾಕ್ ಪ್ರವಾಸ ಕೈಗೊಳ್ಳಲಿದ್ದಾರೆ
ಹಾಗೂ ಪ್ರಿಮಿಯರ್ ಲೀಗ್ ಟೂರ್ನಿಗೆ ಆಯ್ಕೆಯಾಗಿರುವ ಆಟಗಾರರಾದ ಜೇಸನ್ ಬೆಹ್ರೆನ್‌ಡಾರ್ಫ್, ನಾಥನ್ ಎಲ್ಲಿಸ್, ಮಿಚೆಲ್ ಮಾರ್ಷ್ ಮತ್ತು ಮಾರ್ಕಸ್ ಸ್ಟಾಯಿನಿಸ್ ಅವರನ್ನು ಸದ್ಯ ಪಾಕಿಸ್ತಾನ ಸರಣಿಗೆ ಪ್ರಕಟವಾಗಿರುವ ಆಸ್ಟ್ರೇಲಿಯಾ ತಂಡಕ್ಕೆ ಆಯ್ಕೆ ಮಾಡಲಾಗಿದೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications