Border-Gavaskar Trophy: ಭಾರತ ವಿರುದ್ಧದ ಮೊದಲ ಟೆಸ್ಟ್‌ಗೆ ಆಸ್ಟ್ರೇಲಿಯಾ ತಂಡ ಪ್ರಕಟ
ಬಹುನಿರೀಕ್ಷಿತ ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಬಾರ್ಡರ್-ಗವಾಸ್ಕರ್ ಟ್ರೋಫಿ ಟೆಸ್ಟ್ ಸರಣಿಗೆ ಕ್ರಿಕೆಟ್ ಅಭಿಮಾನಿಗಳು ಕಾಯುತ್ತಿದ್ದಾರೆ. ಬಾರ್ಡರ್-ಗವಾಸ್ಕರ್ ಟ್ರೋಫಿ ಟೆಸ್ಟ್ ಸರಣಿ ನವೆಂಬರ್ 22 ರಿಂದ ಪರ್ತ್‌ನಲ್ಲಿ ಪ್ರಾರಂಭವಾಗಲಿದೆ. ಸರಣಿಯಲ್ಲಿ ಭಾರತ ಮತ್ತು ಆಸ್ಟ್ರೇಲಿಯಾ ನಡುವೆ ಐದು ಟೆಸ್ಟ್ ಪಂದ್ಯಗಳನ್ನು ನಡೆಯಲಿವೆ. ಈಗಾಗಲೇ ಬಾರ್ಡರ್-ಗವಾಸ್ಕರ್ ಟ್ರೋಫಿ ಟೆಸ್ಟ್ ಸರಣಿಗೆ 18 ಸದಸ್ಯರ ಭಾರತ ತಂಡವನ್ನು ಬಿಸಿಸಿಐ ಪ್ರಕಟಿಸಿದೆ. ಇದೀಗ ಭಾರತ ವಿರುದ್ಧದ ಮೊದಲ ಟೆಸ್ಟ್ ಪಂದ್ಯಕ್ಕೆ ಆಸ್ಟ್ರೇಲಿಯಾ 13 ಸದಸ್ಯರ ತಂಡವನ್ನು ಭಾನುವಾರ ಪ್ರಕಟಿಸಿದೆ.
ಭಾರತ ವಿರುದ್ಧದ ಟೆಸ್ಟ್ ಸರಣಿಯಲ್ಲಿ ಕಾಂಗೂರು ಪಡೆಯನ್ನು ಪ್ಯಾಟ್ ಕಮಿನ್ಸ್ ಮುನ್ನಡೆಸಲಿದ್ದಾರೆ. ಅಲ್ಲದೆ, ನಾಥನ್ ಮೆಕ್‌ಸ್ವೀನಿ ಮತ್ತು ಜೋಶ್ ಇಂಗ್ಲಿಸ್ ಅವರಂತಹ ಇಬ್ಬರು ಅನ್‌ಕ್ಯಾಪ್ಡ್ ಆಟಗಾರರಿಗೆ ತಂಡದಲ್ಲಿ ಸ್ಥಾನ ನೀಡಲಾಗಿದೆ. ಕ್ರಿಕೆಟ್ ಆಸ್ಟ್ರೇಲಿಯಾದ ಈ ಆಯ್ಕೆ ಎಲ್ಲರಿಗೆ ಅಚ್ಚರಿ ತರಿಸಿದೆ.

ಪರ್ತ್ ಟೆಸ್ಟ್ ಪಂದ್ಯದಲ್ಲಿ ಉಸ್ಮಾನ್ ಖವಾಜಾ ಜೊತೆಗೆ ನಾಥನ್ ಮೆಕ್‌ಸ್ವೀನಿ ಆರಂಭಿಕ ಬ್ಯಾಟರ್ ಆಗಿ ಇನ್ನಿಂಗ್ಸ್ ತೆರೆಯಲು ಸಜ್ಜಾಗಿದ್ದಾರೆ. ಈ ಕುರಿತು ಆಸ್ಟ್ರೇಲಿಯಾದ ಮುಖ್ಯ ಆಯ್ಕೆಗಾರ ಜಾರ್ಜ್ ಬೈಲಿ ಖಚಿತಪಡಿಸಿದ್ದಾರೆ. ಜೋಶ್ ಇಂಗ್ಲಿಷ್ ಅವರು ಮಧ್ಯಮ ಕ್ರಮಾಂಕದಲ್ಲಿ ತಂಡಕ್ಕೆ ನೆರವಾಗಲಿದ್ದಾರೆ. ಅನುಭವಿ ಬ್ಯಾಟರ್ ಸ್ಟೀವ್ ಸ್ಮಿತ್ ಮೂರನೇ ಸ್ಥಾನದಲ್ಲಿ ಆಡಿದರೆ, ಮಾರ್ನಸ್ ಲ್ಯಾಬುಸ್‌ಚಾಗ್ನೆ 4ನೇ ಸ್ಥಾನದಲ್ಲಿ ಆಡುವ ಸಾಧ್ಯತೆಯಿದೆ. ಇನ್ನುಳಿದಂತೆ ಟ್ರಾವಿಸ್ ಹೆಡ್, ಮಿಚೆಲ್ ಮಾರ್ಷ್ ಮತ್ತು ವಿಕೆಟ್ ಕೀಪರ್ ಅಲೆಕ್ಸ್ ಕ್ಯಾರಿ ಮಧ್ಯಮ ಕ್ರಮಾಂಕದಲ್ಲಿ ಬ್ಯಾಟಿಂಗ್ ಬಲಗೊಳಿಸಲಿದ್ದಾರೆ.
ವೇಗದ ಬೌಲರ್‌ಗಳಾಗಿ ಸ್ಕಾಟ್ ಬೋಲ್ಯಾಂಡ್, ಪ್ಯಾಟ್ ಕಮ್ಮಿನ್ಸ್, ಮಿಚೆಲ್ ಸ್ಟಾರ್ಕ್ ಮತ್ತು ಜೋಶ್ ಹ್ಯಾಜಲ್‌ವುಡ್ ತಂಡದಲ್ಲಿದ್ದಾರೆ. ಅನುಭವಿ ಸ್ಪಿನ್ನರ್ ನಾಥನ್ ಲಿಯಾನ್ ಅವರನ್ನು ಸಹ ತಂಡದಲ್ಲಿ ಸೇರಿಸಿಕೊಳ್ಳಲಾಗಿದೆ.
ಆಸ್ಟ್ರೇಲಿಯಾ ಮತ್ತು ಭಾರತವು ಪ್ರಸ್ತುತ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ನ ಅಂಕಪಟ್ಟಿಯಲ್ಲಿ ಮೊದಲ ಎರಡು ಸ್ಥಾನಗಳಿವೆ. ನ್ಯೂಜಿಲೆಂಡ್ ವಿರುದ್ಧದ ತವರಿನಲ್ಲಿ ನಡೆದ ಟೆಸ್ಟ್ ಸರಣಿಯಲ್ಲಿ 0-3 ಅಂತರದ ಸೋಲು ಕಂಡಿರುವ ಭಾರತ ತಂಡ ಎರಡನೇ ಸ್ಥಾನಕ್ಕೆ ಇಳಿದಿದೆ. ಇಂತಹ ಪರಿಸ್ಥಿತಿಯಲ್ಲಿ ಭಾರತ ಡಬ್ಲ್ಯೂಟಿಸಿ ಫೈನಲ್ ತಲುಪ ಬೇಕಾದರೆ ಆಸ್ಟ್ರೇಲಿಯಾ ವಿರುದ್ಧ 4-1 ಅಂತರದಲ್ಲಿ ಟೆಸ್ಟ್ ಸರಣಿಯನ್ನು ಗೆಲ್ಲಬೇಕಾಗಿದೆ.
ಪರ್ತ್ ಟೆಸ್ಟ್ ಪಂದ್ಯಕ್ಕೆ ಆಸ್ಟ್ರೇಲಿಯಾ ತಂಡ
ಪ್ಯಾಟ್ ಕಮಿನ್ಸ್ (ನಾಯಕ), ಸ್ಕಾಟ್ ಬೋಲ್ಯಾಂಡ್, ಅಲೆಕ್ಸ್ ಕ್ಯಾರಿ, ಜೋಶ್ ಹ್ಯಾಜಲ್‌ವುಡ್, ಟ್ರಾವಿಸ್ ಹೆಡ್, ಜೋಶ್ ಇಂಗ್ಲಿಸ್, ಉಸ್ಮಾನ್ ಖವಾಜಾ, ಮಾರ್ನಸ್ ಲ್ಯಾಬುಸ್‌ಚಾಗ್ನೆ, ನಾಥನ್ ಲಿಯಾನ್, ಮಿಚ್ ಮಾರ್ಷ್, ನಾಥನ್ ಮೆಕ್‌ಸ್ವೀನಿ, ಸ್ಟೀವ್ ಸ್ಮಿತ್, ಮಿಚೆಲ್ ಸ್ಟಾರ್ಕ್.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications