ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

ಭಾರತ ವಿರುದ್ಧದ ಟೆಸ್ಟ್ ಸರಣಿಗೆ 18 ಆಟಗಾರರ ಬಲಿಷ್ಠ ತಂಡವನ್ನು ಪ್ರಕಟಿಸಿದ ಆಸ್ಟ್ರೇಲಿಯಾ

Australia announces strong 18-man squad for 4 match test series against India in India

ಫೆಬ್ರವರಿ 9ರಿಂದ ಆರಂಭವಾಗಲಿರುವ ಬಹು ನಿರೀಕ್ಷಿತ ಬಾರ್ಡರ್ ಗವಾಸ್ಕರ್ ಟ್ರೋಫಿ ಆರಂಭವಾಗಲಿದೆ. ನಾಲ್ಕು ಪಂದ್ಯಗಳ ಈ ಪ್ರತಿಷ್ಠಿತ ಟೆಸ್ಟ್ ಸರಣಿಗೆ ಕ್ರಿಕೆಟ್ ಆಸ್ಟ್ರೇಲಿಯಾ 18 ಆಟಗಾರರ ಬಲಿಷ್ಠ ತಂಡವನ್ನು ಪ್ರಕಟಿಸಿದೆ. ಈ ಮೂಲಕ ಪ್ಯಾಟ್ ಕಮ್ಮಿನ್ಸ್ ನೇತೃತ್ವದ ಆಸ್ಟ್ರೇಲಿಯಾ ತಂಡ ಭಾರತ ಪ್ರವಾಸಕ್ಕೆ ಸರ್ವಸನ್ನಧವಾಗಿದೆ.

ಭಾರತದಲ್ಲಿ ಈ ಸರಣಿ ನಡೆಯುತ್ತಿರುವ ಕಾರಣ ನಾಲ್ವರು ಸ್ಪಿನ್ನರ್‌ಗಳನ್ನು ಈ ಆಸ್ಟ್ರೇಲಿಯಾ ತಂಡ ತನ್ನ ಬಳಗದಲ್ಲಿ ಹೊಂದಿದೆ. ಟಾಡ್ ಮಾರ್ಫಿ, ಮಿಚೆಲ್ ಸ್ವೆಪ್ಸನ್, ಆಶ್ಟನ್ ಅಗರ್ ಹಾಗೂ ಅನುಭವಿ ನಥನ್ ಲಿಯೋನ್ ಈ ತಂಡದಲ್ಲಿದ್ದು ಭಾರತ ಪ್ರವಾಸವನ್ನು ಕೈಗೊಳ್ಳಲಿದ್ದಾರೆ. ಇನ್ನು ಮಾರ್ಕ್ ಹ್ಯಾರಿಸ್ ಈ ತಂಡದಿಂದ ಹೊರಬಿದ್ದಿದ್ದರೆ ಪೀಟರ್ ಹ್ಯಾಂಡ್ಸ್‌ಕಾಂಬ್ ನಾಲ್ಕು ವರ್ಷಗಳ ಬಳಿಕ ಟೆಸ್ಟ್ ತಂಡದ ಕರೆ ಸ್ವೀಕರಿಸಿದ್ದಾರೆ.

ಬಾರ್ಡರ್-ಗವಾಸ್ಕರ್ ಟ್ರೋಫಿ: ಮೊದಲ ಟೆಸ್ಟ್‌ನಿಂದ ಹೊರಗುಳಿಯುವ ಬಗ್ಗೆ ಸುಳಿವು ನೀಡಿದ ಆಸಿಸ್ ಸ್ಟಾರ್ಬಾರ್ಡರ್-ಗವಾಸ್ಕರ್ ಟ್ರೋಫಿ: ಮೊದಲ ಟೆಸ್ಟ್‌ನಿಂದ ಹೊರಗುಳಿಯುವ ಬಗ್ಗೆ ಸುಳಿವು ನೀಡಿದ ಆಸಿಸ್ ಸ್ಟಾರ್

ಭಾರತದ ಹೋರಾಟಕ್ಕೆ ಆಸಿಸ್ ಸಿದ್ಧ

ಭಾರತದ ಹೋರಾಟಕ್ಕೆ ಆಸಿಸ್ ಸಿದ್ಧ

ಇನ್ನಷ್ಟೇ ಪದಾರ್ಪಣೆ ಮಾಡಬೇಕಿರುವ ಆಟಗಾರ ಲಾನ್ಸ್ ಮಾರಿಸ್ ತನ್ನ ಸ್ಥಾನವನ್ನು ಉಳಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದ ಭಾರತದ ವಿರುದ್ಧದ ಮೊದಲ ಪಂದ್ಯದಲ್ಲಿ ಪದಾರ್ಪಣೆ ಮಾಡುವ ನಿರೀಕ್ಷೆಯಲ್ಲಿದ್ದಾರೆ. ಮಿಚೆಲ್ ಸ್ಟಾರ್ಕ್ ಮೊದಲ ಪಂದ್ಯಕ್ಕೆ ಅಲಭ್ಯವಾಗುವ ಸಾಧ್ಯತೆಯಿದ್ದು ಈ ಅವಕಾಶ ಮಾರಿಸ್‌ಗೆ ದೊರೆಯುವ ಸಾಧ್ಯತೆಯಿದೆ. ಮತ್ತೊಂದೆಡೆ ದಕ್ಷಿಣ ಆಫ್ರಿಕಾ ವಿರುದ್ಧದ ಟೆಸ್ಟ್ ಸರಣಿಯಲ್ಲಿ ಗಾಯಗೊಂಡಿರುವ ಕ್ಯಾಮರೂನ್ ಗ್ರೀನ್ ಭಾರತದ ವಿರುದ್ಧದ ಮೊದಲ ಟೆಸ್ಟ್ ಪಂದ್ಯಕ್ಕೂ ಮುನ್ನ ಚೇತರಿಕೆಸಿಕೊಂಡು ಸಿದ್ಧವಾಗುವ ನಿರೀಕ್ಷೆಯಲ್ಲಿದ್ದು ಫಿಟ್‌ನೆಸ್ ಮರಳಿ ಗಳಿಸುವ ಪ್ರಯತ್ನದಲ್ಲಿದ್ದಾರೆ.

ಅದ್ಭುತ ಫಾರ್ಮ್‌ನಲ್ಲಿರುವ ಆಸಿಸ್ ಆಟಗಾರರು

ಅದ್ಭುತ ಫಾರ್ಮ್‌ನಲ್ಲಿರುವ ಆಸಿಸ್ ಆಟಗಾರರು

ಇನ್ನು ಭಾರತ ಪ್ರವಾಸ ಕೈಗೊಳ್ಳಲಿರುವ ಈ ತಂಡ ಅತ್ಯಂತ ಸಮತೋಲಿತವಾಗಿದೆ. ಬ್ಯಾಟಿಂಗ್ ವಿಭಾಗ ಸಾಕಷ್ಟು ಬಲಿಷ್ಠವಾಗಿದ್ದು ಡೇವಿಡ್ ವಾರ್ನರ್, ಉಸ್ಮಾನ್ ಖವಾಜಾ, ಮಾರ್ನಸ್ ಲ್ಯಾಬುಶೈನ್, ಸ್ಟೀವ್ ಸ್ಮಿತ್ ಟ್ರೆವಿಸ್ ಹೆಡ್ ಅವರಂತಾ ಆಟಗಾರರ ಪಡೆಯನ್ನು ಹೊಂದಿದೆ. ಈ ಎಲ್ಲಾ ಆಟಗಾರರು ಕೂಡ ಅದ್ಭುತ ಫಾರ್ಮ್‌ನಲ್ಲಿದ್ದು ಆಸ್ಟ್ರೇಲಿಯಾ ತಂಡದ ಆತ್ಮವಿಶ್ವಾಸ ಹೆಚ್ಚಿಸಿರುವುದರಲ್ಲಿ ಅನುಮಾನವಿಲ್ಲ.

ಬಲಿಷ್ಠವಾಗಿಗೆ ಬೌಲಿಂಗ್ ವಿಭಾಗ

ಬಲಿಷ್ಠವಾಗಿಗೆ ಬೌಲಿಂಗ್ ವಿಭಾಗ

ಇನ್ನು ಬೌಲಿಂಗ್ ವಿಭಾಗದಲ್ಲಿ ನಾಯಕ ಪ್ಯಾಟ್ ಕಮ್ಮಿನ್ಸ್ ಮಿಚೆಲ್ ಸ್ಟಾರ್ಕ್, ಜೋಶ್ ಹೇಜಲ್‌ವುಡ್ ಅವರನ್ನು ಒಳಗೊಂಡ ಬಲಿಷ್ಠ ವೇಗದ ಬೌಲಿಂಗ್ ವಿಭಾಗವಿದ್ದರೆ ಅನುಭವಿ ಸ್ಪಿನ್ನರ್ ನಾಥನ್ ಲಿಯಾನ್ ನೇತೃತ್ವದ ಸ್ಪಿನ್ ವಿಭಾಗ ಕೂಡ ಭಾರತದ ನೆಲದಲ್ಲಿ ಆಸ್ಟ್ರೇಲಿಯಾ ತಂಡಕ್ಕೆ ಯಶಸ್ಸು ನೀಡುವ ಆತ್ಮವಿಶ್ವಾಸದಲ್ಲಿದೆ. ಹೀಗಾಗಿ ಈ ಸರಣಿ ಮೇಲೆ ಈಗ ಎಲ್ಲರ ಚಿತ್ತ ನೆಟ್ಟಿದೆ.

ಆಸಿಸ್ ತಂಡ ಹೀಗಿದೆ

ಆಸಿಸ್ ತಂಡ ಹೀಗಿದೆ

ಭಾರತ ವಿರುದ್ಧದ ಟೆಸ್ಟ್ ಸರಣಿಗೆ ಆಯ್ಕೆಯಾದ ಆಸ್ಟ್ರೇಲಿಯಾ ತಂಡ ಹೀಗಿದೆ: ಪ್ಯಾಟ್ ಕಮ್ಮಿನ್ಸ್ (ನಾಯಕ), ಆಷ್ಟನ್ ಅಗರ್, ಸ್ಕಾಟ್ ಬೋಲ್ಯಾಂಡ್, ಅಲೆಕ್ಸ್ ಕ್ಯಾರಿ, ಕ್ಯಾಮೆರಾನ್ ಗ್ರೀನ್, ಪೀಟರ್ ಹ್ಯಾಂಡ್ಸ್‌ಕಾಂಬ್, ಜೋಶ್ ಹ್ಯಾಜಲ್‌ವುಡ್, ಟ್ರಾವಿಸ್ ಹೆಡ್, ಉಸ್ಮಾನ್ ಖವಾಜಾ, ಮಾರ್ನಸ್ ಲ್ಯಾಬುಶೈನ್, ನಾಥನ್ ಲಿಯಾನ್, ಲ್ಯಾನ್ಸ್ ಮೋರಿಸ್, ಟಾಡ್ ಮರ್ಫಿ, ಮ್ಯಾಥ್ಯೂ ರೆನ್ಶಾ, ಸ್ಟೀವ್ ಸ್ಮಿತ್ (ಉಪನಾಯಕ), ಮಿಚೆಲ್ ಸ್ಟಾರ್ಕ್, ಮಿಚೆಲ್ ಸ್ವೆಪ್ಸನ್, ಡೇವಿಡ್ ವಾರ್ನರ್

Story first published: Wednesday, January 11, 2023, 8:40 [IST]
Other articles published on Jan 11, 2023
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X