ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ಗೆ ಆಸ್ಟ್ರೇಲಿಯಾ ತಂಡ ಪ್ರಕಟ: ಆರ್‌ಸಿಬಿ ವೇಗಿಗೆ ಸ್ಥಾನ
ಬಹುನಿರೀಕ್ಷಿತ ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್ ಫೈನಲ್ ಜೂನ್‌ನಲ್ಲಿ ಲಾರ್ಡ್ಸ್‌ನಲ್ಲಿ ನಡೆಯಲಿದೆ. ಈ ಮಹತ್ವದ ಫೈನಲ್ ಪಂದ್ಯಕ್ಕಾಗಿ ಆಸ್ಟ್ರೇಲಿಯಾ ತಂಡವನ್ನು ಪ್ರಕಟಿಸಲಾಗಿದೆ. ಈ ಬಾರಿಯೂ ಆಸೀಸ್ ತಂಡವನ್ನು ಅನುಭವಿ ವೇಗದ ಬೌಲರ್ ಪ್ಯಾಟ್ ಕಮಿನ್ಸ್ ಮುನ್ನಡೆಸಲಿದ್ದಾರೆ. 2023-25 ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್‌ನಲ್ಲಿ ದಕ್ಷಿಣ ಆಫ್ರಿಕಾ ಹಾಗೂ ಆಸ್ಟ್ರೇಲಿಯಾ ತಂಡಗಳು ಕಾದಾಟ ನಡೆಸಲಿವೆ. ಪ್ರಶಸ್ತಿ ಸುತ್ತಿನ ಕಾದಾಟ ಜೂನ್ 11 ರಿಂದ 15 ರವರೆಗೆ ಇಂಗ್ಲೆಂಡ್‌ನ ಐತಿಹಾಸಿಕ ಲಾರ್ಡ್ಸ್ ಮೈದಾನದಲ್ಲಿ ನಡೆಯಲಿದೆ.
ದಕ್ಷಿಣ ಆಫ್ರಿಕಾ ವಿರುದ್ಧ ನಡೆಯಲಿರುವ ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್ ಫೈನಲ್ ಪಂದ್ಯಕ್ಕೆ ಪ್ರಕಟಿತ ಆಸ್ಟ್ರೇಲಿಯಾ ತಂಡದಲ್ಲಿ ಕೆಲವು ಬದಲಾವಣೆಗಳನ್ನು ಮಾಡಲಾಗಿದೆ. ಕಳೆದ 6 ತಿಂಗಳಿನಿಂದ ಹೊರಗಿದ್ದ ಆಲ್‌ರೌಂಡರ್ ಕ್ಯಾಮರೂನ್ ಗ್ರೀನ್ ಮರಳಿದ್ದಾರೆ. ಮೂರನೇ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ನಲ್ಲಿ ಆಸ್ಟ್ರೇಲಿಯಾ ಅಮೋಘ ಪ್ರದರ್ಶನವನ್ನು ನೀಡಿದೆ. ಅಲ್ಲದೆ ಎರಡನೇ ಬಾರಿಗೆ ಚಾಂಪಿಯನ್ ಪಟ್ಟವನ್ನು ಅಲಂಕರಿಸುವ ಕನಸು ಕಾಣುತ್ತಿದೆ.

ಗಾಯಕ್ಕೆ ತುತ್ತಾಗಿದ್ದ ಕ್ಯಾಮರೂನ್ ಗ್ರೀನ್ ಶಸ್ತ್ರಚಿಕಿತ್ಸೆಯ ನಂತರ ಸಂಪೂರ್ಣವಾಗಿ ಫಿಟ್ ಆಗಿದ್ದು ತಂಡಕ್ಕೆ ಮರಳಿದ್ದಾರೆ. ಇನ್ನು ಶ್ರೀಲಂಕಾ ಪ್ರವಾಸದಲ್ಲಿ ಸರಣಿಯ ಮಧ್ಯದಲ್ಲೇ ತವರಿಗೆ ವಾಪಸ್ ಆಗಿದ್ದ ಆರಂಭಿಕ ಆಟಗಾರ ಸ್ಯಾಮ್ ಕಾನ್ಸ್ಟಸ್ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ತಂಡದಲ್ಲಿ ಸ್ಥಾನ ಪಡೆದಿದ್ದಾರೆ. ಕ್ರಿಕೆಟ್ ಆಸ್ಟ್ರೇಲಿಯಾ 15 ಸದಸ್ಯರ ತಂಡವನ್ನು ಪ್ರಕಟಿಸಿದ್ದು, ಅನುಭವಿ ಹಾಗೂ ಯುವ ಆಟಗಾರರು ತಂಡದಲ್ಲಿ ಸ್ಥಾನ ಪಡೆದಿದ್ದಾರೆ. ಇದಲ್ಲದೆ, ಬ್ರೆಂಡನ್ ಡಾಗೆಟ್ ಪ್ರಯಾಣ ಮೀಸಲು ಆಟಗಾರನಾಗಿ ತಂಡದಲ್ಲಿ ಸ್ಥಾನ ಪಡೆದಿದ್ದಾರೆ.
ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್ ಫೈನಲ್ ಪಂದ್ಯಕ್ಕೆ ಘೋಷಿತ ತಂಡವೇ ವೆಸ್ಟ್ ಇಂಡೀಸ್ ಪ್ರವಾಸವನ್ನು ಸಹ ಕೈಗೊಳ್ಳಲಿದೆ. ಈ ಪ್ರವಾಸವು ಜೂನ್ 25ರಿಂದ ಆರಂಭವಾಗಲಿದ್ದು, ಮೊದಲು ಮೂರು ಪಂದ್ಯಗಳ ಟೆಸ್ಟ್ ಸರಣಿ ನಡೆಯಲಿದೆ. ಇದಾದ ನಂತರ, ಎರಡೂ ತಂಡಗಳ ನಡುವೆ 5 ಟಿ20 ಪಂದ್ಯಗಳ ಸರಣಿಯೂ ನಡೆಯಲಿದೆ.

ಆಸ್ಟ್ರೇಲಿಯಾ ತಂಡ: ಪ್ಯಾಟ್ ಕಮ್ಮಿನ್ಸ್ (ನಾಯಕ), ಸ್ಕಾಟ್ ಬೋಲ್ಯಾಂಡ್, ಅಲೆಕ್ಸ್ ಕ್ಯಾರಿ, ಕ್ಯಾಮರೂನ್ ಗ್ರೀನ್, ಜೋಶ್ ಹ್ಯಾಜಲ್‌ವುಡ್, ಟ್ರಾವಿಸ್ ಹೆಡ್, ಜೋಶ್ ಇಂಗ್ಲಿಸ್, ಉಸ್ಮಾನ್ ಖವಾಜಾ, ಸ್ಯಾಮ್ ಕಾನ್‌ಸ್ಟಾಸ್ಟಾಸ್, ಮ್ಯಾಟ್ ಕುಹ್ನೆಮನ್, ಮಾರ್ನಸ್ ಲ್ಯಾಬುಶೇನ್, ನಾಥನ್ ಲಿಯಾನ್, ಸ್ಟೀವ್ ಸ್ಮಿತ್, ಮಿಚೆಲ್ ಸ್ಟಾರ್ಕ್, ಬ್ಯೂ ವೆಬ್‌ಸ್ಟರ್.
ದಕ್ಷಿಣ ಆಫ್ರಿಕಾಗೆ ಅಗ್ರ ಸ್ಥಾನ
ದಕ್ಷಿಣ ಆಫ್ರಿಕಾ ತಂಡ ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್ ಫೈನಲ್‌ಗೆ ಅರ್ಹತೆ ಪಡೆದಿದೆ. ಇದೇ ಮೊದಲ ಬಾರಿಗೆ ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್ ಫೈನಲ್ ಆಡಲಿರುವ ದಕ್ಷಿಣ ಆಫ್ರಿಕಾ ಈ ಋತುವಿನಲ್ಲಿ ಅಮೋಘ ಪ್ರದರ್ಶನ ನೀಡಿದೆ. ಆಡಿದ 12 ಪಂದ್ಯಗಳಲ್ಲಿ ದಕ್ಷಿಣ ಆಫ್ರಿಕಾ 8 ಜಯ, 3 ಸೋಲು ಕಂಡಿದ್ದು ಗೆಲುವಿನ ಶೇಕಡಾ ವಾರು 69.44 ಹೊಂದಿದೆ. ಇನ್ನು ಆಸ್ಟ್ರೇಲಿಯಾ 19 ಪಂದ್ಯಗಳಲ್ಲಿ 13 ಜಯ, 4 ಸೋಲು ಕಂಡಿದ್ದು 67.54 ಗೆಲುವಿನ ಶೇಕಡಾ ವಾರಿನೊಂದಿಗೆ ಎರಡನೇ ಸ್ಥಾನದಲ್ಲಿದೆ. ಅಂಕ ಪಟ್ಟಿಯಲ್ಲಿ ಮೊದಲೆರಡು ಸ್ಥಾನವನ್ನು ಪಡೆದ ತಂಡಗಳು ಈ ಚಾಂಪಿಯನ್‌ಶಿಪ್‌ನ ಫೈನಲ್‌ನಲ್ಲಿ ಕಾದಾಟವನ್ನು ನಡೆಸಲಿವೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications