Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

IND vs AUS T20: ಆಸ್ಟ್ರೇಲಿಯಾಗೆ ಜಯದ ಜೋಶ್‌: ಭಾರತಕ್ಕೆ ಹಿನ್ನಡೆ

ಭಾರತದ ನೀಡಿದ್ದ 126 ರನ್‌ಗಳ ಗುರಿಯನ್ನು ಆಸ್ಟ್ರೇಲಿಯಾ ಸುಲಭವಾಗಿ ಗುರಿಯನ್ನು ಮುಟ್ಟಿ ಬೀಗಿತು. ಆಸೀಸ್ ತಂಡದ ಟಾಪ್ ಆರ್ಡರ್ ಬ್ಯಾಟರ್‌ಗಳ ಜವಾಬ್ದಾರಿಯುತ ಆಟದ ನೆರವಿನಿಂದ ಆಸ್ಟ್ರೇಲಿಯಾ 5 ಪಂದ್ಯಗಳ ಟಿ20 ಸರಣಿಯ 2ನೇ ಪಂದ್ಯದಲ್ಲಿ ಜಯ ಸಾಧಿಸಿ, 1-0 ಮುನ್ನಡೆ ಕಾಯ್ದುಕೊಂಡಿದೆ. ಉಭಯ ತಂಡಗಳ ನಡುವಣ ಮೊದಲ ಟಿ20 ಪಂದ್ಯ ಮಳೆಯಿಂದಾಗಿ ರದ್ದಾಗಿತ್ತು.

ಟಾಸ್‌ ಸೋತರೂ ಮೊದಲು ಬ್ಯಾಟ್ ಮಾಡಿದ ಭಾರತ ತಂಡದ ಆರಂಭ ಕಳಪೆಯಾಗಿತ್ತು. ಟಾಪ್‌ ಪಂಕ್ತೀಯ ಆಟಗಾರರು ಸಿಂಗಲ್‌ ಡಿಜಿಟ್‌ನಲ್ಲಿ ಆಟ ಮುಗಿಸಿದರು. ಆದರೆ ಆರಂಭಿಕ ಅಭಿಷೇಕ್‌ ಶರ್ಮಾ ಹಾಗೂ ಆಲ್‌ರೌಂಡರ್ ಹರ್ಷಿತ್ ರಾಣಾ ಮಾತ್ರ ಡಬಲ್‌ ಡಿಜಿಟ್ ಮುಟ್ಟಿದರು. ಅಲ್ಲದೆ ಈ ಜೋಡಿ ತಂಡಕ್ಕೆ ಅರ್ಧಶತಕ ಜೊತೆಯಾಟವನ್ನು ನೀಡಿತು. ಈ ವೇಳೆ 3 ಬೌಂಡರಿ, 1 ಸಿಕ್ಸರ್ ಸಹಾಯದಿಂದ 35 ರನ್‌ ಬಾರಿಸಿ ಔಟ್ ಅದರು.

Australia Beat India by 4 Wickets in 2nd T20 Take 1-0 Lead Abhishek Sharma s 68 Goes in Vain

ಒಂದು ಬದಿಯಲ್ಲಿ ವಿಕೆಟ್‌ಗಳು ಬೀಳುತ್ತಾ ಇದ್ದರೂ ಧ್ರುತಿ ಗೆಡದೆ ಬ್ಯಾಟ್ ಮಾಡಿದ ಅಭಿಷೇಕ್‌ ಶರ್ಮಾ, ಮನಮೋಹಕ ಬ್ಯಾಟಿಂಗ್‌ ನಡೆಸಿದರು. ಇವರು ತಮ್ಮ ಬತ್ತಳಿಕೆಯಲ್ಲಿ ಹೊಡೆತಗಳನ್ನು ಪ್ರಯೋಗಿಸಿ 8 ಬೌಂಡರಿ, 2 ಸಿಕ್ಸರ್ ಸಹಾಯದಿಂದ 68 ರನ್ ಬಾರಿಸಿದರು. ಅಂತಿಮವಾಗಿ ಭಾರತ 18.4 ಓವರ್‌ಗಳಲ್ಲಿ 125 ರನ್‌ಗಳಿಗೆ ಆಲೌಟ್ ಆಯಿತು. ಆಸ್ಟ್ರೇಲಿಯಾ ತಂಡದ ಪರ ಮಾರಕ ಬೌಲರ್‌ ಜೋಶ್‌ ಹ್ಯಾಜಲ್‌ವುಡ್‌ ಅಬ್ಬರಿಸಿದರು. ಇವರ ಬೆಂಕಿಯಂತೆ ಬರುತ್ತಿರುವ ಚೆಂಡಿಗೆ ಉತ್ತರ ನೀಡಲು ಭಾರತೀಯ ಬೌಲರ್‌ಗಳು ವಿಫಲರಾದರು. ಇವರು ಕೇವಲ 13 ರನ್‌ ನೀಡಿ 3 ವಿಕೆಟ್‌ ಉರುಳಿಸಿದರು.

ಭರ್ಜರಿ ಜೊತೆಯಾಟ

ಗುರಿಯನ್ನು ಬೆನ್ನಟ್ಟಿದ ಆಸ್ಟ್ರೇಲಿಯಾ ತಂಡದ ಆರಂಭಿಕರಾದ ಮಿಚೆಲ್ ಮಾರ್ಷ್ ಹಾಗೂ ಟ್ರಾವಿಸ್ ಹೆಡ್ ಜೋಡಿ ಭರ್ಜರಿ ಜೊತೆಯಾಟದ ಕಾಣಿಕೆ ನೀಡಿತು. ಈ ಜೋಡಿ 51 ರನ್‌ಗಳ ಜೊತೆಯಾಟದ ಕಾಣಿಕೆ ನೀಡಿತು. ಟ್ರಾವಿಸ್ ಹೆಡ್‌ 3 ಬೌಂಡರಿ, 1 ಸಿಕ್ಸರ್ ಸಹಾಯದಿಂದ 28 ರನ್ ಬಾರಿಸಿದ್ದಾಗ ವರುಣ್‌ ಚಕ್ರವರ್ತಿ ಎಸೆತದಲ್ಲಿ ಬಿಗ್ ಹಿಟ್ ಬಾರಿಸಲು ಹೀಗಿ ಬೌಂಡರಿ ಲೈನ್‌ನಲ್ಲಿ ತಿಲಕ್ ವರ್ಮಾ ಅಮೋಗ ಕ್ಯಾಚ್ ಪಡೆದರು. ಮಿಚೆಲ್‌ ಮಾರ್ಷ್ 2 ಬೌಂಡರಿ, 4 ಸಿಕ್ಸರ್ ಸಹಾಯದಿಂದ 46 ರನ್ ಬಾರಿಸಿದ್ದಾಗ ಕುಲ್‌ದೀಪ್ ಯಾದವ್ ತೋಡಿದ ಖೆಡ್ಡಾಗೆ ಬಲಿಯಾದರು.

ಮಧ್ಯಮ ಕ್ರಮಾಂಕದಲ್ಲಿ ಟೀಮ್ ಡೇವಿಡ್‌ 1, ಮಿಚೆಲ್‌ ಓವನ್‌ 14, ಮ್ಯಾಥ್ಯೂ ಶಾರ್ಟ್‌ 0 ರನ್‌ ಕಲೆ ಹಾಕುವಲ್ಲಿ ವಿಫಲವಾದರು. ಅಂತಿಮವಾಗಿ ಆಸೀಸ್‌ 13.2 ಓವರ್‌ಗಳಲ್ಲಿ 6 ವಿಕೆಟ್‌ಗೆ 126 ರನ್‌ ಸೇರಿಸಿತು. ಭಾರತದ ಪರ ವರುಣ್ ಚಕ್ರವರ್ತಿ, ಕುಲ್‌ದೀಪ್‌ ಯಾದವ್, ಜಸ್ಪ್ರೀತ್ ಬುಮ್ರಾ ತಲಾ 2 ವಿಕೆಟ್‌ ಕಬಳಿಸಿದರು. ಭಾರತ ಹಾಗೂ ಆಸ್ಟ್ರೇಲಿಯಾ ನಡುವಣ ಮೂರನೇ ಟಿ20 ಪಂದ್ಯ ಭಾನುವಾರ ನಡೆಯಲಿದೆ.

Story first published: Friday, October 31, 2025, 17:13 [IST]
Other articles published on Oct 31, 2025
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+