Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

Women's T20 World Cup 2026: ಎಲ್ಲಿಸ್ ಪೆರ್ರಿ ಜವಾಬ್ದಾರಿಯುತ ಆಟ: ಹರ್ಮನ್‌ಪ್ರಿತ್ ಕೌರ್‌ ಅಭಿಯಾನ ಅಂತ್ಯ

ಲಾರ್ಡ್ಸ್: ಸ್ಟಾರ್ ಆಟಗಾರ್ತಿ ಎಲ್ಲಿಸ್ ಪೆರ್ರಿ ಹಾಗೂ ಆಶ್ಲೀ ಗಾರ್ಡ್ನರ್ ಭರ್ಜರಿ ಆಟದ ನೆರವಿನಿಂದ ಆಸ್ಟ್ರೇಲಿಯಾ ಮಹಿಳಾ ಟಿ20 ವಿಶ್ವಕಪ್‌ನ ಲೀಗ್‌ ಹಂತದ ಪಂದ್ಯದಲ್ಲಿ ಟೀಮ್ ಇಂಡಿಯಾವನ್ನು 6 ವಿಕೆಟ್‌ಗಳಿಂದ ಮಣಿಸಿ, ಅಜೇಯವಾಗಿ ಸೆಮಿಫೈನಲ್‌ಗೆ ಅರ್ಹತೆ ಪಡೆದಿದೆ. ಭಾರತ ಲೀಗ್‌ ಹಂತದಲ್ಲೇ ಟೂರ್ನಿಯಿಂದ ಹೊರ ನಡೆದಿದೆ.

ಟಾಸ್‌ ಗೆದ್ದ ಟೀಮ್ ಇಂಡಿಯಾ ಆರಂಭ ಭರ್ಜರಿಯಾಗಿತ್ತು. ಟೀಮ್ ಇಂಡಿಯಾದ ಆರಂಭಿಕರಾದ ಸ್ಮೃತಿ ಮಂಧಾನ ಹಾಗೂ ಶಫಾಲಿ ವರ್ಮಾ ಜೋಡಿ ಉತ್ತಮ ಅಡಿಪಾಯವನ್ನು ತಂಡಕ್ಕೆ ಹಾಕಿಕೊಟ್ಟಿತು. ಆರಂಭದಲ್ಲಿ ತಾಳ್ಮೆಯಿಂದ ಬ್ಯಾಟ್ ಮಾಡಿದ ಭಾರತದ ಆರಂಭಿಕರು ಪವರ್‌ ಪ್ಲೇನಲ್ಲಿ ವಿಕೆಟ್‌ ಬೀಳದಂತೆ ನೋಡಿಕೊಳ್ಳುವಲ್ಲಿ ಸಫಲರಾದರು. ಮೊದಲ ವಿಕೆಟ್‌ಗೆ ಶಫಾಲಿ ಹಾಗೂ ಸ್ಮೃತಿ ಜೋಡಿ 9.1 ಓವರ್‌ಗಳಲ್ಲಿ 66 ರನ್‌ ಸೇರಿಸಿತು. ಈ ಹಂತದಲ್ಲಿ ಸ್ಪೋಟಕ ಆರಂಭಿಕ ಆಟಗಾರ್ತಿ ಶಫಾಲಿ ವರ್ಮಾ 3 ಬೌಂಡರಿ, 2 ಸಿಕ್ಸರ್ ಸಹಾಯದಿಂದ 34 ರನ್‌ ಸಿಡಿಸಿದರು.

Australia Beat Team India

ಆರಂಭಿಕ ಆಟಗಾರ್ತಿ ಸ್ಮೃತಿ ಮಂಧಾನ 6 ಬೌಂಡರಿ ನೆರವಿನಿಂದ 38 ರನ್‌ ಬಾರಿಸಿದ್ದಾಗ ಇಲ್ಲದ ರನ್‌ ಕದಿಯಲು ಹೋಗಿ ರನ್‌ಔಟ್ ಆದರು.

ಮೂರನೇ ವಿಕೆಟ್‌ಗೆ ನಾಯಕಿ ಹರ್ಮನ್‌ಪ್ರೀತ್ ಕೌರ್ ಹಾಗೂ ಭರವಸೆಯ ಆಟಗಾರ್ತಿ ಜೆಮಿಮಾ ರೊಡ್ರಿಗಸ್‌ ಇನಿಂಗ್ಸ್‌ ಬೆಳೆಸುವ ಜವಾಬ್ದಾರಿಯನ್ನು ಹೊತ್ತುಕೊಂಡರು. ಈ ಜೋಡಿ ಆಸ್ಟ್ರೇಲಿಯಾ ಬೌಲರ್‌ಗಳ ತಂತ್ರವನ್ನು ಮೆಟ್ಟಿನಿಂತು ಬ್ಯಾಟ್ ಮಾಡಿದ ಜೋಡಿ 45 ಎಸೆತಗಳಲ್ಲಿ 64 ರನ್‌ ಸೇರಿಸಿತು. ಈ ಹಂತದಲ್ಲಿ ಜೆಮಿಮಾ ರೊಡ್ರಿಗಸ್‌ 34 ರನ್‌ ಬಾರಿಸಿದ್ದಾಗ ರಿಟೈರ್ಡ್‌ ಹರ್ಟ್‌ ಆದರು.

ಹರ್ಮನ್‌ ಅರ್ಧಶತಕದ ಆಟ

ನಾಯಕಿ ಹರ್ಮನ್‌ಪ್ರೀತ್ ಕೌರ್‌ ಕೆಚ್ಚೆದೆಯ ಬ್ಯಾಟಿಂಗ್ ನಡೆಸಿದರು. ಇವರು 27 ಎಸೆತಗಳಲ್ಲಿ 6 ಬೌಂಡರಿ, 3 ಸಿಕ್ಸರ್ ಸಹಾಯದಿಂದ 56 ರನ್‌ ಬಾರಿಸಿದರು. ಇವರು 20ನೇ ಓವರ್‌ನಲ್ಲಿ ಹ್ಯಾಟ್ರಿಕ್‌ ಸಿಕ್ಸರ್ ಬಾರಿಸುವ ಮೂಲಕ ಭಾರತದ ಮೊತ್ತವನ್ನು ಹಿಗ್ಗಿಸಿದರು. ಅಂತಿಮವಾಗಿ ಭಾರತ 20 ಓವರ್‌ಗಳಲ್ಲಿ 4 ವಿಕೆಟ್‌ ನಷ್ಟಕ್ಕೆ 170 ರನ್‌ ಸೇರಿಸಿತು.

ಗುರಿಯನ್ನು ಬೆನ್ನಟ್ಟಿದ ಆಸ್ಟ್ರೇಲಿಯಾ ತಂಡದ ಆರಂಭ ಕಳಪೆಯಾಗಿತ್ತು. ಜಾರ್ಜಿಯಾ ವೋಲ್ (4) ರೇಣುಕಾ ಸಿಂಗ್‌ಗೆ ವಿಕೆಟ್‌ ಒಪ್ಪಿಸಿದರು. ಮಧ್ಯಮ ಕ್ರಮಾಂಕದಲ್ಲಿ ಫೋಬೆ ಲಿಚ್‌ಫೀಲ್ಡ್ (24) ಶ್ರೀ ಚರಣಿ ಸ್ಪಿನ್ ಬೌಲಿಂಗ್ ಎದುರಿಸುವಲ್ಲಿ ಎಡವಿದರು. ಆರಂಭಿಕ ಆಟಗಾರ್ತಿ ಬೆತ್ ಮೂನಿ 22 ರನ್‌ ಸಿಡಿಸಿ ದೀಪ್ತಿ ಶರ್ಮಾ ಅವರಿಗೆ ವಿಕೆಟ್‌ ಒಪ್ಪಿಸಿದರು.

Australia Beat Team India

4ನೇ ವಿಕೆಟ್‌ಗೆ ಎಲ್ಲಿಸ್ ಪೆರ್ರಿ ಹಾಗೂ ಆಶ್ಲೀ ಗಾರ್ಡ್ನರ್ ಜೋಡಿ ಭರ್ಜರಿ ಜೊತೆಯಾಟ ನೀಡಿತು. ಈ ಜೋಡಿ ಭಾರತದ ಪಾಳಯದಲ್ಲಿದ್ದ ಜಯವನ್ನು ಆಸ್ಟ್ರೇಲಿಯಾ ತೆಕ್ಕೆಗೆ ಕೊಂಡೊಯ್ಯಿತು. ಈ ಜೋಡಿ ಶತಕದ ಜೊತೆಯಾಟವನ್ನು ನೀಡಿ ಮಿಂಚಿತು. ಸ್ಟಾರ್ ಆಟಗಾರ್ತಿ ಎಲ್ಲಿಸ್‌ ಪೆರ್ರಿ 8 ಬೌಂಡರಿ ನೆರವಿನಿಂದ 56 ರನ್‌ ಬಾರಿಸಿದರು. ಆಶ್ಲೀ ಗಾರ್ಡ್ನರ್ ಅಜೇಯ 53 ರನ್‌ ಬಾರಿಸಿ ತಂಡಕ್ಕೆ ಗೆಲುವು ತಂದುಕೊಟ್ಟರು. ಅಂತಿಮವಾಗಿ ಆಸ್ಟ್ರೇಲಿಯಾ ಭರ್ಜರಿ ಜಯ ಸಾಧಿಸಿ ಅಜೇಯವಾಗಿ ಸೆಮಿಫೈನಲ್ ಹಂತ ಪ್ರವೇಶಿಸಿದೆ.

ದಕ್ಷಿಣ ಆಫ್ರಿಕಾ ಸೆಮೀಸ್‌ಗೆ

ಭಾನುವಾರ ನಡೆದ ಇನ್ನೊಂದು ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ತಂಡ ಬಾಂಗ್ಲಾದೇಶ ತಂಡವನ್ನು ಮಣಿಸಿ ಅಬ್ಬರಿಸಿದೆ. ಈ ಮೂಲಕ ಆಡಿದ 5 ಪಂದ್ಯಗಳಲ್ಲಿ, 4 ಜಯ, 1 ಸೋಲು ಕಂಡಿದ್ದು, 8 ಅಂಕಗಳೊಂದಿಗೆ ಸೆಮಿಫೈನಲ್‌ ಪ್ರವೇಶಿಸಿದೆ. ಭಾರತ ಆಸ್ಟ್ರೇಲಿಯಾ ವಿರುದ್ಧ ಗೆಲುವು ದಾಖಲಿಸಿದ್ದರೆ ಮಾತ್ರ ಉಪಾಂತ್ಯ ಪ್ರವೇಶಿಸುವ ಆಸೆ ಫಲಿಸುತ್ತಿತ್ತು. ಆದರೆ ಭಾರತ, ಆಸ್ಟ್ರೇಲಿಯಾ ವಿರುದ್ಧ ಸೋಲು ಕಂಡಿದ್ದು, ಲೀಗ್ ಹಂತದಲ್ಲಿ ತನ್ನ ಅಭಿಯಾನ ಮುಗಿಸಿದೆ.

Story first published: Sunday, June 28, 2026, 23:48 [IST]
Other articles published on Jun 28, 2026
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+