Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

2023 ವಿಶ್ವಕಪ್‌ಗೂ ಮುನ್ನ ಆಸೀಸ್ ತಂಡಕ್ಕೆ ಆಘಾತ; ಭಾರತ ವಿರುದ್ಧದ ಏಕದಿನ ಸರಣಿ ತಪ್ಪಿಸಿಕೊಳ್ಳಲಿರುವ ನಾಯಕ

ಅಕ್ಟೋಬರ್ 5ರಿಂದ ಭಾರತದಲ್ಲಿ ಆರಂಭವಾಗಲಿರುವ 2023ರ ಐಸಿಸಿ ಏಕದಿನ ವಿಶ್ವಕಪ್ ಪಂದ್ಯಾವಳಿಗೂ ಮುನ್ನ ಆಸ್ಟ್ರೇಲಿಯಾ ತಂಡಕ್ಕೆ ದೊಡ್ಡ ಆಘಾತ ಎದುರಾಗಿದೆ. ಮಣಿಕಟ್ಟಿನ ಗಾಯದಿಂದಾಗಿ ಪ್ಯಾಟ್ ಕಮ್ಮಿನ್ಸ್ ಅವರು ಭಾರತ ವಿರುದ್ಧದ ಏಕದಿನ ಸರಣಿ ತಪ್ಪಿಸಿಕೊಳ್ಳಲಿದ್ದಾರೆ ಎನ್ನಲಾಗಿದೆ.

ಇಂಗ್ಲೆಂಡ್ ವಿರುದ್ಧ 2023ರ ಆಶಸ್ ಟೆಸ್ಟ್ ಸರಣಿಯ ಐದನೇ ಮತ್ತು ಅಂತಿಮ ಪಂದ್ಯದ ಮೊದಲ ದಿನದಂದು ಪ್ಯಾಟ್ ಕಮ್ಮಿನ್ಸ್ ತಮ್ಮ ಮಣಿಕಟ್ಟಿಗೆ ಗಾಯ ಮಾಡಿಕೊಂಡರು. ಆದರೂ ಗಾಯದ ನಡುವೆಯೇ ಪಂದ್ಯವನ್ನು ಆಡಿದರು ಎಂದು ವರದಿಗಳು ತಿಳಿಸಿವೆ.

ಭಾರತ ವಿರುದ್ಧದ ಏಕದಿನ ಸರಣಿಯು ಸೆಪ್ಟೆಂಬರ್ 22ರಂದು ಪ್ರಾರಂಭವಾಗಲಿದ್ದು, ತಮ್ಮ ತಂಡದ ನಾಯಕನ ಗಾಯದ ಸ್ವರೂಪದ ಬಗ್ಗೆ ಕ್ರಿಕೆಟ್ ಆಸ್ಟ್ರೇಲಿಯಾ ಇನ್ನೂ ಹೆಚ್ಚಿನ ಮಾಹಿತಿ ನೀಡಿಲ್ಲ.

australia-captain-pat-cummins

ಸಿಡ್ನಿ ಮಾರ್ನಿಂಗ್ ಹೆರಾಲ್ಡ್ ವರದಿಯ ಪ್ರಕಾರ, ಸಂಭಾವ್ಯ ಮಣಿಕಟ್ಟು ಮುರಿತವನ್ನು ಕ್ರಿಕೆಟ್ ಆಸ್ಟ್ರೇಲಿಯಾ ತಳ್ಳಿಹಾಕಿಲ್ಲ. ಅದೇ ದೃಢಪಟ್ಟರೆ, ಪ್ಯಾಟ್ ಕಮ್ಮಿನ್ಸ್ ಅನುಪಸ್ಥಿತಿಯಲ್ಲಿ 2023ರ ಏಕದಿನ ವಿಶ್ವಕಪ್‌ಗೆ ಹೋಗುವ ಆಸ್ಟ್ರೇಲಿಯಾ ತಂಡದ ಯೋಜನೆಗಳಲ್ಲಿ ಪ್ರಮುಖ ಹಿನ್ನಡೆ ಉಂಟಾಗಬಹುದು.

ಪ್ಯಾಟ್ ಕಮ್ಮಿನ್ಸ್ ಈ ವರ್ಷದ ಆರಂಭದಲ್ಲಿ ಭಾರತ ವಿರುದ್ಧ 2023ರ ಬಾರ್ಡರ್-ಗವಾಸ್ಕರ್ ಟ್ರೋಫಿ ಟೆಸ್ಟ್ ಸರಣಿ ಸಮಯದಲ್ಲಿ ತನ್ನ ತಾಯಿಯ ಅನಾರೋಗ್ಯದಿಂದಾಗಿ ಸರಣಿಯ ಮಧ್ಯೆದಲ್ಲಿಯೇ ತವರಿಗೆ ಮರಳಿದ್ದರು. ಬಳಿಕ ಭಾರತ ವಿರುದ್ಧದ 2023ರ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್‌ದಲ್ಲಿ ಹಿಂದಿರುಗಿದರು ಮತ್ತು ತಮ್ಮ ತಂಡವನ್ನು ಗೆಲ್ಲಿಸಿದರು.

ಆಸ್ಟ್ರೇಲಿಯಾ ತಂಡದ ನಾಯಕ ಪ್ಯಾಟ್ ಕಮ್ಮಿನ್ಸ್ ಅವರು ಬೌಲಿಂಗ್‌ನಲ್ಲಿ ಅತ್ಯುತ್ತಮ ಆಶಸ್ ಸರಣಿಯನ್ನು ಹೊಂದಿದ್ದರು. ಇಂಗ್ಲೆಂಡ್ ವಿರುದ್ಧ 2-2 ಅಂತರದಲ್ಲಿ ಸಮಬಲಗೊಳಿಸಿಕೊಂಡರು ಮತ್ತು ಪ್ರಶಸ್ತಿಯನ್ನು ಉಳಿಸಿಕೊಳ್ಳುವಲ್ಲಿ ಯಶಸ್ವಿಯಾದರು.

australia-captain-pat-cummins

ಪ್ಯಾಟ್ ಕಮ್ಮಿನ್ಸ್ ಅನುಪಸ್ಥಿತಿಯಲ್ಲಿ ಮಿಚೆಲ್ ಮಾರ್ಷ್ ಆಸ್ಟ್ರೇಲಿಯಾ ಮುನ್ನಡೆಸುವ ಸಾಧ್ಯತೆ

ಕ್ರಿಕೆಟ್ ಆಸ್ಟ್ರೇಲಿಯಾವು ಮುಂಬರುವ ದಕ್ಷಿಣ ಆಫ್ರಿಕಾ ಮತ್ತು ಭಾರತ ವಿರುದ್ಧದ ವೈಟ್‌ಬಾಲ್ ಸರಣಿಗೆ ತಮ್ಮ ತಂಡವನ್ನು ಪ್ರಕಟಿಸುವ ನಿರೀಕ್ಷೆಯಿದೆ. ಇದೇ ವೇಳೆ ಪ್ಯಾಟ್ ಕಮ್ಮಿನ್ಸ್ ವೈಟ್-ಬಾಲ್ ಸರಣಿಯಲ್ಲಿ ತಪ್ಪಿಸಿಕೊಂಡರೆ, ಆಸ್ಟ್ರೇಲಿಯಾದ ಆಲ್‌ರೌಂಡರ್ ಮಿಚೆಲ್ ಮಾರ್ಷ್ ಆಸ್ಟ್ರೇಲಿಯಾ ತಂಡವನ್ನು ಮುನ್ನಡೆಸುವ ಸಾಧ್ಯತೆ ಇದೆ.

ಗಮನಾರ್ಹವಾಗಿ, ಆಗಸ್ಟ್ 30ರಂದು ಪ್ರಾರಂಭವಾಗುವ ಮೂರು ಟಿ20 ಮತ್ತು ಐದು ಏಕದಿನ ಪಂದ್ಯಗಳಿಗಾಗಿ ಆಸ್ಟ್ರೇಲಿಯಾ ತಂಡವು ದಕ್ಷಿಣ ಆಫ್ರಿಕಾ ತಂಡವನ್ನು ಎದುರಿಸಲಿದೆ. ಆ ಬಳಿಕ ಭಾರತ ಪ್ರವಾಸ ಕೈಗೊಳ್ಳಲಿದೆ.

2023ರ ಏಕದಿನ ವಿಶ್ವಕಪ್‌ಗೆ ಮುಂಚಿತವಾಗಿ, ಆಸ್ಟ್ರೇಲಿಯಾ ತಂಡಕ್ಕೆ ಪ್ಯಾಟ್ ಕಮ್ಮಿನ್ಸ್ ಸಂಪೂರ್ಣ ಫಿಟ್ ಆಗಿ ಮರಳಬಹುದು ಎಂಬ ಭರವಸೆಯಲ್ಲಿ ಕ್ರಿಕೆಟ್ ಆಸ್ಟ್ರೇಲಿಯಾವಿದೆ.

ಪ್ಯಾಟ್ ಕಮ್ಮಿನ್ಸ್ ಪ್ರದರ್ಶನಗಳ ಕುರಿತು ಮಾತನಾಡುವುದಾದರೆ, ಇತ್ತೀಚೆಗೆ ಮುಕ್ತಾಯಗೊಂಡ ಆಶಸ್ 2023ರಲ್ಲಿ ತಮ್ಮ ಅದ್ಭುತ ಪ್ರದರ್ಶನ ನೀಡಿದರು. ಪ್ಯಾಟ್ ಕಮ್ಮಿನ್ಸ್ ನಾಯಕತ್ವದಲ್ಲಿ ಆಸ್ಟ್ರೇಲಿಯಾ ಸರಣಿಯಲ್ಲಿ ಉತ್ತಮ ಆರಂಭವನ್ನು ಪಡೆದರು. ಸರಣಿಯ ಮೊದಲ ಎರಡು ಪಂದ್ಯಗಳನ್ನು ಗೆದ್ದರು.

ಆಸ್ಟ್ರೇಲಿಯಾ ವೇಗಿ ಪ್ಯಾಟ್ ಕಮ್ಮಿನ್ಸ್ ಆಶಸ್ ಸರಣಿಯುದ್ದಕ್ಕೂ 18 ವಿಕೆಟ್‌ ಪಡೆದರು ಮತ್ತು ಸರಣಿಯಲ್ಲಿ ಅತಿ ಹೆಚ್ಚು ವಿಕೆಟ್ ಪಡೆದವರ ಪಟ್ಟಿಯಲ್ಲಿ ನಾಲ್ಕನೇ ಸ್ಥಾನ ಪಡೆದರು. ಅಲ್ಲದೆ, ಅವರು ಆಡಿದ ಒಂಬತ್ತು ಇನ್ನಿಂಗ್ಸ್‌ಗಳಲ್ಲಿ 162 ರನ್‌ಗಳನ್ನು ಗಳಿಸಿದರು. ಇದು ಮೊದಲ ಟೆಸ್ಟ್‌ ಪಂದ್ಯದಲ್ಲಿ ಪಂದ್ಯ ವಿಜೇತ ಪ್ರದರ್ಶನವನ್ನು ಒಳಗೊಂಡಿತ್ತು.

Story first published: Saturday, August 5, 2023, 20:03 [IST]
Other articles published on Aug 5, 2023
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+