ಭಾರತದ ದಾಖಲೆಯ ಸಮಕ್ಕೆ ನಿಂತ ಆಸ್ಟ್ರೇಲಿಯಾ
ವೆಸ್ಟ್ ಇಂಡೀಸ್ ಪ್ರವಾಸದಲ್ಲಿ ಆಸ್ಟ್ರೇಲಿಯಾ ಅಮೋಘ ಪ್ರದರ್ಶನ ನೀಡಿದೆ. ಶನಿವಾರ ನಡೆದ ನಾಲ್ಕನೇ ಟಿ20 ಪಂದ್ಯದಲ್ಲಿ 3 ವಿಕೆಟ್‌ಗಳಿಂದ ಜಯ ಸಾಧಿಸಿರುವ ಆಸೀಸ್, 5 ಪಂದ್ಯಗಳ ಟಿ20 ಸರಣಿಯಲ್ಲಿ 4-0 ಮುನ್ನಡೆ ಸಾಧಿಸಿದೆ. ನಾಲ್ಕನೇ ಪಂದ್ಯದಲ್ಲಿ ಆಸೀಸ್ ಪರ ಕ್ಯಾಮರೂನ್ ಗ್ರೀನ್ ಹಾಗೂ ಜೋಶ್ ಇಂಗ್ಲಿಷ್ ಭರ್ಜರಿ ಪ್ರದರ್ಶನ ನೀಡಿ ಜಯದಲ್ಲಿ ಮಿಂಚಿದರು.
ಟಾಸ್ ಸೋತರೂ ಮೊದಲು ಬ್ಯಾಟ್ ಮಾಡಿದ ವೆಸ್ಟ್ ಇಂಡೀಸ್ ತಂಡದ ಆರಂಭ ಸಾಧಾರಣವಾಗಿತ್ತು. ಆರಂಭಿಕರಾದ ಬ್ರಾಡಂ ಕಿಂಗ್ (18) ಹಾಗೂ ನಾಯಕ ಶಾಯ್ ಹೋಪ್ (10) ದೊಡ್ಡ ಇನಿಂಗ್ಸ್ ಕಟ್ಟುವಲ್ಲಿ ವಿಫಲರಾದರು. ಮಧ್ಯಮ ಕ್ರಮಾಂಕದಲ್ಲಿ ರೋಸ್ಟನ್ ಚೇಸ್ ಸೊನ್ನೆ ಸುತ್ತಿದರು. ಶೆರ್ಫೇನ್ ರುದರ್ಫೋರ್ಡ್ (31), ರೋವ್ಮನ್ ಪೊವೆಲ್ (28), ಶಿಮ್ರಾನ್ ಹೆಟ್ಮೈಯರ್ (16), ರೊಮಾರಿಯೊ ಶೆಫರ್ಡ್ (28) ಉಳಿದ ವಿಂಡೀಸ್ ಬ್ಯಾಟರ್‌ಗಳು ರನ್ ಕಲೆ ಹಾಕುವಲ್ಲಿ ವಿಫಲರಾದರು.

ಅಂತಿಮವಾಗಿ ವಿಂಡೀಸ್ 20 ಓವರ್‌ಗಳಲ್ಲಿ 9 ವಿಕೆಟ್‌ಗೆ 205 ರನ್ ಸೇರಿಸಿತು. ಆಸೀಸ್ ಪರ ಆಡಂ ಜಂಪಾ 3, ಆರನ್ ಹಾರ್ಡಿ, ಕ್ಸೇವಿಯರ್ ಬಾರ್ಟ್ಲೆಟ್, ಸೀನ್ ಅಬಾಟ್ ತಲಾ ಎರಡು ವಿಕೆಟ್ ಪಡೆದರು.
ಇಂಗ್ಲೀಷ್, ಗ್ರೀನ್ ಆರ್ಭಟ
ಗುರಿಯನ್ನು ಬೆನ್ನಟ್ಟಿದ ಆಸ್ಟ್ರೇಲಿಯಾ ತಂಡದ ಆರಂಭ ಕಳಪೆಯಾಗಿತ್ತು. ನಾಯಕ ಮಿಚೆಲ್ ಮಾರ್ಷ್ ರನ್ ಕಲೆ ಹಾಕುವಲ್ಲಿ ವಿಫಲರಾದರು. ಆದರೆ ಎರಡನೇ ವಿಕೆಟ್‌ಗೆ ಜೊತೆಯಾದ ಗ್ಲೇನ್ ಮ್ಯಾಕ್ಸ್‌ವೆಲ್ ಹಾಗೂ ಜೋಶ್ ಇಂಗ್ಲಿಷ್ ಜೋಡಿ 66 ರನ್ ಗಳ ಜೊತೆಯಾಟವನ್ನು ನೀಡಿತು. ಈ ವೇಳೆ ಜೋಶ್ ಇಂಗ್ಲೀಷ್ 10 ಬೌಂಡರಿ, 1 ಸಿಕ್ಸರ್ ಸಹಾಯದಿಂದ 51 ರನ್ ಸಿಡಿಸಿ ಔಟ್ ಆದರು.

ಮೂರನೇ ವಿಕೆಟ್‌ಗೆ ಗ್ಲೇನ್ ಮ್ಯಾಕ್ಸ್‌ವೆಲ್ ಹಾಗೂ ಕ್ಯಾಮರೂನ್ ಗ್ರೀನ್ ಜೋಡಿ 24 ಎಸೆತಗಳಲ್ಲಿ 63 ರನ್ ಸಿಡಿಸಿತು. ಈ ವೇಳೆ ಕ್ಯಾಮರೂನ್ ಗ್ರೀನ್ 3 ಬೌಂಡರಿ, 3 ಸಿಕ್ಸರ್ ಸಹಾಯದಿಂದ 55 ರನ್ ಬಾರಿಸಿ ಔಟ್ ಆದರು. ಸ್ಪೋಟಕ ಆಟಗಾರ ಗ್ಲೇನ್ ಮ್ಯಾಕ್ಸ್‌ವೆಲ್ 18 ಎಸೆತಗಳಲ್ಲಿ 1 ಬೌಂಡರಿ, 6 ಸಿಕ್ಸರ್ ಸಹಾಯದಿಂದ 47 ರನ್ ಬಾರಿಸಿ ಮಿಂಚಿದರು. ಆರನ್ ಹಾರ್ಡಿ 23 ರನ್ ಬಾರಿಸಿ ಗೆಲುವಿನಲ್ಲಿ ಮಿಂಚಿದರು. ಅಂತಿಮವಾಗಿ ಆಸೀಸ್ 19.2 ಓವರ್‌ಗಳಲ್ಲಿ 7 ವಿಕೆಟ್ ನಷ್ಟಕ್ಕೆ 206 ರನ್ ಸೇರಿಸಿತು.
ಭಾರತದ ದಾಖಲೆಗೆ ಅಪಾಯ
ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಆಸ್ಟ್ರೇಲಿಯಾ 200ಕ್ಕೂ ಹೆಚ್ಚು ರನ್‌ಗಳನ್ನು ಚೇಸ್ ಮಾಡುವಲ್ಲಿ, ಭಾರತದ ಸಾಧನೆಯ ಸಮಕ್ಕೆ ನಿಂತಿದೆ. ಉಭಯ ತಂಡಗಳು ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ 7 ಬಾರಿ ಈ ಸಾಧನೆ ಮಾಡಿವೆ. ಭಾರತ ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ 200ಕ್ಕೂ ಹೆಚ್ಚು ರನ್‌ಗಳನ್ನು ಏಳು ಬಾರಿ ಚೇಸ್ ಮಾಡಿದ ಹಿರಿಮೆ ಹೊಂದಿತ್ತು. ಈಗ ಈ ದಾಖಲೆಗೆ ಅಪಾಯಕ ಕಾದಿದೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications