IND vs AUS Day-Night Test: ಆಸ್ಟ್ರೇಲಿಯಾ 337, ಟ್ರಾವಿಸ್ ಹೆಡ್ 140, ಇನಿಂಗ್ಸ್ ಮುನ್ನಡೆ 157 ರನ್
ಭರವಸೆಯ ಮಧ್ಯಮ ಕ್ರಮಾಂಕದ ಆಟಗಾರ ಟ್ರಾವಿಸ್ ಹೆಡ್ (140 ರನ್) ಇವರ ಭರ್ಜರಿ ಶತಕದ ನೆರವಿನಿಂದ ಆಡಿಲೇಡ್‌ನಲ್ಲಿ ನಡೆಯುತ್ತಿರುವ ಡೇ ಆಂಡ್ ನೈಟ್ ಟೆಸ್ಟ್ ಸರಣಿಯಲ್ಲಿ ಆಸ್ಟ್ರೇಲಿಯಾ 157 ರನ್ ಮುನ್ನಡೆಯನ್ನು ಟೀಮ್ ಇಂಡಿಯಾ ವಿರುದ್ಧ ಸಾಧಿಸಿದೆ. ಟೀಮ್ ಇಂಡಿಯಾದ ಪರ ಯಾರ್ಕರ್ ಸ್ಪೇಷಲಿಸ್ಟ್ ಜಸ್ಪ್ರಿತ್ ಬುಮ್ರಾ ಹಾಗೂ ಮೊಹಮ್ಮದ್ ಸಿರಾಜ್ ಕೊಂಚ ಆಸೀಸ್ ಬ್ಯಾಟರ್‌ಗಳನ್ನು ಕಾಡಿದರು.
ಶನಿವಾರದ ಎರಡನೇ ದಿನದಾಟವನ್ನು ಒಂದು ವಿಕೆಟ್‌ಗೆ 86 ರನ್‌ಗಳಿಂದ ಆಟ ಮುಂದುವರಿಸಿದ ಆತಿಥೇಯ ತಂಡ 337 ರನ್‌ಗಳಿಗೆ ಆಲೌಟ್ ಆಯಿತು.

ಆಸೀಸ್ ಪರ ನಾಥನ್ ಮೆಕ್‌ಸ್ವೀನಿ (39) ತಂಡದ ಪರ ಬಿಗ್ ಇನಿಂಗ್ಸ್ ಕಟ್ಟಲಿಲ್ಲ. ಮಧ್ಯಮ ಕ್ರಮಾಂಕದಲ್ಲಿ ಮಾರ್ನಸ್ ಲಂಬುಶೇನ್ 9 ಬೌಂಡರಿ ನೆರವಿನಿಂದ 64 ರನ್ ಸಿಡಿಸಿ ತಂಡಕ್ಕೆ ಆಧಾರವಾದರು. ಸ್ಟಾರ್ ಆಟಗಾರ ಸ್ಟೀವನ್ ಸ್ಮಿತ್ 2 ರನ್‌ಗಳಿಗೆ ಆಟ ಮುಗಿಸಿದರು. ಮಧ್ಯಮ ಕ್ರಮಾಂಕದಲ್ಲಿ ಮಿಚೆಲ್ ಮಾರ್ಷ್ ಸಹ ರನ್ ಕಲೆ ಹಾಕುವಲ್ಲಿ ವಿಫಲರಾದರು.
ಆರನೇ ವಿಕೆಟ್‌ಗೆ ಅಲೆಕ್ಸ್ ಕ್ಯಾರಿ ಹಾಗೂ ಟ್ರಾವಿಸ್ ಹೆಡ್ ಜೋಡಿ ಅಮೋಘ ಬ್ಯಾಟಿಂಗ್ ಜೊತೆಯಾಟದ ಕಾಣಿಕೆ ನೀಡಿದರು. ಈ ಜೋಡಿ 81 ಎಸೆತಗಳಲ್ಲಿ 74 ರನ್ ಸಿಡಿಸಿ ತಂಡಕ್ಕೆ ಆಧಾರವಾದರು.
ಟ್ರಾವಿಸ್ ಹೆಡ್ ಶತಕ
ಟೀಮ್ ಇಂಡಿಯಾವನ್ನು ಮಹತ್ವದ ಪಂದ್ಯಗಳಲ್ಲಿ ಕಾಡುವ ಟ್ರಾವಿಸ್ ಹೆಡ್ ತಮ್ಮ ಕ್ಲಾಸಿಕ್ ಬ್ಯಾಟಿಂಗ್‌ನಲ್ಲೂ ಮುಂದುವರೆಸಿದರು. ಇವರನ್ನು ಕಟ್ಟಿ ಹಾಕಲು ಟೀಮ್ ಇಂಡಿಯಾ ವಿಫಲವಾಯಿತು. ಇವರು ತಮ್ಮ ನೈಜ ಆಟದ ಮೂಲಕ ರೋಹಿತ್ ಪಡೆಯ ಬ್ಯಾಟರ್‌ಗಳನ್ನು ಕಾಡಿದರು. ಇವರು ಟೆಸ್ಟ್ ಕ್ರಿಕೆಟ್‌ನಲ್ಲಿ ಏಕದಿನ ಶೈಲಿಯಲ್ಲಿ ಬ್ಯಾಟ್ ಮಾಡಿದ ಟ್ರಾವಿಸ್ ಹೆಡ್ ಅಬ್ಬರಿಸಿದರು. ಇವರು ತಮ್ಮ ಟೆಸ್ಟ್ ಕ್ರಿಕೆಟ್ ಶತಕದ ಸಂಖ್ಯೆಗೆ ಮತ್ತೊಂದು ಸಂಖ್ಯೆಯನ್ನು ಜೋಡಿಸಿದರು. ಟ್ರಾವಿಸ್ ಹೆಡ್ 141 ಎಸೆತಗಳಲ್ಲಿ 17 ಬೌಂಡರಿ, 4 ಸಿಕ್ಸರ್ ಸಹಾಯದಿಂದ 140 ರನ್ ಸಿಡಿಸಿ ತಂಡಕ್ಕೆ ಆಧಾರವಾದರು.

ಆಸ್ಟ್ರೇಲಿಯಾದ ನಾಯಕ ಪ್ಯಾಟ್ ಕಮಿನ್ಸ್ 12, ಮಿಚೆಲ್ ಸ್ಟಾರ್ಕ್ 18 ರನ್ ಗಳಿಸಿ ತಂಡಕ್ಕೆ ನೆರವಾದರು. ಅಂತಿಮವಾಗಿ ಆಸ್ಟ್ರೇಲಿಯಾ 337 ರನ್‌ಗಳಿಗೆ ಆಲೌಟ್ ಆಯಿತು.
ಬುಮ್ರಾ, ಸಿರಾಜ್ ಅಬ್ಬರ
ಟೀಮ್ ಇಂಡಿಯಾದ ಯಾರ್ಕರ್ ಸ್ಪೇಷಲಿಸ್ಟ್ ಜಸ್ಪ್ರಿತ್ ಬುಮ್ರಾ 61 ರನ್ ನೀಡಿ ಪ್ರಮುಖ ನಾಲ್ಕು ವಿಕೆಟ್ ಕಬಳಿಸಿದರೆ, ಮೊಹಮ್ಮದ್ ಸಿರಾಜ್ 98 ರನ್ ನೀಡಿ 4 ವಿಕೆಟ್ ಕಿತ್ತರು.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications