ಸೆಮಿಫೈನಲ್ಸ್‌ಗೂ ಮುನ್ನ ಸ್ಟಾರ್ ಬ್ಯಾಟ್ಸ್‌ಮನ್ ಕರೆತಂದ ಆಸ್ಟ್ರೇಲಿಯಾ!

ಲಂಡನ್, ಜುಲೈ 05: ಗಾಯದ ಸಮಸ್ಯೆ ಕಾರಣ ವಿಶ್ವಕಪ್‌ನಿಂದ ಹೊರಬಿದ್ದಿರುವ ಎಡಗೈ ಬ್ಯಾಟ್ಸ್‌ಮನ್ ಶಾನ್ ಮಾರ್ಷ್ ಅವರ ಸ್ಥಾನದಲ್ಲಿ ಬದಲಿ ಆಟಗಾರನಾಗಿ ಬಲಗೈ ಬ್ಯಾಟ್ಸ್‌ಮನ್ ಪೀಟರ್ ಹ್ಯಾಂಡ್ಸ್‌ಕಂಬ್ ಆಸ್ಟ್ರೇಲಿಯಾ ತಂಡ ಸೇರಿಕೊಳ್ಳಲಿದ್ದಾರೆ ಎಂದು ಅಂತಾರಾಷ್ಟ್ರೀಯ ಕ್ರಿಕೆಟ್ ಸಮಿತಿ (ಐಸಿಸಿ) ಹೇಳಿದೆ.
ವಿಶ್ವಕಪ್ ವೇಳಾಪಟ್ಟಿ / ಮುಖಾಮುಖಿ ದಾಖಲೆಗಳು / ಅಂಕಪಟ್ಟಿ
ಇದೇ ಶನಿವಾರ ನಡೆಯಲಿರುವ ದಕ್ಷಿಣ ಆಫ್ರಿಕಾ ವಿರುದ್ಧದ ಅಂತಿಮ ಲೀಗ್ ಪಂದ್ಯ ಸಲುವಾಗಿ ಗುರುವಾರ ನೆಟ್ಸ್ ಅಭ್ಯಾಸದಲ್ಲಿ ತೊಡಗಿದ್ದ 35 ವರ್ಷದ ಅನುಭವಿ ಮಧ್ಯಮ ಕ್ರಮಾಂಕದ ಬ್ಯಾಟ್ಸ್‌ಮನ್ ಮಾರ್ಷ್ ಓಲ್ಡ್ ವೇಗಿ ಪ್ಯಾಟ್ ಕಮಿನ್ಸ್ ಅವರ ಬೌಲಿಂಗ್‌ನಲ್ಲಿ ಕೈಗೆ ಹೊಡೆತ ತಿಂದಿದ್ದಾರೆ. ಗಾಯದ ಸಮಸ್ಯೆ ಗಂಭೀರವಾದ ಕಾರಣ ವಿಶ್ವಕಪ್‌ನಿಂದ ಹೊರಗುಳಿಯುವಂತಾಗಿದೆ.
ಅಂದಹಾಗೆ ಪ್ರಸಕ್ತ ವಿಶ್ವಕಪ್ ಟೂರ್ನಿಯಲ್ಲಿ ಆಸ್ಟ್ರೇಲಿಯಾ ತಂಡ ಕೂಡ ಮಧ್ಯಮ ಕ್ರಮಾಂಕದ ಬ್ಯಾಟ್ಸ್‌ಮನ್‌ಗಳ ವೈಫಲ್ಯದಿಂದ ಬಳಲಿದೆ. ಹೀಗಾಗಿ ತಂಡದ ಬ್ಯಾಟಿಂಗ್ ಬಲ ಹೆಚ್ಚಿಸುವ ಉದ್ದೇಶದಿಂದ ಯುವ ಆಟಗಾರ ಪೀಟರ್ ಹ್ಯಾಂಡ್ಸ್‌ಕಂಬ್ ಅವರನ್ನು ಕರೆತರಲಾಗಿದೆ ಎಂಬುದು ಚರ್ಚೆಯಾಗುತ್ತಿದೆ. ಟೀಮ್ ಇಂಡಿಯಾ ಕೂಡ ತನ್ನ ಬ್ಯಾಟಿಂಗ್ ಬಲ ಹೆಚ್ಚಿಸುವ ಉದ್ದೇಶದಿಂದ ಇದೇ ರೀತಿಯ ತಂತ್ರ ಅನುಸರಿಸಿದ್ದು, ಗಾಯಾಳು ಆಲ್‌ರೌಂಡರ್ ವಿಜಯ್ ಶಂಕರ್ ಅವರ ಬದಲಾಗಿ ಆರಂಭಿಕ ಬ್ಯಾಟ್ಸ್‌ಮನ್ ಮಯಾಂಕ್ ಅಗರ್ವಾಲ್ ಅವರನ್ನು ಕರೆತಂದಿದೆ.
"ವಿಶ್ವಕಪ್ ಟೂರ್ನಿಯ ತಾಂತ್ರಿಕ ಸಮಿತಿಯು ಗಾಯಾಳು ಶಾನ್ ಮಾರ್ಷ್ ಅವರ ಬದಲಾಗಿ ಪೀಟರ್ ಹ್ಯಾಂಡ್ಸ್‌ಕಂಬ್ ಅವರನ್ನು ಆಸ್ಟ್ರೇಲಿಯಾ ತಂಡಕ್ಕೆ ಸೇರ್ಪಡೆ ಮಾಡಲು ಅನುಮತಿಸಿದೆ ಎಂದು ಐಸಿಸಿ ಧೃಡೀಕರಿಸುತ್ತದೆ,'' ಎಂದು ಐಸಿಸಿ ತನ್ನ ಅಧಿಕೃತ ಹೇಳಿಕೆಯಲ್ಲಿ ತಿಳಿಸಿದೆ.
ಇದೇ ವೇಳೆ ಮಿಚೆಲ್ ಸ್ಟಾರ್ಕ್ ಬೌಲಿಂಗ್‌ನಲ್ಲಿ ಗ್ಲೆನ್ ಮ್ಯಾಕ್ಸ್‌ವೆಲ್ ಕೂಡ ಪೆಟ್ಟು ತಿಂದಿದ್ದಾರೆ. ಆದರೆ, ದಕ್ಷಿಣ ಆಫ್ರಿಕಾ ವಿರುದ್ಧದ ಪಂದ್ಯದ ಹೊತ್ತಿಗೆ ಮ್ಯಾಕ್ಸ್‌ವೆಲ್ ಚೇತರಿಸಿಕೊಳ್ಳುತ್ತಾರೆ ಎಂದು ಕೋಚ್ ಜಸ್ಟಿನ್ ಲ್ಯಾಂಗರ್ ವಿಶ್ವಾಸ ವ್ಯಕ್ತ ಪಡಿಸಿದ್ದಾರೆ.
28 ವರ್ಷದ ಪ್ರತಿಭಾನ್ವಿತ ಬ್ಯಾಟ್ಸ್‌ಮನ್ ಹ್ಯಾಂಡ್ಸ್‌ಕಂಬ್, ಆಸ್ಟ್ರೇಲಿಯಾ ಪರ 21 ಏಕದಿನ ಪಂದ್ಯಗಳನ್ನಾಡಿದ್ದು ಒಂದು ಶತಕ ಮತ್ತು ನಾಲ್ಕು ಅರ್ಧಶತಕಗಳನ್ನು ಬಾರಿಸಿದ್ದಾರೆ. ಇದೇ ವರ್ಷ ಭಾರತ ವಿರುದ್ಧದ ಸರಣಿಯಲ್ಲಿ ಹ್ಯಾಂಡ್ಸ್‌ಕಂಬ್ ತಮ್ಮ ಚೊಚ್ಚಲ ಏಕದಿನ ಶತಕ ಸಿಡಿಸಿದ್ದರು.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications