Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

Aaron Finch Retires: ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ ಆಸ್ಟ್ರೇಲಿಯಾದ ಆರೋನ್ ಫಿಂಚ್

ಆಸ್ಟ್ರೇಲಿಯಾ ಕ್ರಿಕೆಟ್ ತಂಡದ ಟಿ20 ನಾಯಕ ಹಾಗೂ ಸ್ಫೋಟಕ ಆರಂಭಿಕ ಬ್ಯಾಟ್ಸ್‌ಮನ್ ಆರೋನ್ ಫಿಂಚ್ ಅವರು ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ್ದಾರೆ.

ಆಸ್ಟ್ರೇಲಿಯಾ ಟಿ20 ಕ್ರಿಕೆಟ್ ತಂಡದ ನಾಯಕರಾಗಿ ದಾಖಲೆಯ 76 ಪಂದ್ಯಗಳಲ್ಲಿ ತಮ್ಮ ತಂಡವನ್ನು ಮುನ್ನಡೆಸಿದ ನಂತರ ಎಲ್ಲ ಮಾದರಿಯ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದರು.

ಆರೋನ್ ಫಿಂಚ್ 2021ರಲ್ಲಿ ಆಸ್ಟ್ರೇಲಿಯಾ ತಂಡ ತಮ್ಮ ಮೊದಲ ಟಿ20 ವಿಶ್ವಕಪ್ ಪ್ರಶಸ್ತಿ ಗೆದ್ದ ತಂಡದ ನಾಯಕರಾಗಿದ್ದರು. ಕಳೆದ ವರ್ಷ ತವರು ನೆಲದಲ್ಲಿ ಅವರ ನಡೆದ ಟಿ20 ವಿಶ್ವಕಪ್‌ನಲ್ಲಿ ಪ್ರಶಸ್ತಿ ತಮ್ಮ ನಾಯಕತ್ವದಲ್ಲಿ ಪ್ರಶಸ್ತಿ ಉಳಿಸಿಕೊಳ್ಳುವಲ್ಲಿ ವಿಫಲರಾದರು.

 Australias T20 Captain Aaron Finch Retired From International Cricket

36 ವರ್ಷದ ಅಗ್ರ ಕ್ರಮಾಂಕದ ಬ್ಯಾಟ್ಸ್‌ಮನ್ ಆರೋನ್ ಫಿಂಚ್ 2015ರಲ್ಲಿ ಆಸ್ಟ್ರೇಲಿಯಾ-ನ್ಯೂಜಿಲೆಂಡ್‌ನಲ್ಲಿ ನಡೆದ ಏಕದಿನ ವಿಶ್ವಕಪ್ ಗೆದ್ದ ಆಸ್ಟ್ರೇಲಿಯಾ ತಂಡದ ಸದಸ್ಯರಾಗಿದ್ದರು. ಆದರೆ 12 ವರ್ಷಗಳ ಕಾಲ ಅಂತಾರಾಷ್ಟ್ರೀಯ ವೃತ್ತಿಜೀವನದಲ್ಲಿ ಕೇವಲ ಐದು ಟೆಸ್ಟ್ ಪಂದ್ಯಗಳನ್ನು ಆಡಿದರು.

2024ರಲ್ಲಿ ನಡೆಯಲಿರುವ ಮುಂದಿನ ಟಿ20 ವಿಶ್ವಕಪ್‌ವರೆಗೆ ನಾನು ಆಡುವುದಿಲ್ಲ ಎಂಬುದನ್ನು ಖಚಿತಪಡಿಸಿದ್ದ ಆರೋನ್ ಫಿಂಚ್, ಆ ಟೂರ್ನಿಗಾಗಿ ತಂಡವನ್ನು ಕಟ್ಟುವುದಕ್ಕಾಗಿ ಸಮಯ ನೀಡಲು ಇದೀಗ ಸರಿಯಾದ ಕ್ಷಣವಾಗಿದೆ ಎಂದು ಆರೋನ್ ಫಿಂಚ್ ಮಂಗಳವಾರ, ಫೆಬ್ರವರಿ 7ರಂದು ಮೆಲ್ಬೋರ್ನ್ ಕ್ರಿಕೆಟ್ ಮೈದಾನದಲ್ಲಿ ಹೇಳಿದರು.

ಕಳೆದ ಅಕ್ಟೋಬರ್‌ನಲ್ಲಿ ಟಿ20 ಕ್ರಿಕೆಟ್‌ನಲ್ಲಿ ಗಮನಹರಿಸಲು ಆರೋನ್ ಫಿಂಚ್ ಏಕದಿನ ಸ್ವರೂಪದಿಂದ ನಿವೃತ್ತಿಯಾಗಿದ್ದರು. ಅನಂತರ ವೇಗದ ಬೌಲರ್ ಪ್ಯಾಟ್ ಕಮ್ಮಿನ್ಸ್ ಆಸ್ಟ್ರೇಲಿಯಾದ ಏಕದಿನ ಮತ್ತು ಟೆಸ್ಟ್ ತಂಡದ ನಾಯಕತ್ವ ಜವಾಬ್ದಾರಿ ವಹಿಸಿಕೊಂಡರು.

 Australias T20 Captain Aaron Finch Retired From International Cricket

ಟಿ20 ತಂಡಕ್ಕೆ ಬದಲಿ ನಾಯಕನನ್ನು ಕ್ರಿಕೆಟ್ ಆಸ್ಟ್ರೇಲಿಯಾ ಇನ್ನೂ ಪ್ರಕಟಿಸಿಲ್ಲ. ಏಕದಿನ ಕ್ರಿಕೆಟ್ ಸ್ವರೂಪದಲ್ಲಿ ಬಲಿಷ್ಠವಾಗಿರುವ ಆಸ್ಟ್ರೇಲಿಯಾ ತಂಡವು ಕಳೆದ ಆರು ವಿಶ್ವಕಪ್‌ಗಳಲ್ಲಿ ನಾಲ್ಕು ಬಾರಿ ಪ್ರಶಸ್ತಿ ಎತ್ತಿ ಹಿಡಿದಿದೆ. ಆದರೆ, 2021ರಲ್ಲಿ ಯುಎಇನಲ್ಲಿ ಆರೋನ್ ಫಿಂಚ್ ನಾಯಕತ್ವದಲ್ಲಿ ಚೊಚ್ಚಲ ಬಾರಿಗೆ ಟಿ20 ವಿಶ್ವಕಪ್ ಪ್ರಶಸ್ತಿ ಒಲಿದು ಬಂತು.

ಆರೋನ್ ಫಿಂಚ್ ತಮ್ಮ ವೃತ್ತಿಜೀವನದಲ್ಲಿ 146 ಏಕದಿನ ಪಂದ್ಯಗಳನ್ನು ಆಡಿದ್ದು, 39ರ ಸರಾಸರಿಯಲ್ಲಿ ರನ್ ಗಳಿಸಿದ್ದಾರೆ. ಇನ್ನು 103 ಟಿ20 ಅಂತಾರಾಷ್ಟ್ರೀಯ ಪಂದ್ಯಗಳಲ್ಲಿ 34.28ರ ಸರಾಸರಿ ಮತ್ತು 142.53ರ ಸ್ಟ್ರೈಕ್-ರೇಟ್‌ನಲ್ಲಿ ರನ್ ಕಲೆ ಹಾಕಿದ್ದಾರೆ.

ಆರೋನ್ ಫಿಂಚ್ ಅವರು 2013ರಲ್ಲಿ ಇಂಗ್ಲೆಂಡ್ ವಿರುದ್ಧ 156 ರನ್ ಮತ್ತು ನಂತರ 2018ರಲ್ಲಿ ಹರಾರೆಯಲ್ಲಿ ಜಿಂಬಾಬ್ವೆ ವಿರುದ್ಧ 172 ರನ್ ಗಳಿಸಿದರು. ಇದು ಟಿ20 ಅಂತಾರಾಷ್ಟ್ರೀಯ ಪಂದ್ಯಗಳಲ್ಲಿ ಎರಡು ಬಾರಿ ಅತ್ಯಧಿಕ ಸ್ಕೋರ್ ಗಳಿಸಿದ ದಾಖಲೆಯನ್ನು ಹೊಂದಿದ ಆಟಗಾರನಾಗಿದ್ದಾರೆ.

Story first published: Tuesday, February 7, 2023, 7:34 [IST]
Other articles published on Feb 7, 2023
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+