ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

ಶ್ರೀಲಂಕಾ ವಿರುದ್ಧ ಟೆಸ್ಟ್ ಆಡುತ್ತಿದ್ದರೂ ಆಸಿಸ್ ನಾಯಕನ ಕಣ್ಣು ಭಾರತದ ಮೇಲೆ!

Australia skipper Pat Cummins said Sri Lanka Tests series can help for big series next year in India

ಆಸ್ಟ್ರೇಲಿಯಾ ಕ್ರಿಕೆಟ್ ತಂಡ ಸದ್ಯ ಶ್ರೀಲಂಕಾ ವಿರುದ್ಧ ಟೆಸ್ಟ್ ಸರಣಿಯನ್ನು ಆಡುತ್ತಿದೆ. ಮೊದಲ ಪಂದ್ಯ ಈಗಾಗಲೇ ಮುಕ್ತಾಯವಾಗಿದ್ದು ಮೂರು ದಿನದಲ್ಲಿಯೇ ಶ್ರಿಲಂಕಾ ತಂಡವನ್ನು ಆಸಿಸ್ ಪಡೆ ಸುಲಭವಾಗಿ ಮಣಿಸುವಲ್ಲಿ ಯಶಸ್ವಿಯಾಗಿದೆ. ಈ ಮೂಲಕ ಎರಡು ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಪ್ಯಾಟ್ ಕಮ್ಮಿನ್ಸ್ ಪಡೆ ಮುನ್ನಡೆ ಸಾಧಿಸುವಲ್ಲಿ ಯಶಸ್ವಿಯಾಗಿದೆ.

ಮೊದಲ ಟೆಸ್ಟ್ ಪಂದ್ಯ ಗೆದ್ದ ಬಳಿಕ ಆಸ್ಟ್ರೇಲಿಯಾ ತಂಡದ ನಾಯಕ ಪ್ಯಾಟ್ ಕಮ್ಮಿನ್ಸ್ ಹೇಳಿಕೆ ನೀಡಿದ್ದಾರೆ. ಈ ಸಂದರ್ಭದಲ್ಲಿ ಆಸಿಸ್ ನಾಯಕ ಪ್ಯಾಟ್ ಕಮ್ಮಿನ್ಸ್ ತಮ್ಮ ಮುಂದಿನ ಗುರಿಯನ್ನು ಸ್ಪಷ್ಟಪಡಿಸಿದ್ದಾರೆ. ಮುಂದಿನ ವರ್ಷ ಆಸ್ಟ್ರೇಲಿಯಾ ತಂಡ ಕೈಗೊಳ್ಳಲಿರುವ ಭಾರತ ಪ್ರವಾಸದ ಬಗ್ಗೆ ಮಾತನಾಡುವ ಮೂಲಕ ಕುತೂಹಲ ಮೂಡಿಸಿದ್ದಾರೆ. ಈ ಮೂಲಕ ಶ್ರೀಲಂಕಾ ವಿರುದ್ಧದ ಟೆಸ್ಟ್ ಸರಣಿಯಲ್ಲಿ ಭಾಗವಹಿಸಿದ್ದರೂ ಭಾರತ ಪ್ರವಾಸದ ಬಗ್ಗೆ ಆಸಿಸ್ ನಾಯಕ ಎಚ್ಟು ಗಂಭೀರವಾಗಿದ್ದಾರೆ ಎಂಬುದು ಸ್ಪಷ್ಟವಾಗಿದೆ.

ಕಳೆದ ಒಂದು ವರ್ಷದಲ್ಲಿ ಟೀಮ್ ಇಂಡಿಯಾದ ನಾಯಕರಾಗಿ ನೇಮಕಗೊಂಡ 8 ಆಟಗಾರರ ಪಟ್ಟಿಕಳೆದ ಒಂದು ವರ್ಷದಲ್ಲಿ ಟೀಮ್ ಇಂಡಿಯಾದ ನಾಯಕರಾಗಿ ನೇಮಕಗೊಂಡ 8 ಆಟಗಾರರ ಪಟ್ಟಿ

ಭಾರತ ವಿರುದ್ಧದ ಸರಣಿಗೆ ಸಹಾಯವಾಗಲಿದೆ

ಭಾರತ ವಿರುದ್ಧದ ಸರಣಿಗೆ ಸಹಾಯವಾಗಲಿದೆ

ಶ್ರೀಲಂಕಾ ವಿರುದ್ಧದ ಎರಡು ಪಂದ್ಯಗಳ ಟೆಸ್ಟ್ ಸರಣಿ ಆಸ್ಟ್ರೇಲಿಯಾ ಆಟಗಾರರಿಗೆ ಮುಂದಿನ ವರ್ಷ ಭಾರತದಲ್ಲಿ ನಡೆಯಲಿರು ಮಹತ್ವಾಕಾಂಕ್ಷೆಯ ಟೆಸ್ಟ್ ಸರಣಿಗೆ ಸಹಾಯವಾಗಬಹುದು ಎಂಬ ವಿಶ್ವಾಸವಿದೆ ಎಂದಿದ್ದರೆ ಆಸ್ಟ್ರೇಲಿಯಾ ನಾಯಕ ಪ್ಯಾಟ್ ಕಮ್ಮಿನ್ಸ್. "ನಾವು ಮುಂದಿನ ವರ್ಷ ಭಾರತದಲ್ಲಿ ದೊಡ್ಡ ಸರಣಿಯನ್ನು ಆಡಲಿದ್ದೇವೆ. ಹಾಗಾಗಿ ನಮ್ಮ ತಂಡದ ಬ್ಯಾಟರ್‌ಗಳ ಕೌಶಲ್ಯತೆಯನ್ನು ಹೆಚ್ಚಿಸಿಕೊಳ್ಳಲು ಹಾಗೂ ಚುರುಕುಕೊಳ್ಳಲು ಇದು ಸಹಾಯವಾಗಬಹುದು ಎಂದು ಭಾವಿಸುತ್ತೇನೆ" ಎಂದಿದ್ದಾರೆ ಪ್ಯಾಟ್ ಕಮ್ಮಿನ್ಸ್.

2017ರಲ್ಲಿ ಭಾರತದಲ್ಲಿ ಕೊನೆಯ ಟೆಸ್ಟ್ ಸರಣಿಯನ್ನಾಡಿದ್ದ ಆಸಿಸ್

2017ರಲ್ಲಿ ಭಾರತದಲ್ಲಿ ಕೊನೆಯ ಟೆಸ್ಟ್ ಸರಣಿಯನ್ನಾಡಿದ್ದ ಆಸಿಸ್

ಆಸ್ಟ್ರೇಲಿಯಾ ಕ್ರಿಕೆಟ್ ತಂಡ ಕೊನೆಯ ಭಾರಿಗೆ ಭಾರತದಲ್ಲಿ ಟೆಸ್ಟ್ ಸರಣಿಯನ್ನು ಆಡಿದ್ದು 2017ರಲ್ಲಿ. ಆ ಸಮದರ್ಭದಲ್ಲಿ ಭಾರತ 2-1 ಅಂತರದಿಂದ ಸರಣಿಯನ್ನು ತನ್ನ ವಶಕ್ಕೆ ಪಡೆದುಕೊಂಡಿತ್ತು. ಕುತೂಹಲಕಾರಿ ಸಂಗತಿಯೆಂದರೆ ಭಾರತದಲ್ಲಿ ನಡೆದ 8 ಬಾರ್ಡರ್ -ಗವಾಸ್ಕರ್ ಟೆಸ್ಟ್ ಸರಣಿಯಲ್ಲಿ ಆಸ್ಟ್ರೇಲಿಯಾ ತಂಡ ಕೇವಲ ಒಂದು ಬಾರಿ ಮಾತ್ರವೇ ಸರಣಿ ಗೆಲುವು ಸಾಧಿಸುವಲ್ಲಿ ಯಶಸ್ವಿಯಾಗಿದೆ.

ಮುಂದಿನ ವರ್ಷ ಭಾರತ ಪ್ರವಾಸ ಕೈಗೊಳ್ಳಲಿದೆ ಆಸಿಸ್ ಪಡೆ

ಮುಂದಿನ ವರ್ಷ ಭಾರತ ಪ್ರವಾಸ ಕೈಗೊಳ್ಳಲಿದೆ ಆಸಿಸ್ ಪಡೆ

ಟೆಸ್ಟ್ ಸರಣಿಯಲ್ಲಿ ಭಾಗವಹಿಸುವ ಹಿನ್ನೆಲೆಯಲ್ಲಿ ಆಸ್ಟ್ರೇಲಿಯಾ ತಂಡ ಮುಮದಿನ ವರ್ಷ ಭಾರತಕ್ಕೆ ಪ್ರವಾಸಕೈಗೊಳ್ಳಲಿದೆ. ಫೆಬ್ರವರಿ- ಮಾರ್ಚ್ ತಿಂಗಳಿನಲ್ಲಿ ಈ ಸರಣಿ ಆಯೋಜನೆಯಾಗುವ ಸಾಧ್ಯತೆಯಿದೆ ಎನ್ನಲಾಗಿದೆ. ಇನ್ನು ತನ್ನ ತವರಿನಲ್ಲಿಯೇ ಭಾರತದ ವಿರುದ್ಧ ಸತತ ಎರಡು ಬಾರಿ ಬಾರ್ಡರ್- ಗವಾಸ್ಕರ್ ಟೆಸ್ಟ್ ಸರಣಿ ಸೋತಿರುವ ಆಸಿಸ್ ಪಡೆ ಭಾರೀ ಮುಖಭಂಗ ಅನುಭವಿಸಿತ್ತು. ಹೀಗಾಗಿ ಸೇಡು ತೀರಿಸಿಕೊಳ್ಳುವ ಹಂಬಲದಲ್ಲಿದೆ ಕಮ್ಮಿನ್ಸ್ ಪಡೆ.

ರಿಷಬ್ ಪಂತ್ ದಾಖಲೆಯ ಶತಕ ನೋಡಿ ಡಗೌಟ್ ನಲ್ಲಿ ಕೂತಿದ್ದ ರಾಹುಲ್ ದ್ರಾವಿಡ್ ಹೇಗಾಡಿದ್ರು ನೋಡಿ.. | OneIndia Kannada
ಟೆಸ್ಟ್ ಮಾದರಿಯಲ್ಲಿ ಆಸಿಸ್ ನಂಬರ್-1

ಟೆಸ್ಟ್ ಮಾದರಿಯಲ್ಲಿ ಆಸಿಸ್ ನಂಬರ್-1

ಸದ್ಯ ಟೆಸ್ಟ್ ಕ್ರಿಕೆಟ್ ಮಾದರಿಯಲ್ಲಿ ಆಸ್ಟ್ರೇಲಿಯಾ ಅಗ್ರ ಶ್ರೇಯಾಂಕಿತ ತಂಡ ಎನಿಸಿಕೊಂಡಿದೆ. ಭಾರತ ತಂಡ ಎರಡನೇ ಸ್ಥಾನದಲ್ಲಿದ್ದು ಮೂರನೇ ಸ್ಥಾನದಲ್ಲಿ ದಕ್ಷಿಣ ಆಪ್ರಿಕಾ ತಂಡವಿದೆ. ಪ್ರಸ್ತಿತ ನಡೆಯುತ್ತಿರುವ ಶ್ರೀಲಂಕಾ ವಿರುದ್ಧದ ಟೆಸ್ಟ್ ಸರಣಿಯ ಮೊದಲ ಪಂದ್ಯದಲ್ಲಿ ಅಮೋಘ ಪ್ರದರ್ಶನ ನೀಡಿರುವ ಆಸಿಸ್ ಪಡೆ ಎರಡನೇ ಪಂದ್ಯದಲ್ಲಿಯೂ ಗೆದ್ದು ವೈಟ್‌ವಾಶ್ ಮಾಡುವ ಗುರಿಯಿಟ್ಟುಕೊಂಡಿದೆ.

Story first published: Saturday, July 2, 2022, 13:52 [IST]
Other articles published on Jul 2, 2022
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X