ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

ಭಾರತ ವಿರುದ್ಧದ ಟೆಸ್ಟ್ ಸರಣಿಗೂ ಮುನ್ನವೇ ಭಾರತಕ್ಕೆ ಆಸಿಸ್ ನಾಯಕನಿಂದ ಎಚ್ಚರಿಕೆ ಸಂದೇಶ

Australia skipper Pat Cummins warning to India said best chance for rare Test series win

ಫೆಬ್ರವರಿ ತಿಂಗಳಿನಲ್ಲಿ ಭಾರತ ಪ್ರವಾಸ ಕೈಗೊಳ್ಳಲಿರುವ ಆಸ್ಟ್ರೇಲಿಯಾ ತಂಡ ಬಹುನಿರೀಕ್ಷಿತ ಟೆಸ್ಟ್ ಸರಣಿಯಲ್ಲಿ ಭಾರತ ತಂಡವನ್ನು ಎದುರಿಸಲಿದೆ. ಈ ಸರಣಿಯ ಮೇಲೆ ಈಗಾಗಲೇ ಸಾಕಷ್ಟು ಕುತೂಹಲ ಮೂಡಿಸಿದ್ದು ಎರಡು ಅಗ್ರ ತಂಡಗಳ ನಡುವಿನ ಕಾದಾಟಕ್ಕೆ ಅಭಿಮಾನಿಗಳು ಕೂಡ ಕಾತರಿಸುತ್ತಿದ್ದಾರೆ. ಈ ಸರಣಿಯ ಹಿನ್ನೆಲೆಯಲ್ಲಿ ಆಸ್ಟ್ರೇಲಿಯಾ ತಂಡದ ನಾಯಕ ಪ್ಯಾಟ್ ಕಮ್ಮಿನ್ಸ್ ಪ್ರತಿಕ್ರಿಯೆ ನೀಡಿದ್ದು ಸರಣಿಯ ಆರಂಭಕ್ಕೆ ತಿಂಗಳಿಗೂ ಮುನ್ನವೇ ಟೀಮ್ ಇಂಡಿಯಾಗೆ ಎಚ್ಚರಿಕೆಯ ಸಂದೇಶ ರವಾನಿಸಿದ್ದಾರೆ.

ಫೆಬ್ರವರಿ- ಮಾರ್ಚ್ ತಿಂಗಳಿನಲ್ಲಿ ನಡೆಯಲಿರುವ ನಾಲ್ಕು ಪಂದ್ಯಗಳ ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯಲ್ಲಿ ಭಾರತ ಹಾಗೂ ಆಸ್ಟ್ರೇಲಿಯಾ ತಂಡಗಳು ಪರಸ್ಪರ ಕಾದಾಡಲಿದೆ. 2017ರ ಬಳಿಕ ಮೊದಲ ಬಾರಿಗೆ ಭಾರತಕ್ಕೆ ಆಗಮಿಸಿ ಟೆಸ್ಟ್ ಸರಣಿಯನ್ನಾಡಲಿರುವ ಆಸ್ಟ್ರೇಲಿಯಾ ತಂಡ ಭಾರತದ ನೆಲದಲ್ಲಿ ಟೆಸ್ಟ್ ಸರಣಿ ಗೆಲುವಿಗಾಗಿ ಹಂಬಲಿಸುತ್ತಿದೆ. ಈ ಹಿನ್ನೆಲೆಯಲ್ಲಿ ಆಸಿಸ್ ನಾಯಕ ಪ್ಯಾಟ್ ಕಮ್ಮಿನ್ಸ್ ಪ್ರತಿಕ್ರಿಯೆ ನೀಡಿದ್ದಾರೆ.

IND vs SL 1st ODI: ಶ್ರೀಲಂಕಾ ವಿರುದ್ಧ ಮೊದಲ ಪಂದ್ಯಕ್ಕೆ ಭಾರತದ ಬಲಿಷ್ಠ ಸಂಭಾವ್ಯ ಆಡುವ 11ರ ಬಳಗIND vs SL 1st ODI: ಶ್ರೀಲಂಕಾ ವಿರುದ್ಧ ಮೊದಲ ಪಂದ್ಯಕ್ಕೆ ಭಾರತದ ಬಲಿಷ್ಠ ಸಂಭಾವ್ಯ ಆಡುವ 11ರ ಬಳಗ

ಭಾರತದ ವಿರುದ್ಧ ಹ್ಯಾಟ್ರಿಕ್ ಸರಣಿ ಸೋಲು ಅನುಭವಿಸಿರುವ ಆಸಿಸ್

ಭಾರತದ ವಿರುದ್ಧ ಹ್ಯಾಟ್ರಿಕ್ ಸರಣಿ ಸೋಲು ಅನುಭವಿಸಿರುವ ಆಸಿಸ್

2014-15ರ ಬಳಿಕ ಆಸ್ಟ್ರೇಲಿಯಾಗೆ ಬಾರ್ಡರ್-ಗವಾಸ್ಕರ್ ಸರಣಿಯಲ್ಲಿ ಟ್ರೋಫಿ ಗೆಲ್ಲಲು ಸಾಧ್ಯವಾಗಿಲ್ಲ. 2017ರಲ್ಲಿ ತವರಿನಲ್ಲಿ ನಡೆದ ಸರಣಿ ಸೇರಿದಂತೆ ಭಾರತ ಕಳೆದ ಮೂರು ಸರಣಿಯಲ್ಲಿಯೂ ಟ್ರೋಫಿ ಎತ್ತಿ ಹಿಡಿದಿದೆ. ಈ ಮಧ್ಯೆ ಕಳೆದ ಎರಡು ಬಾರ್ಡರ್ ಗವಾಸ್ಕರ್ ಸರಣಿ ಆಸ್ಟ್ರೇಲಿಯಾದಲ್ಲಿ ನಡೆದಿದ್ದು ಎರಡರಲ್ಲಿಯೂ ಭಾರತ ಸರಣಿ ಗೆಲುವು ಸಾಧಿಸಿದೆ. ಹೀಗಾಗಿ ಆಸ್ಟ್ರೇಲಿಯಾ ತವರಿನಲ್ಲಿಯೇ ಭಾರೀ ಮುಖಭಂಗ ಅನುಭವಿಸಿದ್ದು ಈ ಬಾರಿ ಸರಣಿ ಗೆಲುವು ಸಾಧಿಸುವ ಒತ್ತಡದಲ್ಲಿದೆ. ಇನ್ನು ಆಸ್ಟ್ರೇಲಿಯಾ ತಂಡ ಭಾರತದಲ್ಲಿ 2004ರ ಬಳಿಕ ಟೆಸ್ಟ್ ಸರಣಿ ಗೆಲ್ಲಲು ಸಾಧ್ಯವಾಗಿಲ್ಲ ಎಂಬುದು ಮತ್ತೊಂದು ಗಮನಾರ್ಹ ಅಂಶ.

"ಭಾರತದಲ್ಲಿ ಸರಣಿ ಗೆಲ್ಲಲು ಅತ್ಯುತ್ತಮ ಅವಕಾಶ"

ಇನ್ನು ಭಾರತದ ವಿರುದ್ಧದ ಸರಣಿಯ ಹಿನ್ನೆಲೆಯಲ್ಲಿ ಮಾತನಾಡಿರುವ ಪ್ಯಾಟ್ ಕಮ್ಮಿನ್ಸ್ ಈ ಬಾರಿ ಆಸ್ಟ್ರೇಲಿಯಾ ತಂಡಕ್ಕೆ ಭಾರತದಲ್ಲಿ ಟೆಸ್ಟ್ ಸರಣಿ ಗೆಲ್ಲಲು ಅದ್ಭುತ ಅವಕಾಶವಿದೆ ಎಂದಿದ್ದಾರೆ. "ಈ ಬಾರಿ ನಮಗೆ ಅದ್ಭುತ ಅವಕಾಶವಿದೆ. ಇದು ಮತ್ತೊಂದು ಅದ್ಭುತವಾದ ಕ್ರಿಕೆಟ್ ಋತುವಾಗಿರಲಿದೆ. ನಾವು ಉಪಖಂಡದ ವಾತಾವರಣಕ್ಕೆ ಉತ್ತಮವಾಗಿ ಹೊಂದಿಕೊಂಡಿರುವ ವಿಶ್ವಾಸವಿದೆ. ಶ್ರೀಲಂಕಾ ಹಾಗೂ ಪಾಕಿಸ್ತಾನದ ವಿರುದ್ಧ ಟೆಸ್ಟದ ಸರಣಿ ಆಡಿ ಗೆದ್ದಿರುವುದು ಭಾರತದ ವಿರುದ್ಧದ ಸರಣಿಗೆ ಉತ್ತಮ ಸಿದ್ಧತೆ ಒದಗಿಸಿದೆ. ಈ ಹಿಂದಿನ ಎಲ್ಲಾ ಸರಣಿಗಳಿಗಿಂತಲೂ ಈ ಬಾರಿ ನಾವು ಅದ್ಭುತವಾಗಿ ಪ್ರದರ್ಶನ ನೀಡಲಿದ್ದೇವೆ" ಎಂದು ಆತ್ಮವಿಶ್ವಾಸದ ಮಾತುಗಳನ್ನಾಡಿದ್ದಾರೆ ಆಸಿಸ್ ನಾಯಕ ಪ್ಯಾಟ್ ಕಮ್ಮಿನ್ಸ್.

4 ಪಂದ್ಯಗಳ ಸರಣಿಯಲ್ಲಿ ಆಡಲಿದೆ ಆಸಿಸ್ ಪಡೆ

4 ಪಂದ್ಯಗಳ ಸರಣಿಯಲ್ಲಿ ಆಡಲಿದೆ ಆಸಿಸ್ ಪಡೆ

ಇನ್ನು ಈ ಬಾರಿಯ ಭಾರತ ಪ್ರವಾಸದಲ್ಲಿ ಆಸ್ಟ್ರೇಲಿಯಾ ಮೊದಲಿಗೆ ನಾಲ್ಕು ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಭಾಗಿಯಾಗಲಿದೆ. ಫೆಬ್ರವರಿ 9ರಿಂದ ಈ ಟೆಸ್ಟ್ ಸರಣಿ ಆರಂಭವಾಗಲಿದ್ದು ನಾಗ್ಪುರ, ದೆಹಲಿ, ಧರ್ಮಶಾಲಾ ಹಾಗೂ ಅಹ್ಮದಾಬಾದ್‌ನಲ್ಲಿ ಈ ನಾಲ್ಕು ಪಂದ್ಯಗಳು ಆಯೋಜನೆಯಾಗಲಿದೆ. ಇನ್ನು ನಾಗ್ಪುರದಲ್ಲಿ ನಡೆಯಲಿರುವ ಮೊದಲ ಟೆಸ್ಟ್ ಪಂದ್ಯಕ್ಕೆ ಮಿಚೆಲ್ ಸ್ಟಾರ್ಕ್ ಹಾಗೂ ಕ್ಯಾಮರೂನ್ ಗ್ರೀನ್ ಗಾಯದ ಕಾರಣದಿಂದಾಗಿ ಅಲಭ್ಯವಾಗುವ ಸಾಧ್ಯತೆಯಿದೆ.

ಅದ್ಭುತ ಫಾರ್ಮ್‌ನಲ್ಲಿದೆ ಆಸ್ಟ್ರೇಲಿಯಾ

ಅದ್ಭುತ ಫಾರ್ಮ್‌ನಲ್ಲಿದೆ ಆಸ್ಟ್ರೇಲಿಯಾ

ಇನ್ನು ಈ ಬಾರಿ ಆಸ್ಟ್ರೇಲಿಯಾ ಅದ್ಭುತ ಪ್ರದರ್ಶನ ನೀಡಿಕೊಂಡು ಬರುತ್ತಿದ್ದು ತವರಿನಲ್ಲಿ ನಡೆದ ಸರಣಿಯಲ್ಲಿ ಭಾರೀ ಮೇಲುಗೈ ಸಾಧಿಸಿದೆ. ತವರಿನ ಆವೃತ್ತಿಯಲ್ಲಿ ಕಳೆದ ಐದು ಟೆಸ್ಟ್ ಪಂದ್ಯಗಳಲ್ಲಿ ಆಸ್ಟ್ರೇಲಿಯಾ 4 ಪಂದ್ಯಗಳಲ್ಲಿ ಜಯ ಸಾಧಿಸಿದ್ದು ಒಂದು ಪಂದ್ಯದಲ್ಲಿ ಡ್ರಾ ಸಾಧಿಸಿದೆ. ವೆಸ್ಟ್ ಇಂಡೀಸ್ ವಿರುದ್ಧ 2-0 ಅಂತರದ ಗೆಲುವು ಸಾಧಿಸಿದರೆ ದಕ್ಷಿಣ ಆಫ್ರಿಕಾ ವಿರುದ್ಧದ ಮುರು ಪಂದ್ಯಗಳ ಟಿ20 ಸರಣಿಯನ್ನು 2-0 ಅಂತರದಿಂದ ವಶಕ್ಕೆ ಪಡೆದುಕೊಂಡಿದೆ. ಸಿಡ್ನಿ ಪಂದ್ಯಕ್ಕೆ ಮಳೆ ಅಡ್ಡಿಯಾಗಿರದಿದ್ದರೆ ದಕ್ಷಿಣ ಆಫ್ರಿಕಾ ಕೂಡ ವೈಟ್‌ವಾಶ್ ಅವಮಾನಕ್ಕೆ ತುತ್ತಾಗುವ ಸಾಧ್ಯತೆಯಿತ್ತು. ಪ್ರಸ್ತುತ ಆಸ್ಟ್ರೇಲಿಯಾ ತಂಡ ಟೆಸ್ಟ್ ಶ್ರೇಯಾಂಕ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದ್ದು ಭಾರತ ಎರಡನೇ ಸ್ಥಾನದಲ್ಲಿದೆ.

Story first published: Monday, January 9, 2023, 13:44 [IST]
Other articles published on Jan 9, 2023
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X