ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

ಅವರು ಸುಲಭವಾಗಿ ಗೆಲ್ಲಬಲ್ಲರು: WTC ಫೈನಲ್‌ ವಿಜೇತರನ್ನು ಹೆಸರಿಸಿದ ಟಿಮ್ ಪೈನ್

Australia skipper Tim Paine chooses the winner of the WTC final

ಆಸ್ಟ್ರೇಲಿಯಾ ಟೆಸ್ಟ್ ಕ್ರಿಕೆಟ್ ತಂಡದ ನಾಯಕ ಟಿಮ್ ಪೈನ್ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ನ ಫೈನಲ್ ಪಂದ್ಯದ ವಿಜೇತರು ಯಾರಾಗಬಹುದು ಎಂದು ಊಹಿಸಿದ್ದಾರೆ. ಟಿಮ್ ಪೈನ್ ನಾಯಕತ್ವದ ಆಸ್ಟ್ರೇಲಿಯಾ ತಂಡದ ವಿರುದ್ಧ ಭಾರತ ತಂಡ ಕಳೆದ ವರ್ಷಾಂತ್ಯದಲ್ಲಿ ನಡೆದ ಟೆಸ್ಟ್ ಸರಣಿಯಲ್ಲಿ ಭರ್ಜರಿಯಾಗಿ ಗೆಲುವು ಸಾಧಿಸಿತ್ತು. ಸ್ಟಾರ್ ಆಟಗಾರರ ಅಲಭ್ಯತೆಯ ಮಧ್ಯೆಯೂ ಟೀಮ್ ಇಂಡಿಯಾದ ಗೆಲುವು ವಿಶ್ವ ಕ್ರಿಕೆಟ್‌ಅನ್ನು ನಿಬ್ಬೆರಗಾಗುವಂತೆ ಮಾಡಿತ್ತು.

ಆಸ್ಟ್ರೇಲಿಯಾ ತಂಡದ ಟೆಸ್ಟ್ ನಾಯಕ ಟಿಮ್ ಪೈನ್ ಪ್ರಕಾರ ವಿರಾಟ್ ಕೊಹ್ಲಿ ನೇತೃತ್ವದ ಟೀಮ್ ಇಂಡಿಯಾ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ನಲ್ಲಿ ಭಾರತ ಆರಾಮವಾಗಿ ಗೆಲುವು ಸಾಧಿಸಲಿದೆ ಎಂದಿದ್ದಾರೆ. ಈ ಮೂಲಕ ಚೊಚ್ಚಲ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ನನಲ್ಲಿ ಟೀಮ್ ಇಂಡಿಯಾ ಚಾಂಪಿಯನ್ ಪಟ್ಟಕ್ಕೇರಲಿದೆ ಎಂದು ಟಿಮ್ ಪೈನ್ ಹೇಳಿದ್ದಾರೆ.

WTC Final ವರೆಗೆ ಟೀಮ್ ಇಂಡಿಯಾ ಬಂದಿದ್ಹೇಗೆ?: ರೋಚಕ ಕತೆ!WTC Final ವರೆಗೆ ಟೀಮ್ ಇಂಡಿಯಾ ಬಂದಿದ್ಹೇಗೆ?: ರೋಚಕ ಕತೆ!

ನ್ಯೂಜಿಲೆಂಡ್ ಕ್ರಿಕೆಟ್ ತಂಡದ ಇತ್ತೀಚಿನ ಪ್ರದರ್ಶನದ ಬಳಿಕ ವಿಶ್ ಟೆಸ್ಟ್ ಚಾಂಪಿಯನ್‌ಶಿಪ್‌ನ ಫೈನಲ್ ಪಂದ್ಯದಲ್ಲಿ ಕೀವಿಸ್ ಪಡೆ ಗೆಲ್ಲುವ ಫೇವರೀಟ್ ಎಂದು ಕ್ರಿಕೆಟ್ ತಜ್ಞರು ಅಭಿಪ್ರಾಯಪಡುತ್ತಿದ್ದರೆ ಅದಕ್ಕೆ ವ್ಯತಿರಿಕ್ತವಾದ ಅಭಿಪ್ರಾಯವನ್ನು ಟಿಮ್ ಪೈನ್ ವ್ಯಕ್ತಡಿಸಿದ್ದಾರೆ.

ಇಂಗ್ಲೆಂಡ್‌ನ ವಾತಾವರಣ ಹಾಗೂ ಪಿಚ್ ನ್ಯೂಜಿಲೆಂಡ್ ಕ್ರಿಕೆಟ್ ತಂಡಕ್ಕೆ ಹೆಚ್ಚು ಸೂಕ್ತವಾಗಿದೆ. ಅದರಲ್ಲಿಯೂ ಆತಿಥೇಯ ಇಂಗ್ಲೆಂಡ್ ತಂಡದ ವಿರುದ್ಧದ ಟೆಸ್ಟ್ ಸರಣಿಯಲ್ಲಿಯೂ ನ್ಯೂಜಿಲೆಂಡ್ ತಂಡ ಭರ್ಜರಿ ಗೆಲುವನ್ನು ಸಾಧಿಸಿದೆ. ಈ ಮೂಲಕ ಈ ಅಭಿಪ್ರಾಯಕ್ಕೆ ಹೆಚ್ಚು ಬಲ ಬಂದಂತಾಗಿದೆ. ಹಾಗಿದ್ದರೂ ಟಿಮ್ ಪೈನ್ ಟೀಮ್ ವಿರಾಟ್ ಕೊಹ್ಲಿ ನೇತೃತ್ವದ ಟೀಮ್ ಇಂಡಿಯಾ ವಿಶ್ವದ ಯಾವುದೇ ಭಾಗದಲ್ಲಿಯಾದರೂ ಸುಲಭವಾಗಿ ಗೆಲ್ಲಬಲ್ಲ ಸಾಮರ್ಥ್ಯವನ್ನು ಹೊಂದಿದೆ ಎಂದು ಹೇಳೀಕೆಯನ್ನು ನೀಡಿರುವುದು ಟೀಮ್ ಇಂಡಿಯಾ ಅಭಿಮಾನಿಗಳ ಪಾಲಿಗೆ ನಿರೀಕ್ಷೆ ಹೆಚ್ಚುವಂತೆ ಮಾಡಿದೆ.

WTC Finalನಿಂದ ನ್ಯೂಜಿಲೆಂಡ್ ಆಲ್ ರೌಂಡರ್ ಮಿಚೆಲ್ ಸ್ಯಾಂಟ್ನರ್ ಹೊರಕ್ಕೆWTC Finalನಿಂದ ನ್ಯೂಜಿಲೆಂಡ್ ಆಲ್ ರೌಂಡರ್ ಮಿಚೆಲ್ ಸ್ಯಾಂಟ್ನರ್ ಹೊರಕ್ಕೆ

"ನನ್ನ ಊಹೆಯ ಪ್ರಕಾರ ಭಾರತ ತಮಗೆ ಹತ್ತಿರವಿರುವಂತೆ ಯಾವುದೇ ಭಾಗದಲ್ಲಾದರೂ ಆರಾಮದಾಯಕವಾಗಿಯೇ ಗೆಲುವು ಸಾಧಿಸಲಿದೆ" ಎಂದು ಬ್ರಿಸ್ಬೇನ್‌ನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದಾರೆ. ಭಾರತ ಹಾಗೂ ನ್ಯೂಜಿಲೆಂಡ್ ವಿರುದ್ಧದ ಟೆಸ್ಟ್ ಸರಣಿಯಲ್ಲಿ ಆಸ್ಟ್ರೇಲಿಯಾ ತಂಡವನ್ನು ಟಿಮ್ ಪೈನ್ ಮುನ್ನಡೆಸಿದ್ದರು. ತವರಿನಲ್ಲಿ ನಡೆದ ನ್ಯೂಜಿಲೆಂಡ್ ವಿರುದ್ಧದ ಸರಣಿಯಲ್ಲಿ ಟಿಮ್ ಪೈನ್ ಪಡೆ 3-0 ಅಂತರದಿಂದ ಗೆಲುವು ಸಾಧಿಸಿದ್ದರೆ ಭಾರತದ ವಿರುದ್ಧದ ಸರಣಿಯಲ್ಲಿ 1-2 ಅಂತರದಿಂದ ಭಾರತಕ್ಕೆ ಶರಣಾಗಿ ಮುಖಭಂಗ ಅನುಭವಿಸಿತ್ತು.

Story first published: Tuesday, June 15, 2021, 13:36 [IST]
Other articles published on Jun 15, 2021
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X