Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

ಆರ್‌ಸಿಬಿ ವೇಗಿಗೆ ಇಲ್ಲ ಸ್ಥಾನ: ಪಾಕ್‌, ಬಾಂಗ್ಲಾ ವಿರುದ್ಧದ ಸರಣಿಗೆ ಆಸೀಸ್ ತಂಡ ಪ್ರಕಟ

ಆಸ್ಟ್ರೇಲಿಯಾದ ಸ್ಟಾರ್ ಆಟಗಾರರು ಸದ್ಯ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್‌)ನಲ್ಲಿ ಬ್ಯೂಸಿಯಾಗಿದ್ದಾರೆ. ಈ ಲೀಗ್‌ ಮುಗಿದ ಬಳಿಕ ಆಸ್ಟ್ರೇಲಿಯಾ ಅಂತಾರಾಷ್ಟ್ರೀಯ ಪಂದ್ಯಗಳ ಸರಣಿಗೆ ಸಿದ್ಧತೆ ನಡೆಸಿದೆ. ಈ ಹಿನ್ನೆಲೆಯಲ್ಲಿ ಆಸ್ಟ್ರೇಲಿಯಾ ತಂಡವನ್ನು ಪ್ರಕಟಿಸಲಾಗಿದೆ. ಪಾಕಿಸ್ತಾನ ವಿರುದ್ಧ ಹಾಗೂ ಬಾಂಗ್ಲಾ ವಿರುದ್ಧದ ಸರಣಿಗೆ ಆಸ್ಟ್ರೇಲಿಯಾ ತಂಡವನ್ನು ಪ್ರಕಟಿಸಲಾಗಿದೆ. ಈ ಎರಡೂ ತಂಡಗಳಲ್ಲಿ ಗಮನಾರ್ಹ ಬದಲಾವಣೆಗಳಿವೆ.

ಕ್ರಿಕೆಟ್‌ ಆಸ್ಟ್ರೇಲಿಯಾ ದಕ್ಷಿಣ ಆಫ್ರಿಕಾದಲ್ಲಿ 2027ರಲ್ಲಿ ನಡೆಯಲಿರುವ ಏಕದಿನ ವಿಶ್ವಕಪ್ ದೃಷ್ಟಿಯಿಂದ ಹಲವು ಬದಲಾವಣೆಗಳನ್ನು ಮಾಡಿದ್ದು, ಅನುಭವಿ ಆಟಗಾರರಿಗೆ ವಿಶ್ರಾಂತಿ ಸಹ ನೀಡಿದೆ. ಈ ಸರಣಿಯು ಮುಂದಿನ ವಿಶ್ವಕಪ್‌ ತಯಾರಿಯನ್ನು ಸೂಚಿಸುತ್ತದೆ ಎಂದು ನಂಬಲಾಗಿದೆ. ಆರಂಭದಲ್ಲಿ ಆಸೀಸ್‌ ಪಾಕಿಸ್ತಾನದ ವಿರುದ್ಧ ಮೂರು ಏಕದಿನ ಪಂದ್ಯಗಳ ಸರಣಿಯನ್ನು ಆಡಲಿದೆ. ಈ ಸರಣಿಯ ಬಳಿಕ ಬಾಂಗ್ಲಾದೇಶಕ್ಕೆ ಪ್ರವಾಸ ಕೈಗೊಳ್ಳಲಿದೆ. ಈ ಪ್ರವಾಸದಲ್ಲಿ ಆಸೀಸ್‌ ಮೂರು ಏಕದಿನ ಮತ್ತು ಮೂರು ಟಿ20 ಪಂದ್ಯಗಳನ್ನು ಆಡಲಿದೆ.

Australia

ಪಾಕಿಸ್ತಾನ ವಿರುದ್ಧದ ಸರಣಿಗೆ ಅನುಭವಿ ವೇಗದ ಬೌಲರ್‌ಗಳು ಅಲಭ್ಯರಾಗಿದ್ದಾರೆ. ಪ್ಯಾಟ್ ಕಮ್ಮಿನ್ಸ್, ಮಿಚೆಲ್ ಸ್ಟಾರ್ಕ್ ಮತ್ತು ಜೋಶ್ ಹ್ಯಾಜಲ್‌ವುಡ್ ತಂಡದಿಂದ ಹೊರಗುಳಿದಿದ್ದಾರೆ. ಇವರು ಸೀಮಿತ ಓವರ್‌ಗಳ ಪಂದ್ಯಗಳಿಂದ ಹೊರಗುಳಿದಿದ್ದರಿಂದ ಯುವ ಆಟಗಾರರಿಗೆ ಹೆಚ್ಚಿನ ಅವಕಾಶ ಸಿಕ್ಕಿದೆ.

ಮಿಚೆಲ್‌ ಮಾರ್ಷ್ ನಾಯಕ

ಪ್ಯಾಟ್‌ ಕಮಿನ್ಸ್‌ ಅವರ ಅನುಪಸ್ಥಿತಿಯಲ್ಲಿ ತಂಡವನ್ನು ಮಿಚೆಲ್ ಮಾರ್ಷ್‌ ಮುನ್ನಡೆಸಲಿದ್ದಾರೆ. ಟಿ20 ಕ್ರಿಕೆಟ್‌ನಲ್ಲಿ ಅಮೋಘ ಬ್ಯಾಟಿಂಗ್ ಪ್ರದರ್ಶನ ನೀಡಿದ್ದ ಗ್ಲೆನ್‌ ಮ್ಯಾಕ್ಸ್‌ವೆಲ್ ತಂಡದಲ್ಲಿ ಸ್ಥಾನ ಪಡೆದಿಲ್ಲ. ಅನುಭವಿ ಬೌಲರ್‌ಗಳಾದ ಕಮಿನ್ಸ್‌, ಸ್ಟಾರ್ಕ್‌, ಹ್ಯಾಜಲ್‌ವುಡ್‌ಗೆ ವಿಶ್ರಾಂತಿ ನೀಡಲಾಗಿದೆ ಎಂದು ತಿಳಿದು ಬಂದಿದೆ.

ಪಾಕಿಸ್ತಾನ ವಿರುದ್ಧದ ಸರಣಿಗೆ ಆಸ್ಟ್ರೇಲಿಯಾ ಏಕದಿನ ತಂಡ: ಮಿಚೆಲ್ ಮಾರ್ಷ್ (ನಾಯಕ), ಅಲೆಕ್ಸ್ ಕ್ಯಾರಿ, ನಾಥನ್ ಎಲ್ಲಿಸ್, ಕ್ಯಾಮರೂನ್ ಗ್ರೀನ್, ಜೋಶ್ ಇಂಗ್ಲಿಸ್, ಮ್ಯಾಥ್ಯೂ ಕುಹ್ನೆಮನ್, ಮಾರ್ನಸ್ ಲಂಬುಶೇನ್, ರಿಲೇ ಮೆರೆಡಿತ್, ಆಲಿವರ್ ಪೀಕ್, ಮ್ಯಾಥ್ಯೂ ರೆನ್‌ಶಾ, ತನ್ವೀರ್ ಸಂಘಾ, ಲಿಯಾಮ್ ಸ್ಕಾಟ್, ಮ್ಯಾಟ್ ಶಾರ್ಟ್, ಬಿಲ್ಲಿ ಸ್ಟ್ಯಾನ್‌ಲೇಕ್, ಆಡಮ್ ಜಂಪಾ.

ಪಾಕಿಸ್ತಾನ ವಿರುದ್ಧದ ಆಸ್ಟ್ರೇಲಿಯಾ ಏಕದಿನ ತಂಡ: ಮಿಚೆಲ್ ಮಾರ್ಷ್ (ನಾಯಕ), ಕ್ಸೇವಿಯರ್ ಬಾರ್ಟ್ಲೆಟ್, ಅಲೆಕ್ಸ್ ಕ್ಯಾರಿ, ಕೂಪರ್ ಕಾನೊಲ್ಲಿ, ಬೆನ್ ದ್ವಾರ್ಶುಯಿಸ್, ನಾಥನ್ ಎಲ್ಲಿಸ್, ಕ್ಯಾಮರೂನ್ ಗ್ರೀನ್, ಟ್ರಾವಿಸ್ ಹೆಡ್, ಜೋಶ್ ಇಂಗ್ಲಿಸ್, ಮ್ಯಾಥ್ಯೂ ಕುಹ್ನೆಮನ್, ಮಾರ್ನಸ್ ಲಂಬುಸ್ಚಾಗ್ನೆ, ಮ್ಯಾಥ್ಯೂ ರೆನ್‌ಶಾ, ತನ್ವೀರ್ ಸಂಘ, ಲಿಯಾಮ್ ಸ್ಕಾಟ್, ಆಡಮ್ ಜಂಪಾ.

Story first published: Monday, May 11, 2026, 17:12 [IST]
Other articles published on May 11, 2026
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+